ಹೈದರಾಬಾದ್: ಹಿರಿಯ ನಟ, ನಿರ್ಮಾಪಕ, ಟಾಲಿವುಡ್ ರೆಬೆಲ್ ಸ್ಟಾರ್ ಕೃಷ್ಣಂರಾಜು ಹೈದರಾಬಾದ್ನಲ್ಲಿ ಇಂದು ಮುಂಜಾನೆ 3:25ರ ವೇಳೆಗೆ ನಿಧನರಾಗಿದ್ದಾರೆ.
83 ವರ್ಷದ ಕೃಷ್ಣಂರಾಜು ಅವರು ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.1940 ಜನವರಿ 20 ರಂದು ಜನಿಸಿದ್ದ ಕೃಷ್ಣಂರಾಜು ಅವರು ತೆಲುಗಿನ 187 ಸಿನಿಮಾಗಳಲ್ಲಿ ನಟಿಸಿದ್ದಾರೆ.
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲ ಸಮಯದಿಂದ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಾಳೆ ಹೈದರಾಬಾದ್ನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರ ದೊಡ್ಡಪ್ಪ ಆಗಿರೋ ಕೃಷ್ಣಂರಾಜು ಅವರು ಕೊನೆಯದಾಗಿ ಪ್ರಭಾಸ್ ಅವರ ‘ರಾಧೆ ಶ್ಯಾಮ್’ ಸಿನಿಮಾದಲ್ಲಿ ನಟಿಸಿದ್ದರು.
ರಾಜಕೀಯದಲ್ಲೂ ಸಕ್ರೀಯರಾಗಿದ್ದ ಕೃಷ್ಣಂರಾಜು ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಆ ಬಳಿಕ ಪ್ರಜಾರಾಜ್ಯಂ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಅಲ್ಲದೇ ಮೂವಿ ಆರ್ಟಿಸ್ಟ್ ಅಸೋಸಿಯೇಷನ್ ನಲ್ಲಿ ಹಿರಿಯರಾಗಿದ್ದರು.