Connect with us

DAKSHINA KANNADA

ನಾಳೆ ಹಾಗೂ ಸೆ. 14ರಂದು ದ.ಕ ಜಿಲ್ಲೆಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

Published

on

ಮಂಗಳೂರು: ನಂದಿಗುಡ್ಡ ಫೀಡರ್‌ನಲ್ಲಿ ಜಂಪರ್‌ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿಗಳನ್ನು ನಾಳೆ (ಸೆ.11ರ) ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು,

ನಂದಿಗುಡ್ಡ, ಅತ್ತಾವರ ಕೆ.ಎಂ.ಸಿ, ಅತ್ತಾವರ 6ನೇ ಕ್ರಾಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆ ಅವಧಿಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.


ಕೆಪಿಟಿಸಿಎಲ್‌ನಿಂದ ನಂದಿಕೂರು-ಮುಲ್ಲಿ ವಿದ್ಯುತ್ ಮಾರ್ಗದಲ್ಲಿ ಸೆ.14ರ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮುಲ್ಕಿ, ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.

ಹಾಗಾಗಿ ಕೆ.ಎಸ್. ರಾವ್ ನಗರ, ಕೊಲ್ನಾಡು ಇಂಡಸ್ಟ್ರಿಯಲ್ ಏರಿಯಾ, ಬಪ್ಪನಾಡು, ಕುಬೆವೂರು, ಶಿಮಂತೂರು, ಅತಿಕಾರಿಬೆಟ್ಟು, ಕಿನ್ನಿಗೋಳಿ, ಮೂರು ಕಾವೇರಿ, ಪುನರೂರು, ಐಕಳ, ದಾಮಸ್ ಕಟ್ಟೆ ಎಸ್ಟೋಡಿ, ಪಕ್ಷಿಕೆರೆ, ಹಳೆಯಂಗಡಿ,

ಇಂದಿರಾನಗರ, ತೋಕೂರು, ಪಾವಂಜೆ, ಚೇಳಾರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಸೆ.14ರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮಳಲಿ, ಭವಂತಿಬೆಟ್ಟು, ಸಾನ್‌ಬೆಟ್ಟು, ಮುಲ್ಲಗುಡ್ಡೆ, ನಾಡಾಜೆ, ಚನ್ನರಪಾದೆ, ಸಾದೂರು, ಅಡೂರು, ತಾರಿಕರಿಯ, ಕಾಂಜಿಲಕೋಡಿ, ಕೈಕಂಬ ಪೇಟೆ, ಕಂದಾವರ, ಸುರಭಿಕಟ್ಟೆ ಹೊಯಿಗೆಪದವು,

ಮಟ್ಟಿ ಕುಂದೋಡಿ, ಪಂಗಿ, ಕೋರ್ಡೆಲ್ ಬ್ರಿಂಡೆಲ್, ಕಲ್ಲಾಡಿ, ಕುಪ್ಪೆಪದವು, ಕಿಲೆಂಜಾರು, ಮುರಾ, ಮುತ್ತೂರು, ಮಾರ್ಗದಂಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.
ಸೆ.14ರ ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ಮೂಡುಬಿದಿರೆ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಪಚ್ಚೆಮೊಗರು ಮತ್ತು ತಾಕೊಡೆ ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಿರುವುದರಿಂದ ಬೊಗುಗುಡ್ಡೆ, ಬಿರಾವ, ತಾಕೊಡೆ, ಪಜ್ಜೆಮೊಗರು ಮತ್ತಿತರ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಲಾಂ ಪ್ರಕಟನೆ ತಿಳಿಸಿದೆ.

DAKSHINA KANNADA

ಚಿನ್ನ ಕಡಿಮೆ ಬೆಲೆಗೆ ನೀಡುವವರ ಬಗ್ಗೆ ಎಚ್ಚರ; ಮಂಗಳೂರಿನಲ್ಲಿ ಅಂಗಡಿಯವರೊಬ್ಬರನ್ನು ವಂಚಿಸಲು ಯತ್ನ

Published

on

ಮಂಗಳೂರು : ಕೃಷಿ ಮಾಡುವಾಗ ಭೂಮಿಯಲ್ಲಿ ನಿಧಿ ಸಿಕ್ಕಿದೆ. ನಮಗೆ ತುರ್ತಾಗಿ ಹಣ ಬೇಕಾದ ಕಾರಣ ಕಡಿಮೆಯಲ್ಲಿ ಚಿನ್ನ ಕೊಡ್ತೇವೆ … ಹೀಗಂತ ಯಾರಾದರೂ ನಿಮ್ಮ ಬಳಿ ಬಂದು ಹೇಳಿದ್ರೆ ಎಚ್ಚರವಾಗಿರಿ.

ಯಾಕಂದ್ರೆ ಇಂತಹ ಕಥೆ ಹೇಳಿ ನಕಲಿ ಚಿನ್ನ ನೀಡಿ ವಂಚಿಸುವ ತಂಡವೊಂದು ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿದೆ. ನಗರದ ನಾಗುರಿ ಬಳಿ ಇದೇ ಕಥೆ ಹೇಳಿಕೊಂಡು ಅಂಗಡಿಯವರೊಬ್ಬರನ್ನು ವಂಚಿಸಲು ಪ್ರಯತ್ನಿಸಿದ್ದಾರೆ.

ಮಹಿಳೆ ಹಾಗೂ ನಾಲ್ವರು ಯುವಕರ ತಂಡ ಈ ಪ್ರಯತ್ನ ಮಾಡಿ ತಗಲಾಕೊಂಡಿದ್ದಾರೆ. ಮೊದಲಿಗೆ ಅಸಲಿ ಚಿನ್ನ ನೀಡಿ ಪರೀಕ್ಷಿಸಲು ಹೇಳಿದ್ದು ಪರೀಕ್ಷೆ ವೇಳೆ ಅದು ಅಸಲಿಯೇ ಆಗಿತ್ತು. 2 ಲಕ್ಷಕ್ಕೆ ಮತ್ತೊಂದು ಚಿನ್ನ ನೀಡಿದ್ದು ಅದು ನಕಲಿಯಾಗಿತ್ತು.

ಇದನ್ನೂ ಓದಿ: 23 ವರ್ಷದ ಹಿಂದಿ ಕಿರುತೆರೆ ನಟ ಸಾವು

ಆದರೆ ಇಂತಹ ವಂಚನೆ ಬಗ್ಗೆ ಮೊದಲೇ ಅನುಮಾನ ಇದ್ದ ಅಂಗಡಿಯವರು ಈ ಚಿನ್ನ ಕೂಡಾ ಪರೀಕ್ಷೆ ಮಾಡುವುದಾಗಿ ಹೇಳಿದ್ದಾರೆ. ಈ ವೇಳೆ ಬಂಡವಾಳ ಬಯಲಾಗುತ್ತದೆ ಎಂದು ನಾಲ್ವರು ಯುವಕರು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಆದರೆ ಜೊತೆಯಲ್ಲಿದ್ದ ಮಹಿಳೆಯನ್ನು ಅಂಗಡಿಯವರು ಹಿಡಿದಿಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಡಿಮೆ ಬೆಲೆಗೆ ಇಂತಹ ಮೋಸದ ಕಥೆ ಹೆಣೆದು ಚಿನ್ನದ ಆಸೆ ತೋರಿಸಿ ವಂಚಿಸೋ ದೊಡ್ಡ ತಂಡವೇ ಇಲ್ಲಿ ಕಾರ್ಯಾಚರಿಸ್ತಾ ಇದೆ. ಹೀಗಾಗಿ ಸಾರ್ವಜನಿಕರು ಇಂತವರ ಬಗ್ಗೆ ಎಚ್ಚರವಾಗಿರುವುದು ಒಳ್ಳೆಯದು.

 

Continue Reading

DAKSHINA KANNADA

ಖ್ಯಾತ ಡಾಲಿ ಚಾಯ್‌ವಾಲ ಮಂಗಳೂರಿಗೆ ಆಗಮನ

Published

on

ಮಂಗಳೂರು : ಇಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಾಲಿ ಚಾಯ್ ವಾಲ ಅವರನ್ನು ಅದ್ದೂರಿಯಾಗಿ ಸ್ವಾಗತ ಕೊರಲಾಯಿತು.

 

ಮಂಗಳೂರಿನಲ್ಲಿ ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಮಂಗಳೂರು ಸ್ಟ್ರೀಟ್‌ ಫುಡ್‌ ಫಿಯೆಸ್ಟದಲ್ಲಿ ಈ ಬಾರಿ ಮಹಾರಾಷ್ಟ್ರದ ನಾಗ್ಪುರದ ಖ್ಯಾತ ಡಾಲಿ ಚಾಯ್‌ವಾಲ ಅವರು ಪ್ರಮುಖ ಆಕರ್ಷಣೆಯಾಗಲಿದ್ದಾರೆ. ಕಾರ್ಯಕ್ರಮದ ಮೊದಲ ದಿನ ಅವರು ಭಾಗವಹಿಸಲಿದ್ದಾರೆ. ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಜಿಲ್ಲಾಡಳಿತದ ಸಹಕಾರದಲ್ಲಿ ಈ ಐದು ದಿನಗಳ ಮಂಗಳೂರು ಸ್ಟ್ರೀಟ್‌ ಫುಡ್‌ ಫಿಯೆಸ್ಟ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಸಂಕ್ರಾಂತಿ ರಜೆ : ಮನೆ ಮಾಲಿಕ ಕಳ್ಳನಿಗೆ ಬರೆದಿಟ್ಟ ಲೆಟರ್ ವೈರಲ್

ತನ್ನ ಮಂಗಳೂರು ಭೇಟಿಯ ಕುರಿತು ಡಾಲಿ ಚಾಯ್‌ವಾಲ ಅವರು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಮಾಡಿದ್ದು, ‘ಜ. 18ರಂದು ಮಂಗಳೂರಿನಲ್ಲಿ ಸಿಗುತ್ತೇನೆ. ಮಜಾ ಕರೇಂಗೆ .. ಚಾಯ್‌ ಪಿಯೇಂಗೆ’ ಎಂದು ಪೋಸ್ಟ್‌ ಹಾಕಿದ್ದರು.

ಮೈಕ್ರೋಸಾಪ್ಟ್ ಸಹ ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಡಾಲಿ ಅವರ ಚಹಾ ಅಂಗಡಿಗೆ ಭೇಟಿ ನೀಡಿ ಚಹಾ ಕುಡಿದು ಪೋಸ್ಟ್‌ ಹಂಚಿ ಕೊಂಡ ಬಳಿಕ ಡಾಲಿ ಚಾಯ್‌ವಾಲ ಅವರು ದೇಶಾದ್ಯಂತ ಪರಿಚಿತರಾಗಿದ್ದಾರೆ. ಅವರ ಮೂಲ ಹೆಸರು ಸುನಿಲ್‌ ಪಾಟೀಲ್‌. ಆದರೆ ಅವರು ಡಾಲಿ ಚಾಯ್‌ವಾಲ ಎಂದೇ ಪ್ರಸಿದ್ಧರಾಗಿದ್ದಾರೆ.

Continue Reading

DAKSHINA KANNADA

ಸುಳ್ಯ: ಹೆಂಡತಿಯನ್ನು ಕೊಂ*ದು ಆ*ತ್ಮಹ*ತ್ಯೆಗೆ ಶರಣಾದ ಗಂಡ

Published

on

ಸುಳ್ಯ: ಹೆಂಡತಿಯನ್ನು ಗುಂ*ಡಿಕ್ಕಿ ಕೊಂ*ದ ಗಂಡ ಬಳಿಕ ತಾನೂ ವಿಷ ಸೇವಿಸಿ ಆ*ತ್ಮಹ*ತ್ಯೆಗೆ ಶರಣಾಗಿರುವ ಘಟನೆ ನಿನ್ನೆ (ಜ.17) ತಡರಾತ್ರಿ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ  ನಡೆದಿದೆ.

ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ನಿವಾಸಿ, ಕೃಷಿಕ ರಾಮಚಂದ್ರ ಗೌಡ ಅಲಿಯಾಸ್ ಚಂದ್ರ (54) ಕೃತ್ಯ ಎಸಗಿ ಆ*ತ್ಮಹ*ತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಪತ್ನಿ ವಿನೋದ (43) ಹ*ತ್ಯೆಗೊಳಗಾದವರು. ತನ್ನದೇ ಲೈಸನ್ಸ್ ಹೊಂದಿದ್ದ ಗನ್‌ನಿಂದ ಕೃ*ತ್ಯ ಎಸಗಿದ್ದಾರೆ ಎನ್ನಲಾಗಿದೆ.

ನಿನ್ನೆ ರಾತ್ರಿ ಕುಡಿದು ಬಂದಿದ್ದ ರಾಮಚಂದ್ರ ಊಟ ಮಾಡಿದ ಬಳಿಕ ಕ್ಷುಲ್ಲಕ ಕಾರಣಕ್ಕೆ ಪತ್ನಿ ಹಾಗೂ ಪುತ್ರನೊಡನೆ ಜಗಳ ಆರಂಭಿಸಿದ್ದು, ಬಳಿಕ ಗಲಾಟೆ ವಿಪರೀತವಾಗಿದ್ದು ಅವಾಚ್ಯ‌ ಶಬ್ದಗಳಿಂದ ‌ನಿಂದಿಸಿದ್ದಾನೆ. ಗಲಾಟೆ ವೇಳೆ ರಾಮಚಂದ್ರ ಗ*ನ್‌ನಿಂದ ಹಿರಿಯ ಮಗ ಪ್ರಶಾಂತ್ ಗೆ ಗುರಿಯಿಟ್ಟಿದ್ದು ಇದನ್ನು ತಪ್ಪಿಸಲು ವಿನೋದ ಕೋ*ವಿಯನ್ನು ಎಳೆದುಕೊಳ್ಳಲು ಪ್ರಯತ್ನಿಸಿದ್ದಾಳೆ ಎನ್ನಲಾಗಿದೆ.

ಈ ವೇಳೆ ಪತ್ನಿಯ ಮೇಲೆ ಗುರಿಯಿರಿಸಿ‌ ಗುಂ*ಡಿಕ್ಕಿದ್ದು, ಘಟನೆಯಿಂದ‌ ಆಕೆ ಸ್ಥಳದಲ್ಲೇ ಕುಸಿದು ಬಿದ್ದು ಮೃ*ತಪಟ್ಟಿದ್ದಾರಳೆ. ಪತ್ನಿ ಮೃ*ತಪಟ್ಟ ಬಳಿಕ ಪತಿ ರಾಮಚಂದ್ರ ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆ*ತ್ಮಹ*ತ್ಯೆಗೆ ಶರಣಾಗಿದ್ದಾನೆ. ಮಗ ಪ್ರಶಾಂತ್ ಈ ಕುರಿತಂತೆ ಹೇಳಿಕೆ ನೀಡಿದ್ದು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃ*ತದೇ*ಹಗಳನ್ನು ಮ*ರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ

Continue Reading

LATEST NEWS

Trending

Exit mobile version