Wednesday, October 20, 2021

ಇಂದು ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಡ್‌ ಕರ್ಫ್ಯೂ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.

ಇಂದು ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಗ್ಗೆ 5ರವರೆಗೆ ಜಾರಿಯಲ್ಲಿ ಇರಲಿದೆ.

ಆಗಸ್ಟ್ 21ರ ಶನಿವಾರ ಮತ್ತು ಆಗಸ್ಟ್ 22ರ ರವಿವಾರ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ಈ ಅವಧಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ತೆರೆಯುವುದಕ್ಕೆ ಅವಕಾಶವಿದೆ.

ಬೀದಿ ಬದಿಗಳಲ್ಲಿ ವ್ಯಾಪಾರ ಮಾಡುವುದಕ್ಕೆ ಅವಕಾಶವಿದೆ.

ಹಾಗಾಗಿ ಸಾರ್ವಜನಿಕರು ಈ ಅವಧಿಯ ಒಳಗೆ ಅಗತ್ಯ ವಸ್ತುಗಳನ್ನು ಖರೀದಿಸಬಹುದು.

ಆ ಬಳಿಕ ಅನಗತ್ಯವಾಗಿ ಯಾರೂ ತಿರುಗಾಡುವಂತಿಲ್ಲ.

ಜಿಲ್ಲೆಯಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲ. ಆದರೆ ತುರ್ತು ಸೇವೆಗೆ ಅನುಮತಿ ನೀಡಲಾಗಿದೆ. ರೆಸ್ಟೋರೆಂಟ್, ಹೊಟೇಲ್ಗಳಲ್ಲಿ ಕೇವಲ ಪಾರ್ಸಲ್ಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಿಮಾನ, ರೈಲು, ಬಸ್ ಸಂಚಾರಗಳಿಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...