Connect with us

    LATEST NEWS

    ತಿರುಪತಿ ಲಡ್ಡು ವಿವಾದ: ಹೊಸ ತನಿಖೆಗೆ ಸುಪ್ರೀಂಕೋರ್ಟ್​ ಆದೇಶ

    Published

    on

    ನವದೆಹಲಿ : ತಿರುಪತಿ ಲಡ್ಡು ವಿವಾದದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್ಎಸ್ಎಸ್ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದುಸದಸ್ಯರ ಸ್ವತಂತ್ರ ಎಸ್ಐಟಿಯನ್ನು ರಚಿಸಲು ಸೂಚಿಸಿದೆ.

    ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪ ಸಂಬಂಧ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಿಶೇಷ ತನಿಖಾ ತಂಡದಲ್ಲಿ (ಎಸ್ಐಟಿ)ಆಂಧ್ರಪ್ರದೇಶ ಪೊಲೀಸ್ ಇಬ್ಬರು ಅಧಿಕಾರಿಗಳು, ಒಬ್ಬ ಎಫ್ಎಸ್ಎಸ್ಎಐನ ಹಿರಿಯ ಅಧಿಕಾರಿ ಇರಲಿದ್ದಾರೆಎಸ್ಐಟಿ ತನಿಖೆಯನ್ನು ಸಿಬಿಐ ನಿರ್ದೇಶಕರು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಪೀಠ ಹೇಳಿದೆ.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ಅವರಿದ್ದ ಪೀಠವು, ‘ ವಿಚಾರಕ್ಕೆ ನ್ಯಾಯಾಲಯವನ್ನು ರಣರಂಗವಾಗಿ ಬಳಸಿಕೊಳ್ಳಲು ಅವಕಾಶ ಕೊಡುವುದಿಲ್ಲ. ದೇವರಲ್ಲಿ ನಂಬಿಕೆ ಹೊಂದಿರುವ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆಯಾಗುವುದನ್ನು ತಪ್ಪಿಸಲು ಎಸ್ಐಟಿ ರಚನೆ ಮಾಡಲಾಗಿದೆ ಎಂದಿದೆ.

    ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸುಪ್ರೀಂ ಕೋರ್ಟ್ಗೆ ಹೇಳಿಕೆ ನೀಡಿದ್ದು, ಎಸ್ಐಟಿಯ ಮೇಲೆ ಕೇಂದ್ರದ ಹಿರಿಯ ಅಧಿಕಾರಿ ನಿಗಾ ವಹಿಸಬೇಕು. ಇದರಿಂದ ಜನರಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ಹೇಳಿದರು. ಇದು ಕೋಟ್ಯಂತರ ಜನರ ನಂಬಿಕೆಯ ಪ್ರಶ್ನೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಿರುವಾಗ ಇದೊಂದು ರಾಜಕೀಯ ನಾಟಕವಾಗಬಾರದು. ಸ್ವತಂತ್ರ ಸಂಸ್ಥೆ ಇದ್ದರೆ ಆತ್ಮವಿಶ್ವಾಸ ಮೂಡುತ್ತದೆ.

    ಇದನ್ನೂ ಓದಿ : ಬಿಗ್​ ಬಾಸ್​ನಿಂದ ಚೈತ್ರಾರನ್ನು ಹೊರಗೆ ಹಾಕಿ, ಇಲ್ಲದಿದ್ರೆ ಕಾರ್ಯಕ್ರಮ ಸ್ಥಗಿತ ಮಾಡಿಸುತ್ತೇನೆ ಎಂದ ವಕೀಲ!

    ಸೆಪ್ಟೆಂಬರ್ 30 ರಂದು ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ರಾಜ್ಯವು ನೇಮಿಸಿದ ಎಸ್ಐಟಿ ತನಿಖೆಯನ್ನು ಮುಂದುವರಿಸಬೇಕೇ ಅಥವಾ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕೇ ಎಂದು ನಿರ್ಧರಿಸಲು ಸಹಾಯ ಮಾಡುವಂತೆ ಪೀಠವು ಮೆಹ್ತಾ ಅವರನ್ನು ಕೇಳಿತ್ತು.

    Click to comment

    Leave a Reply

    Your email address will not be published. Required fields are marked *

    FILM

    ದಕ್ಷಿಣ ಭಾರತದ ಖ್ಯಾತ ವಿಲನ್ ವಿಧಿವಶ; “ಕೀರಿಕ್ಕಡನ್ ಜೋಸ್” ಇನ್ನಿಲ್ಲ

    Published

    on

    ಮಂಗಳೂರು/ತಿರುವನಂತಪುರಂ: ಮಲಯಾಳಂ ಚಿತ್ರರಂದ ಖ್ಯಾತ ನಟ, ವಿಲನ್ ಆಗಿ ಜನಪ್ರಿಯತೆ ಪಡೆದಿರುವ ಮೋಹನ್ ರಾಜ್ (70) ನಿನ್ನೆ (ಅ.1)ವಿಧಿವಶರಾಗಿದ್ದಾರೆ ಎಂದು ವರದಿಯಾಗಿದೆ.


    ‘ಕಿರೀಟಂ’ ಸಿನಿಮಾದ ‘ಕೀರಿಕ್ಕಡನ್ ಜೋಸ್’ ಎಂಬ ಪಾತ್ರದಲ್ಲಿ ಮಿಂಚಿದ್ದು, ಬಳಿಕ ಅದೇ ಹೆಸರಿನಿಂದ ಪ್ರಖ್ಯಾತಿಯಾಗಿದ್ದರು. ಮೋಹನ್ ಲಾಲ್ ಹಿರೋ ಆಗಿ ನಟಿಸಿದ್ದ ಈ ಸಿನಿಮಾ, ಮಲಯಾಳಂ ಚಿತ್ರರಂಗದಲ್ಲಿ ಬಿಗ್ ಹಿಟ್ ಸಿನಿಮಾದಲ್ಲಿ ಒಂದಾಗಿದೆ.
    ಚಿತ್ರರಂಗಕ್ಕೆ ಕಾಲಿಡುವ ಮುನ್ನ ಕೇಂದ್ರ ಸರ್ಕಾರದ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಮೊದಲ ಸಿನಿಮಾ ಹಿಟ್ ಆದ ನಂತರ ಸಾಲು ಸಾಲು ಚಿತ್ರಗಳಲ್ಲಿ ನಟಿಸುವ ಅವಕಾಶ ಪಡೆದಿದ್ದರು. ಸುಮಾರು 300 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.


    ಮಲಯಾಳಂ, ತೆಲುಗು ಸಿನಿಮಾದಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಖ್ಯಾತ ವಿಲನ್ ಆಗಿ ಗುರುತಿಸಿಕೊಂಡಿದ್ದರು. ಕೆಲವು ವರ್ಷಗಳ ಹಿಂದೆ ತೆಲುಗು ಸಿನಿಮಾದ ‘ಸ್ಪಂಟ್’ ದೃಶ್ಯವೊಂದರ ಚಿತ್ರೀಕರಣ ವೇಳೆ ಕಾಲಿಗೆ ಗಾಯವಾಗಿದ್ದು, ಚೇತರಿಸಿಕೊಳ್ಳಲು ಆಗಿರಲಿಲ್ಲ.
    ಇಂದು (ಅ.4) ತಿರುವನಂತಪುರಂನಲ್ಲಿ ಪ್ರಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲದವರು ತಿಳಿಸಿದ್ದಾರೆ.

    Continue Reading

    LATEST NEWS

    ಲಾರಿ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ಸಾವು

    Published

    on

    ಮಂಗಳೂರು/ವಿಜಯಪುರ: ಬೈಕ್‌ಗೆ ಲಾರಿ ಡಿಕ್ಕಿಯಾಗಿ, ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಮನಗೂಳಿ ನಿವಾಸಿ ಭೀಮಶಿ ಹಿಟ್ನಳ್ಳಿ(56) ಹಾಗೂ ಖಂಡೋಬಾ(60) ಮೃತರು.


    ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದ್ದು, ಇಬ್ಬರ ಸಾವಿನಿಂದ ರೊಚ್ಚಿಗೆದ್ದ ಮನಗೂಳಿ ಪಟ್ಟಣದ ಜನತೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಪ್ರತಿಭಟನೆ ನಡೆಸಿದರು.
    ವಾಹನಗಳನ್ನು ಅಡ್ಡಗಟ್ಟಿದ ಜನರು ಬೈಕ್ ಸವಾರರ ಕುಟುಂಬಕ್ಕೆ ಪರಿಹಾರ ನೀಡಬೇಕು ಹಾಗೂ ಈ‌ ಭಾಗದಲ್ಲಿ ಮೇಲ್ಸೆತುವೆ ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರತಿಭಟನಾ ನಿರತರ‌ ಮನವೊಲಿಸಲು ಯತ್ನಿಸಿದ್ದು, ಜಗ್ಗದ ಜನರು ಪ್ರತಿಭಟನೆ ಮುಂದುವರೆಸುತ್ತಿರುವುದಾಗಿ ತಿಳಿದು ಬಂದಿದೆ.

    Continue Reading

    BIG BOSS

    BBK11: ಬಿಗ್​ಬಾಸ್​ ಮನೆಯಲ್ಲಿರೋ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆ; ಶೋ ವಿರುದ್ಧ ದೂರು ದಾಖಲು

    Published

    on

    ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​​ಬಾಸ್​ ಸೀಸನ್​ 11 ಭಾನುವಾರ ಗ್ರ್ಯಾಂಡ್​ ಆಗಿ ಓಪನಿಂಗ್​​ ಕಂಡಿದೆ. ಹೊಸ ಅಧ್ಯಾಯದೊಂದಿಗೆ ಶುರುವಾದ ಬಿಗ್​ಬಾಸ್​​ಗೆ ಕಂಟಕವೊಂದು ಎದುರಾಗಿದೆ.

    ಹೌದು, ಮೊನ್ನೆಯಷ್ಟೇ ಬಹಳ ಅದ್ಧೂರಿಯಾಗಿ ಬಿಗ್​​ಬಾಸ್​ ಸೀಸನ್ 11 ಓಪನಿಂಗ್​ ಪಡೆದುಕೊಂಡಿತ್ತು. ಒಟ್ಟು 17 ಸ್ಪರ್ಧಿಗಳು ಬಿಗ್​ಬಾಸ್​ ಮನೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಅದರಲ್ಲೂ ಹೊಸ ಅಧ್ಯಾಯದೊಂದಿಗೆ ಶುರುವಾದ ಈ ಶೋನಲ್ಲಿ ಸ್ವರ್ಗ ಹಾಗೂ ನರಕ ಎಂಬ ಎರಡು ಕಾನ್ಸೆಪ್ಟ್ ಇಟ್ಟುಕೊಂಡಿದೆ. ಆದರೆ ಶುರುವಾಗಿ ಒಂದೇ ವಾರಕ್ಕೆ ಬಿಗ್​​ಬಾಸ್ ಶೋ‌ ವಿರುದ್ಧ ವಕೀಲೆಯೊಬ್ಬರು ದೂರು ದಾಖಲಿಸಿದ್ದಾರೆ. ರಾಜ್ಯ ಮಹಿಳಾ ಆಯೋಗಕ್ಕೆ ವಕೀಲೆ ದೂರು ಕೊಟ್ಟಿದ್ದಾರೆ.

    ದೂರಿನಲ್ಲಿ ಏನಿದೆ?

    ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರೋ ಹಾಗೂ ನಟ ಸುದೀಪ್ ಅವರು ನಿರೂಪಣೆ ಮಾಡುವ ಬಿಗ್​ಬಾಸ್ ಸೀಸನ್​ 11 ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಪುರುಷ ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ಬಿಗ್​ಬಾಸ್ 11ರ ಕಾರ್ಯಕ್ರಮದಲ್ಲಿ ಸ್ವರ್ಗ ಮತ್ತು ನರಕ ಎಂಬ ಎರಡು ವಿಚಾರದ ಮೇಲೆ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಭಾರತದ ನಾಗರಿಕರನ್ನು ಖಾಸಗಿ ವ್ಯಕ್ತಿಗಳು ಬಂಧನದಲ್ಲಿರಿಸುವ ಹಕ್ಕನ್ನು ಹೊಂದಿರುವುದಿಲ್ಲ. ಪ್ರಸ್ತುತ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮದಲ್ಲಿ ಪುರುಷ ಮತ್ತು ಮಹಿಳೆಯರನ್ನು ಒಂದು ಜೈಲಿನ ರೂಪದಲ್ಲಿರುವ ಬಂದಿಖಾನೆಯಂತಹ ಕೊಠಡಿಯಲ್ಲಿ ನೂರಾರು ಕ್ಯಾಮೆರಾಗಳಲ್ಲಿ ರೆಕಾರ್ಡ್ ಆಗುವಂತೆ ಅಕ್ರಮ ಬಂಧನದಲ್ಲಿ ಇರಿಸಲಾಗಿದೆ.

    ಆ ಸ್ಪರ್ಧಿಗಳಿಗೆ ಕೇವಲ ಗಂಜಿಯನ್ನು ಆಹಾರವಾಗಿ ನೀಡಲಾಗುತ್ತಿರುವುದು ಸಂವಿಧಾನ ಪ್ರಕಾರ ನಾಗರಿಕರಿಗೆ ಪೌಷ್ಟಿಕ ಆಹಾರವನ್ನು ಕೊಡದಿರುವುದು ಅಪರಾಧವಾಗುತ್ತದೆ. ಅದರಲ್ಲೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಲಗುವ ವ್ಯವಸ್ಥೆ ನೀಡದೆ ಅವರನ್ನು ದೈಹಿಕ ಬಾದ ತೀರಿಸಿಕೊಳ್ಳಲು ಮತ್ತೊಬ್ಬರ ಅನುಮತಿ ಮೇರೆಗೆ ಶೌಚಾಲಯ ಉಪಯೋಗಿಸಲು ಬಲವಂತಕ್ಕೆ ಒಳಪಡಿಸುವುದು ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ. ಬಿಗ್​ಬಾಸ್ 11ರ ಕಾರ್ಯಕ್ರಮದಲ್ಲಿ ಸ್ಪರ್ಧಿಗಳೊಂದಿಗೆ ಕಾನೂನು ಬದ್ಧವಾಗಿ ಒಪ್ಪಂದ ಮಾಡಿಕೊಂಡಿದ್ದು ಇಂತಹ ನಿರ್ಬಂಧಗಳನ್ನು ಹೇರುವುದು ಸಂವಿಧಾನ ಬಾಹಿರವಾಗಿದೆ.

    Continue Reading

    LATEST NEWS

    Trending