Thursday, August 11, 2022

ನಾಳೆ ಮಂಗಳೂರಿಗೆ ಸಿಎಂ ಬೊಮ್ಮಾಯಿ- ಕೇಂದ್ರ ಸಚಿವ ನಿತಿನ್ ಗಡ್ಕರಿ ಆಗಮನ

ಮಂಗಳೂರು: ವಿವಿಧ ಕಾರ್ಯಕ್ರಮಗಳ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ನಾಳೆ ಮಂಗಳೂರು ಪ್ರವಾಸ ಕೈಗೊಂಡಿದ್ದಾರೆ.

ನಾಳೆ (ಫೆ.28)ರ ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯಿಂದ ವಿಶೇಷ ವಿಮಾನದ ಮೂಲಕ ಹೊರಟು 3.45ಕ್ಕೆ ಮಂಗಳೂರಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ಸಂಜೆ 4.30ಕ್ಕೆ ನಗರದ ಕುಲಶೇಖರದ ಕೊರ್ಡೆಲ್ ಹಾಲ್‍ನಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಮಂತ್ರಾಲಯ, ಭಾರತೀಯ ಹೆದ್ದಾರಿಗಳ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಆಯೋಜಿರುವ 15 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸುವರು.

ಸಂಜೆ 6 ಗಂಟೆಗೆ ಬಿಜೈನಲ್ಲಿರುವ ಒಷನ್ ಪರ್ಲ್ ಇನ್ ಹೋಟೆಲ್‍ನಲ್ಲಿ ಕೆನರಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ (ಕೆಸಿಸಿಐ) ಕರ್ನಾಟಕ- ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡುವರು.

ರಾತ್ರಿ 7.30ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿತಿನ್ ಗಡ್ಕರಿ ಪ್ರವಾಸದ ವಿವರ

ಮಂಗಳೂರು: ಕೇಂದ್ರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರು ಫೆ.28ರ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ.


ಅವರು ಕೈಗೊಂಡಿರುವ ಪ್ರವಾಸ ಕಾರ್ಯಕ್ರಮದ ವಿವರ ಇಂತಿದೆ:
ಫೆ.28ರ ಮಧ್ಯಾಹ್ನ 3.45ಕ್ಕೆ ಮಂಗಳೂರು ಅಂತರಾಷ್ಟಿಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು 4 ಗಂಟೆಗೆ ಕುಲಶೇಖರದ ಕಾರ್ಡೆಲ್ ಹಾಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ

ರಾಷ್ಟ್ರೀಯ ಹೆದ್ದಾರಿಗಳ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 5.40ಕ್ಕೆ ಬಿಜೈನಲ್ಲಿರುವ ಒಷನ್ ಪರ್ಲ್ ಇನ್ ಹೋಟೆಲ್‍ನಲ್ಲಿ ಕೆನರಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್

(ಕೆ.ಸಿಸಿ.ಐ) ಕರ್ನಾಟಕ- ಸದಸ್ಯರನ್ನು ಉದ್ದೇಶಿಸಿ ಮಾತನಾಡುವರು. ಸಂಜೆ 7 ಗಂಟೆಗೆ ಮಂಗಳೂರಿನಿಂದ ವಿಶೇಷ ವಿಮಾನದ ಮೂಲಕ ನಾಗಪುರಕ್ಕೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಚಪ್ಪಲಿಯಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಲಕ್ಷ ರೂ ಮೌಲ್ಯದ ಚಿನ್ನ ವಶ

ಮಂಗಳೂರು: ದುಬೈನಿಂದ ಮಂಗಳೂರಿಗೆ ಬಂದಿಳಿದ ಕೇರಳ ಮೂಲದ ಪ್ರಯಾಣಿಕನೊಬ್ಬ ಚಪ್ಪಲಿಯಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಆ.10 ರಂದು ದುಬೈನಿಂದ ಮಂಗಳೂರಿಗೆ ಬಂದಿಳಿದ ಸ್ಪೈಸ್‌ ಜೆಟ್‌...

ಅಮೃತ ಮಹೋತ್ಸವ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿಯಬೇಕು-ಶಾಸಕ ಪೂಂಜಾ

ಬೆಳ್ತಂಗಡಿ: ಸ್ವಾತಂತ್ರ್ಯದ ಅಮೃತಮಹೋತ್ಸವ ದಿನಾಚರಣೆ ಪ್ರಯುಕ್ತ ದಕ್ಷಿಣ ಕನ್ನಡ ಜಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು ಗುರುವಾಯನಕೆರೆ ನವಶಕ್ತಿ ಸಭಾಭವನದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದರು.ಈ ವೇಳೆ ಮಾಧ್ಯಗಳನ್ನು ಉದ್ದೇಶಿಸಿ ಮಾತನಾಡಿದ...

ಕೃಷಿಕರೇ ಗಮನಿಸಿ: ಕಿಸಾನ್ ಸಮ್ಮಾನ್ ನಿಧಿಯ ಪರಿಹಾರಕ್ಕಾಗಿ ಆ. 15 ರೊಳಗೆ ಇ-ಕೆವೈಸಿ ಕಡ್ಡಾಯ

ಮಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾhttp://pmkisan.gov.in ಪೋರ್ಟಲ್‌ನ ಫಾರ್ಮರ್ಸ್ ಕೋರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್...