Friday, July 1, 2022

ಶಾಂತ ಸ್ಥಿತಿಯತ್ತ ಉಪ್ಪಿನಂಗಡಿ: 144 ಸೆಕ್ಷನ್‌ ಯಥಾಸ್ಥಿತಿ

ಉಪ್ಪಿನಂಗಡಿ: ನಿನ್ನೆ ಉಪ್ಪಿನಂಗಡಿ ಪೊಲೀಸ್‌ ಠಾಣೆ ಎದುರು ನಡೆದ ಲಾಠಿ ಚಾರ್ಚ್‌ ನಂತರ 144 ಸೆಕ್ಷನ್‌ ಜಾರಿಯಲ್ಲಿದೆ. ಇಂದು ಬೆಳಗ್ಗೆಯಿಂದಲೇ ಉಪ್ಪಿನಂಗಡಿ ಪೇಟೆ ಶಾಂತ ಸ್ಥಿತಿಯಲ್ಲಿದೆ. ನಿನ್ನೆ ಲಾಠಿ ಚಾರ್ಚ್‌ ನಂತರ ಯಾವುದೇ ಅಹಿತರ ಘಟನೆ ನಡೆದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.


ನಿನ್ನೆ ಉಪ್ಪಿನಂಗಡಿ ಠಾಣೆಗೆ ಆಗಮಿಸಿದ ಪುತ್ತೂರು ತಹಶೀಲ್ದಾರ್ ಪರಿಸ್ಥಿತಿ ವಿಕೋಪಕ್ಕೆ ತಿರುಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಉಪ್ಪಿನಂಗಡಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದರು, ಇದೀಗ ಅದೇ ಸೆಕ್ಷನ್‌ ಜಾರಿಯಲ್ಲಿದೆ.
ಉಡುಪಿ ಜಿಲ್ಲೆಯಿಂದಲೂ ಪೊಲೀಸ್ ಪಡೆಯನ್ನು ಕರೆಸಲಾಗಿದ್ದು, ಇವರೊಂದಿಗೆ ಜಿಲ್ಲಾ ಹಾಗೂ ರಾಜ್ಯ ಮೀಸಲು ಪಡೆ, ವಿವಿಧ ಠಾಣಾ ಪೊಲೀಸ್ ಉಪನಿರೀಕ್ಷಕರು, ಸಿಬ್ಬಂದಿ ಉಪ್ಪಿನಂಗಡಿಯಲ್ಲಿದ್ದು, ಬಿಗು ಬಂದೋಬಸ್ತ್ ಕೈಗೊಂಡಿದ್ದಾರೆ.

ಠಾಣೆ ಮುಂದೆ ಚಪ್ಪಲಿಗಳ ರಾಶಿ

ನಿನ್ನೆ ನಡೆದ ಲಾಠಿಚಾರ್ಚ್‌ ವೇಳೆ  ಠಾಣೆ ಮುಂದೆ ನಿಂತಿದ್ದ ಬೈಕ್, ಪೊಲೀಸ್ ಜೀಪ್‌ಗೆ ಹಾಗೂ ಠಾಣೆಯಲ್ಲಿ ಅಳವಡಿಸಿದ್ದ ಗ್ಲಾಸ್‌ಗೆ ಹಾನಿಯಾಗಿದ್ದು, ಜೊತೆಗೆ ಠಾಣೆ ಮುಂದೆಲ್ಲಾ ಪ್ರತಿಭಟನಾಕಾರರ ಚಪ್ಪಲಿಗಳ ರಾಶಿ ಕಂಡುಬಂದಿದೆ.

 

LEAVE A REPLY

Please enter your comment!
Please enter your name here

Hot Topics

ಸುಳ್ಯ: ಲೈಸೆನ್ಸ್‌ ಇಲ್ಲದೆ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್‌ಗೆ ಬೀಗ ಜಡಿದ ಇಲಾಖೆ

ಸುಳ್ಯ: ಲೈಸೆನ್ಸ್‌ ಇಲ್ಲದೆ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್‌ಗೆ ಆರೋಗ್ಯ ಇಲಾಖೆ ಬೀಗ ಜಡಿದು, ಕ್ಲಿನಿಕ್‌ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಿಸಿದ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ.ಕ್ಲಿನಿಕ್‌ನ ವಸ್ತುಗಳನ್ನು ಕೂಡಾ ಮುಟ್ಟುಗೋಲು ಹಾಕಲಾಗಿದೆ.ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ...

ಪುತ್ತೂರು: ವಿವಿಧ ಪೊಲೀಸ್ ಠಾಣೆಗಳ ಸಿಬ್ಬಂದಿ ವರ್ಗಾವಣೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಎಸ್‌ಐ, ಹೆಡ್‌ಕಾನ್‌ಸ್ಟೇಬಲ್‌ಗಳು ಮತ್ತು ಕಾನ್‌ಸ್ಟೇಬಲ್ ಹುದ್ದೆಗಳನ್ನು ಪುನರ್ ಸಂಘಟಿಸಿ, ಮರು ಹಂಚಿಕೆಯಾಗಿರುವ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಹಂಚಿಕೆ ಮಾಡಿ...

ರಾಜ್ಯದಲ್ಲಿ ಮತ್ತೆ ಕೊರೋನಾ ಸ್ಫೋಟ: 1,249 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಪ್ರಕರಣಗಲು ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 25,753 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,249 ಮಂದಿಗೆ ಸೋಂಕು ದೃಢಪಟ್ಟಿದೆ.1,154 ಮಂದಿ ಡಿಸ್ಚಾರ್ಜ್...