Connect with us

bengaluru

ಯಪ್ಪಾ…ಗೋಬಿಮಂಚೂರಿಗೆ ಇದೆಂಥಾ ಪವರ್: ತಿನ್ಬೇಡ ಅಂದಿದಕ್ಕೆ ಅಜ್ಜಿಯನ್ನೇ ಕೊಂದಿದ್ದ ಪಿಯು ಟಾಪರ್-5ವರ್ಷದ ನಂತರ ಆರೋಪಿಗಳು ಅರೆಸ್ಟ್

Published

on

ಬೆಂಗಳೂರು: ಐದು ವರ್ಷಗಳ ಹಿಂದೆ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸಿದ ಗೋಬಿ ಮಂಚೂರಿ ವಿಷಯದಲ್ಲಿ ನಡೆದಿದ್ದ ವೃದ್ಧೆ ಶಾಂತಕುಮಾರಿ ಕೊಲೆ ಪ್ರಕರಣವನ್ನು ಕೆಂಗೇರಿ ಪೊಲೀಸರು ಕೊನೆಗೂ ಬೇಧಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸಸ್ವಿಯಾಗಿದ್ದಾರೆ.

ಪ್ರಕರಣದ ಸಂಬಂಧ ಕೊಲೆಯಾದ ವೃದ್ಧೆಯ ಮಗಳು, ಮೊಮ್ಮಗ‌ರಾಗಿದ್ದ ತಾಯಿ-ಮಗ ಹಾಗೂ ಮತ್ತೊಬ್ಬ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.


ಪ್ರಕರಣ ಭೇದಿಸುವ ಮುನ್ನ ಆರೋಪಿಗಳ ಬಂಧನಕ್ಕೆ ಪೊಲೀಸರು ವಿವಿಧ ತಂಡ ರಚಿಸಿ ತನಿಖೆ ನಡೆಸಿದರೂ, ಪ್ರಕರಣದ ಮೂರನೇ ಆರೋಪಿ ಹೊರತುಪಡಿಸಿ ಮುಖ್ಯ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದರು.

ತಾರ್ಕಿಕ ಅಂತ್ಯ ಕಾಣದೆ ದೂಳು ಹಿಡಿದಿದ್ದ ಪ್ರಕರಣವನ್ನು ಮತ್ತೆ ಸವಾಲಾಗಿ ಸ್ವೀಕರಿಸಿ ಕೆಂಗೇರಿ ಠಾಣೆಯ ಇನ್‌ ಸ್ಪೆಕ್ಟರ್ ವಸಂತ್ ನೇತೃತ್ವದ ತಂಡ, ತಾಯಿ ಶಾಂತಕುಮಾರಿ ಕೊಲೆಗೈದ ಆರೋಪದಡಿ ಶಶಿಕಲಾ (46), ಆಕೆಯ ಮಗ ಸಂಜಯ್ (26) ಎಂಬುವರನ್ನು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬಂಧಿಸಿ ನಗರಕ್ಕೆ ಕರೆತಂದು ವಿಚಾರಣೆ ನಡೆಸಿದೆ ಎಂದು ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

2016ರಲ್ಲಿ ಮನೆಯೊಂದರಲ್ಲಿ ಹತ್ಯೆಯಾದ ಶಾಂತಕುಮಾರಿ (69) ಜೊತೆಗೆ ಮಗಳು ಶಶಿಕಲಾ ಹಾಗೂ ಮೊಮ್ಮಗ ಸಂಜಯ್ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. ಶಿಸ್ತು ಹಾಗೂ ಮಡಿವಂತಿಕೆಯನ್ನು ಶಾಂತಕುಮಾರಿ ಬೆಳೆಸಿಕೊಂಡಿದ್ದರು.

ಶಶಿಕಲಾ ಗೃಹಿಣಿಯಾಗಿದ್ದು, ಈಕೆಯ ಪತಿ ಹಲವು ವರ್ಷಗಳ ಹಿಂದೆ ಮೃತರಾಗಿದ್ದರು. ಪುತ್ರ ಸಂಜಯ್ ಖಾಸಗಿ ಕಾಲೇಜಿನಲ್ಲಿ ಏರೊನಾಟಿಕಲ್ ಇಂಜಿನಿಯರ್ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ.

ಪ್ರತಿಭಾವಂತನಾಗಿದ್ದ ಈತ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದಿದ್ದ. 2016 ಆಗಸ್ಟ್ ನಲ್ಲಿ ಕಾಲೇಜು ಮುಗಿಸಿ ಸಂಜಯ್, ಮನೆಗೆ ಬಂದು ಗೋಬಿಮಂಜೂರಿ ತಂದುಕೊಟ್ಟಿದ್ದ. ಇದನ್ನು ಯಾವುದೇ ಕಾರಣಕ್ಕೂ ತಿನ್ನಬಾರದು, ಮನೆಯವರಿಗೂ ಕೊಡಬಾರದು ಎಂದು ಬೈದು ಮೊಮ್ಮಗನ ಮೇಲೆ ಬಿಸಾಕಿದ್ದರು.

ಇದರಿಂದ ಆಕ್ರೋಶಗೊಂಡ ಸಂಜಯ್ ಅಡುಗೆ ಮನೆಯಲ್ಲಿದ್ದ ಲಟ್ಟಣಿಗೆ ತಂದು ಅಜ್ಜಿಯತ್ತ ಎಸೆದಿದ್ದು ಅದು ಬಲವಾಗಿ ತಲೆಗೆ ತಗುಲಿ ತೀವ್ರ ರಕ್ತಸ್ರಾವವಾಗಿ ಮನೆಯಲ್ಲಿ ಶಾಂತಕುಮಾರಿ ಮೃತಪಟ್ಟಿದ್ದರು.

ತನ್ನ ತಾಯಿಯನ್ನು ಮಗ ಸಂಜಯ್ ಕೊಲೆಗೈದ ವಿಚಾರ ಅರಿತುಕೊಂಡ ಶಶಿಕಲಾ, ಪೊಲೀಸರಿಗೆ ಮಾಹಿತಿ ನೀಡಲು ಮುಂದಾಗಿದ್ದರು. ಪೊಲೀಸರಿಗೆ ತಿಳಿಸಿದರೆ ನಾನು ಜೈಲಿಗೆ ಹೋಗುವೆ. ನಿನ್ನ ಮಗನ ಭವಿಷ್ಯವನ್ನು ನೀನೆ ಹಾಳು ಮಾಡುತ್ತೀಯಾ ಎಂದು ಪೊಲೀಸರಿಗೆ ಹೇಳದಂತೆ ಸಂಜಯ್ ಗೋಗರಿದಿದ್ದ.
ಮಗನ ಮೇಲಿನ ಅತಿಯಾದ ಪ್ರೀತಿಗೆ ಶಶಿಕಲಾ ಒಪ್ಪಿಕೊಂಡಿದ್ದರು.

ಮನೆಯಿಂದ ಶವ ಹೊರತೆಗೆಯುವುದು ಅಸಾಧ್ಯವೆಂದು ನಿರ್ಧರಿಸಿ ಸ್ನೇಹಿತ ಕುಂಬಳಗೋಡಿನ ನಿವಾಸಿ ನಂದೀಶ್ ಗೆ ಸಂಜಯ್ ವಿಷಯ ತಿಳಿಸಿ ಮನೆಗೆ ಕರೆಯಿಸಿಕೊಂಡಿದ್ದ. ಮೂವರು ಒಟ್ಟುಗೂಡಿ ಮನೆಯ ಕಬೋರ್ಡ್ ನಲ್ಲಿ ಶವ ಬಚ್ಚಿಟ್ಟಿದ್ದರು.

ವಾಸನೆ ಬರದಿರಲು ಕೆಮಿಕಲ್ಸ್ ಹಾಕಿದ್ದರು. ಬಳಿಕ ಮನೆಯೊಳಗೆ ಗೋಡೆ ಕೊರೆದು ಶವವಿಟ್ಟು ಸಿಮೆಂಟ್ ನಿಂದ ಪ್ಲಾಸ್ಟರಿಂಗ್ ಮಾಡಿ ಬಣ್ಣ ಬಳಿದಿದ್ದರು. ಕೆಲ ತಿಂಗಳ ಬಳಿಕ ಊರಿಗೆ ಹೋಗಿಬರುವುದಾಗಿ ಹೇಳಿ ಮನೆ ಮಾಲೀಕರಿಗೆ ತಿಳಿಸಿ ಪರಾರಿಯಾಗಿದ್ದರು.

ಆರು ತಿಂಗಳಾದರೂ ಊರಿಗೆ ಹೋಗಿದ್ದ ಅಮ್ಮ-ಮಗ ಮನೆಗೆ ಬಾರದೆ ಅನುಮಾನಗೊಂಡ ಮನೆ ಮಾಲೀಕರು, ಮನೆ ರಿಪೇರಿ ಮಾಡಿಸಲು 2017 ಮೇ. 7 ರಂದು ಮನೆಯೊಳಗೆ ಪ್ರವೇಶಿಸಿದ್ದರು. ಈ ವೇಳೆ ಹೂತು ಹಾಕಿದ್ದ ಗೋಡೆ ಬಳಿ ರಕ್ತಸಿಕ್ತವಾಗಿದ್ದ ಬಿದ್ದಿದ್ದ ಸೀರೆಯನ್ನು ಗಮನಿಸಿದ್ದರು. ಮನೆಯಲ್ಲಿ ವಾಸವಾಗಿದ್ದ ವೃದ್ಧೆಯೂ ಕಾಣದಿದ್ದಾಗ ಸಂಶಯಗೊಂಡು ಕೂಡಲೇ ಆಗಿನ ಇನ್ಸ್ಪೆಕ್ಟರ್ ಗಿರಿರಾಜ್ ಅವರ ಗಮನಕ್ಕೆ ತಂದಿದ್ದರು.

ಸ್ಥಳಕ್ಕೆ ದೌಡಾಯಿಸಿ ಮನೆಯಲ್ಲಿ ಶೋಧಿಸಿದಾಗ ಸಂಜಯ್ ಬಿಟ್ಟುಹೋಗಿದ್ದ ಮೊಬೈಲ್ ಪತ್ತೆಯಾಗಿತ್ತು. ಕರೆ ವಿವರ ಪರಿಶೀಲಿಸಿದಾಗ ನಂದೀಶ್ ಮೊಬೈಲ್ ನಂಬರ್ ತಳಕುಹಾಕಿಕೊಂಡಿತ್ತು.

ಈತನ ಜಾಡು ಹಿಡಿದು ಹೊರಟ ಪೊಲೀಸ್ ತಂಡ, ನಂದೀಶ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ವೃದ್ಧೆಯನ್ನು ಕೊಲೆ ಮಾಡಿ ಶವವನ್ನು ಗೋಡೆಯಲ್ಲಿ ಅವಿತಿಟ್ಟಿರುವ ಸಂಗತಿ ಬಯಲಾಗಿತ್ತು. ಆರೋಪಿ ಹೇಳಿಕೆ ಆಧರಿಸಿ ಗೋಡೆ ಕೊರೆದು ಪರಿಶೀಲಿಸಿದಾಗ ವೃದ್ಧೆಯ ಕಳೇಬರ ಪತ್ತೆಯಾಗಿತ್ತು.

ವೃದ್ಧೆಯ ಕೊಲೆ ನಂತರ ಬಂಧನ ಭೀತಿಯಿಂದ ತಾಯಿ-ಮಗ ಮಾಲೀಕರ ಬಳಿ ಸಂಬಂಧಿಕರಿಗೆ ಹುಷಾರಿಲ್ಲ ಎಂದು ಮನೆ ತೊರೆದಿದ್ದರು.

ಆರೋಪಿಗಳು ಹುಟ್ಟೂರಾದ ಶಿವಮೊಗ್ಗದ ಸಾಗರಕ್ಕೆ ತೆರಳಿದ್ದರು. ನಂತರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ತಲೆಮರೆಸಿಕೊಂಡಿದ್ದರು.

ಕೊಲೆ ಆರೋಪದಲ್ಲಿ ಶಿಕ್ಷೆಗೆ ಒಳಗಾಗದೆ ಗೆದ್ದೆವು ಎಂಬ ಸಂಭ್ರಮದಲ್ಲಿರಬೇಕಾದರೆ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ತಾಂತ್ರಿಕ ಆಯಾಮದಲ್ಲಿ ತನಿಖೆ ನಡೆಸಿದಾಗ ಸಿಕ್ಕ ಸುಳಿವಿನಿಂದ ಕೊಲ್ಲಾಪುರದಲ್ಲಿ ಅಡಗಿದ್ದ ತಾಯಿ-ಮಗನನ್ನು ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ

bengaluru

ಸಂಸದ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕ*ರಣಕ್ಕೆ ಟ್ವಿಸ್ಟ್..! ಎಸ್‌ಐಟಿ ರಚನೆ!!

Published

on

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣ ಭಾರೀ ಸದ್ದು ಮಾಡುತ್ತಿದೆ.  ಪ್ರಜ್ವಲ್ ಸಾವಿರಾರು ಹೆಣ್ಣುಮಕ್ಕಳ ಮೇಲಿನ ಲೈಂ*ಗಿಕ ದೌರ್ಜ*ನ್ಯ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ರವಿವಾರ ಪ್ರಕರಣ ದಾಖಲಾಗಿದೆ.

prajwal

47 ವರ್ಷದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ. ಈ ಹಿಂದೆ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ನೀಡಿದ ದೂರಿನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ತಂದೆ ಎಚ್‌ಡಿ ರೇವಣ್ಣ ಅವರನ್ನು ಎ1 ಆರೋಪಿಯಾಗಿ ನಮೂದಿಸಿದ್ದು, ಎ2 ಪ್ರಜ್ವಲ್ ರೇವಣ್ಣ ಆಗಿದ್ದಾರೆ. ದೂರಿನಲ್ಲಿ ಏನಿದೆ ಅಂದರೆ… ನಮ್ಮ ಪತಿಗೆ ಎಚ್‌ಡಿ ರೇವಣ್ಣ ತಮ್ಮ ಡೇರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ 2015ರಲ್ಲಿ ಹಾಸ್ಟೆಲ್‌ ಒಂದರಲ್ಲಿ ಅಡುಗೆ ಕೆಲಸಕ್ಕೆ ಸೇರಿಸಿದ್ದರು. ನಂತರ ತಮ್ಮ ಮನೆಯಲ್ಲಿ ಅಡುಗೆ ಕೆಲಸಕ್ಕೆ ಬರುವಂತೆ ರೇವಣ್ಣ ಹೇಳಿದ್ದರು. ಅಡುಗೆ ಕೆಲಸಕ್ಕೆ ಸೇರಿಕೊಂಡ ಬಳಿಕ ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದ ವೇಳೆ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಅಡುಗೆ ಮನೆಗೆ ಬಂದು ಪ್ರಜ್ವಲ್ ಸಹ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಪ್ರಜ್ವಲ್ ರೇವಣ್ಣ ಅಸಭ್ಯವಾಗಿ ವರ್ತಿಸಿದ್ದಾರೆ. ನನ್ನ ಮಗಳಿಗೂ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸಿದ್ದಾರೆ. ಪದೇ ಪದೇ ಕಾಲ್ ಮಾಡಿದ್ದಕ್ಕೆ ಪುತ್ರಿ ಪ್ರಜ್ವಲ್ ನಂಬರ್ ಬ್ಲಾಕ್ ಮಾಡಿದ್ದರು. ಲೈಂಗಿಕ ಕಿರುಕುಳ ಹೆಚ್ಚಾದಾಗ ಕೆಲಸಬಿಟ್ಟು ಹೋಗಿದ್ದೆ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿದ್ದಾರೆ.  ಸದ್ಯ ಪೆನ್‌ಡ್ರೈವ್ ವಿವಾದದಲ್ಲಿರುವ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು  ಜರ್ಮನಿ ಸೇರಿದ್ದಾರೆ ಎಂದು ಹೇಳಲಾಗಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಹಾಸನದಲ್ಲಿ ಏಪ್ರಿಲ್ 26 ರಂದು ನಡೆದಿದೆ. ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದಾರೆ.

ಮುಂದೆ ಓದಿ..; ಲೈಂ*ಗಿಕ ದೌರ್ಜ*ನ್ಯ ಆರೋಪ : ವಿಕಿಪೀಡಿಯಾದಲ್ಲಿ ಸೇವ್ ಆಯ್ತು ಪ್ರಜ್ವಲ್ ರೇವಣ್ಣ ಕೇಸ್!

ಎಸ್‌ಐಟಿಗೆ ನೀಡುವುದಾಗಿ ಗೃಹಸಚಿವರಿಂದ ಸೂಚನೆ:

ಚುನಾವಣೆಗೆ ಎರಡು ದಿನಗಳು ಬಾಕಿ ಉಳಿದಿರುವಾಗ ಈ ವಿಡಿಯೊ ದೃಶ್ಯಾವಳಿಗಳ ತುಣುಕುಗಳ ಪೆನ್‌ಡ್ರೈವ್‌ಗಳು ಹಾಸನದಾದ್ಯಂತ ವೈರಲ್ ಆಗಿತ್ತು. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ನೀಡುವುದಾಗಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

Continue Reading

bengaluru

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!

Published

on

ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ನಡೆಸುತ್ತಿದ್ದ ಕಸ್ಟಮ್ಸ್ ಅಧಿಕಾರಿಗಳು ಶಾಕ್ ಗೆ ಒಳಗಾಗಿದ್ದಾರೆ. ಯಾಕೆಂದರೆ, ಪ್ರಯಾಣಿಕನೊಬ್ಬನ ಬ್ಯಾಗ್ ನಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 10 ಅನಕೊಂಡಾ ಪತ್ತೆಯಾಗಿವೆ. ಆತ ಬ್ಯಾಂಕಾಕ್​ನಿಂದ ಅಕ್ರಮವಾಗಿ 10 ಅನಕೊಂಡಾ ಹಾವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬ್ಯಾಂಕಾಕ್​ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್​ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.

ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡಾ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.

ಇದನ್ನೂ ಓದಿ : ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Continue Reading

bangalore

ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

Published

on

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶಿಸಿ ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ.

ishwarappaishwarappa

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್‌ ಈಶ್ವರಪ್ಪ, ತಮ್ಮ ನಾಮಪತ್ರವನ್ನು ಹಿಂಪಡೆಯಲು ನಿನ್ನೆ(ಎ.22) ಕೊನೆಯ ದಿನವಾಗಿತ್ತು. ಆದರೆ, ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಆರು ವರ್ಷಗಳ ಕಾಲ ಅವರು ಬಿಜೆಪಿ ಪಕ್ಷದಡಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.

ಮುಂದೆ ಓದಿ..; ಚೌಟ ಪರ ಪ್ರಚಾರಕ್ಕೆ ಪುತ್ತೂರಿಗೆ ಬರಲಿದ್ದಾರೆ ಅಣ್ಣಾಮಲೈ

ಬಿಜೆಪಿ ಪಕ್ಷದಲ್ಲೇ ಇದ್ದುಕೊಂಡ ಕೆ ಎಸ್ ಈಶ್ವರಪ್ಪ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡು ನಿಂದಿಸುತ್ತಿದ್ದರು. ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ರಾಜಕಾರಣವನ್ನು ಕೆ ಎಸ್ ಈಶ್ವರಪ್ಪ ತೀವ್ರವಾಗಿ ಟೀಕಿಸುತ್ತಿದ್ದರು. ತನ್ನ ಬೆಂಬಲ ಮೋದಿ ಪ್ರಧಾನಿಗೆ ಇದೆ ಎಂದು ಹೇಳಿಕೊಂಡಿದ್ದ ಈಶ್ವರಪ್ಪ ತಾನು ಗೆದ್ದ ಬಳಿಕ ಮೋದಿಗೆ ಬೆಂಬಲ ನೀಡುವುದಾಗಿ ಹೇಳಿಕೆ ನೀಡುತ್ತಿದ್ದರು. ಆದರೆ ಇದೀಗ ಪಕ್ಷದಿಂದಲೇ ಇವರನ್ನು ಉಚ್ಛಾಟಿಸಲಾಗಿದೆ.

Continue Reading

LATEST NEWS

Trending