Connect with us

    ದ.ಕ.ದಲ್ಲಿ ಮುಂದುವರೆದ ಮರಣ ಮೃದಂಗ :ಇಂದು ಮತ್ತೆ ಕೊರೊನಾಕ್ಕೆ ನಾಲ್ವರು ಬಲಿ..!

    Published

    on

    ದ.ಕ.ದಲ್ಲಿ ಮುಂದುವರೆದ ಮರಣ ಮೃದಂಗ :ಇಂದು ಮತ್ತೆ ಕೊರೊನಾಕ್ಕೆ ನಾಲ್ವರು ಬಲಿ..!

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿ ಕೊರೊನಾದಿಂದ ಸಾವನ್ನಪ್ಪುವವರ ಸಂಖ್ಯೆ ದಿನ‌ದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಮತ್ತೆ ನಾಲ್ವರು ಕೊರೊನಾಕ್ಕೆ ಜಿಲ್ಲೆಯಲ್ಲಿ ಬಲಿಯಾಗಿದ್ದಾರೆ.

    ಸುಳ್ಯ ತಾಲೂಕಿನ 60 ವರ್ಷದ ವೃದ್ಧೆ,  ಬಂಟ್ವಾಳ ತಾಲೂಕಿನ‌ 73 ವರ್ಷದ ವೃದ್ಧ,  ಬಂಟ್ವಾಳದ ತಾಲೂಕಿನ 70ವರ್ಷದ ವೃದ್ಧ ,  ಬಂಟ್ವಾಳದ 68 ವರ್ಷ ದ ವೃದ್ಧೆ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಮೂಲಕ ದಕ ಜಿಲ್ಲೆಯಲ್ಲಿ ಕೊರೊನಾ ದಿಂದ ಸತ್ತವರ ಸಂಖ್ಯೆ 57ಕ್ಕೇರಿಕೆಯಾಗಿದೆ.

    ಇನ್ನು ಅತ್ತ ಕಡೆ  ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಇಂದು 73 ಮಂದಿಗೆ ಕೊರೋನಾ ಪಾಸಿಟಿವ್ ಧೃಡಪಟ್ಟಿದೆ.

    ಸಂಪರ್ಕವೇ ಪತ್ತೆಯಾಗದ 32 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಧೃಡಪಟ್ಟಿದೆ.ಪ್ರಾಥಮಿಕ ಸಂಪರ್ಕದಿಂದ 11 ಮಂದಿಗೆ ಪಾಸಿಟಿವ್. ವಿದೇಶದಿಂದ ಬಂದ 3 ಮಂದಿಗೆ ಮತ್ತು ಹೊರ ಜಿಲ್ಲೆಯಿಂದ ಬಂದ ಒಬ್ಬರಿಗೆ ಕೂಡ ಕೊರೋನಾ ಸೋಂಕು ದೃಢ ಪಟ್ಟಿದೆ.

    ಈ ಅಂಶಗಳನ್ನು ಗಮನಿಸಿದರೆ ಜಿಲ್ಲೆಯಲ್ಲಿ ಒಬ್ಬರಿಂದ ಒಬ್ಬರಿಗೆ ಕೊರೊನಾ ಸೊಂಕು ವೇಗವಾಗಿ ಹರಡುತ್ತಿರುವುದು ಸಾಬೀತಾಗಿದೆ..

    Click to comment

    Leave a Reply

    Your email address will not be published. Required fields are marked *

    LATEST NEWS

    ಲೋ ಬಿಪಿಯಿಂದ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾ*ವು

    Published

    on

    ಬೆಂಗಳೂರು : ತರಗತಿಯಲ್ಲೇ ಏಕಾಏಕಿ ಲೋ ಬಿಪಿಯಿಂದ ಕುಸಿದು ಬಿದ್ದು ವಿದ್ಯಾರ್ಥಿ ಸಾ*ವನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ  ಗಬ್ಯೂರು ಗ್ರಾಮದಲ್ಲಿ  ನಡೆದಿದೆ.

    5ನೇ ತರಗತಿ ವಿದ್ಯಾರ್ಥಿ ಶಿವಪ್ರಸಾದ್ ಮೃ*ತ ಬಾಲಕ. ಗಬ್ಯೂರ್‌ನಲ್ಲಿ ಸೈನಿಕ, ನವೋದಯ ಕೋಚಿಂಗ್ ಪಡೆಯುತ್ತಿದ್ದ. ಇನ್ನು ಕೋಚಿಂಗ್ ಸೆಂಟರ್‌ನಲ್ಲೇ ಏಕಾಏಕಿ ಲೋ ಬಿಪಿಯಾಗಿ ಬಾಲಕ ಶಿವಪ್ರಸಾದ್ ಸಾವನಪ್ಪಿದ್ದು, ಗಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    ಇಂದು ದೆಹಲಿ ನೂತನ ಸಿಎಂ ಆಗಿ ಆತಿಶಿ ಪ್ರಮಾಣವಚನ ಸ್ವೀಕಾರ

    Published

    on

    ನವದೆಹಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಇಂದು (ಸೆ.21) ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಅತಿಶಿ ಜೊತೆಗೆ ಆಪ್ ನ ಹಿರಿಯರಾದ ಗೋಪಾಲ್ ರೈ, ಕೈಲಾಶ್ ಗಹ್ಲೋಟ್, ಸೌರಭ್ ಭಾರದ್ವಾಜ್, ಮುಖೇಶ್ ಅಹ್ಲಾವತ್ ಮತ್ತು ಇಮ್ರಾನ್ ಹುಸೇನ್ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದಲಿತ ನಾಯಕ ಮುಖೇಶ್ ಅಹ್ಲಾವತ್ ಅವರು ದಿಲ್ಲಿ ಕ್ಯಾಬಿನೆಟ್ಗೆ ಹೊಸದಾಗಿ ಪ್ರವೇಶಿಸುತ್ತಿದ್ದಾರೆ. ಸುಲ್ತಾನ್ಪುರ ಮಜ್ರಾದಿಂದ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

    ನಿರ್ಗಮಿತ ಕೇಜ್ರಿವಾಲ್ ಸರ್ಕಾರದಲ್ಲಿ ಅತಿಶಿ ಅವರು ಹಣಕಾಸು, ಕಂದಾ ಯ, ಲೋಕೋಪಯೋಗಿ, ವಿದ್ಯುತ್ ಮತ್ತು ಶಿಕ್ಷಣ ಸೇರಿದಂತೆ 13 ಪ್ರಮುಖ ಖಾತೆಗಳನ್ನು ಹೊಂದಿದ್ದರು.ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅರವಿಂದ ಕೇಜ್ರಿವಾಲ್ ಅವರು ಜಾಮೀನಿನ ಮೇಲೆ ಹೊರಬಂದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು . ಅದಾದ ಬಳಿಕ ಶಾಸಕಾಂಗ ಸಭೆಯಲ್ಲಿ ಅವಿರೋಧವಾಗಿ ಆತಿಶಿ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು.

    Continue Reading

    DAKSHINA KANNADA

    ವ್ಯಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹ*ತ್ಯೆ ಮಾಡಿಕೊಂಡ ವ್ಯಕ್ತಿ

    Published

    on

    ಉಪ್ಪಿನಂಗಡಿ : ಕುಡಿತದ ಚಟಕ್ಕೆ ಬಿದ್ದಿದ್ದ ವ್ಯಕ್ತಿಯೊಬ್ಬರು ವ್ಯಾಟ್ಸಾಪ್‌ ಸ್ಟೇಟಸ್ ಹಾಕಿ ಆತ್ಮಹ*ತ್ಯೆ ಮಾಡಿಕೊಂಡ ಘಟನೆ  ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದಲ್ಲಿ ನಡೆದಿದೆ. ಪುಲ್ಲೊಟ್ಟೆ ನಿವಾಸಿ ಲೋಹಿತ್ ಕುಮಾರ್ (47) ಆತ್ಮಹ*ತ್ಯೆ ಮಾಡಿಕೊಂಡ ವ್ಯಕ್ತಿ.

    ಲೋಹಿತ್ ಕುಮಾರ್ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ವಿಪರೀತವಾದ ಮದ್ಯಪಾನದ ಚಟ ಅಂಟಿಸಿಕೊಂಡಿದ್ದರು. ಇದೇ ಕಾರಣದಿಂದ ನಿತ್ಯ ಪತ್ನಿ ಹಾಗೂ ಮಕ್ಕಳ ಜೊತೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದರಿಂದ ಬೇಸತ್ತಿದ್ದ ಪತ್ನಿ ತನ್ನ ಮಕ್ಕಳೊಂದಿಗೆ ತವರು ಮನೆಗೆ ಹೊರಟು ಹೋಗಿದ್ದರು. ಇದರಿಂದ ಮನನೊಂದ ಲೋಹಿತ್ ಕುಮಾರ್ ಸೆಪ್ಟಂಬರ್ 18 ರಂದು ಗುಂಡ್ಯಕ್ಕೆ ಹೋಗಿ ವಾಪಾಸಾದವರು ಮನೆಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ.

    ಇದನ್ನೂ ಓದಿ : ಹೆಣ್ಣು ಕೊಟ್ಟ ಅತ್ತೆ-ಮಾವನನ್ನೇ ಕೊಂ*ದ ಪಾಪಿ ಅಳಿಯ

    ತಾನು ಆತ್ಮಹ*ತ್ಯೆಯ ಮಾಡಿಕೊಳ್ಳುವುದಾಗಿ ವ್ಯಾಟ್ಸಾಪ್‌ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ ಸಂದೇಶವನ್ನು ಮಂಗಳೂರಿನಲ್ಲಿದ್ದ ಲೋಹಿತ್‌ ಸಹೋದರನ ಮಗಳು ನೋಡಿ ಮಾಹಿತಿ ನೀಡಿದ್ದರು. ಸೆಪ್ಟಂಬರ್ 19 ರ ಮುಂಜಾನೆ ಲೋಹಿತ್ ವಾಸವಾಗಿದ್ದ ಮನೆಗೆ ಹೋಗಿ ನೋಡಿದಾಗ ಮನೆಯ ಹಾಲ್‌ನಲ್ಲಿ ನೇ*ಣು ಬಿಗಿದ ಸ್ಥಿತಿಯಲ್ಲಿ ಅವರ ಮೃ*ತದೇಹ ಪತ್ತೆಯಾಗಿದೆ.  ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending