Thursday, February 9, 2023

ನಾಳೆ ಪುತ್ತೂರಿನಲ್ಲಿ ಬೃಹತ್ ತಿರಂಗಾ ಶೋಭಾಯಾತ್ರೆ-ಶಾಸಕ ಮಠಂದೂರು

ಪುತ್ತೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ವತಿಯಿಂದ ಆಗಸ್ಟ್ 14ರಂದು ಪುತ್ತೂರು ನಗರದಲ್ಲಿ ಬೃಹತ್ ತಿರಂಗಾ ಶೋಭಾಯಾತ್ರೆ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.


ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 9 ಗಂಟೆಗೆ ಬೊಳುವಾರಿನ ಆಂಜನೇಯ ಮಂತ್ರಾಲಯದಿಂದ ಶೋಭಾಯಾತ್ರೆ ಆರಂಭಗೊಳ್ಳಲಿದೆ.

ಸುಮಾರು 4 ಸಾವಿರ ಜನ ಭಾಗವಹಿಸುವ ನಿರೀಕ್ಷೆಯಿದೆ. ಎಲ್ಲರೂ ಕೈಯ್ಯಲ್ಲಿ ತ್ರಿವರ್ಣ ಧ್ವಜ ಹಿಡಿದುಕೊಂಡು ಭಾರತ ಮಾತೆ ಮತ್ತು ವಂದೇ ಮಾತರಂ ಘೋಷಣೆ ಕೂಗಿಕೊಂಡು ಮುಖ್ಯರಸ್ತೆಯಲ್ಲಿ ಸಾಗಿ ಬಂದು ಬಸ್ ನಿಲ್ದಾಣ ಬಳಿಯ ಐತಿಹಾಸಿಕ ಗಾಂಧಿ ಕಟ್ಟೆಯಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಮಹಾಮ್ಮಾಯಿ ದೇವಳ ರಸ್ತೆಯ ಮೂಲಕ ಸಾಗಿ ಕಿಲ್ಲೆ ಮೈದಾನ ಪಕ್ಕದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಎದುರು ಸಂಪನ್ನಗೊಳ್ಳಲಿದೆ.

ಅಲ್ಲಿ ದಿಕ್ಸೂಚಿ ಭಾಷಣ ಇರಲಿದೆ ಎಂದು ವಿವರಿಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಗರದ 15 ಸಾವಿರ ಮನೆಗಳು ಮತ್ತು ಗ್ರಾಮಾಂತರದ 75 ಸಾವಿರ ಮನೆಗಳಿದ್ದು, ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ರಾಷ್ಟಧ್ವಜ ಹಾರಿಸಬೇಕೆಂದು ಮನವಿ ಮಾಡಿದರು. ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ 50 ಸಾವಿರ ಧ್ವಜ ವಿತರಣೆಯಾಗಿದೆ.

ಬಿಜೆಪಿ ಕೂಡ ತನ್ನ ಕಾರ್ಯಕರ್ತರಿಗೆ ಧ್ವಜ ಹಾರಿಸಲು ಮನವಿ ಮಾಡಿದೆ. 220 ಬೂತ್ ವ್ಯಾಪ್ತಿಯಲ್ಲಿ 10 ಸಾವಿರ ಧ್ವಜ ಹಾರಿಸುವ ಗುರಿ ಇದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವಾ, ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್, ಗ್ರಾಮಾಂತರ ಕಾರ್ಯದರ್ಶಿಗಳಾದ ನಿತೀಶ್ ಕುಮಾರ್ ಶಾಂತಿವನ, ಪುರುಷೋತ್ತಮ ಮುಂಗ್ಲಿಮನೆ, ನಗರ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಸುರತ್ಕಲ್ ‌ಫಾಝಿಲ್ ಕೊಲೆ ಆರೋಪಿಯಿಂದ ಹಣಕ್ಕಾಗಿ ಬೆದರಿಕೆ: ಉಳ್ಳಾಲ ಠಾಣೆಯಲ್ಲಿ ‌ಪ್ರಕರಣ ದಾಖಲು

ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಡೂರು ಬಳಿ ನಡೆದಿದೆ.ಉಳ್ಳಾಲ: ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ...

ಸುರತ್ಕಲ್ ವ್ಯಾಪ್ತಿಯಲ್ಲಿ ಲಘು ಅಪಘಾತ: ಇತ್ತಂಡಗಳ ಮಧ್ಯೆ ಹೊಯ್‌ಕೈ- ಮಾತಿನ ಚಕಮಕಿ..!

ಮಂಗಳೂರು : ಮಂಗಳೂರು ಹೊವಲಯದ  ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್- ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಕೆಲ ಕಾಲ...

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...