Connect with us

LATEST NEWS

ಉದಯೋನ್ಮುಖ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ರಸ್ತೆ ಅಪಘಾತಕ್ಕೆ ಬಲಿ..!

Published

on

ಚೆನ್ನೈ : ತಮಿಳುನಾಡು ಮೂಲದ ಉದಯೋನ್ಮುಖ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಗುವಾಹತಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಇತರ ಮೂವರು ಗಂಭೀರ ರೀತಿಯಲ್ಲಿ ಗಾಯಗೊಂಡಿದ್ದಾರೆ.

ಗುವಾಹತಿಯಿಂದ ಶಿಲ್ಲಾಂಗ್‌ಗೆ ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಿ ಭೋಯ್ ಜಿಲ್ಲೆಯಲ್ಲಿ ಆಟಗಾರರು ಪ್ರಯಾಣಿಸುತ್ತಿದ್ದ ಟ್ಯಾಕ್ಸಿ ಹಾಗೂ ಬೃಹತ್ ಚಕ್ರಗಳ ಟ್ರಕ್ ನಡುವಿನ ಅಪಘಾತದಲ್ಲಿ ವಿಶ್ವ ಮೃತಪಟ್ಟಿದ್ದಾರೆ ಎಂದು ಟೇಬಲ್ ಟೆನಿಸ್ ಫೆಡರೇಷನ್ ಆಫ್ ಇಂಡಿಯಾ ಟಿಟಿಎಫ್‌ಐ ಪ್ರಕಟಿಸಿದೆ.

ಇಂದಿನಿಂದ ಆರಂಭವಾಗಬೇಕಿದ್ದ 83ನೇ ರಾಷ್ಟ್ರೀಯ ಮತ್ತು ಅಂತರರಾಜ್ಯ ಟೇಬಲ್ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ವಿಶ್ವ, ಇತರ ಮೂವರು ಸಹ ಆಟಗಾರರ ಜತೆ ತೆರಳುತ್ತಿದ್ದರು.

ವಿಶ್ವ ಜತೆ ಪ್ರಯಾಣಿಸುತ್ತಿದ್ದ ಸಹ ಆಟಗಾರರಾದ ರಮೇಶ್ ಸಂತೋಷ್ ಕುಮಾರ್, ಅಭಿನಾಶ್ ಪ್ರಸನ್ನಾಜಿ ಶ್ರೀನಿವಾಸನ್ ಮತ್ತು ಕಿಶೋರ್ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದಾರೆ.

ಆದರೆ ಮೂವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಎದುರಿನಿಂದ ಬಂದ 12 ಚಕ್ರದ ಟ್ರೈಲರ್, ಉಮ್ಲಿ ಚೆಕ್ ಪೋಸ್ಟ್ ಬಳಿಯ ಶಾಂಗ್ ಬಂಗ್ಲಾ ಬಳಿ ರಸ್ತೆ ವಿಭಜಕದ ಮೇಲೆ ಹರಿದು ಟ್ಯಾಕ್ಸಿಗೆ ಢಿಕ್ಕಿ ಹೊಡೆದಿದೆ.

ಬಳಿಕ ಕಂದಕಕ್ಕೆ ಉರುಳಿದೆ ಎಂದು ಟಿಟಿಎಫ್‌ಐ ಪ್ರಕಟಣೆ ಹೇಳಿದೆ. ಇನ್ನು ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ವಿಶ್ವ, ಇಂದಿರಾಗಾಂಧಿ ಈಶಾನ್ಯ ಪ್ರಾದೇಶಿಕ ಆರೋಗ್ಯ ಮತ್ತು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕರೆ ತರುವ ವೇಳೆ ಮೃತಪಟ್ಟಿದ್ದಾರೆ.

ಮೇಘಾಲಯ ಸರ್ಕಾರದ ನೆರವಿನೊಂದಿಗೆ ತಕ್ಷಣವೇ ಟೂರ್ನಿ ಸಂಘಟಕರು ಆಸ್ಪತ್ರೆಗೆ ಕರೆದೊಯ್ದರು ಎಂದು ಹೇಳಲಾಗಿದೆ.

ಹಲವು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪದಕಗಳನ್ನು ಗೆದ್ದಿದ್ದ ವಿಶ್ವ ಭರವಸೆಯ ಆಟಗಾರರಾಗಿದ್ದರು.

ಎಪ್ರಿಲ್ 27 ರಿಂದ ಆಸ್ಟ್ರಿಯಾದ ಲಿನ್ಸ್ ನಲ್ಲಿ ನಡೆಯಲಿರುವ ಡಬ್ಲ್ಯುಟಿಟಿ ಯೂತ್ ಕಂಟೆಂಡರ್ ನಲ್ಲಿ ಭಾರತವನ್ನು ವಿಶ್ವ ದೀನದಯಾಳನ್ ಪ್ರತಿನಿಧಿಸಬೇಕಿತ್ತು.

ಅಣ್ಣಾನಗರ ಕೃಷ್ಣಸ್ವಾಮಿ ಟಿಟಿ ಕ್ಲಬ್‌ನಲ್ಲಿ ರಾಮನಾಥ್ ಪ್ರಸಾದ್ ಮತ್ತು ಜೈ ಪ್ರಭುರಾಮ್ ಬಳಿ ತರಬೇತಿ ಪಡೆಯುತ್ತಿದ್ದ ಇವರು ಖ್ಯಾತ ಆಟಗಾರ ಶರತ್ ಕಮಲ್ ಅವರಿಂದಲೂ ಮೆಚ್ಚುಗೆ ಪಡೆದಿದ್ದರು.

ಭರವಸೆಯ ಆಟಗಾರ ವಿಶ್ವ ನಿಧನಕ್ಕೆ ಇದೀಗ ಮೇಘಾಲಯ ಸಿಎಂ ಕೊನಾರ್ಡ್ ಸಂಗ್ಮಾ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟ್ಯಾಲಿನ್, ಕೇಂದ್ರ ಯುವಜನ, ಕ್ರೀಡಾ ಸಚಿವ ಅನುರಾಗ್ ಠಾಕೂರ್, ಕೇಂದ್ರದ ಮಾಜಿ ಕ್ರೀಡಾ ಸಚಿವ ಕಿರೆನ್ ರಿಜ್ಜು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

FILM

ಕ್ಲಿಕ್ ಆಯ್ತು ‘ಪುಷ್ಪ ಪುಷ್ಪ’…ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ ಗೆ ಫ್ಯಾನ್ಸ್ ಫಿದಾ

Published

on

ಟಾಲಿವುಡ್ : ಸದ್ಯ ಟಾಲಿವುಡ್ ಅಂಗಳದಲ್ಲಿ ‘ಪುಷ್ಪ 2 : ದಿ ರೂಲ್‌’ ಸೌಂಡ್ ಜೋರಾಗಿದೆ. ಅಲ್ಲು ಅರ್ಜುನ್ ಸಿನಿಮಾ ಅಂದ್ರೆ ಹೇಳ್ಬೇಕಾ..ಮೊದಲೇ ಕ್ರೇಜ್ ಹೆಚ್ಚಿಸಿರುತ್ತೆ. ಪುಷ್ಪ ಈಗಾಗಲೇ ಫಸ್ಟ್ ಲುಕ್, ಟೀಸರ್ ಎಲ್ಲದರ ಮೂಲಕಾನೂ ನಿರೀಕ್ಷೆ ಹೆಚ್ಚಿಸುತ್ತಿದೆ. ಇದೀಗ ಹಾಡಿನ ಸರದಿ.


ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ :

‘ಪುಷ್ಪ 2 : ದಿ ರೂಲ್‌’ ಸಿನಿಮಾದ ಕುರಿತು ಯಾವ ಅಪ್ಡೇಟ್ ಕೊಡುತ್ತದೆ ಎಂದು ಅಲ್ಲು ಅರ್ಜುನ್ ಅಭಿಮಾನಿಗಳು ಕಾಯುತ್ತಿರುತ್ತಾರೆ. ಇದೀಗ ಮೇ 1 ರಂದು ಸಿನೆಮಾದ ಹಾಡೊಂದನ್ನು ರಿಲೀಸ್ ಮಾಡಲಾಗಿದೆ. ಪುಷ್ಪ ಪುಷ್ಪ ಅನ್ನೋ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಡಿನಲ್ಲಿ ಅಲ್ಲು ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಮಾಸ್ ಲುಕ್ ನಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಫ್ಯಾನ್ಸ್ ಫಿದಾ ಆಗಿರೋದಂತೂ ಸುಳ್ಳಲ್ಲ. ಎಂದಿನಂತೆ ಅಲ್ಲು ಡ್ಯಾನ್ಸ್ ಸಕತ್ತಾಗಿಯೇ ಇದೆ. ಟೀ ಗ್ಲಾಸ್ ಹಿಡಿದು ಅಲ್ಲು ಅರ್ಜುನ್ ವ್ಹಾವ್ ಎಂದೆನಿಸುವಂತೆ ಸ್ಟೆಪ್ ಹಾಕಿದ್ದಾರೆ.

ಬಿಡುಗಡೆಯಾದ ಕೆಲವೇ ಘಂಟೆಯಲ್ಲಿ ಲಕ್ಷಾಂತರ ಜನರು ವೀಕ್ಷಣೆ ಮಾಡಿದ್ದಾರೆ. ಸದ್ಯ 9.7 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಮೂಲಕ ಭಾರತದಲ್ಲಿನ ಸಂಗೀತ ಪಟ್ಟಿಯಲ್ಲಿ ಈ ಹಾಡು ಅಗ್ರಸ್ಥಾನ ಪಡೆದುಕೊಂಡಿದೆ.

ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅಲ್ಲು ಅರ್ಜುನ್ ಪಾತ್ರದ ಮೇಲೆ ಚಿತ್ರಿಸಲಾಗಿದೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು ,ನಕಾಶ್ ಅಜೀಜ್, ದೀಪಕ್ ಬ್ಲೂ ದನಿಯಾಗಿದ್ದಾರೆ.  ‘ಪುಷ್ಪ ಪುಷ್ಪ’ ಹಾಡು ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಮತ್ತು ಬೆಂಗಾಲಿ ಎಂಬ ಆರು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ತೆರೆಗೆ ಯಾವಾಗ?

ಅಲ್ಲು ಅರ್ಜುನ್ ಜೊತೆ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್ , ಡಾಲಿ ಧನಂಜಯ್, ಜಗದೀಶ್ ಪ್ರತಾಪ್ ಭಂಡಾರಿ, ರಾವ್ ರಮೇಶ್, ಜಗಪತಿ ಬಾಬು, ಅಜಯ್, ಸುನಿಲ್, ಮೈಮ್ ಗೋಪಿ, ಅನಸೂಯಾ ಭಾರದ್ವಾಜ್, ಶ್ರೀತೇಜ್, ಬ್ರಹ್ಮಾಜಿ ಮೊದಲಾದವರು ಪಾತ್ರವಾಗಿದ್ದಾರೆ.

‘ಪುಷ್ಪ 2: ದಿ ರೂಲ್’ ಆಗಸ್ಟ್ 15, 2024 ರಂದು ವಿಶ್ವದಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಪುಷ್ಪಾದಲ್ಲಿದ್ದ ಆಕ್ಷನ್‌ ಗಿಂತ ಹೆಚ್ಚಿನ ಆಕ್ಷನ್ ಪುಷ್ಪಾ 2 ನಲ್ಲಿ ಇರಲಿದೆಯಂತೆ. ಪುಷ್ಪಾದಲ್ಲಿ ಮರಗಳ್ಳತನದ ಕಥೆ ಇದ್ರೆ, ಪುಷ್ಪಾ2 ನಲ್ಲಿ ಕೆಂಪು ಮರಳು ಕಳ್ಳಸಾಗಾಟದ ಬಗ್ಗೆ ಹೇಳಲಾಗಿದೆ.

Continue Reading

LATEST NEWS

ಹೊಸ ಅಪ್​ಡೇಟ್ ನೊಂದಿಗೆ ಬರುತ್ತಿದೆ ವಾಟ್ಸ್ಆ್ಯಪ್; ಏನದು ಗೊತ್ತಾ!?

Published

on

ಮಂಗಳೂರು : ಆ್ಯಪ್ ಗಳು ಅಂದ್ರೆ ಹೊಸ ಹೊಸ ಫೀಚರ್ ಗಳ ಅನಾವರಣ ಮಾಡುತ್ತಿರುತ್ತವೆ. ಬಳಕೆದಾರರಿಗೆ ಅನುಕೂಲತೆಯನ್ನು ಸೃಷ್ಟಿಸಲು ನವೀನ ಫೀಚರ್ ಗಳನ್ನು ಅಳವಡಿಸಲಾಗುತ್ತದೆ. ವಾಟ್ಸ್ ಆ್ಯಪ್ ಕೂಡ ಹೊಸ ಹೊಸ ಫೀಚರ್ ಗಳನ್ನು ಪರಿಚಯಿಸುತ್ತಿರುತ್ತದೆ. ಇದೀಗ ಮತ್ತೊಂದು ಹೊಸ ಫೀಚರ್ ಪರಿಚಯಿಸುತ್ತಿದೆ.


ಏನಿದು ಫೀಚರ್ ?

ವಾಟ್ಸ್ ಆ್ಯಪ್ ಗೆ ಅತ್ಯಂತ ಹೆಚ್ಚಿನ ಬಳಕೆದಾರರಿದ್ದಾರೆ. ಈಗಾಗಲೇ ನೂತನ ಫೀಚರ್ ಗಳನ್ನು ವಾಟ್ಸ್ ಆ್ಯಪ್ ಪರಿಚಯಿಸುತ್ತಿರುತ್ತದೆ. ಇದೀಗ ಹೊಸ ಫೀಚರ್​ವೊಂದನ್ನು ಪರಿಶೀಲಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್​ನಲ್ಲಿ ಫೋಟೋ, ವೀಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದಾಗಿದೆ. ಬೀಟಾ ಆವೃತ್ತಿಯಲ್ಲಿ ಇದನ್ನು ಪರೀಕ್ಷಿಸಲಾಗುತ್ತಿದೆ. ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ನಿಯರ್ ​ಬೈ ಡಿವೈಸ್, ಕ್ವಿಕ್ ಶೇರಿಂಗ್ ಇತ್ಯಾದಿ ಫೀಚರ್ ರೀತಿಯಲ್ಲಿ ಇದು ಇರಬಹುದು ಎನ್ನಲಾಗಿದೆ.
ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಟ್ಸ್ ಆ್ಯಪ್ ಜನಪ್ರಿಯ. ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್​​ಆ್ಯಪ್ ಸಹಾಯ ಮಾಡುತ್ತದೆ.

Continue Reading

LATEST NEWS

123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

Published

on

ದೆಹಲಿ: ಭಾರತೀಯ ಹವಾಮಾನ ಇಲಾಖೆ ಮೇ ತಿಂಗಳ ಹವಾಮಾನ ಮುನ್ಸೂಚನೆ ಬಿಡುಗಡೆ ಮಾಡಿದ್ದು ಇದೀಗ ಅಚ್ಚರಿ ಮೂಡಿಸಿದೆ. 1901ರ ನಂತರ ಏಪ್ರಿಲ್‌ನಲ್ಲಿ ಇಷ್ಟೊಂದು ತಾಪಮಾನವನ್ನು ದಾಖಲಿಸಿರುವುದು ಇದೇ ಮೊದಲು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

havamana

ಎಲ್ಲಾ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಎಪ್ರಿಲ್‌ ತಿಂಗಳಿನಲ್ಲಿ ಹೆಚ್ಚು ತಾಪಮಾನ ದಾಖಲಾಗಿದೆ. ದೇಶದಲ್ಲಿ 1901ರ ನಂತರ ಇದೇ ಮೊದಲ ಬಾರಿಗೆ ಹೆಚ್ಚು ತಾಪಮಾನ ಏರಿಕೆಯಾಗಿರುವುದು. ಎಪ್ರಿಲ್ ತಿಂಗಳಿನಲ್ಲಿ ಕೆಲವು ಕಡೆ ಆಲಿಕಲ್ಲು ಸಹಿತೆ ಮಳೆ ಬಂದಿದ್ದು, ಮೇ ತಿಂಗಳಿನಲ್ಲಿ ಹೆಚ್ಚಿನ ಉರಿಬಿಸಿಲು, ಶಾಖ ಮತ್ತು ಆಲಿಕಲ್ಲು ಮುಂದವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಇನ್ನು ಮೇ ತಿಂಗಳಿನಲ್ಲಿ ಬಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದ್ದು, ಇನ್ನು 11 ದಿನಗಳ ಕಾಲ ಬಿಸಿಗಾಳಿ ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಮುಂದೆ ಓದಿ..; ನಾಯಿಗಳಿಗೂ ಬಂತು ಆಧಾರ್‌ ಕಾರ್ಡ್‌.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?

ಏಪ್ರಿಲ್ 5 ರಿಂದ 7 ರವರೆಗೆ, ನಂತರ 15 ರಿಂದ 30 ರವರೆಗೆ ಹೆಚ್ಚಿನ ತಾಪಮಾನ ಮತ್ತು ಆಲಿಕಲ್ಲು ಮಳೆಯಾಗಿದೆ. ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಏಪ್ರಿಲ್ ತಿಂಗಳಲ್ಲಿ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಸರಾಸರಿ ಕನಿಷ್ಠ ತಾಪಮಾನ 28.12 ಡಿಗ್ರಿ ಸೆಲ್ಸಿಯಸ್ ಎಂದು ಮೊಹಾಪಾತ್ರ ಹೇಳಿದ್ದಾರೆ. ದಕ್ಷಿಣ ಪರ್ಯಾಯ ದ್ವೀಪದ ಭಾರತದಲ್ಲಿ 1980 ರ ದಶಕದಿಂದಲೂ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ ಎಂದು ಅವರು ವರದಿ ಮಾಡಿದ್ದಾರೆ.

ಮುಂದಿನ 11 ದಿನದ ಶಾಖದ ಅಲೆ, ಆಲಿಕಲ್ಲು ಮಳೆ:

ದಕ್ಷಿಣ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಮರಾಠವಾಡ ಮತ್ತು ಗುಜರಾತ್‌ನಲ್ಲಿ ಮೇ ತಿಂಗಳಲ್ಲಿ 8-11 ದಿನಗಳವರೆಗೆ ಶಾಖದ ಅಲೆಗಳು ಇರಬಹುದೆಂದು ಮಹಾಪಾತ್ರ ಹೇಳಿದ್ದಾರೆ. ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಛತ್ತೀಸ್‌ಗಢ, ಆಂತರಿಕ ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಒಳಭಾಗ ಕರ್ನಾಟಕ, ತೆಲಂಗಾಣದಲ್ಲಿ 5-5 ವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಉತ್ತರ ಭಾರತ, ಮಧ್ಯ ಭಾರತ ಮತ್ತು ಪೆನಿನ್ಸುಲಾರ್ ಭಾರತದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು ಮೂರು ದಿನಗಳ ಕಾಲ ಆಲಿಕಲ್ಲು ಮಳೆಯಾಗುತ್ತದೆ ಎಂದು ಹೇಳಿದ್ದಾರೆ.

Continue Reading

LATEST NEWS

Trending