Wednesday, December 1, 2021

ನಾಳೆ ಸುಳ್ಯ ನ್ಯಾಯಾಲಯಕ್ಕೆ ಸಾಕ್ಷ್ಯ ಹೇಳಲು ಡಿಕೆಶಿ ಹಾಜರು

ಮಂಗಳೂರು: ವಿದ್ಯುತ್ ಸಮಸ್ಯೆ ಬಗ್ಗೆ ಆರು ವರ್ಷ ಹಿಂದೆ ಬೆಳ್ಳಾರೆಯ ಸಾಯಿ ಗಿರಿಧರ್ ಮತ್ತು ಅಂದಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ನಡುವಿನ ಫೋನ್ ಸಂಭಾಷಣೆಯ ಪ್ರಕರಣವೊಂದಕ್ಕೆ ಸಂಬಂಧಿಸಿ ಸಾಕ್ಷ್ಯ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಾಳೆ ಬೆಳಗ್ಗೆ 11.30ಕ್ಕೆ ಸುಳ್ಯ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ.


ಕಾಂಗ್ರೆಸ್ ನೇತೃತ್ವದ ಅಂದಿನ ರಾಜ್ಯ ಸರಕಾರದಲ್ಲಿ ಇಂಧನ ಸಚಿವರಾಗಿದ್ದ ವೇಳೆ 2016ರಲ್ಲಿ ಬೆಳ್ಳಾರೆಯ ಸಾಯಿ ಗಿರಿಧರ್’ ಎಂಬ ವರೊಂದಿಗೆ ನಡೆದ ಸಂಭಾಷಣೆಯೊಂದರ ಪ್ರಕರಣದಲ್ಲಿ ಹಾಜರಾಗಲು ಡಿಕೆಶಿಗೆ ಮೂರು ಬಾರಿ ಸಮನ್ಸ್‌ ನೀಡಲಾಗಿತ್ತು.

ಸೆ.29ರಂದು ಹಾಜರಾ ಗುವಂತೆ ವಾರಂಟ್ ನೀಡಿದ್ದರೂ ಗೈರುಹಾಜರಾದ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಾಧೀಶರು

ಡಿ.ಕೆ. ಶಿವಕುಮಾರ್ ಅವರಿಗೆ ನ.6ರಂದು ನ್ಯಾಯಾಲಯದ ಎದುರು ಹಾಜರಾಗುವಂತೆ ಮತ್ತೊಮ್ಮೆ ವಾರೆಂಟ್ ಜಾರಿ ಮಾಡಿತ್ತು.

ಅಲ್ಲದೆ ಡಿಕೆಶಿ ಅವರನ್ನು ಕೋಟ್ ೯ಗೆ ಹಾಜರುಪಡಿಸುವಂತೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದರು.

ಆದರೆ ಡಿ.ಕೆ. ಶಿವಕುಮಾರ್‌ ಅವರು ಅ.5ರಂದು ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ಹೇಳಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅ.5ರಂದು ಬೆಳಗ್ಗೆ 7.25ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರು ಏರ್‌ಪೋರ್ಟ್‌ಗೆ ಬಂದಿಳಿಯಲಿದ್ದು,

11 ಗಂಟೆಗೆ ರಸ್ತೆ ಮೂಲಕ ಸುಳ್ಯಕ್ಕೆ ತೆರಳಿ, 11.30ಕ್ಕೆ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ರಸ್ತೆ ಮೂಲಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಸಂಜೆ 3 ಗಂಟೆಗೆ ಕುಕ್ಕೆಯಿಂದ ನಿರ್ಗಮಿಸಿ, 5.30ಕ್ಕೆ ಮಂಗಳೂರು ತಲುಪಲಿದ್ದಾರೆ.

ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಡಿಕೆಶಿಯ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...