DAKSHINA KANNADA
ನಾಳೆ ಮೂಡುಬಿದಿರೆಗೆ ಸಿಎಂ ಆಗಮನ: ವಾಹನ ಸಂಚಾರದಲ್ಲಿ ಬದಲಾವಣೆ
ಮೂಡುಬಿದಿರೆ: ತಾಲೂಕು ಆಡಳಿತ ಸೌಧ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಡುಬಿದಿರೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ -ಮಂಗಳೂರು ಉತ್ತರ ಉಪವಿಭಾಗದ ನಿರ್ದೇಶನದಂತೆ ಮೂಡುಬಿದಿರೆಯಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಿ ಮೂಡುಬಿದಿರೆ ಪೊಲೀಸರು ಆದೇಶ ಹೊರಡಿಸಿದ್ದಾರೆ.
ಬೆಳ್ತಂಗಡಿಯಿ೦ದ ಕಾರ್ಕಳಕ್ಕೆ ಹೋಗುವ ವಾಹನಗಳು ಮಹಾವೀರ ಕಾಲೇಜು ಬಳಿ ಬಲಕ್ಕೆ ತಿರುಗಿ ಕೋಟೆಬಾಗಿಲಿನಿಂದ ಸುಭಾಸ್ನಗರ ರಸ್ತೆ ಮೂಲಕ ಸಂಚರಿಸುವುದು,
ಬಂಟ್ವಾಳ ಕಡೆಯಿಂದ ಬರುವ ವಾಹನಗಳು ಕೀರ್ತಿನಗರ ಜಂಕ್ಷನ್ನಲ್ಲಿ ಪ್ರವೇಶಿಸಿ ಮಹಾವೀರ ಕಾಲೇಜು ಬಳಿ ಬಲಕ್ಕೆ ತಿರುಗಿ ಕೋಟೆಬಾಗಿಲಿನಿಂದ ಸುಭಾಸ್ ನಗರ ರಸ್ತೆಯಾಗಿ ಮುಂದುವರಿಯುವುದು.
ಶಿರ್ತಾಡಿ ಕಡೆಯಿಂದ ಬರುವ ವಾಹನಗಳು ಜೈನ್ ಪೇಟೆಯಿಂದ ಅಲಂಗಾರು ಮಾರ್ಗವಾಗಿ ರಿಂಗ್ರೋಡ್ ಮೂಲಕ ಸ೦ಚರಿಸುವುದು.
ಕಾರ್ಕಳ ಕಡೆಯಿಂದ ಬೆಳ್ತಂಗಡಿ ಮತ್ತು ಬಿಸಿರೋಡ್ಗೆ ಹೋಗುವ ವಾಹನಗಳು ಜೈನ್ ಪೇಟೆಯಿಂದ ಶಿರ್ತಾಡಿ ರಸ್ತೆಯಲ್ಲಿ ಸಂಚರಿಸಿ ಕೋಟೆಬಾಗಿಲು ಕೊಂಡಗಲ್ಲು ರಸ್ತೆಯಲ್ಲಿ ಮುಂದುವರಿಯುವುದು,
ಕಾರ್ಕಳ ಕಡೆಯಿಂದ ಮೂಡುಬಿದಿರೆ, ಮಂಗಳೂರು ಮತ್ತು ಮೂಲ್ಕಿ ಕಡೆಗೆ ಹೋಗುವ ವಾಹನಗಳು ಅಲಂಗಾರು ಜಂಕ್ಷನ್ ಬಳಿ ತಿರುಗಿ ರಿಂಗ್ರೋಡ್ನಲ್ಲಿ ಸಂಚರಿಸುವುದು.
ಮಂಗಳೂರು ಕಡೆಯಿಂದ ಕಾರ್ಕಳ, ಬೆಳ್ಮಣ್ ಕಡೆಗೆ ಹೋಗುವ ವಾಹನಗಳು ರಿಂಗ್ ರೋಡ್ ನಲ್ಲಿ ಸಂಚರಿಸುವುದು. ಮಂಗಳೂರಿನಿಂದ ಮೂಡುಬಿದಿರೆಗೆ ಬರುವ ವಾಹನಗಳು ವಿದ್ಯಾಗಿರಿಯಿಂದ ಮಾಸ್ತಿಕಟ್ಟೆಯಾಗಿ ಲಾವಂತಬೆಟ್ಟು ರಸ್ತೆಯಲ್ಲಿ ಸಂಚರಿಸುವುದು.
ಮುಖ್ಯ ಮಂತ್ರಿ ನಿರ್ಗಮನದವರೆಗೆ ಹಳೆ ಪೊಲೀಸ್ ಠಾಣೆಯಿ೦ದ ನಿಶ್ಚಿತಾ ಸರ್ಕಲ್ ವರೆಗಿನ ಮುಖ್ಯರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಅಮರಶ್ರಿ ಟಾಕೀಸ್ ಎದುರುಗಡೆಯ ಏಕಮುಖ ರಸ್ತೆಯನ್ನು ದ್ವಿಮುಖ ರಸ್ತೆಯಾಗಿ ಬದಲಾಯಿಸಲಾಗಿದೆ.
ಪಾರ್ಕಿಂಗ್ ಸ್ಥಳಗಳು: ಅತಿಗಣ್ಯರ ವಾಹನಗಳಿಗೆ ತಾಲೂಕು ಕಚೇರಿ ಎದುರಿನ ಗೂಡ್ಸ್ ವಾಹನಗಳ ನಿಲುಗಡೆ ಸ್ಥಳದಲ್ಲಿ, ಗಣ್ಯರ ವಾಹನಗಳಿಗೆ ಮತ್ತು ಬಸ್ಗಳ ನಿಲುಗಡೆಗೆ ಸ್ವರಾಜ್ಯ ಮೈದಾನದಲ್ಲಿ ಕಾರು, ದ್ವಿಚಕ್ರ ವಾಹನಗಳಿಗೆ ಜೆಡಿಎಸ್ನ ಹಳೆ ಕಚೇರಿ ಹಿ೦ಬದಿಯ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ