Wednesday, December 1, 2021

ಪೆಟ್ರೋಲ್‌ಗಿಂತಲೂ ದುಬಾರಿಯಾದ ಟೊಮ್ಯಾಟೋ: ಮತ್ತಷ್ಟು ಏರಿಕೆಯಾಗುವ ಸಾಧ್ಯತೆ

ಹೊಸದಿಲ್ಲಿ: ಸತತ ಚಂಡಮಾರುತದ ಪರಿಣಾಮ ಮಳೆ ಹಾಗೂ ಪ್ರವಾಹ ರೈತರ ಬೆಳೆಗಳನ್ನು ಕೊಚ್ಚಿಕೊಂಡು ಹೋಗುತ್ತಿದೆ.

ಅದರ ಮೊದಲ ಪರಿಣಾಮ ಟೊಮ್ಯಾಟೋ ಮೇಲಾಗಿದೆ. ಇದೀಗ ಪೆಟ್ರೋಲ್‌ ಬೆಲೆಗಿಂತ ಟೊಮ್ಯಾಟೋ ಬೆಲೆ ಹೆಚ್ಚಳವಾಗಿದೆ ಎಂಬ ಟ್ರೋಲ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.


ಆಂಧ್ರಪ್ರದೇಶ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಭಾರಿ ಮಳೆಯಿಂದ ಟೊಮೆಟೋ ಬೆಳೆ ನಾಶವಾಗಿದೆ. ಇದರಿಂದ ಅದರ ದರ ಏರಿಕೆಯಾಗುತ್ತಿದೆ.

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾದಂತೆ ಈಗ ತರಕಾರಿಗಳ ಬೆಲೆಯೂ ಗಗನಕ್ಕೇರುತ್ತಿದೆ.

ಮುಖ್ಯವಾಗಿ ಟೊಮೆಟೋ ಈಗ ಪೆಟ್ರೋಲ್ ದರವನ್ನೂ ಮೀರಿಸಿದೆ. ದೇಶದ ಅನೇಕ ಭಾಗಗಳಲ್ಲಿ ಈಗಾಗಲೇ ಒಂದು ಕೆಜಿ ಟೊಮೆಟೋ ದರ ನೂರು ರೂಪಾಯಿ ದಾಟಿದೆ.

ಚೆನ್ನೈನಲ್ಲಿ ಈ ತಿಂಗಳ ಆರಂಭದಲ್ಲಿ 40 ರೂಪಾಯಿ ಇದ್ದ ಒಂದು ಕೆಜಿ ಟೊಮೆಟೋ ದರ ಈಗ 140 ರೂ.ಗೆ ತಲುಪಿದೆ.


ದೇಶದಲ್ಲಿಯೇ ಅತಿ ಹೆಚ್ಚು ಟೊಮೆಟೋ ಉತ್ಪಾದಿಸುವ ಆಂಧ್ರಪ್ರದೇಶ ಚಂಡಮಾರುತದ ಪರಿಣಾಮ ಸುರಿದ ಮಳೆಯಿಂದ ತತ್ತರಿಸಿದೆ. ಇಲ್ಲಿ ಈಗಾಗಲೇ ಟೊಮೆಟೋ ದರ ಕೆಜಿಗೆ 100 ರೂ ಇದೆ. ಇದು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

ಮಳೆಯಿಂದಾಗಿ ಬೃಹತ್ ಪ್ರಮಾಣದ ಟೊಮೆಟೋ ಬೆಳೆಯುವ ಪ್ರದೇಶಗಳು ಹಾನಿಗೊಳಗಾಗಿವೆ. ಇನ್ನೊಂದೆಡೆ ಡೀಸೆಲ್ ದರದ ಏರಿಕೆಯೂ ಟೊಮೆಟೋ ಬೆಲೆ ಹೆಚ್ಚಳಕ್ಕೆ ಮತ್ತೊಂದು ಕಾರಣ. ಮಂಗಳೂರಿನಲ್ಲಿ ಟೊಮ್ಯಾಟೋ ಬೆಲೆಯೂ 100ರ ಗಡಿ ದಾಟಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...