DAKSHINA KANNADA
ಮಂಗಳೂರು: ಸೆ.10 ರಂದು ಜಿಲ್ಲಾಡಳಿತದ ವತಿಯಿಂದ ನಾರಾಯಣ ಗುರು ಜಯಂತಿ
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸಕೃತಿ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಇದೇ ಸೆ.10ರ ಶನಿವಾರ ಮಂಗಳೂರು ನಗರದ ಡಾ.ಟಿ.ಎಂ.ಎ. ಪೈ ಇಂಟರ್ ನ್ಯಾಷನಲ್ ಕನ್ವೆನ್ಶನ್ ಸೆಂಟರ್ನಲ್ಲಿ ಹಮ್ಮಿಕೊಳ್ಳಲಾಗಿದೆ.
ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಗೌರವ ಉಪಸ್ಥಿತಿ ವಹಿಸಲಿದ್ದಾರೆ.
ಮುಖ್ಯ ಅಥಿತಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯ ಸಭೆಯ ಸಂಸದರಾದ ಡಾ.ಡಿ. ವೀರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್, ಡಾ.ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ರಾಜೇಶ್ ನಾಯ್ಕ ಯು., ಸಂಜೀವ ಮಠಂದೂರು,
ಉಮಾನಾಥ್ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೆಗೌಡ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ್ ಭಂಡಾರಿ, ಮೀನುಗಾರಿಕೆ ಅಭಿವೃಧ್ಧಿ ನಿಗಮದ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಜಗದೀಶ್ ಪೈ, ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳ ಉಪಸ್ಥಿತಿ ವಹಿಸಲಿದ್ದಾರೆ.
ನಗರದ ಕುದ್ರೋಳಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಬಿ. ಶ್ರೀ ನಾರಾಯಣ ಗುರುಗಳ ಜಯಂತಿ ಸಂದೇಶ ನೀಡುವರು. ಅಂದು ಸಂಜೆ 4 ಗಂಟೆಗೆ ನಗರದ ನಾರಾಯಣ ಗುರು ವೃತ್ತದಿಂದ ಡಾ.ಟಿ.ಎಂ.ಎ.ಪೈ ಇಂಟರ್ ನ್ಯಾಷನಲ್ ಕನ್ವೆನ್ಶನ್ ಸೆಂಟರ್ ವರೆಗೆ ನಾರಾಯಣ ಗುರುಗಳ ಸ್ತಬ್ಧಚಿತ್ರದೊಂದಿಗೆ ಚೆಂಡೆ, ಗೊಂಬೆ, ಸ್ಯಾಕ್ಸೋಫೋನ್, ಡೊಳ್ಳು ಕುಣಿತ, ಹುಲಿವೇಷ ಮುಂತಾದ ಜಾನಪದ ಕಲಾತಂಡದೊಂದಿಗೆ ಮೆರವಣಿಗೆ ನಡೆಯಲಿದೆ.
ವಿದ್ವಾನ್ ಪ್ರಮೋದ್ ಉಳ್ಳಾಲ್ ನೃತ್ಯ ಸಂಯೋಜನೆ ಮತ್ತು ಡಾ.ಅರುಣ್ ಉಳ್ಳಾಲ್ ಸಾಹಿತ್ಯದೊಂದಿಗೆ ಬ್ರಹ್ಮಶ್ರೀ ನಾರಾಯಣಗುರು ಭರತನಾಟ್ಯ ನೃತ್ಯರೂಪಕ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಖ್ಯಾತ ಯುವ ಚಿತ್ರಕಲಾವಿದರಿಂದ ಶ್ರೀ. ನಾರಾಯಣ ಗುರುಗಳ ಸಂದೇಶ ಸಾರುವ ಚಿತ್ರಕಲಾ ಪ್ರದರ್ಶನವನ್ನು ಸಹ ಏರ್ಪಡಿಸಲಾಗಿದೆ.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!