Connect with us

LATEST NEWS

ಕುಕ್ಕೆ ಸುಬ್ರಹ್ಮಣ್ಯಕ್ಕೆ ಖ್ಯಾತ ತೆಲುಗು ನಟ ಪವನ್ ಕಲ್ಯಾಣ್ ಭೇಟಿ

Published

on

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಖ್ಯಾತ ತೆಲುಗು ನಟ, ರಾಜಕಾರಣಿ ಪವನ್ ಕಲ್ಯಾಣ್ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಳಿಕ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಅವರು ಆದಿ ಸುಬ್ರಹ್ಮಣ್ಯದ ಹುತ್ತಕ್ಕೆ ವಸ್ತ್ರ ಸಮರ್ಪಿಸಿ ಪ್ರಾರ್ಥನೆ ನಡೆಸಿದರು.

ಸಂಕಲ್ಪ ನೆರವೇರಿಸಿದ ಅವರು ಆಶ್ಲೇಷ ಬಲಿ ಸೇವೆ ಸಲ್ಲಿಸಿದ್ದು ನಂತರ ಶ್ರೀ ದೇವರ ದರುಶನ ಪಡೆದರು. ದೇವಳದ ಅರ್ಚಕರು ಅವರನ್ನು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು.

ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಪವನ್ ಕಲ್ಯಾಣ್ ಅವರು, ‘ಪ್ರತೀ ಏಕಾದಶಿಯಂದು ದೇವಸ್ಥಾನದಲ್ಲಿ ನಡೆಸುವ ಸ್ವಚ್ಛತಾ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲಾ ದೇವಸ್ಥಾನಗಳೂ ಕುಕ್ಕೆಯಂತಹ ಕಾರ್ಯವನ್ನು ಅನುಸರಿಸಬೇಕು’ ಎಂದು ಮನವಿ ಮಾಡಿದರು.

ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ವತಿಯಿಂದ ಸ್ವಾಗತಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ಸುಳ್ಳಿ ಅವರು ಗೌರವಿಸಿದರು.

ದೇಗುಲದಲ್ಲಿ ಖ್ಯಾತ ನಟನನ್ನು ಕಂಡ ಭಕ್ತರು ಅವರ ಸುತ್ತ ಸೇರಿ ಸೆಲ್ಪಿ ಕ್ಲಿಕ್ಕಿಸಿಕೊಂಡರು. ಅಭಿಮಾನಿಗಳಿಗೆ ನಿರಾಸೆಯಾಗದಂತೆ ಸೆಲ್ಪಿಗೆ ಪವನ್‌ ಕಲ್ಯಾಣ್ ಪೋಸ್ ಕೊಟ್ಟರು.

DAKSHINA KANNADA

ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

Published

on

ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ‌.

ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ.  ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.

ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊ‌‌ನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.

Continue Reading

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending