Connect with us

DAKSHINA KANNADA

ಟೋಲ್ ಗೇಟ್ ಕಿತ್ತೆಸೆಯಲು ನಾಳೆ ನಿರ್ಣಯಕ ಹೋರಾಟಕ್ಕೆ ಕರೆ : ಸುರತ್ಕಲ್ ಟೋಲ್ ಪ್ರದೇಶದಲ್ಲಿ ಪೊಲೀಸ್ ಸರ್ಪಗಾವಲು..!

Published

on

ಮಂಗಳೂರು : ಹಲವು ವರ್ಷಗಳಿಂದ ಭಾರೀ ವಿವಾದ ಸೃಷ್ಟಿಸಿದ್ದ ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಗಲಾಟೆ ನಾಳೆ( ಅ.18) ಮತ್ತಷ್ಟು ತಾರಕಕ್ಕೇರುವ ಸಾಧ್ಯತೆ ಇದ್ದು ಟೋಲ್ ಗೇಟ್ ಮುತ್ತಿಗೆಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಭಾರಿ ಪೊಲೀಸ್ ಬಂದೋಬಸ್ತನ್ನು ನಾಳೆ ಪ್ರತಿಭಟನೆ ನಡೆಯುವ ಸುರತ್ಕಲ್ ಪ್ರದೇಶದಲ್ಲಿ ನಿಯೋಜನೆ ಮಾಡಲಾಗಿದೆ.

ಟೋಲ್ ವಿರೋಧಿ ಹೋರಾಟ ಸಮಿತಿ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆಗೆ ಕರೆ ನೀಡಿದ್ದು, ಕಾಂಗ್ರೆಸ್, ಡಿವೈಎಫ್ಐ, ಸಿಪಿಐಎಂ ಹೀಗೆ ಹತ್ತಾರು ಸಂಘಟನೆಗಳು, ಸಮಾನ ಮನಸ್ಕ ಸಂಘಟನೆಗಳು ಈಗಾಗಲೇ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.

2015 ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟೋಲ್ ಗೇಟ್ ಆರಂಭಗೊಂಡಿತ್ತು.‌ ಆದರೆ ಹೈವೆಯಲ್ಲಿ 60 ಕಿಲೋಮೀಟರ್ ಅಂತರದಲ್ಲಿ ಟೋಲ್ ಇರಬೇಕಾದದ್ದು ಹೆದ್ದಾರಿ ಪ್ರಾಧಿಕಾರದ ನಿಯಮ. ಆದರೆ ಸುರತ್ಕಲ್ ಟೋಲ್ ಆ ನಿಯಮವನ್ನು ಮೀರಿದೆ ಎಂಬ ಆರೋಪ ಇದೆ.

ಈಗಾಗಲೇ ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ‌ಭಾರೀ ಪ್ರಚಾರ ನಡೆಸಿರುವ ಟೋಲ್ ವಿರೋಧಿ ಸಮಿತಿ, ನಾಳೆ ಬೆ.10 ಗಂಟೆಗೆ ಸುರತ್ಕಲ್ ಟೋಲ್ ಗೇಟ್ ಗೆ ಮುತ್ತಿಗೆಗೆ ಸಿದ್ದತೆ ನಡೆಸಿದೆ.

ಮುತ್ತಿಗೆ ವೇಳೆ ಪೊಲೀಸ್ ಇಲಾಖೆ ಮತ್ತು ಹೋರಾಟಗಾರರ ಜೊತೆ ಸಂಘರ್ಷ ನಡೆಯುವ ಸಾಧ್ಯತೆಗಳೂ ದಟ್ಟವಾಗಿವೆ. ಈಗಾಗಲೇ ಟೋಲ್ ಗೇಟ್ ವಿರೋಧಿ ಹೋರಾಟಗಾರರಿಗೆ ಪೊಲೀಸ್ ನೋಟೀಸ್ ಜಾರಿಯಾಗಿದೆ.

ಸಂಚಾಲಕ ಮುನೀರ್ ಕಾಟಿಪಳ್ಳ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಸೇರಿ 16 ಜನರಿಗೆ ‌ನೋಟೀಸ್ ನೀಡಿದ್ದು, ಅಹಿತಕರ ‌ಘಟನೆ ನಡೆದರೆ ಹೋರಾಟಗಾರರೇ ಜವಾಬ್ದಾರಿ ಅಂತ ಮುಚ್ಚಳಿಕೆ ಬರೆಸಲು ನೋಟೀಸ್ ಕೊಡಲಾಗಿದೆ, ಆದ್ರೂ ನಾಳಿನ ನಿರ್ಣಾಯಕ ಹೋರಾಟಕ್ಕೆ ಸಂಘಟನೆಗಳು ಮುಂದಾಗಿವೆ.

ಈ ಮಧ್ಯೆ ಆಡಳಿತ ರೂಢ ಸಂಸದ ನಳಿನ್ ಕುಮಾರ್ ಕಟೀಲ್ ಶಾಂತಿಯುತ ಹೋರಾಟಕ್ಕೆ ‌ನನ್ನ ವಿರೋಧ ‌ಇಲ್ಲ. ಆದರೆ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ತನ್ನದೇ ಆದ ನಿಯಮದಡಿ‌ ಕ್ರಮ ಕೈಗೊಳ್ಳುತ್ತದೆ.

ಹೆದ್ದಾರಿ ಪ್ರಾಧಿಕಾರ 20 ದಿನ ಸಮಯ ಕೇಳಿದೆ, ನಾವು ಸಮಯ ಕೊಡುವ. ನಾನು ಹೋರಾಟಗಾರರ ಜೊತೆ ಮಾತನಾಡಿದ್ರೆ ರಾಜಕೀಯ ಬರುತ್ತೆ. ಹಾಗಾಗಿ ಡಿಸಿ ಸೇರಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ಅವರ ಜೊತೆ ಮಾತನಾಡಿಸಿದ್ದೇನೆ.

ಈಗ ಮತ್ತೆ ವಿನಂತಿ ‌ಮಾಡ್ತೇನೆ, 20 ದಿನಗಳ ಕಾಲಾವಕಾಶ ಕೊಡಿ. ಹೋರಾಟವನ್ನ ಶಾಂತಿಯುತವಾಗಿ ‌ಮಾಡಲು ನನ್ನ ಅಭ್ಯಂತರ ಇಲ್ಲ.‌

ನಾನು ಟೋಲ್ ಗೇಟ್ ತೆಗೆಯಲು ಕಠಿಬದ್ದನಾಗಿದ್ದೇನೆ, ತೆಗೆದೇ ತೆಗೆಸ್ತೀನಿ.‌

ಕೆಲ ತಾಂತ್ರಿಕ ಸಮಸ್ಯೆಗಳಿಂದ ಟೋಲ್ ಗೇಟ್ ತೆರವು ವಿಳಂಬವಾಗಿದೆ. ಹೀಗಾಗಿ 20 ದಿನಗಳ ಕಾಲ ಹೋರಾಟ ಮುಂದೂಡಿ ಅಂತ ವಿನಂತಿ ಮಾಡ್ತೇನೆ ಎಂದಿದ್ದಾರೆ.

ಆದರೆ ಇದಕ್ಕೆ ಪ್ರತಿಕ್ರೀಯಿಸಿರುವ ಹೋರಾಟ ಸಮಿತಿಯ ಮುನೀರ್ ಕಾಟಿಪಳ್ಳ ನಾಳೆ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆಯನ್ನು ಪೊಲೀಸರ ಮೂಲಕ ನಿರ್ದಯವಾಗಿ ಹತ್ತಿಕ್ಕುವ ಯತ್ನವನ್ನು ಬಿಜೆಪಿ ಸರಕಾರ ನಡೆಸುತ್ತಿದೆ.

ಅದರ ಭಾಗವಾಗಿ ಹೋರಾಟ ಸಮಿತಿಯ 50 ಕ್ಕೂ ಹೆಚ್ಚು ಪ್ರಮುಖರ ಮೇಲೆ ಶಾಂತಿಭಂಗ ಕಾಯ್ದೆ ಅಡಿ ನೋಟೀಸು ಜಾರಿ ಮಾಡಲಾಗಿದೆ. ನೋಟೀಸು ನೀಡುವ ನೆಪದಲ್ಲಿ ಮಧ್ಯರಾತ್ರಿ ಮನೆಗಳಿಗೆ ಬಂದು ಮಾನಸಿಕವಾಗಿ ಹಿಂಸಿಸಲಾಗಿದೆ.

ಆ ಮೂಲಕ ಟೋಲ್ ಗೇಟ್ ವಿರೋಧಿ ಹೋರಾಟವನ್ನು ಹತ್ತಿಕ್ಕುವ, ಟೋಲ್ ಗೇಟ್ ಸುಲಿಗೆಯನ್ನು ಶಾಶ್ವತಗೊಳಿಸುವ ಹುನ್ನಾರ ನಡೆಸಲಾಗಿದೆ.

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಬಿಜೆಪಿ ಸರಕಾರದ ಈ ಸರ್ವಾಧಿಕಾರಿ ಧೋರಣೆಯನ್ನು ಬಲವಾಗಿ ಖಂಡಿಸುತ್ತಿದ್ದು, ಪೊಲೀಸರು ಹೊರಡಿಸಿರುವ ನೋಟೀಸನ್ನು ತಿರಸ್ಕರಿಸಿ ಬಂಧನಕ್ಕೆ ಒಳಗಾಗಗಲು ಸಿದ್ದ.

ನಾಳೆ ಹೋರಾಟವನ್ನು ಮತ್ತಷ್ಟು ಉತ್ಸಾಹದಿಂದ ಶಾಂತಿಯುತವಾಗಿ ನಡೆಸಲು ನಿರ್ಧರಿಸಿದೆ ಎಂದಿದ್ದಾರೆ. ಒಟ್ಟಿನಲ್ಲಿ ನಾಳೆಯ ಪ್ರತಿಭಟನೆ ಯಾವ ಹಂತಕ್ಕೆ ಮುಟ್ಟುತ್ತೆ ಕಾದು ನೋಡಬೇಕಿದೆ.

DAKSHINA KANNADA

‘ನಾಟು ನಾಟು’ ರೀತಿಯ ಸಾಂಗ್‌..! ಕುತೂಹಲ ಮೂಡಿಸಿದ ‘ವಾರ್ 2’

Published

on

2019 ರಲ್ಲಿ ಸೂಪರ್ ಹಿಟ್ ಆಗಿದ್ದ ‘ವಾರ್’ ಸಿನೆಮಾದ ಸೆಕಂಡ್ ವರ್ಷನ್‌ ‘ವಾರ್ 2’ ತೆರೆ ಮೇಲೆ ಬರಲು ಭರದ ಸಿದ್ಧತೆ ನಡೆಸಿದೆ. ‘ವಾರ್’ ಸಿನೆಮಾದಲ್ಲಿ ‘ ಜೈ ಜೈ ಶಿವಶಂಕರ್’ ಹಾಡು ಸುಪರ್ ಹಿಟ್ ಆಗಿದ್ದು ಫ್ಯಾನ್ಸ್‌ಗಳು ಹಾಡಿಗೆ ಫಿದಾ ಆಗಿದ್ರು. ಟೈಗರ್ ಶ್ರಾಫ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್’ ಸಿನೆಮಾ ಬಳಿಕ ಈಗ ‘ವಾರ್‌ 2’ ರೆಡಿ ಆಗ್ತಾ ಇದೆ. ಇದರಲ್ಲಿ ಹೃತಿಕ್ ರೋಷನ್ ಹಾಗೂ ಜ್ಯೂನಿಯರ್ ಎನ್‌ಟಿಆರ್ ಜೊತೆಯಾಗಿದ್ದಾರೆ.

ಅದ್ಧೂರಿಯಾಗಿ ನಿರ್ಮಾಣ ಆಗ್ತಾ ಇರೋ ‘ವಾರ್ 2’ ಸಿನೆಮಾಗೆ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲಾಗ್ತಾ ಇದೆ. ಯಶ್‌ ರಾಜ್ ಫಿಲಂಸ್‌ ಸಂಸ್ಥೆ ಈ ‘ವಾರ್ 2’ ಸಿನೆಮಾಗೆ ಬಂಡವಾಳ ಹಾಕುತ್ತಿದೆ. ‘ವಾರ್’ ಸಿನೆಮಾದಂತೆ ಈ ಸಿನೆಮಾದಲ್ಲೂ ವಿಶೇಷ ಹಾಡನ್ನ ಸಿನೆಮಾ ತಂಡ ಪ್ಲ್ಯಾನ್ ಮಾಡಿದೆ. ಜೂನಿಯರ್ ಎನ್‌ಟಿಆರ್ ಅವರ ಆಸ್ಕರ್ ಅವಾರ್ಡ್‌ ವಿನ್ ಆಗಿದ್ದ ‘ನಾಟು ನಾಟು” ಹಾಡಿನಂತೆ ಇರೋ ಹಾಡಿಗೆ ಹೃತಿಕ್ ಹಾಗೂ ಜ್ಯೂನಿಯರ್ ಎನ್‌ಟಿಆರ್‌ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿದೆ. ‘ನಾಟು ನಾಟು’ ರೀತಿಯ ಹಾಡು ಹಾಗೂ ಡ್ಯಾನ್ಸ್‌ ‘ವಾರ್ 2’ ಸಿಎನಮಾದ ಹೈಲೈಟ್ ಆಗಲಿದೆ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ.


ಈಗಾಗಲೇ ‘ವಾರ್ 2’ ಚಿತ್ರದ ಶೂಟಿಂಗ್ ಆರಂಭವಾಗಿದೆ. ಚಿತ್ರದ ಸೆಟ್​ ಫೋಟೋಗಳು ಕೂಡಾ ಲೀಕ್ ಆಗಿವೆ. ಅಯಾನ್ ಮುಖರ್ಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆದಿತ್ಯ ಚೋಪ್ರಾ ಅವರು ದೊಡ್ಡ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ವಾರ್ 2’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಸಿನಿಮಾ 2025ರಲ್ಲಿ ಆಗಸ್ಟ್ 14ರಂದು ರಿಲೀಸ್ ಆಗಲಿದೆ.

Continue Reading

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Published

on

ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್‌ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್‌ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Continue Reading

LATEST NEWS

Trending