Friday, July 1, 2022

ಬಂಟ್ವಾಳ: ಅಂಗಡಿ, ಬಸ್‌ಸ್ಟ್ಯಾಂಡ್‌ಗೆ ನುಗ್ಗಿದ ಟೋಯಿಂಗ್‌ ಲಾರಿ-ಚಾಲಕ ಗಂಭೀರ

ಬಂಟ್ವಾಳ: ಚಲಿಸುತ್ತಿದ್ದ ಟೋಯಿಂಗ್‌ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ಅಂಗಡಿ ಮತ್ತು ಬಸ್‌ಸ್ಟ್ಯಾಂಡ್‌ಗೆ ನುಗ್ಗಿದ ಘಟನೆ ಕಳೆದ ತಡರಾತ್ರಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೋಡಾಜೆ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದಾನೆಂದು ತಿಳಿದು ಬಂದಿದೆ.


ನಿನ್ನೆ ತಡರಾತ್ರಿ 1 ಗಂಟೆಯ ವೇಳೆಗೆ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಏಕಾಏಕಿ ಚಾಲಕನ ನಿಯಂತ್ರಣ ಕಳೆದು ಕೊಡಾಜೆ ಜಂಕ್ಷನ್ ನಲ್ಲಿ ನಂದಿನಿ ಹಾಲಿನ ಅಂಗಡಿ, ಬೇಕರಿ, ಬಸ್ ತಂಗುದಾಣ, ಮೊಬೈಲ್ ಅಂಗಡಿಗೆ,

ಢಿಕ್ಕಿ ಹೊಡೆದು ಹೋಟೆಲ್‌ಗೆ ನುಗ್ಗಿದೆ. ಘಟನೆಯಿಂದ ಚಾಲಕ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಆತನನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.


ಶಿರಸಿ ಮೂಲದ ಲಾರಿ ಎಂದು ತಿಳಿದು ಬಂದಿದೆ‌. ಘಟನೆಯಿಂದ ಅಂಗಡಿಗಳಿಗೆ ಹಾನಿಯಾಗಿದ್ದು, ಚಾಲಕ ನಿದ್ರೆ ಮಂಪರಿನಲ್ಲಿದ್ದ ಎನ್ನಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಬೈಕಾಡಿ ಪ್ರತಿಷ್ಠಾನದ ವತಿಯಿಂದ ಮಕ್ಕಳಿಗಾಗಿ “ಕಥಾನಕ” ಸ್ಪರ್ಧೆ

ಮಂಗಳೂರು: ಮಂಗಳೂರು ಉರ್ವದ ಬೈಕಾಡಿ ಪ್ರತಿಷ್ಠಾನದ ವತಿಯಿಂದ ಮಕ್ಕಳಿಗಾಗಿ ಕನ್ನಡದಲ್ಲಿ ಕಥೆ ಹೇಳುವ ಆನ್ ಲೈನ್ ಕಥಾ ಸ್ಪರ್ಧೆ"ಕಥಾನಕ" ಎಂಬ ಸ್ಪರ್ಧೆ ಆಯೋಜನೆ ಮಾಡಲಾಗಿದೆ.ಈ ಕುರಿತು ಪ್ರತಿಷ್ಠಾನದ ಕಾರ್ಯದರ್ಶಿಯಾದ ಭರತ್ ಬೈಕಾಡಿಯವರು ಮಾಧ್ಯಮಗಳೊಂದಿಗೆ...

ಇಂದಿನಿಂದ ಸಿಂಗಲ್‌ ಯೂಸ್‌ ಪ್ಲಾಸ್ಟಿಕ್‌ ಬ್ಯಾನ್‌: ಬಳಸಿದ್ರೆ 5 ವರ್ಷ ಜೈಲು

ನವದೆಹಲಿ: 'ದೇಶದಲ್ಲಿ ಏಕಬಳಕೆ ಪ್ಲಾಸ್ಟಿಕ್‌ ನಿಷೇಧವು ಜುಲೈ 1 ರಿಂದ ಕಟ್ಟುನಿಟ್ಟಾಗಿ ಜಾರಿಗೆ ಬಂದಿದೆ. ಈ ಆದೇಶ ಮೀರಿ ಪ್ಲಾಸ್ಟಿಕ್‌ ಉತ್ಪಾದಿಸಿ ಅದನ್ನು ಸರಬರಾಜು ಮಾಡುವ ಮತ್ತು ದಾಸ್ತಾನು ಇಡುವುದು ಕಂಡುಬಂದರೆ ಅಂತಹ...

ಬೆಳ್ತಂಗಡಿ: ಬೀದಿ ಬದಿ ಅಂಗಡಿ ತೆರವು ಪ್ರಕರಣದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ಸಂಪರ್ಕಿಸುವ ನಿಡ್ಲೆ ಪಂಚಾಯತ್‌ ವ್ಯಾಪ್ತಿಯ ಪಾರ್ಪಿಕಲ್‌ ರಸ್ತೆಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರನ್ನು PWD ತೆರವುಗೊಳಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಬೆಳ್ತಂಗಡಿಯ ಪಿಡಬ್ಲ್ಯೂಡಿ...