LATEST NEWS
ನಾಳೆ ಕೋಡಿಕಲ್ ಬಂದ್ಗೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕರೆ
ಮಂಗಳೂರು: ನಗರದ ಕೋಡಿಕಲ್ನಲ್ಲಿರುವ ನಾಗನಕಟ್ಟೆಯ ನಾಗಬಿಂಬ ಎಸೆದು ದುಷ್ಕೃತ್ಯ ಎಸೆದ ಆರೋಪಿಗಳನ್ನು ಬಂಧಿಸುವ ಸಲುವಾಗಿ ನಾಳೆ ಕೋಡಿಕಲ್ನಲ್ಲಿ ವಿಶ್ವಹಿಂದೂಪರಿಷತ್ ಹಾಗೂ ಸ್ಥಳೀಯ ಸಾರ್ವಜನಿಕರು ಬಂದ್ಗೆ ಕರೆ ನೀಡಿದ್ದಾರೆ.
ನಾಳೆ ಬೆಳಗ್ಗೆಯಿಂದಲೇ ಕೋಡಿಕಲ್ಗೆ ಬಸ್ ಸಂಚಾರ ಇರುವುದಿಲ್ಲ ಹಾಗೂ ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್ ನಡೆಸಲಾಗುವುದು ಎಂದು ಸ್ಥಳೀಯ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.
ನಾಳೆ ಬೆಳಗ್ಗೆ 9 ಗಂಟೆಗೆ ಕೋಡಿಕಲ್ ಮೈದಾನದಿಂದ ನಾಗನಕಟ್ಟೆಯವರೆಗೆ ಪಾದಾಯಾತ್ರೆ ನಡೆಯಲಿದೆ. ನಾಗಬ್ರಹ್ಮ ದೈವಸ್ಥಾನದಲ್ಲಿ ಕೈಮುಗಿದು ಪ್ರಾರ್ಥನೆ ನಡೆಯಲಿದೆ.
ಅದಾದ ನಂತರ ಆರೋಪಿಗಳ ಬಂಧನಕ್ಕೆ ಸರಕಾರ ಹಾಗೂ ಪೊಲೀಸ್ ಇಲಾಖೆಗೆ ಒತ್ತಾಯ ಮಾಡಲಿದ್ದೇವೆ ಎಂದು ವಿಶ್ವ ಹಿಂದೂ ಪರಿಷತ್ನ ಮುಖಂಡ ಶರಣ್ ಪಂಪ್ವೆಲ್ ಮಾಹಿತಿ ನೀಡಿದ್ದಾರೆ.
LATEST NEWS
Elvish Yadav Faces Money Laundering Probe: What’s the Case About?
Lucknow: Popular YouTuber Siddharth Yadav, known as Elvish Yadav, is under investigation for alleged money laundering linked to using snake venom as a recreational drug at his parties. The Enforcement Directorate has filed a case under the Prevention of Money Laundering Act (PMLA), following an FIR and charge sheet from the Noida police regarding the snake venom case.
The probe aims to trace funds from the snake venom business and their potential use in organizing parties. Elvish Yadav and others involved will be questioned by the Enforcement Directorate, according to reports.
Elvish Yadav was arrested by Noida Police on March 17 in connection with the snake venom case but was later released on bail. He faces charges under various laws, including the Narcotic Drugs and Psychotropic Substances (NDPS) Act, Wildlife Protection Act, and the Indian Penal Code (IPC).
The case originated from a complaint by the NGO People for Animals (PFA) last November. Five people were arrested and released on bail after snake charmers were found with venomous snakes and vials of snake venom in a Noida banquet hall. Elvish Yadav was reportedly not present during the raid.youtuber
DAKSHINA KANNADA
15 ಸಾವಿರ ಸಂಬಳ..! ಮನೆಯಲ್ಲಿ ಕಂತೆ ಕಂತೆ ನೋಟು..! ED ಅಧಿಕಾರಿಗಳೇ ಶಾಕ್..!
ಮಂಗಳೂರು ( ಜಾರ್ಖಂಡ್ ): ಆತ ತಿಂಗಳಿಗೆ 15 ಸಾವಿರ ಸಂಬಳ ಪಡೆಯುವ ಒಬ್ಬ ಸಾಮಾನ್ಯ ನೌಕರ. ಆದ್ರೆ ಆತನ ಮನೆಗೆ ಇಡಿ ದಾಳಿ ಮಾಡಿ ಬರೋಬ್ಬರಿ 30 ಕೋಟಿ ಹಣವನ್ನು ಜಪ್ತಿ ಮಾಡಿದೆ. ಇದು ಜಾರ್ಖಂಡ್ನಲ್ಲಿ ನಡೆದ ಘಟನೆಯಾಗಿದ್ದು, ಹತ್ತು ಸಾವಿರ ಲಂಚ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದ ಇಡಿ ಸಾಮಾನ್ಯ ನೌಕರನ ಮನಗೆ ದಾಳಿ ಮಾಡಿತ್ತು. ಅಲ್ಲಿ ಅಡಗಿಸಿಟ್ಟಿದ್ದ ಹಣ ನೋಡಿ ಇಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹಣ ಎಣಿಸಲು ಮೆಷಿನ್ ಹಾಗೂ ಹೆಚ್ಚುವರಿ ನೌಕರರನ್ನು ಮನೆಗೆ ಕರೆಸಿಕೊಂಡಿದ್ದಾರೆ.
ನೌಕರನ ಮನೆಗೆ ಲಂಚದ ಹಣ…!
ಜಾರ್ಖಂಡ್ ನ ಸಚಿವ ಅಲಂಗೀರ್ ಆಲಂ ಅವರ ಖಾಸಗಿ ಕಾರ್ಯದರ್ಶಿ ಮನೆ ಮೇಲೆ ರಾಂಚಿಯ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಲಂಗೀರ್ ಆಲಂ ಅವರ ಸಚಿವಾಲಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಲ್ಲಿನ ಲಂಚದ ಹಣ ನೌಕರನ ಮನೆಗೆ ಹೋಗುತ್ತದೆ ಅನ್ನೋ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸಚಿವರ ಆಪ್ತ ಕಾರ್ಯದರ್ಶಿಯ ಅಡಿಯಲ್ಲಿ ಮಾಸಿಕ 15 ಸಾವಿರಕ್ಕೆ ಕೆಲಸ ಮಾಡುತ್ತಿದ್ದ ನೌಕರನ ಮನೆಗೆ ದಾಳಿ ಮಾಡಿದಾಗ ಇಷ್ಟೊಂದು ಪ್ರಮಾಣದ ಹಣ ಪತ್ತೆಯಾಗಿದೆ.
ವಿಡಿಯೋ ನೋಡಿ :
ಹತ್ತು ಸಾವಿರ ಲಂಚದ ಹಿಂದೆ ಬಿದ್ದಿದ್ದ ಇಡಿ..!
ಕಳೆದ ವರ್ಷ ಹತ್ತು ಸಾವಿರ ರೂಪಾಯಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಇಂಜೀನಿಯರ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಇಂಜೀನಿಯರ್ ಅವರ ಹೇಳಿಕೆಯನ್ನು ದಾಖಲಿಸಿದಾಗ ಲಂಚದ ಹಣ ಸಚಿವರಿಗೆ ತಲುಪಿಸಲಾಗುತ್ತದೆ ಎಂಬ ಸ್ಪೋಟಕ ಹೇಳಿಕೆ ನೀಡಿದ್ದರು. ಬಳಿಕ ಜಾರ್ಖಂಡ್ನ ಗ್ರಾಮೀಣ ಅಭಿವೃದ್ದಿ ಸಚಿವ ಅಲಂಗೀರ್ ಆಲಂ ಹಾಗೂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಹೆಸರು ಮುನ್ನಲೆಗೆ ಬಂದಿತ್ತು . ಹೀಗಾಗಿ ಸಂಜೀವ್ ಲಾಲ್ ಅವರ ಬಳಿ ನೌಕರನಾಗಿದ್ದ ವ್ಯಕ್ತಿಯ ಮನೆಗೆ ದಾಳಿ ಮಾಡಲಾಗಿದೆ.
ಇದನ್ನೂ ಓದಿ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!
ಜಾರ್ಖಂಡ್ ಕಾಂಗ್ರೆಸ್ ಸರ್ಕಾರದ ಸಚಿವ…!
ಅಲಂಗೀರ್ ಆಲಂ ಜಾರ್ಖಂಡ್ನ ಪಾಕುರ್ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈಗ ಸರ್ಕಾರದಲ್ಲಿ ಸಂಸದೀಯ ವ್ಯವಹಾರ ಮತ್ತು ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದಾರೆ. ಈ ಹಿಂದೆ 2006 ರಿಂದ 2009 ರ ವರೆಗೆ ಅವರು ಸ್ಪೀಕರ್ ಕೂಡಾ ಆಗಿದ್ದರು. 2023ರ ಡಿಸೆಂಬರ್ ತಿಂಗಳಲ್ಲಿ ಜಾರ್ಖಂಡ್ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಉದ್ಯಮಿ ಧೀರಜ್ ಸಾಹು ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮನೆಯಲ್ಲಿ 350 ಕೋಟಿಯಷ್ಟು ಹಣ ಪತ್ತೆಯಾಗಿತ್ತು. ಈ ವೇಳೆ ಧೀರಜ್ ಸಾಹು ಅದು ಮದ್ಯದ ವ್ಯವಹಾರದ ಹಣವಾಗಿದ್ದು, ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದರು.
LATEST NEWS
ಮದುವೆಯಲ್ಲಿ ಅವಧಿ ಮುಗಿದ ಐಸ್ ಕ್ರೀಂ ಸೇವನೆ.. 80ಕ್ಕೂ ಹೆಚ್ಚು ಜನರು ಅಸ್ವಸ್ಥ!
ರಾಮನಗರ: ಮದುವೆಯಲ್ಲಿ ಐಸ್ ಕ್ರೀಂ ತಿಂದು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಅಲ್ಲಿನ ಸಾತನೂರು ಸರ್ಕಲ್ ಬಳಿಯ ಟಿಪ್ಪುನಗರದ ಮಿಲನ್ ಶಾದಿ ಮಹಲ್ ನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಈ ಘಟನೆ ನಡೆದಿದ್ದು, ಪರಿಣಾಮ 80 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚನ್ನಪಟ್ಟಣದ ವಧು ಮತ್ತು ಮಾಗಡಿಯ ವರನ ವಿವಾಹ ಸಮಾರಂಭ ಮಿಲನ್ ಶಾದಿ ಮಹಲ್ ನಲ್ಲಿ ನಡೆದಿತ್ತು. ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ ಐಸ್ ಕ್ರೀಂ ತಿಂದ ಜನರು ಇದ್ದಕ್ಕಿದ್ದಂತೆಯೇ ಅಸ್ವಸ್ಥಗೊಂಡಿದ್ದಾರೆ. ಊಟದ ನಂತರ ಐಸ್ ಕ್ರೀಂ ತಿಂದ ಅರ್ಧಗಂಟೆಯಲ್ಲಿ ವಾಂತಿ, ಭೇದಿ ಶುರುವಾಗಿದೆ. 50ಕ್ಕೂ ಹೆಚ್ಚು ಜನರಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಹೆಚ್ಚಿನವರು ಚನ್ನಪಟ್ಟಣದ ಯಾರಬ್ ನಗರ ಹಾಗೂ ಕೋಟೆ ನಿವಾಸಿಗಳು ಎಂದು ಗುರುತಿಸಲಾಗಿದೆ.
ಐಸ್ ಕ್ರೀಂ ತಿಂದು ಆಸ್ವಸ್ಥಗೊಂಡವರಲ್ಲಿ 40 ಜನರು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಉಳಿದವರು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅವಧಿ ಮುಗಿದಿದ್ದ ಐಸ್ ಕ್ರೀಂ ತಿಂದಿದ್ದೇ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.
ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿ ಅಸ್ವಸ್ಥಗೊಂಡವರ ಕುಟುಂಬಸ್ಥರು ಆಗಮಿಸಿದ್ದಾರೆ. ಎಲ್ಲರಿಗೂ ಡ್ರಿಪ್ಸ್ ಹಾಕಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.
- DAKSHINA KANNADA3 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM5 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali4 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY4 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು