Connect with us

LATEST NEWS

1 ವರ್ಷದ ಬಳಿಕ ಬ್ಯಾಗ್ ಹೆಗಲಿಗೇರಿಸಿದ ಪುಟಾಣಿಗಳು

Published

on

ಮಂಗಳೂರು: ಇಂದಿನಿಂದ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಆರಂಭವಾಗಲಿದ್ದು, ಈ ಮೂಲಕ ಕೊರೊನಾ ಹಿನ್ನೆಲೆ ಬಂದ್ ಆಗಿದ್ದ ಶಾಲೆಗಳು ಬರೋಬ್ಬರಿ ಒಂದೂವರೆ ವರ್ಷಗಳ ಬಳಿಕ ಓಪನ್ ಆಗುತ್ತಿದೆ.

1-5 ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಶುರುವಾಗಲಿದ್ದು, ಇಂದಿನಿಂದ ಇನ್ನೊಂದು ವಾರ ಅರ್ಧ ದಿನ ಕ್ಲಾಸ್ ನಡೆಯಲಿದೆ.

ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ ಇಲ್ಲ ಎಂಬುದಾಗಿ ಇಲಾಖೆ ತಿಳಿಸಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾರಂಭಗೊಂಡಿದ್ದು, ಚಿಣ್ಣರು ಬ್ಯಾಗ್‌ ಹೆಗಲಿಗೇರಿಸಿ ಹೊರಟಿದ್ದಾರೆ.

ಹಲವು ಮಕ್ಕಳ ಮುಖದಲ್ಲಿ ಶಾಲೆಗೆ ಹೋಗುವ ಉತ್ಸಾಹ ಕಂಡು ಬಂದಿತ್ತು. ಇನ್ನು ಪೋಷಕರು ತಾವೇ ಖುದ್ದಾಗಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿರುವುದು ಕಂಡು ಬಂತು.

ಹಲವು ಕಡೆಗಳಲ್ಲಿ ಶಿಕ್ಷಕರು ಕೂಡಾ ಬೆಳ್ಳಂಬೆಳಿಗ್ಗೆ ಶಾಲೆಯಲ್ಲಿ ಹಾಜರಾಗಿದ್ದು, ಮಕ್ಕಳನ್ನು ಪ್ರೀತಿಯಿಂದಲೇ ಸ್ವಾಗತಿಸಿದ್ದಾರೆ. ಇನ್ನು 1ರಿಂದ 5ನೇ ತರಗತಿಗೆ ಶಾಲೆ ಆರಂಭವಾಗಲಿದ್ದು, ನ.2ರವರೆಗೆ ಮಾತ್ರ ಅರ್ಧ ದಿನ ಮಾತ್ರ ತರಗತಿ ನಡೆಯಲಿದೆ. ನವೆಂಬರ್ 2ರಿಂದ ಪೂರ್ಣ ಪ್ರಮಾಣದಲ್ಲಿ ತರಗತಿ ಶುರುವಾಗಲಿದೆ.

ಸೋಮವಾರದಿಂದ ಶುಕ್ರವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಕ್ಲಾಸ್ ನಡೆಯಲಿದೆ. ಇನ್ನುಳಿದ ಎರಡು ದಿನ ಶಾಲೆ ಕೊಠಡಿಗಳ ಕ್ಲೀನಿಂಗ್ ಕಾರ್ಯ ನಡೆಯಲಿದೆ.

ಪಾಸಿಟಿವಿಟಿ ದರ ಶೇ.1 ಕ್ಕಿಂತ ಕಡಿಮೆ ಇರುವಲ್ಲಿ ಮಾತ್ರ ಸ್ಕೂಲ್ ಓಪನ್ ಮಾಡಲಾಗುತ್ತಿದೆ. ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ. ಮಕ್ಕಳಲ್ಲಿ ಸೋಂಕು ಇಲ್ಲದೆ ಇರೋದನ್ನ ಪೋಷಕರು ದೃಢೀಕರಿಸಬೇಕು.

ಒಂದು ತರಗತಿಯಲ್ಲಿ 20 ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ನ.2ರಿಂದ ಶಾಲೆಯಲ್ಲೇ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಆನ್ ಲೈನ್ ಅಥವಾ ಆಫ್ ಲೈನ್ ಎರಡೂ ತರಗತಿಗೂ ಅವಕಾಶ.

15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು. 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್‍ಶೀಲ್ಡ್ ಕಡ್ಡಾಯ ಹಾಗೂ ಶಿಕ್ಷಕರು, ಸಿಬ್ಬಂದಿ 2 ಡೋಸ್ ಲಸಿಕೆ ಕಡ್ಡಾಯವಾಗಿದೆ.

ಮಕ್ಕಳಲ್ಲಿ ಒಂದು ಮೀಟರ್ ಅಂತರ ಪಾಲನೆ ಕಡ್ಡಾಯ. ಸ್ಯಾನಿಟೈಸೇಷನ್ ಹಾಗೂ ಶೌಚಾಲಯಗಳಲ್ಲಿ ಶುಚಿತ್ವ ಕಾಪಾಡುವುದು ಕಡ್ಡಾಯವಾಗಿದೆ ಎಂದು ಮಂಗಳೂರಿನ ಡೊಂಗರಕೇರಿ ಕೆನರಾ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಕೆ ಸುರೇಶ್ ಕಾಮತ್‌ ಹೇಳಿದ್ದಾರೆ.

DAKSHINA KANNADA

‘ಕೇಸರಿಕರಣ’ವಾದ ಡಿಡಿ ನ್ಯೂಸ್..! ಚರ್ಚೆಗೆ ಕಾರಣವಾದ ಹೊಸ ಲೋಗೋ..!

Published

on

ಮಂಗಳೂರು : ಚುನಾವಣಾ ಸಮಯದಲ್ಲೇ ದೇಶದ ಸರ್ಕಾರಿ ಚಾನೆಲ್ ದೂರದರ್ಶನ ತನ್ನ ಲೋಗೋದ ಬಣ್ಣವನ್ನು ಬದಲಾಯಿಸಿದೆ. ಡಿಡಿ ನ್ಯೂಸ್‌ ತನ್ನ ಲೋಗೋ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿರುವುದು ಈಗ ಚರ್ಚೆಗೆ ಕಾರಣವಾಗಿದೆ. 1959 ರಲ್ಲಿ ಆರಂಭವಾಗಿದ್ದ ದೂರದರ್ಶನದ ಲೋಗೋ ನೀಲಿ ಬಣ್ಣದಾಗಿದ್ದು, ಇದೀಗ ಚುನಾವಣೆಯ ಹೊಸ್ತಿಲಲ್ಲಿ ಕೇಸರಿ ಬಣ್ಣಕ್ಕೆ ಬದಲಾಯಿಸಿದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ದೇಶದಲ್ಲಿ ಎಲ್ಲವನ್ನೂ ಕೇಸರಿಕರಣ ಮಾಡುವ ಭಾಗವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದೆ.

ಕೇಂದ್ರ ಸರ್ಕಾರದ ಪ್ರಸಾರಭಾರತಿ ಅಡಿಯಲ್ಲಿ ಬರುವ ದೂರದರ್ಶನ ಏಕಾಏಕಿ ತನ್ನ ಲೋಗೋವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿದೆ. ಇದನ್ನು ದೂರದರ್ಶನ ತನ್ನ ಅಧಿಕೃತ ‘X’ ಖಾತೆಯಲ್ಲಿ ಹಂಚಿಕೊಂಡಿದ್ದು, ಲೋಗೋ ಕೇವಲ ದೃಶ್ಯ ಸೌಂದರ್ಯದ ಬದಲಾವಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

“ನಮ್ಮ ಮೌಲ್ಯಗಳು ಒಂದೇ ಆಗಿರುವಾಗ, ನಾವು ಈಗ ಹೊಸ ಅವತಾರದಲ್ಲಿ ಸಿಗಲಿದ್ದೇವೆ. ಹಿಂದೆಂದಿಗಿಂತಲೂ ಉತ್ತಮ ಸುದ್ದಿ ಪ್ರಯಾಣಕ್ಕೆ ಸಿದ್ಧರಾಗಿ. ಎಲ್ಲಾ ಹೊಸ ಡಿಡಿ ನ್ಯೂಸ್ ಅನ್ನು ಅನುಭವಿಸಿ! ” ಎಂದು DD News ತನ್ನ ಅಧಿಕೃತ ‘X’ ಹ್ಯಾಂಡಲ್‌ನಲ್ಲಿ ಅದರ ಹೊಸ ಲೋಗೋದ ವೀಡಿಯೊದೊಂದಿಗೆ ಪೋಸ್ಟ್ ಮಾಡಿದೆ. ಜೊತೆಗೆ “ಕೇವಲ ಧೈರ್ಯದ ಬರವಸೆಯಲ್ಲ..ವೇಗದ ಮತ್ತು ನಿಖರತೆಯ ಬರವಸೆ ; ಹಕ್ಕುಗಳ ಮತ್ತು ಸತ್ಯದ ಬರವಸೆ ; ಸಂವೇದನೆಯ ಹಾಗೂ ಸತ್ಯದ ಬರವಸೆ ;  ಯಾಕೆಂದರೆ ಡಿಡಿ ನ್ಯೂಸ್ ನಲ್ಲಿ ಬಂದರೆ ಅದು ಸತ್ಯ! ಡಿಡಿ ನ್ಯೂಸ್ – ಭರೋಸಾ ಸಚ್ ಕಾ..” ಎಂದು ಹೇಳಿಕೊಂಡಿದ್ದಾರೆ.

2012 ಮತ್ತು 2014 ರ ನಡುವೆ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ಸೇವೆ ಸಲ್ಲಿಸಿದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (AITC) ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಈ ಬೆಳವಣಿಗೆಯನ್ನು ಟೀಕಿಸಿದ್ದಾರೆ. ಪ್ರಸಾರ ಭಾರತಿ ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೊ (AIR) ಮೇಲ್ವಿಚಾರಣೆ ಮಾಡುವ ಶಾಸನಬದ್ಧ ಸಂಸ್ಥೆಯಾಗಿದೆ.”ರಾಷ್ಟ್ರೀಯ ಬ್ರಾಡ್‌ಕಾಸ್ಟರ್ ತನ್ನ ಬ್ರ್ಯಾಂಡಿಂಗ್‌ಗಾಗಿ ಕೇಸರಿ ಬಣ್ಣವನ್ನು ಆಯ್ಕೆ ಮಾಡಿರುವುದು ಸರಿಯಲ್ಲ” ಎಂದು ಸಿರ್ಕಾರ್ ಸಾಮಾಜಿಕ ಮಾಧ್ಯಮ ಸೈಟ್ ‘X’ ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ “ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ನಾನು ಪರಿಗಣಿಸುತ್ತೇನೆ” ಎಂದು ಸಿರ್ಕಾರ್ ಹೇಳಿದ್ದಾರೆ, ಲೋಗೋ ಬದಲಾವಣೆ ಮಾಡಿರುವ ಸಮಯವನ್ನು ಪ್ರಶ್ನಿಸಿದ ಅವರು. “ಇದು ರಾಜ್ಯಗಳಲ್ಲಿ ಪ್ರಭಾವ ಬೀರುತ್ತದೆ ಎಂದು ಹೇಳಿದ್ದಾರೆ. ಕೇಸರಿ ಒಂದು ನಿರ್ಧಿಷ್ಟ ಧರ್ಮವನ್ನು ಸೂಚಿಸುವ ಬಣ್ಣವಾಗಿದ್ದು ಅದನ್ನು ದೂರದರ್ಶನ ಬಳಸಿಕೊಂಡಿದ್ದು ತಪ್ಪು” ಎಂದಿದ್ದಾರೆ.

ದೂರದರ್ಶನದ ಈ ಬೆಳವಣಿಗೆಯ ಬಗ್ಗೆ ವಿರೋಧ ಪಕ್ಷಗಳು ಸಾಕಷ್ಟು ಟೀಕೆ ವ್ಯಕ್ತಪಡಿಸಿದ್ದು, ಹೊಸ ಸಂಸತ್‌ನಲ್ಲಿ ಒಳಗೆ ಎಲ್ಲಾ ಕಡೆ ಕೇಸರಿಕರಣ ಮಾಡಲಾಗಿದೆ. ಇದೀಗ ದೇಶದ ಜನರನ್ನು ದೂರದರ್ಶನದ ಮೂಲಕ ಕೇಸರಿಕರಣ ಮಾಡಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

Continue Reading

LATEST NEWS

ಉಡುಪಿ : ದೇಶದಲ್ಲಿ ಕೇಸರಿ ಆಡಳಿತವೇ ನಮ್ಮ ಉದ್ದೇಶ : ಸುನಿಲ್ ಕುಮಾರ್

Published

on

ಉಡುಪಿ : ದೇಶದಲ್ಲಿ ಕೇಸರಿ ಆಡಳಿತವನ್ನು ಮಾಡಲೆಂದೇ ಬಿಜೆಪಿ ಚುನಾವಣೆಗೆ ಹೋಗುತ್ತಿದೆ. ಇದನ್ನು ಹೇಳಿಕೊಳ್ಳಲು ನಮಗೆ ಯಾವುದೇ ಸಂಕೋಚ ಇಲ್ಲ. ನಾವು ಕೇಸರಿ ಆಡಳಿತವನ್ನ ತರಲು ಹೊರಟಿದ್ದೇವೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ.


ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸುನಿಲ್ ಕುಮಾರ್, ಕಾಂಗ್ರೆಸ್ ಒಂದು ಕೋಮಿನವರಿಗೆ ಬೆಂಬಲ ನೀಡುತ್ತಿದೆ. ಆ ಮೂಲಕ ಇನ್ನೊಂದು ಕೋಮಿನವರು ನೆಮ್ಮದಿಯಾಗಿ ಬದುಕಬಾರದು ಅನ್ನೋದು ಅವರ ಸಿದ್ಧಾಂತ. ಇದಕ್ಕೆ ನಮ್ಮ ವಿರೋಧವಿದ್ದು, ನಾವು ರಾಷ್ಟ್ರೀಯತೆಯ ಸಂಕೇತವಾದ ಕೇಸರಿಯನ್ನೇ ಮುಂದಿಟ್ಟು ಆಡಳಿತ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಉಡುಪಿ: ಅನ್ಯಕೋಮಿನವರ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತವೇ ಮುಖ್ಯ ಕಾರಣ : ಸುನಿಲ್ ಕುಮಾರ್
ಚೊಂಬು ಕೊಟ್ಟಿದ್ದು ಕಾಂಗ್ರೆಸ್ :

ಕಾಂಗ್ರೆಸ್ ನೀಡಿದ ಚೊಂಬಿನ ಜಾಹಿರಾತು ವಿಚಾರವಾಗಿ ಮಾತನಾಡಿದ ಸುನಿಲ್ ಕುಮಾರ್, ಶೌಚಾಲಯ ನಿರ್ಮಾಣ ಮಾಡದೆ ಹಳ್ಳಿಯ ಮಹಿಳೆಯರಿಗೆ ಚೊಂಬು ಕೊಟ್ಟಿದ್ದು ಕಾಂಗ್ರೆಸ್‌ ಸರ್ಕಾರ. ಆದ್ರೆ ಶೌಚಾಲಯ ನಿರ್ಮಾಣ ಮಾಡಿಕೊಟ್ಟಿದ್ದು ಬಿಜೆಪಿ ಸರ್ಕಾರ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ನಾವು ಕೇಸರಿ ಹಾಕಿಕೊಂಡು ದ್ವೇಷ ಮಾಡಲು ಹೊರಟಿಲ್ಲ. ನಾವು ರಾಷ್ಟ್ರದಲ್ಲಿ ಕೇಸರಿ ಆಡಳಿತ ತರಲು ಹೊರಟಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

Continue Reading

DAKSHINA KANNADA

ಪದ್ಮರಾಜ್ ಪೂಜಾರಿ ಪ್ರಚಾರ ಶೈಲಿ..! ಜನಾರ್ದನ ಪೂಜಾರಿಯನ್ನ ನೆನೆದ ಜನ…!

Published

on

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ ಪ್ರಚಾರ ಶೈಲಿಗೆ ಜನ ಜನಾರ್ದನ ಪೂಜಾರಿಯವರನ್ನು ನೆನಪಿಸಿಕೊಳ್ತಾ ಇದ್ದಾರೆ. ಗುರುವಿನಂತೆ ಶಿಷ್ಯ ಕೂಡಾ ಪ್ರಚಾರ ಮಾಡ್ತಾ ಇರೋದು ನೋಡಿದ ಜನ ಇವರು ನಿಜವಾಗಿಯೂ ಜನಾರ್ದನ ಪೂಜಾರಿ ಅವರಂತೆ ಜನನಾಯಕ ಅಂತಿದ್ದಾರೆ.

ಜನಾರ್ದನ ಪೂಜಾರಿ ಅವರು 2014 ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಕೊನೆಯ ಸ್ಪರ್ಧೆಯನ್ನ ನೀಡಿದ್ದರು. ಹತ್ತು ವರ್ಷದ ಬಳಿಕ ಅವರ ಶಿಷ್ಯ ಪದ್ಮರಾಜ್ ಪೂಜಾರಿ ಈಗ ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಪದ್ಮರಾಜ್ ಪೂಜಾರಿ ಅವರು ಜನರೊಂದಿಗೆ ಬೆರೆಯುವ ರೀತಿ, ಜನರಿಗೆ ತೋರಿಸುವ ಪ್ರೀತಿ, ಹಾಗೂ ಪ್ರಚಾರದ ವೇಳೆ ಅವರು ವರ್ತಿಸೋ ರೀತಿ ನೋಡಿದ ಸಾಕಷ್ಟು ಜನ ಜನಾರ್ಧನ ಪೂಜಾರಿ ಅವರ ಚುನಾವಣ ಪ್ರಚಾರದ ವೈಖರಿಯನ್ನು ನೆನಪಿಸಕೊಳ್ಳುವಂತೆ ಮಾಡಿದೆ.

ಸಂಸದರಾಗಿ , ಕೇಂದ್ರ ಸಚಿವರಾಗಿ, ಬಡವರ ಬಂಧು ಅಂತ ಕರೆಸಿಕೊಂಡಿದ್ದ ಜನಾರ್ದನ ಪೂಜಾರಿ ಅವರಿಗೆ ಚುನಾವಣೆಯಲ್ಲಿ ಸೋಲಾಗಿದ್ರೂ, ಜನರು ಮಾತ್ರ ಅವರನ್ನು ಮರೆತಿಲ್ಲ. ಜನಾರ್ದನ ಪೂಜಾರಿಯವರು ರಾಜಕೀಯದಿಂದ ದೂರ ಉಳಿದು ವರ್ಷಗಳೇ ಕಳೆದ್ರು ಜನರಿಗೆ ಅವರ ಮೇಲಿರೋ ಪ್ರೀತಿ ಅಭಿಮಾನ ಕಡಿಮೆ ಆಗಿಲ್ಲ. ಚುನಾವಣಾ ಸಮುಯದಲ್ಲಿ ಪ್ರಚಾರಕ್ಕೆ ಇಳಿಯುತ್ತಿದ್ದ ಜನಾರ್ದನ ಪೂಜಾರಿ ಅವರ ಪ್ರಚಾರ ವೈಖರಿಯನ್ನಂತು ಜನ ಮರೆಯೋದೆ ಕಷ್ಟ. ಮುಂಜಾನೆಯಿಂದ ರಾತ್ರಿ ವರೆಗೂ ಅವರು ಮತಯಾಚನೆ ಮಾಡುತ್ತಿದ್ದ ರೀತಿಗೆ ಜನರೇ ದಂಗಾಗಿ ಹೋಗ್ತಾ ಇದ್ರು. ಇನ್ನು ನಡೆದುಕೊಂಡು ಮತಯಾಚಿಸೋ ಜನಾರ್ದನ ಪೂಜಾರಿ ಅವರ ಜೊತೆ ಕಾರ್ಯಕರ್ತರು ಓಡಿಕೊಂಡು ಹೋಗಬೇಕು ಅನ್ನುವಷ್ಟು ವೇಗವಾಗಿ ಸಾಗ್ತಾ ಇದ್ರು. ಅದೇ ಸೇಮ್ ಟು ಸೇಮ್ ಅನ್ನುವಂತೆ ಪದ್ಮರಾಜ್ ಪೂಜಾರಿ ಕೂಡಾ ಪ್ರಚಾರ ಮಾಡ್ತಾ ಇದ್ದಾರೆ.

ಪದ್ಮರಾಜ್ ಪೂಜಾರಿಯವರು ಒಮ್ಮೆ ಬೈಕ್‌ನಲ್ಲಿ ಮತಯಾಚನೆಗೆ ತೆರಳಿದ್ರೆ, ಮತ್ತೊಮ್ಮೆ ಜೀಪ್ ಏರಿ ರೋಡ್ ಶೋ ನಡೆಸ್ತಾರೆ. ಇನ್ನು ಗ್ರಾಮೀಣ ಪ್ರದೇಶದಲ್ಲಿ ಪಾದಯಾತ್ರೆ ಮಾಡಿದ್ರೆ ಅವರ ವೇಗದ ನಡಿಗೆ ಮತ್ತು ಓಡಿಕೊಂಡು ಹೋಗುವ ಅವರ ಶೈಲಿ ಜನಾರ್ದನ ಪೂಜಾರಿ ಅವರನ್ನು ನೆನಪಿಸುತ್ತದೆ. ಎಲ್ಲೇ ಹೋದ್ರು ಜನ ಪದ್ಮರಾಜ್ ಅವರನ್ನು ಮುತ್ತಿಕೊಂಡು ಪ್ರೀತಿಯಿಂದ ಮಾತಾಡಿಸ್ತಾ ಇದ್ದಾರೆ. ಅದೇ ರೀತಿ ಪದ್ಮಾರಾಜ್ ಕೂಡಾ ಜನರಿಗೆ ಬಹಳಷ್ಟು ಹತ್ತಿರವಾಗಿ ಅಭಿಮಾನ ಪ್ರೀತಿಯನ್ನ ಗಳಿಸಿಕೊಂಡಿದ್ದಾರೆ. ಸದ್ಯಕ್ಕಂತು ಜನ ಜನಾರ್ದನ ಪೂಜಾರಿ ಅವರ ಸ್ಥಾನ ತುಂಬಲು ಪದ್ಮರಾಜ್ ಅವರೇ ಸರಿಯಾದ ಅಭ್ಯರ್ಥಿ ಅಂತ ಮಾತನಾಡುತ್ತಿದ್ದು, ಅವರ ಗೆಲುವಿಗೆ ಹಾರೈಸುತ್ತಿದ್ದಾರೆ.

ಇದನ್ನೂ ಓದಿ : ಉಡುಪಿ: ಅನ್ಯಕೋಮಿನವರ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತವೇ ಮುಖ್ಯ ಕಾರಣ : ಸುನಿಲ್ ಕುಮಾರ್

Continue Reading

LATEST NEWS

Trending