Connect with us

LATEST NEWS

ಇಂದು ಮತ್ತು ನಾಳೆ ಉಡುಪಿ, ದ.ಕ ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ

Published

on

ಮಂಗಳೂರು: ಇಂದಿನಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೆಯೇ ಬೆಂಗಳೂರು, ಕೊಡಗು ಸೇರಿ ಬಂಗಾಳಕೊಲ್ಲಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದು ಬೆಳಗಾವಿ, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉಡುಪಿ, ಕೊಡಗಿನಲ್ಲಿ ಮಳೆ ಮುಂದುವರೆಯಲಿದೆ.

ಬೆಂಗಳೂರು ನಗರ ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಹಾಸನ ಜಿಲ್ಲೆಗಳಲ್ಲಿ ಕೂಡ ಮಳೆಯ ಮುನ್ಸೂಚನೆ ನೀಡಲಾಗಿದೆ. ಇನ್ನೆರಡು ದಿನ ರಾಜ್ಯದಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆ ಕಡಿಮೆಯಾಗಿ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ.

ಕರ್ನಾಟಕದ ಬೆಳಗಾವಿ, ಕೊಪ್ಪಳ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆ ಕೂಡ ಮಳೆ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನೊಂದಿಗೆ ಭಾರೀ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಮಳೆ ಹೆಚ್ಚಾಗಲಿದೆ. ಇದಲ್ಲದೆ, ಕೇರಳದಲ್ಲಿ ಮಾರ್ಚ್ 31ರ ಅಂತ್ಯದ ವೇಳೆಗೆ ಮಳೆಯ ಪ್ರಮಾಣ ಶೇ. 98ರಷ್ಟು ಹೆಚ್ಚಾಗಿದೆ.

ಮಧ್ಯ ಭಾರತ ಮತ್ತು ಉತ್ತರ ಭಾರತದಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆಯ ಚಟುವಟಿಕೆಯು ಕಳಪೆ ಮಟ್ಟದಲ್ಲಿದ್ದರೂ, ದಕ್ಷಿಣ ಭಾರತದಲ್ಲಿ ಮಳೆ ಉತ್ತಮವಾಗಿದೆ.

ತಮಿಳುನಾಡಿನಲ್ಲಿ ಶೇ. 42, ಕರಾವಳಿ ಕರ್ನಾಟಕದಲ್ಲಿ ಶೇ. 143, ಉತ್ತರ ಒಳ ಕರ್ನಾಟಕದಲ್ಲಿ ಶೇ 43, ದಕ್ಷಿಣ ಒಳನಾಡಿನಲ್ಲಿ ಶೇ. 84ರಷ್ಟು ಹೆಚ್ಚುವರಿ ಮಳೆಯಾಗಿದೆ.

DAKSHINA KANNADA

ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!

Published

on

ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್‌ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Continue Reading

LATEST NEWS

ಬೋರ್ ವೆಲ್ ನಲ್ಲಿ ಸುರಿದ ಹಾಲು – ಪಾತ್ರೆ ಹಿಡಿದು ಓಡೋಡಿ ಬಂದ ಜನ..!

Published

on

ಉತ್ತರ ಪ್ರದೇಶ: ಸಾಮನ್ಯವಾಗಿ ಬೋರ್ ವೆಲ್ ನಲ್ಲಿ ನೀರು ಬರುವದನ್ನು ನೋಡಿದ್ದೇವೆ ಆದರೆ ಇಲ್ಲೊಂದು ಕಡೆ ಹಾಲಿನ ಬಣ್ಣದ ನೀರು ಸುರಿದ ವಿಸ್ಮಯ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ.


ಇಲ್ಲಿನ ಸಾರ್ವಜನಿಕ ಸ್ಥಳವೊಂದರಲ್ಲಿರುವ ಬೋರ್ ವೆಲ್ ನಲ್ಲಿ ನೀರಿನ ಬದಲು ಬಿಳಿ ಬಣ್ಣ ಇರುವ ನೀರು ಸುರಿದಿದೆ. ಇದನ್ನು ಕಂಡ ಸ್ಥಳಿಯರಿಗೆ ಅಚ್ಚರಿಯ ಪ್ರಶ್ನೆ ಮೂಡಿದೆ. ಅಲ್ಲದೆ ಇದೀಗ ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಸ್ಥಳಕ್ಕೆ ಸಾಕಷ್ಟು ಜನ ಬಂದು ಸೇರಿದ್ದಾರೆ.


ಇದನ್ನು ಕಂಡ ಜನರು ಇದು ನೀರಲ್ಲ ಹಾಲು ಎಂದು ಪಾತ್ರ , ಬಾಟಲಿ ಹಾಗೂ ಕೈಗೆ ಸಿಕ್ಕಿದ ಪಾತ್ರವನ್ನು ಹಿಡಿದು ಓಡಾಡಿಕೊಂಡು ಬಂದು ಸರತಿ ಸಾಲಿನಲ್ಲಿ ನಿಂತು ತಮ್ಮ ಪಾತ್ರೆಗಳಿಗೆ ತುಮಬಿಸಿ ಮನೆಗೆ ಕೊಂಡೊಯ್ಯುತ್ತಿದ್ದರು. ಈ ವಿಚಾರ ತಿಳಿದ ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಇದು ಹಾಲಲ್ಲ ಇದು ಕಲುಷಿತ ನೀರು ಎಂದು ಸ್ಪಷ್ಟನೆ ನೀಡಿದ್ದಾರೆ. ಬೋರ್ ವೆಲ್ ನಲ್ಲಿರುವ ಹ್ಯಾಂಡ್ ಪಂಪ್ ನ ಕೆಳಭಾಗ ಹಾನಿಗೊಳಗಾದ ಕಾರಣ ಇದರಲ್ಲಿ ಹಾಲಿನ ಬಣ್ಣದ ಕಲುಷಿತ ನೀರು ಸೊರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದು ವರದಿಯಾಗಿದೆ.

Continue Reading

DAKSHINA KANNADA

ನ.30ರಂದು ಶ್ರೀ ಆದಿ ಕ್ಷೇತ್ರ ಜಾರದಲ್ಲಿ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ

Published

on

ಮಂಗಳೂರು: ಧಾರ್ಮಿಕ ಕ್ಷೇತ್ರ ಜಾರದಲ್ಲಿ ನ. 30ರಂದು ಬೆಳಿಗ್ಗೆ 8 ಗಂಟೆಯಿಂದ ಜಾರಂದಾಯ ಬಂಟ ಪರಿವಾರ ಸಾನಿಧ್ಯ ಮತ್ತು ಕ್ಷೇತ್ರ ಕಲ್ಲುರ್ಟಿ ಸಾನಿಧ್ಯಗಳ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಲಿದೆ ಎಂದು ದೈವಜ್ಞ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

“ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಖ್ಯಾತ ವಾಸ್ತು ತಜ್ಞಮಹೇಶ್ ಮುನಿಯಂಗಳ ಇವರ ವಾಸ್ತು ವಿನ್ಯಾಸದೊಂದಿಗೆ ಸುಮಾರು 12 ರಿಂದ 15 ಕೋಟಿ ವೆಚ್ಚದಲ್ಲಿ ಹಂತ ಹಂತವಾಗಿ ಕ್ಷೇತ್ರ ಜೀರ್ಣೋದ್ಧಾರ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದೆ. ಈಗಾಗಲೇ ನವೆಂಬರ್ 11ರಂದು ಜಾರಚಾವಡಿಯಲ್ಲಿ ಪ್ರಧಾನ ದೈವ ಜಾರಂದಾಯ  ಬಂಟ ಮಾಯಾಂದಾಲ್ ದೈವಗಳ ನೇಮೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿದೆ. ನವೆಂಬರ್ 30ರಂದು
ಬೆಳಿಗ್ಗೆ 9.00 ಗಂಟೆಗೆ ಸರಳ ಜುಮಾದಿ ಬಂಟ ಹಾಗೂ ಪರಿವಾರ ದೈವಗಳಿಗೆ ಹಾಗೂ 11.00 ಗಂಟೆಗೆ ಶ್ರೀ ಜಾರ ಆದಿ ಕ್ಷೇತ್ರದ ಗಿರಿಯಲ್ಲಿ ಗ್ರಾಮ ದೈವ ಶ್ರೀ ಬಂಟ ಸರಳ ಜುಮಾದಿ ಬಂಟ ಮತ್ತು ಪರಿವಾರ ದೈವಗಳಿಗೆ ನಿಧಿ ಕುಂಬ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ  ಭಕ್ತಾಧಿಗಳು ತನು ಮನ ಧನಗಳಿಂದ ಸಹಕರಿಸಬೇಕು” ಎಂದು ಮನವಿ ಮಾಡಿದರು.

ಬಳಿಕ ಮಾತಾಡಿದ ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯ ಅವರು, “ಶ್ರೀ ಆದಿ ಕ್ಷೇತ್ರ ಜಾರ ಇದು ತುಳುನಾಡಿನ ಕಾರ್ಣಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಸಾನಿಧ್ಯ ಪ್ರಧಾನ ದೈವಗಳಾಗಿ ಶ್ರೀ ಉಳ್ಳಾಯ, ಶ್ರೀ ಜಾರಂದಾಯ ಬಂಟ, ಸರಳ ಧೂಮಾವತಿ ಬಂಟ, ಕಾಂತೇರಿ ಧೂಮಾವತಿ ಬಂಟ, ಮಾಯಾಂದಾಲ್ ದೈವ, ಪಿಲಿ ಚಾಮುಂಡಿ, ಬಬ್ಬರ್ಯ ದೈವಗಳು ಕ್ಷೇತ್ರ ಹಾಗೂ ಗ್ರಾಮದ ಮಾಗಣೆಯ ದೈವಗಳಾಗಿವೆ. ಕ್ಷೇತ್ರದ ಆದಿ ದೈವಗಳಾಗಿ ಕಲ್ಲುರ್ಟಿ, ಪಟ್ಟದ ಅಣ್ಣಪ್ಪ ಸ್ವಾಮಿ, ಸ್ಥಳದ ಪಂಜುರ್ಲಿ, ನಾಗಬ್ರಹ್ಮ ಪ್ರಧಾನ ಸಾನಿಧ್ಯಗಳಾಗಿವೆ” ಎಂದರು. ಸುದ್ದಿಗೋಷ್ಠಿಯಲ್ಲಿ ದೈವಜ್ಞ ಶ್ರೀ ಪ್ರಕಾಶ ವಿ. ಹೊಳ್ಳ ಶಕ್ತಿನಗರ, ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ , ಕ್ಷೇತ್ರದ ಗಡಿ ಪ್ರಧಾನರಾದ ಜತ್ತಿ ಪೂಜಾರಿ ಜಾರ, ಅಧ್ಯಕ್ಷರಾದ ಉದಯಶಂಕರ ಜಾರಮನೆ, ಕಾರ್ಯದರ್ಶಿ ಎಂ. ವಿಠಲ್ ಪೂಜಾರಿ ಕುಕ್ಕುದಡಿ, ಕೋಶಾಧಿಕಾರಿ ಜೀವನ್ ದಾಸ್ ಜಾರ ಮತ್ತಿತರರು ಉಪಸ್ಥಿತರಿದ್ದರು.

Continue Reading

LATEST NEWS

Trending