Sunday, May 22, 2022

ಮಕ್ಕಳಲ್ಲಿ ‘ಟೊಮೆಟೊ ಫ್ಲೂ’: ಕರ್ನಾಟಕ- ಕೇರಳ ಗಡಿಯಲ್ಲಿ ಕಟ್ಟೆಚ್ಚರ

ಬೆಂಗಳೂರು: ಮಕ್ಕಳಲ್ಲಿ ಕಂಡು ಬರುವ ‘ಟೊಮೆಟೊ ಫ್ಲೂ’ ರೋಗದ ಹರಡುವಿಕೆ ತಡೆಗಟ್ಟಲು ಕರ್ನಾಟಕ ಕೇರಳ ಗಡಿಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ.


ಕೇರಳದಲ್ಲಿ ಈ ರೋಗದ ಹೆಚ್ಚಿನ ಪ್ರಕರಣಗಳು ಪತ್ತೆಯಾಗಿರುವುದರಿಂದ ಮಂಗ‌ಳೂರು, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಕೇರಳದಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ಇರಿಸಲು ಸೂಚನೆ ನೀಡಲಾಗಿದೆ’ ಎಂದರು.
ಇದು ಈಗಾಗಲೇ ಇರುವ ಕಾಯಿಲೆಯಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ರಾಜ್ಯದ ಯಾವುದೇ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಲ್ಲಿ ಈ ರೋಗ ಲಕ್ಷಣ ಕಂಡು ಬರುವ ಮಕ್ಕಳ ಬಗ್ಗೆ ಕೂಡಲೇ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.
ಟೊಮೆಟೊ ಜ್ವರಕ್ಕೂ ಕೊರೊನಾಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ರೋಗದ ಲಕ್ಷಣ

  • ಈ ರೋಗವು ಸಾಮಾನ್ಯವಾಗಿ 5 ವರ್ಷ ವಯಸ್ಸಿನ ಒಳಗಿನ ಮಕ್ಕಳಲ್ಲಿ ಕಂಡು ಬರುತ್ತದೆ.
  • ಚರ್ಮದ ತುರಿಕೆ, ಕೆಂಪಾಗುವುದು, ನೀರಡಿಕೆ ಮೊದಲಾದ ಲಕ್ಷಣಗಳನ್ನು ಹೊಂದಿವೆ.
  • ತೀವ್ರ ಜ್ವರ, ಮೈ ಕೈ ನೋವು, ಕೀಲು ನೋವು, ಆಯಾಸ ಮೊದಲಾದ ಲಕ್ಷಣಗಳೂ ಕಂಡುಬರುತ್ತವೆ.

LEAVE A REPLY

Please enter your comment!
Please enter your name here

Hot Topics

ಕಾಂಗ್ರೆಸ್‌ನಲ್ಲಿ ಯೌವನ ನಿರ್ಧಾರವಾಗುವುದು 50 ರ ನಂತರವೇ: ಬಿಜೆಪಿ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯೌವನ ನಿರ್ಧಾರವಾಗುವುದು 50 ರ ನಂತರವೇ? ಕಾಂಗ್ರೆಸ್‌ ಪಕ್ಷದಲ್ಲಿರುವ ಯುವ ನಾಯಕರು ಯಾರು? ಎಂದು ಕಾಂಗ್ರೆಸ್‌ ಅನ್ನು ಬಿಜೆಪಿ ಟ್ವೀಟ್‌ನಲ್ಲಿ ಕುಟುಕಿದೆ.ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ...

ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ ಉದಯ್ ಚೌಟ ಇನ್ನಿಲ್ಲ

ಬಂಟ್ವಾಳ: ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ, ಉದಯ್ ಚೌಟ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.ಬಂಟ್ವಾಳ ತಾಲೂಕು ಮಾಣಿಯ ಬದಿಗುಡ್ಡೆ ನಿವಾಸಿಯಾಗಿರುವ ಉದಯ್ ಚೌಟ ಕಬಡ್ಡಿ ಕ್ಷೇತ್ರದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದರು.ಅಲ್ಲದೇ ದ.ಕ...

ನಾರಾಯಣ ಗುರು ಹೆಸರಿನಲ್ಲಿ ಪದ್ಮರಾಜ್‌ ಟಿಕೆಟ್‌ ಲಾಬಿ: ಹರಿಕೃಷ್ಣ ಬಂಟ್ವಾಳ್‌ ವಾಗ್ದಾಳಿ

ಮಂಗಳೂರು: ಕುದ್ರೋಳಿ ಗೋಕರ್ಣ ಕ್ಷೇತ್ರದಲ್ಲೊ ಒಬ್ಬರು ಇದ್ದಾರೆ. ಅವರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ಬೇಕು. ಬರ್ಬೇಕಾದ್ರೆ ಕಾಂಗ್ರೆಸ್‌ ಅಂಗಳದಲ್ಲಿ ಒಂದು ಜಾಗ ಬೇಕು ಅಲ್ವಾ. ಅದಕ್ಕಾಗಿ ಇದನ್ನು ಎಬ್ಬಿಸಿ ಜಾಗ ಕೊಡ್ತಾರಾ ಅಂತ ನೋಡ್ತಾರೆ...