Connect with us

LATEST NEWS

ನಾಳೆ ಉಡುಪಿಯಲ್ಲಿ BJP ಜನಸಂಕಲ್ಪ ಸಮಾವೇಶ-CM ಬೊಮ್ಮಾಯಿ, ಮಾಜಿ CM BSY ಆಗಮನ

Published

on

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ನಾಳೆ ಭಾರತೀಯ ಜನತಾ ಪಕ್ಷದ ಜನಸಂಕಲ್ಪ ಯಾತ್ರೆ ನಡೆಯಲಿದ್ದು, ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾಗವಹಿಸಲಿದ್ದಾರೆ.


ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಸಮಾವೇಶ ನಡೆಯಲಿರುವ ಜಾಗದಲ್ಲಿ ಭಾರೀ ಸಿದ್ಧತೆಗಳು ಇದೀಗ ನಡೆಸಲಾಗುತ್ತಿದೆ.

ಬೃಹತ್‌ ಗಾತ್ರದ ಚಪ್ಪರದ ವ್ಯವಸ್ಥೆ ಮಾಡಲಾಗುತ್ತಿದ್ದು, ವಿಶೇಷ ಭದ್ರತೆಯನ್ನು ಕೂಡಾ ಮಾಡಲಾಗಿದೆ.
ಇನ್ನು ಸಮಾವೇಶದಲ್ಲಿ ಬಿಜೆಪಿ ಸಚಿವರು, ಮಾಜಿ ಸಚಿವರು, ಹಾಲಿ ಶಾಸಕರು, ಮಾಜಿ ಶಾಸಕರು, ಪಕ್ಷದ ಹಿರಿಯ ನಾಯಕರು, ಮಾರ್ಗದರ್ಶಕರು, ಕಾರ್ಯಕರ್ತರು, ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಕಾಪು ಬಸ್ಸು ನಿಲ್ದಾಣದ ಬಳಿ ಬೆಳಿಗ್ಗೆ 10 ಗಂಟೆಗೆ ಸಮಾವೇಶ ನಡೆಯಲಿದೆ. ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

LATEST NEWS

ಮುಂದಿನ 5 ದಿನ ರಾಜ್ಯದ 25 ಜಿಲ್ಲೆಗಳಲ್ಲಿ ಬಿಸಿ ಗಾಳಿ ಸಾಧ್ಯತೆ; ಎಲ್ಲೆಲ್ಲಿ?

Published

on

ಮಂಗಳೂರು : ರಾಜ್ಯದಲ್ಲಿ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ಬಿಸಿಲಾಘಾತದಿಂದ ಜನ, ಜಾನುವಾರು ಮತ್ತು ಪಕ್ಷಿ ಸಂಕುಲ ತತ್ತರಿಸಿದೆ. ನೀರಿಗೆ ತತ್ವಾರ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಇದೀಗ ಹವಾಮಾನ ಇಲಾಖೆಯು ರಾಜ್ಯದ 25 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಿದೆ. ಇಂದಿನಿಂದ 5 ದಿನಗಳ ಕಾಲ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

ಯಾವ ಜಿಲ್ಲೆಗಳಿಗೆ ಬಿಸಿಲಾಘಾತ?

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಮೇ 5 ರವರೆಗೂ ಇದೇ ಪರಿಸ್ಥಿತಿ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಮೇ 4 ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರುವ ಸಂಭವವಿದೆ.

ಮಳೆಯಾಗುವ ಸಾಧ್ಯತೆ :

ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವೆಡೆ ಬುಧವಾರ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ನಾಲ್ಕುದಿನ ಒಣಹವೆ ಇರಲಿದೆ.
ಮೇ 6 ರಿಂದ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!

ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ :

ಇಂದಿನಿಂದ(ಮೇ 1 ರಿಂದ) ಮುಂದಿನ ಐದು ದಿನಗಳು ಬಾಗಲಕೋಟೆ, ಕಲಬುರಗಿ ಹಾಗೂ ಕೊಪ್ಪಳದಲ್ಲಿ ರಾತ್ರಿಯ ಅವಧಿಯೂ ಬಿಸಿ ವಾತಾವರಣದಿಂದ ಕೂಡಿರುವ ಸಾಧ್ಯತೆಯಿದೆ. ಮಂಗಳವಾರ ಬೆಳಿಗ್ಗೆ 8.30 ರಿಂದ ಬುಧವಾರ ಬೆಳಗ್ಗಿನ ತನಕದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.8 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರು ದಿನ 38 ಡಿಗ್ರಿ ಸೆಲ್ಸಿಯಸ್ ದಾಟಿದೆ.

Continue Reading

DAKSHINA KANNADA

ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

Published

on

ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.

ಮಂಗಳೂರಿನ ಪ್ರೆಸ್ ಕ್ಲಬ್‌ ವತಿಯಿಂದ ನಡೆದ ಪ್ರೆಸ್‌ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್‌ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ  ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

 

Continue Reading

LATEST NEWS

ಬೆಳಗ್ಗೆ ಏಳುವಾಗ ಬಲಗಡೆಯಿಂದ ಯಾಕೆ ಏಳಬೇಕು ಗೊತ್ತೇ..?

Published

on

ಮಂಗಳೂರು: ರಾತ್ರಿ ಮಲಗೋದು ಎಷ್ಟು ಮುಖ್ಯವೋ ಬೆಳಗ್ಗಿನ ಜಾವ ಏಳೋದು ಕೂಡ ಅಷ್ಟೇ ಮುಖ್ಯವಾಗುತ್ತದೆ. ಸನಾತನ ಹಿಂದೂ ಧರ್ಮದಲ್ಲಿ ಒಂದು ವಿಶೇಷ ಸಂಪ್ರದಾಯ ಇದೆ. ಬೆಳಿಗ್ಗೆ ಬಲಗಡೆಯಿಂದ ಎದ್ದು ಅಂಗೈ ಉಜ್ಜಿ ಕಣ್ಣು ಮುಚ್ಚಿ ಕರಾಗ್ರೆ ವಸತೆ ಲಕ್ಷ್ಮಿ ಎನ್ನುವ ಶ್ಲೋಕ ಹೇಳುವುದು. ಬಾಲ್ಯದಲ್ಲಿ ನಮ್ಮ ಹಿರಿಯರು ಹಾಗೂ ನಮ್ಮ ಅಮ್ಮಂದಿರು ಬಲಗಡೆಗೆ ಏಳು ಅಂತ ಹೇಳಿರುವುದನ್ನು ಕೇಳಿರುತ್ತೇವೆ. ಅಥವಾ ನಾವು ಎಡ ಬದಿಯಿಂದ ಎಳುವುದ್ದನ್ನು ನೋಡಿದಾಗ ನಮ್ಮನ್ನು ಬಲಗಡೆಯಿಂದ ಎಬ್ಬಿಸಲು ಟ್ರೈ ಮಾಡಿರಬಹುದು.

ಬಲ ಭಾಗದಿಂದ ಎದ್ದರೆ ಅದೃಷ್ಟ

ಬಲ ಭಾಗದಿಂದ ಎದ್ದರೆ ಒಳ್ಳೆಯದು ಅನ್ನೋದು ಹೇಳಿದ್ದನ್ನ ನಾವು ಕೇಳಿರಬಹುದು. ಬಲ ಭಾಗದಿಂದ ಎಚ್ಚರಗೊಂಡರೆ ದಿನವಿಡೀ ಅದೃಷ್ಟ ಇತ್ಯಾದಿ ಕಲ್ಪನೆಗಳು ನಮ್ಮಲ್ಲಿ ಇರುತ್ತದೆ. ಇನ್ನೊಂದು ವಿಚಾರ ಏನು ಅಂದ್ರೆ ನಮ್ಮ ದೇಹ ನಿದ್ದೆಗೆ ಜಾರಿದಾಗ ನಮ್ಮ ದೇಹದಲ್ಲಿ ಸ್ನಾಯುಗಳು ರೆಸ್ಟ್ ಅಲ್ಲಿ ಇರುತ್ತವೆ.

ವೈಜ್ಞಾನಿಕ ಕಾರಣ

ವೈಜ್ಞಾನಿಕವಾಗಿ ಹೇಳುವುದಾದರೆ ನಮ್ಮ ಹೃದಯ ದೇಹದ ಎಡ ಭಾಗದಲ್ಲಿ ಇದೆ. ಅದರ ಸುತ್ತಲೂ ಹಲವಾರು ಸ್ನಾಯುಗಳು ಇವೆ. ನಾವು ಎಡ ಭಾಗದಿಂದ ಧಿಡೀರ್ ಅಂತ ಇದ್ರೆ ನಮ್ಮ ಇಡೀ ದೇಹದ ಒತ್ತಡ ಆ ಸ್ನಾಯುಗಳ ಮೇಲೆ ಬೀಳುತ್ತೆ. ಆ ಸ್ನಾಯುಗಳಿಗೆ ಸ್ವಲ್ಪ ಪೆಟ್ಟು ಬಿದ್ರೆ ಕೂಡ ಅದು ನಮ್ಮ ಹೃದಯಕ್ಕೆ ತುಂಬಾ ಅಪಾಯಕಾರಿ. ಆದ್ದರಿಂದ ನಮ್ಮ ಹಿರಿಯರು ಬಲ ಭಾಗದಿಂದ ಏಳಬೇಕು ಅಂತ ಹೇಳುತ್ತಿದ್ದರು.

ಇನ್ನು ಎಡಭಾಗದಿಂದ ಎದ್ದರೆ ದಿನ ಒಳ್ಳೆಯದಿರುವುದಿಲ್ಲ, ಏನಾದರೂ ಕೆಟ್ಟದ್ದು ಆಗುವ ಸಾಧ್ಯತೆಗಳು ಇರುತ್ತದೆ ಎಂಬುದು ಜನರ ನಂಬಿಕೆಯಾಗಿರುತ್ತದೆ. ಹಾಗಾಗಿ ಈಗಲೂ ಹೆಚ್ಚಿನ ಜನರು ಬೆಳ್ಳಗ್ಗಿನ ಜಾವ ಎಡಭಾಗದಿಂದ ಏಳದೇ ಬಲಭಾಗದಿಂದ ಏಳುತ್ತಾರೆ. ಬೆಳಗ್ಗೆ ಬಲ ಬದಿಯಿಂದ ಏಳುವುದರಿಂದ ನಿಮ್ಮ ಅಂದಿನ ದಿನ ಶಾಂತಿಯುತವಾಗಿಯೂ ಹಾಗೂ ಒತ್ತಡವಿಲ್ಲದೇ ಕಳೆಯಬಹುದು.

Continue Reading

LATEST NEWS

Trending