Connect with us

DAKSHINA KANNADA

ಇಂದು ಖಗ್ರಾಸ ಚಂದ್ರಗ್ರಹಣ-ದೇವಳಗಳಲ್ಲಿ ಪೂಜಾ ಸಮಯ ಬದಲು

Published

on

ಮಂಗಳೂರು: ಖಗ್ರಾಸ ಚಂದ್ರಗ್ರಹಣ ಇಂದು ನಡೆಯುವ ಹಿನ್ನೆಲೆಯಲ್ಲಿ ದ.ಕದ ಪ್ರಮುಖ ದೇವಳಗಳಲ್ಲಿ ಪೂಜಾ ಸಮಯಗಳಲ್ಲಿ ಬದಲಾವಣೆ ಮಾಡಲಾಗಿದೆ.


ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ: ಉಷಃಕಾಲ ಪೂಜೆ ನಡೆದು ಬೆಳಿಗ್ಗೆ 9.30ಕ್ಕೆ ಮಧ್ಯಾಹ್ನ ಪೂಜೆ ನಡೆಯಲಿದೆ. ಅನ್ನಪ್ರಸಾದ ವ್ಯವಸ್ಥೆಯಿದ್ದು 11.30ರವರೆಗೆ ಫಲಾಹಾರವಿದೆ. ಗ್ರಹಣ ಆರಂಭದಿಂದ ಮುಗಿಯುವವರೆಗೆ ಯಾವುದೇ ಸೇವೆ, ತೀರ್ಥಪ್ರಸಾದವಿಲ್ಲ. ಗ್ರಹಣ ಆರಂಭದಿಂದ ಅಂತ್ಯದವರೆಗೆ ದೇವರಿಗೆ ಅಭಿಷೇಕ ನಡೆಯಲಿದೆ.

ಗ್ರಹಣ ಮಧ್ಯಕಾಲದಲ್ಲಿ ವಿಶೇಷ ಗ್ರಹಣ ಪೂಜೆ ನಡೆಯಲಿದ್ದು ಬಳಿಕ ತೀರ್ಥಪ್ರಸಾದ ವಿತರಣೆಯಾಗಲಿದೆ. ಗ್ರಹಣದ ಬಳಿಕ ಶುದ್ಧಿ ಆಗಿ ಬಳಿಕ ತೀರ್ಥಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 8.0ರ ಬಳಿಕ ಅನ್ನಪ್ರಸಾದ ವಿತರಣೆ ನಡೆಯಲಿದೆ.

ಇನ್ನು ಮಂಗಳಾದೇವಿ ದೇವಸ್ಥಾನದಲ್ಲಿ ಉಷಃ ಕಾಲ ಪೂಜೆ, ಬೆಳಗ್ಗಿನ ಪೂಜೆ ಎಂದಿನಂತೆ ನಡೆಯಲಿದೆ. ಬೆಳಿಗ್ಗೆ 11.30ಕ್ಕೆ ಮಹಾ ಪೂಜೆ ನಡೆದು ದೇವಳ ಬಾಗಿಲು ಹಾಕುವುದು. ಗ್ರಹಣ ಆರಂಭದ ಹೊತ್ತು ದೇವಸ್ಥಾನ ಬಾಗಿಲು ತೆಗೆದು ಗ್ರಹಣ ಆರಂಭವಾಗುವವರೆಗೆ ಅಭಿಷೇಕ ಆರಂಭವಾಗಲಿದೆ. ಗ್ರಹಣ ಮೋಕ್ಷ ಬಳಿಕ ಪೂಜೆ, ರಾತ್ರಿ 8.30ಕ್ಕೆ ಮಹಾಪೂಜೆ ನಡೆಯಲಿದೆ.

ಮರೋಳಿ ಶ್ರೀ ಸೂರ್ಯನಾರಾಯಣ ದೇವಾಲಯ: ಇಲ್ಲಿ ಬೆಳಗಿನ ಉಷಃ ಪೂಜೆ 4ಗಂಟೆಗೆ ನಡೆದು ಲಕ್ಷ ಅರ್ಕ ಪುಷ್ಪಾರ್ಚನೆ ನಡೆಯಲಿದೆ. ಬೆಳಿಗ್ಗೆ 9ಕ್ಕೆ ಮಹಾಪೂಜೆಯಾಗಿ ನಡೆಬಾಗಿಲು ಮುಚ್ಚಲಾಗುವುದು. ಗ್ರಹಣ ಮೋಕ್ಷ ನಂತರ ರಾತ್ರಿ 7ಗಂಟೆಗೆ ನಡೆಬಾಗಿಲು ತೆರೆದು ಪುಣ್ಯಾಹ ಅಭಿಷೇಕ, ಪ್ರಾಯಶ್ಚಿತ್ತ ಕಲಶಾಭಿಷೇಕ ಜರುಗಿ ದೀಪೋತ್ಸವದ ಕಾರ್ಯಕ್ರಮಗಳು ಪ್ರಾರಂಭಗೊಳ್ಳಲಿದೆ. ನ.9ರಂದು ಬೆಳಿಗ್ಗೆ 9ಗಂಟೆಗೆ ಗ್ರಹಣ ಶಾಂತಿ ಹೋಮ ಜರುಗಲಿದೆ.

ಹಳೇಕೋಟೆ ಶ್ರೀಮಾರಿಯಮ್ಮ ದೇವಸ್ಥಾನ: ಭಕ್ತರ ಗ್ರಹಣದ ದೋಷದ ಪರಿಹಾರಕ್ಕಾಗಿ ತಂಡೂಲಾ ಹಾಗೂ ದೀಪದ ಎಣ್ಣೆ ಸೇವೆ ರಾತ್ರಿ 7ಗಂಟೆಯ ನಂತರ ವಿಶೇಷ ಸೇವೆ ಜರುಗಲಿದೆ. ಗ್ರಹಣದ ಪ್ರಯುಕ್ತ ಅನ್ನಸಂತರ್ಪಣೆ ಸೇವೆ ಜರುಗುವುದಿಲ್ಲ.

ಮಧ್ಯಾಹ್ನ ಮಹಾಪೂಜೆ ನಂತರ ದೇವಳ ಬಂದ್ ಮಾಡಿ ರಾತ್ರಿ 7ಕ್ಕೆ ಬಾಗಿಲು ತೆರೆಯಲಾಗುತ್ತದೆ ಎಂದು ದೇವಸ್ಥಾನ ಪ್ರಕಟಣೆ ತಿಳಿಸಿದೆ.

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

DAKSHINA KANNADA

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ! ಇ ಮೇಲ್ ನಲ್ಲಿ ಏನಿದೆ?

Published

on

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣವೇ ಇನ್ನೂ ಜೀವಂತವಿದೆ. ಅಲ್ಲದೇ, ಶಾಲೆಗಳಿಗೂ ಬೆದರಿಕೆ ಕರೆ ಬಂದಿದ್ದವು. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದೆ.


ಇ ಮೇಲ್ ಮೂಲಕ ಬಂತು ಬೆದರಿಕೆ :

ಕಳೆದ ಎಪ್ರಿಲ್‌ 29 ರಂದು ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ ಸಂದೇಶಗಳು ಇ-ಮೇಲ್ ಮೂಲಕ ರವಾನೆಯಾಗಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಅದೇ ದಿನ ಬಾಂಬ್‌ ಬೆದರಿಕೆ ಸಂದೇಶ ಬಂದಿತ್ತು ಎಂದು ತಡವಾಗಿ ಬೆಳಕಿಗೆ ಬಂದಿದೆ.
ಎಪ್ರಿಲ್‌ 29 ರಂದು ಬೆಳಗ್ಗೆ 9.37 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇ – ಮೇಲ್ ಐಡಿ ಗೆ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಇ – ಮೇಲ್‌ ನಿಂದ ‘ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನದ ಒಳಗಡೆ ಸ್ಫೋಟಕಗಳನ್ನು ಇರಿಸಿದ್ದು, ಈ ಸ್ಫೋಟಕಗಳನ್ನು ಸ್ಫೋಟಿಸಿ ಜೀವ ಹಾನಿ ಮಾಡುವುದಾಗಿ’ ಬೆದರಿಕೆ ಸಂದೇಶ ಕಳುಹಿಸಿದ್ದನು.

ಇದನ್ನೂ ಓದಿ : ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ

ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಮೋನಿಶ ಕೆ.ಜಿ. ಅವರು ನೀಡಿದ ದೂರಿನ ಆಧಾರದಲ್ಲಿ ಬಜಪೆ ಪೊಲೀಸ್‌ ಠಾಣೆಯಲ್ಲಿ ಐಪಿಸಿ 507 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿದೆ ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ.
ಈ ಕುರಿತು ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯು ಇದೇ ರೀತಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ದೇಶದ 25 ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಿರುವುದು ಕಂಡು ಬಂದಿದೆ. ಆರೋಪಿಯ ಪತ್ತೆಗಾಗಿ ಬಜಪೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ವಿವರಿಸಿದ್ದಾರೆ.

ಇ ಮೇಲ್ ನಲ್ಲಿ ಏನಿದೆ ?

ಇ ಮೇಲ್ ನಲ್ಲಿ, ‘ಮಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ಸ್ಪೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ’ ಎಂದು ಸಂದೇಶದಲ್ಲಿ ಬರೆಯಲಾಗಿದೆ.

Continue Reading

DAKSHINA KANNADA

ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ನೆಟ್ಟರೆ ಏನಾಗುತ್ತದೆ ನೋಡಿ..!

Published

on

ಮಂಗಳೂರು: ನಾವು ಯಾವುದೇ ಹಿಂದೂ ಧರ್ಮದವರ ಮನೆಗೆ ಹೋದಾಗ ಅಲ್ಲಿ ಏನು ನೋಡುತ್ತೇವೊ ಗೊತ್ತಿಲ್ಲ ಆದರೆ ಮನೆಯ ಎದುರೊಂದು ತುಳಸಿ ಗಿಡ ಇದ್ದೇ ಇರುತ್ತದೆ. ಯಾಕೆಂದರೆ ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಪೂಜನೀಯ ಸ್ಥಾನ ಕೊಡುತ್ತಾರೆ. ಬೆಳಗ್ಗೆ ಎದ್ದ ಕೂಡಲೇ ಮಹಿಳೆಯರು ದೇವರಿಗೆ ದೀಪ ಇಟ್ಟು ಬಳಿಕ ತುಳಸಿ ಗಿಡಕ್ಕೆ ಕಲಶದಲ್ಲಿ ನೀರನ್ನು ಹಾಕುತ್ತಾರೆ.

ಕೆಲವರ ಮನೆಯಲ್ಲಿ ಒಂದೇ ತುಳಸಿ ಗಿಡವನ್ನು ನೋಡಿದರೆ ಇನ್ನು ಕೆಲವರ ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ಇರುತ್ತದೆ. ಆರೋಗ್ಯದ ಪ್ರಯೋಜನವಾಗಿಯೂ ಇದನ್ನು ಬಳಸುತ್ತಾರೆ. ಆದರೆ ಕೆಲವೊಂದು ನಿಯಮವನ್ನು ಅನುಸರಿಸುವುದು ಮುಖ್ಯವಾಗಿರುತ್ತದೆ. ಒಂದಕ್ಕಿಂತ ಹೆಚ್ಚು ತುಳಸಿ ಗಿಡವನ್ನು ಇಟ್ಟು ಕೊಂಡರೆ ಏನಾಗುತ್ತದೆ ಎಂಬುದರ ಬಗ್ಗೆ ತಿಳಿಯೋಣ.

ತುಳಸಿ ಗಿಡ ಬೆಸ ಸಂಖ್ಯೆಯಲ್ಲಿ ಇರಬೇಕು:

ಕೆಲವೊಂದು ಮನೆಯಲ್ಲಿ ತುಳಸಿ ಗಿಡ ಎಲ್ಲಾ ಕಡೆಯಲ್ಲಿ ಬೆಳೆಯುತ್ತದೆ. ಇನ್ನು ಕೆಲವು ಮನೆಯಲ್ಲಿ ನೆಟ್ಟ ಒಂದು ಗಿಡವೂ ಸರಿಯಾಗಿ ಉಳಿಯುವುದು ಕಷ್ಟ. ಆದರೆ ತುಳಸಿ ಗಿಡದ ಸಂಖ್ಯೆ ಬೆಸಸಂಖ್ಯೆಯಲ್ಲಿರಬೇಕು. 1, 3, 5, 7 ಹೀಗೆ ಬೆಸಸಂಖ್ಯೆಯಲ್ಲಿ ತುಳಸಿ ಗಿಡವನ್ನು ಮನೆಯಲ್ಲಿಟ್ಟುಕೊಳ್ಳಬೇಕು. ಈ ರೀತಿಯಾಗಿ ಇದ್ದರೆ ಮಂಗಳಕರವೆಂದು ಪರಿಗಣಿಸಲಾಗುತ್ತದೆ.

ತುಳಸಿ ಗಿಡವನ್ನು ಹೀಗೆ ನೆಡಬೇಕು:

ತುಳಸಿ ಗಿಡವನ್ನು ನೇರವಾಗಿ ನೆಲದ ಮೇಲೆ ನೆಡಬಾರದು. ಇಂತಹ ತಪ್ಪನ್ನು ಎಂದಿಗೂ ಮಾಡಬಾರದು. ಈ ಸಸಿಯನ್ನು ಕುಂಡದಲ್ಲಿ ಅಥವಾ ತೊಟ್ಟೆಯಲ್ಲಿ ಪ್ರತ್ಯೇಕವಾಗಿ ನೆಡಬೇಕು. ಕುಂಡದಲ್ಲಿ ತುಳಸಿ ಗಿಡವನ್ನು ನೆಟ್ಟರೆ ಯಾವೂದೇ ರೀತಿಯ ಅಶುದ್ಧತೆಗಳು ತುಳಸಿ ಗಿಡವನ್ನು ಮುಟ್ಟುವುದಿಲ್ಲ.

ಈ ದಿನದಂದು ತುಳಸಿಯನ್ನು ಕೀಳಬಾರದು:

ತುಳಸಿ ಗಿಡವನ್ನು ಎಲ್ಲಾ ದಿನ ನೆಡಬಾರದು. ತುಳಸಿಯನ್ನು ಭಾನುವಾರದಂದು ಮತ್ತು ಏಕಾದಶಿಯ ದಿನದಂದು ನೆಡಬಾರದು ಮತ್ತು ಅದರ ಎಲೆಗಳನ್ನು ತೆಗೆಯಬಾರದು. ಈ ಎರಡು ದಿನ ತುಳಸಿಯನ್ನು ಕೀಳುವುದು ಮತ್ತು ಮುಟ್ಟುವುದು ಮಾಡಿದರೆ ಅಶುಭವೆಂದು ಹೇಳುತ್ತಾರೆ.

ತುಳಸಿಯನ್ನು ನಾವು ಮನೆಯಲ್ಲಿ ನೆಡುವಾಗ ಈ ಮೇಲಿನ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ನೆಡಬೇಕು. ಒಂದು ವೇಳೆ ನಿಮ್ಮ ಮನೆಯಲ್ಲಿ ಸಮ ಸಂಖ್ಯೆಯಲ್ಲಿ ತುಳಸಿ ಗಿಡವಿದ್ದರೆ ಯಾವೂದಾದರು ಒಂದನ್ನು ಬೇರೆಯವರಿಗೆ ದಾನ ಮಾಡಿ. ಇದರಿಂದ ಯಾವೂದೇ ರೀತಿಯ ಸಮಸ್ಯೆಗಳು ಉಂಟಾಗುವುದಿಲ್ಲ.

Continue Reading

LATEST NEWS

Trending