Monday, October 18, 2021

ಅನಧಿಕೃತ ಧಾರ್ಮಿಕ ಕಟ್ಟಡ ತೆರವು ವಿರೋಧಿಸಿ ನಾಳೆ ಉಡುಪಿ-ಮಂಗಳೂರಿನಲ್ಲಿ ವಿಹೆಚ್‌ಪಿ, ಬಜರಂಗದಳ ಪ್ರತಿಭಟನೆ

ಮಂಗಳೂರು: ಬಿಜೆಪಿ ಸರಕಾರದಲ್ಲಿ ತಾಲಿಬಾನಿ ಪ್ರೇರಿತ ಅಧಿಕಾರಿಗಳಿದ್ದಾರೆ. ರಾಜ್ಯ ಸರಕಾರ ತಕ್ಷಣವೇ ಆ ಅಧಿಕಾರಿಗಳನ್ನು ವಜಾಗೊಳಿಸಬೇಕು.

ದೇವಸ್ಥಾನ ತೆರವು ಬಗ್ಗೆ ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ವಿಎಚ್‌ಪಿ ಮುಖಂಡ ಶರಣ್‌ ಪಂಪ್‌ವೆಲ್‌ ತಿಳಿಸಿದ್ದಾರೆ.


ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರವು ಅನಧಿಕೃತ ಧಾರ್ಮಿಕ ಕ್ಷೇತ್ರಗಳ ಪಟ್ಟಿಯನ್ನು ವಾಪಸ್ಸು ತೆಗೆದುಕೊಳ್ಳಬೇಕು.

ಬಿಜೆಪಿ ಸರಕಾರದಲ್ಲಿ ತಾಲಿಬಾನಿ ಪ್ರೇರಿತ ಅಧಿಕಾರಿಗಳಿದ್ದಾರೆ ಎಂಬ ಶಂಕೆ ಇದೆ. ಮೈಸೂರಿನಲ್ಲಿ ತೆರವುಗೊಳಿಸಿರುವ ದೇವಸ್ಥಾನವನ್ನು ಮತ್ತೆ ಮರು ನಿರ್ಮಾಣ ಕೊಡಬೇಕು ಎಂದು ಆಗ್ರಹಿಸಿ ಸೆ.16ರಂದು ಉಡುಪಿ ಹಾಗೂ ದ.ಕ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ವಿಎಚ್‌ಪಿ ಹಾಗೂ ಬಜರಂಗದಳದ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು.

ಈ ಪ್ರತಿಭಟನೆಯಲ್ಲಿ ಸ್ವಾಮೀಜಿಗಳು, ಸಂಘಟನೆಯ ಪ್ರಮುಖರು ಸೇರಿ ಹಲವರು ಭಾಗವಹಿಸಲಿದ್ದಾರೆ ಎಂದರು.


ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಪುತ್ತೂರಿನಲ್ಲಿ ಪ್ರತಿಕ್ರಿಯೆ ನೀಡಿದ ರಾಜ್ಯ ತುಳು ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ‘ಸರಕಾರ ಈ ಬಗ್ಗೆ ಮತ್ತೆ ವಿಮರ್ಶೆ ಮಾಡಬೇಕಿದೆ. ಶತಮಾನಗಳ ಹಿಂದೆ ಆರಾಧಿಸಲ್ಪಟ್ಟ ದೇವಸ್ಥಾನಗಳನ್ನು ತೆರವುಗೊಳಿಸುವುದು ಸರಿಯಲ್ಲ.

ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡುವುದು ಎಲ್ಲರ ಕರ್ತವ್ಯ. ಆದರೆ ಸರಕಾರ ಈ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡುವ ಕೆಲಸ ಮಾಡಬೇಕು.

ದೇವಸ್ಥಾನಗಳನ್ನು ಉಳಿಸುವಂತಹ ಕಾನೂನನ್ನು ಜಾರಿಗೆ ತರಬೇಕು. ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ನಡೆಯಬಾರದು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...