Connect with us

DAKSHINA KANNADA

ಗಮನಿಸಿ: ಮಂಗಳೂರಿನ ಸುರತ್ಕಲ್ ಸೇರಿ ಹಲವೆಡೆ ನೀರು ವ್ಯತ್ಯಯ

Published

on

ಮಂಗಳೂರು: ನೀರು ಸರಬರಾಜು ಮಾಡುವ ಕೊಳವೆ ದುರಸ್ತಿಗೊಳಿಸುವ ಕಾರಣ ನಾಳೆ ಮಂಗಳೂರಿನಲ್ಲಿ ನೀರು ನಿಲುಗಡೆಯಾಗಲಿದೆ ಎಂದು ಮಹಾನಗರ ಪಾಲಿಕೆಯ ಪ್ರಕಟನೆ ತಿಳಿಸಿದೆ.


ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಸ್ಥಾವರದ ಪಂಪಿಂಗ್ ಮಾಡುವ ಮುಖ್ಯ ಕೊಳವೆ ಪಣಂಬೂರು ಕೆಐಒಸಿಎಲ್ ಗೇಟ್ ಹತ್ತಿರ ಒಡೆದು ಸೋರಿಕೆ ಉಂಟಾಗಿದ್ದು, ತುರ್ತಾಗಿ ದುರಸ್ತಿಗೊಳಿಸುವ ಅಗತ್ಯವಿದೆ.

ಆದುದರಿಂದ ನಾಳೆ ಬೆಳಿಗ್ಗೆ 6 ಗಂಟೆಯಿಂದ ಎ.27 ರ ಬೆಳಿಗ್ಗೆ 6 ಗಂಟೆಯವರೆಗೆ ಸುರತ್ಕಲ್, ಕೂಳೂರು, ಜಲ್ಲಿಗುಡ್ಡೆ, ಕೋಡಿಕಲ್, ಕಾನ, ಬಾಳಾ, ಕುಳಾಯಿ, ಮುಕ್ಕ, ಪಣಂಬೂರು

ಇತ್ಯಾದಿ ಪ್ರದೇಶಗಳಿಗೆ ಸಂಪೂರ್ಣ ನೀರು ನಿಲುಗಡೆಯಾಗುವುದರಿಂದ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವುದೆಂದು ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

Mangaluru: ವಿದ್ಯಾರ್ಥಿನಿಯರ ಹಾಸ್ಟೆಲ್ ನಿಂದ ಮೊಬೈಲ್‌ ಕಳವು – ಆರೋಪಿಗೆ 3 ವರ್ಷ ಜೈಲು ಶಿಕ್ಷೆ..!

Published

on

ಮಂಗಳೂರು: ಉರ್ವ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರ ಮೊಬೈಲ್ ಕಳವು ಪ್ರಕರಣದ ಆರೋಪಿ ಮಹೇಶ್ ಪೈ ಎಂಬಾತನಿಗೆ ಮಂಗಳೂರಿನ ಪ್ರಿನ್ಸಿಪಲ್ ಸಿವಿಲ್ ಜಡ್ಜ್ (ಹಿರಿಯ ವಿಭಾಗ) ಮತ್ತು ನ್ಯಾಯಾಲಯವು ಮೂರು ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.

2023 ಜೂನ್ 18ರಂದು ಉರ್ವಾ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಿಂದ ವಿದ್ಯಾರ್ಥಿನಿ ಯರ 3 ಮೊಬೈಲ್ ಫೋನ್ ಕಳವಾಗಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಆರೋಪಿ ಮಹೇಶ್ ಪೈಯನ್ನು ಉರ್ವ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜಪಡಿಸಿದ್ದರು. ಬಳಿಕ ಈತನ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ನ್ಯಾಯಾಲಯವು ಆರೋಪಿ ವಿರುದ್ಧದ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮೂರು ವರ್ಷ ಜೈಲು ಶಿಕ್ಷೆ ಮತ್ತು 5,000ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

Continue Reading

DAKSHINA KANNADA

ಪುತ್ತಿಲ ಸ್ಪರ್ಧೆ ಪಕ್ಷಕ್ಕೆ ಸವಾಲೇ ಅಲ್ಲ -ಸಂಸದ ನಳಿನ್ ಕುಮಾರ್

Published

on

ಮಂಗಳೂರು: ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಪುತ್ತಿಲ ಪರಿವಾರ ಘೋಷಣೆ ಮಾಡಿರುವುದು ಅವರ ವೈಯಕ್ತಿಕ ವಿಚಾರ ಅಂತ ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಪುತ್ತಿಲ ಪರಿವಾರದ ಮನವೊಲಿಸಲು ಪಕ್ಷ ಸಾಕಷ್ಟು ಪ್ರಯತ್ನ ಮಾಡಿದೆ. ಅವರದ್ದು ಒಂದು ಸ್ವತಂತ್ರ ಸಂಸ್ಥೆ ಆಗಿರುವ ಕಾರಣ ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯ ಅವರಿಗೆ ಇದೆ. ಬಿಜೆಪಿ ಹಲವು ವರ್ಷಗಳ ಹೋರಾಟದಿಂದ ಬೆಳೆದು ದೊಡ್ಡದಾಗಿರುವ ಪಕ್ಷವಾಗಿದ್ದು, ನಮ್ಮ ಪಕ್ಷಕ್ಕೆ ಎದುರಾಳಿ ಯಾರು ಅನ್ನೋ ಪ್ರಶ್ನೆಯೇ ಬರೋದಿಲ್ಲ. ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌ ನ್ನು ಸೋಲಿಸಿ ಅತೀ ಹೆಚ್ಚು ಸೀಟ್ ಪಡೆದು ಕೇಂದ್ರದಲ್ಲಿ ಅಧಿಕಾರ ಹಿಡಿದಿದೆ. ಹೀಗಾಗಿ ಪುತ್ತಿಲ ಅವರ ಸ್ಪರ್ಧೆ ನಮಗೆ ಸವಾಲೇ ಅಲ್ಲ ಎಂಬ ಅರ್ಥದಲ್ಲಿ ನಳಿನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣದ ಬಳಿಕ ಪಕ್ಷದ ವರ್ಚಸ್ಸು ಹೆಚ್ಚಿದ್ದು, ಜನರು ಹಿಂದುತ್ವ, ರಾಷ್ಟ್ರವಾದ, ಅಭಿವೃದ್ದಿ ವಿಚಾರವಾಗಿ ಮತ ಹಾಕುತ್ತಾರೆ. ಸೀಟು ಕೊಡುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸ್ತಾರೆ. ಆದರೆ ಈ ಬಾರಿ ಅತೀ ಹೆಚ್ಚಿನ ಅಂತರದ ಗೆಲವು ಸಾಧಿಸುತ್ತೇವೆ ಎಂದು ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಬಾಲವಿಕಾಸದಲ್ಲಿ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Published

on

ವಿಟ್ಲ: ಪೆರಾಜೆ, ಮಾಣಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮಾಣಿ ಸ್ಥಳೀಯ ಸಂಸ್ಥೆ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಇವರ ಸಹಭಾಗಿತ್ವದಲ್ಲಿ ಫೆ. 28 ರಂದು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾನಗರ ಪೆರಾಜೆ, ಮಾಣಿ ಇಲ್ಲಿ 2023-24 ನೇ ಸಾಲಿನ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರವು ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಚಾಲಕ ಹಾಗೂ ಮಾಣಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ  ಪ್ರಹ್ಲಾದ್ ಶೆಟ್ಟಿ ಜೆ  ಪರೀಕ್ಷಾ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಎಳವೆಯಲ್ಲಿಯೇ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣವಿದ್ದಾಗ ಮುಂದಿನ ದಿನಗಳಲ್ಲಿ ಸದೃಢ ದೇಶ ಕಟ್ಟಬಲ್ಲರು ಎಂದು ಹೇಳಿ ಪರೀಕ್ಷಾ ಶಿಬಿರಕ್ಕೆ ಶುಭ ಹಾರೈಸಿದರು.

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರವೀಂದ್ರ ಡಿ ಸ್ವಾಗತಿಸಿ,ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಬ್ ವಿಭಾಗದ ಶಿಬಿರ ನಾಯಕಿ ಯಮುನಾ,ಬುಲ್ ಬುಲ್ ವಿಭಾಗದ ಶಿಬಿರ ನಾಯಕಿ ಯಶೋಧ ಕೆ (HWB) ರವರು ಉಪಸ್ಥಿತರಿದ್ದರು. ಪರೀಕ್ಷಾ ಶಿಬಿರದಲ್ಲಿ ಸಹಾಯಕರಾಗಿ ಕಬ್ ಮಾಸ್ಟರ್ ಮತ್ತು ಫ್ಲಾಕ್ ಲೀಡರ್ ಗಳಾದ ಕಾಂತಪ್ಪ, ಸುಮಾ, ಅಮಿತಾ ಎಸ್, ಪ್ರಮೀಳಾ, ಕುರ್ಶಿದ, ಯೋಗಿನಿ, ಚಿತ್ರ ಕೆ, ವೀಣಾ, ಶೀಲಾವತಿ, ಪ್ರಮೀಳಾ ಕ್ರಾಸ್ತಾ, ಸೌಮ್ಯ ಹಾಗೂ ಸ್ಕೌಟ್ ಮತ್ತು ಗೈಡ್ ಶಿಕ್ಷಕಿ ಸಪ್ನ, ಅನಿತಾ ಗೌರಿ, ಲೀಲಾರವರು ಸಹಕರಿಸಿದರು. ಕಬ್ ವಿಭಾಗದಲ್ಲಿ 77 ವಿದ್ಯಾರ್ಥಿಗಳು ಹಾಗೂ ಬುಲ್ ಬುಲ್ ವಿಭಾಗದಲ್ಲಿ 66 ವಿದ್ಯಾರ್ಥಿಗಳು ಒಟ್ಟು 143 ವಿದ್ಯಾರ್ಥಿಗಳು ಪರೀಕ್ಷಾ ಶಿಬಿರದಲ್ಲಿ ಭಾಗವಹಿಸಿದ್ದರು. ಸ್ವಯಂ ಸೇವಕರಾಗಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿಯ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಸಹಕರಿಸಿದರು. ಗೈಡ್ ಕ್ಯಾಪ್ಟನ್ ಸುಪ್ರಿಯಾ ಡಿ ಕಾರ್ಯಕ್ರಮ ನಿರೂಪಿಸಿದರು.

Continue Reading

LATEST NEWS

Trending