Sunday, July 3, 2022

ಉಡುಪಿ: ಶೇಂದಿ ತೆಗೆಯುತ್ತಿದ್ದಾಗ ಬಿದ್ದು ಗಂಭೀರ ಗಾಯ

ಉಡುಪಿ: ಶೇಂದಿ ತೆಗೆಯಲು ಮರ ಹತ್ತಿದ್ದಾಗ ತೆಂಗಿನ ಮರದಿಂದ ಕೆಳಕ್ಕೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಉಡುಪಿ ಕಾಪುವಿನ ಉಳಿಯಾರಗೋಳಿ ಎಂಬಲ್ಲಿ ನಡೆದಿದೆ.

ಉಳಿಯಾರಗೋಳಿ ಗ್ರಾಮದ ತಾಳಿ ತೋಟ ನಿವಾಸಿ ವಿನೋದರ ಎ. ಸನಿಲ್ (55) ಮೃತ ಪಟ್ಟ ವ್ಯಕ್ತಿ.


ಸಾಂಪ್ರಧಾಯಿಕ ಶೈಲಿಯ ಶೇಂದಿ ತೆಗೆಯುವ ಕೆಲಸ ಮಾಡುತ್ತಿದ್ದ ವಿನೋಧರ ಸನಿಲ್ ಅವರು ಜೂನ್ 4 ರಂದು ತೆಂಗಿನ ಮರದಿಂದ ಶೇಂದಿ ತೆಗೆಯಲು ತೆಂಗಿನ ಮರಕ್ಕೆ ಹತ್ತಿದ್ದು, ತೆಂಗಿನ ಕೊಂಬನ್ನು ಕತ್ತಿಯಿಂದ ತುಂಡು ಮಾಡುವಾಗ ಆಕಸ್ಮಿಕವಾಗಿ ಅವರ ಎಡಕೈ ಮಣಿಗಂಟಿಗೆ ತಾಗಿ ರಕ್ತ ಗಾಯವಾಗಿ ಮರದಿಂದ ಕೆಳಗೆ ಬಿದ್ದಿದ್ದರು.

ಅವರ ಮಗ ಮತ್ತು ಇತರರು ಸೇರಿಕೊಂಡು ಅವರನ್ನು ಚಿಕಿತ್ಸೆಗಾಗಿ ಉಡುಪಿ ಹೈಟೆಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಮ್.ಸಿ. ಆಸ್ಪತ್ರೆಗೆ ದಾಖಲು ಮಾಡಿದ್ದರು.

ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು.

ನಂತರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ನಂತರ ಮತ್ತೆ ಜೂ. 18ರಂದು ಉಡುಪಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದ್ರೆ ನಿನ್ನೆ ಮುಂಜಾನೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನ ಬಾಳಿಗೆ ಬೆಳಕಾದ ಸಮಾಜ ಸೇವಕ ಈಶ್ವರ್ ಮಲ್ಪೆ

ಉಡುಪಿ: ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬನನ್ನು ಉಡುಪಿಯ ಹೊಸಬೆಳಕು ಆಶ್ರಮಕ್ಕೆ ಸೇರಿಸಿ ಹೊಸ ಬದುಕು ನೀಡಿದ ಉಡುಪಿ ಸಮಾಜ ಸೇವಕ ಈಶ್ವರ್ ಮಲ್ಪೆ ಅವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.ಕಾರವಾರ...

ಮರವಂತೆಯಲ್ಲಿ ಸಮುದ್ರಪಾಲಾದ ಕಾರು: ಓರ್ವ ಸ್ಪಾಟ್ ಡೆತ್-ಓರ್ವ ನಾಪತ್ತೆ

ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ...

ಕುವೈಟ್‌-ಮಂಗಳೂರು ಪ್ರಯಾಣಿಕನ ಜೊತೆ ಸಿಬ್ಬಂದಿ ಉದ್ಧಟತನ: ಕ್ಷಮೆ ಕೇಳಿದ ಏರ್‌ಇಂಡಿಯಾ

ಮಂಗಳೂರು: ಕುವೈಟ್‌ನಿಂದ ಮಂಗಳೂರಿಗೆ ಹೊರಡುವ ವೇಳೆ ಕುವೈಟ್‌ನ ಏರ್‌ಇಂಡಿಯಾ ಕೌಂಟರ್‌ನ ವ್ಯವಸ್ಥಾಪಕ ಉದ್ಧಟತನದ ವರ್ತನೆ ಬಗ್ಗೆ ದೂರಿದ ಮಂಗಳೂರಿಗರೊಬ್ಬರಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆ ಕ್ಷಮೆ ಕೋರಿದ ಘಟನೆ ನಿನ್ನೆ ನಡೆದಿದೆ.ಕುವೈತ್‌ನ ಅನಿವಾಸಿ ಭಾರತೀಯ,...