Connect with us

LATEST NEWS

ರಾಮೇಶ್ವರಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: ಐವರು ಸಾವು, ಏಳು ಮಂದಿ ಗಂಭೀರ

Published

on

ವಿಜಯನಗರ: ತಮಿಳುನಾಡಿನ ರಾಮೇಶ್ವರ ಕ್ಷೇತ್ರಕ್ಕೆ ತೆರಳುತ್ತಿದ್ದ ಟ್ರಾಕ್ಸ್‌ ರಸ್ತೆಯ ಮದ್ಯದ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಐವರು ಮೃತಪಟ್ಟು ಏಳು ಜನ ಗಂಭೀರ ಗಾಯಗೊಂಡ ಘಟನೆ ವಿಜಯನಗರದ ಕೂಡ್ಲಿಗಿ ತಾಲೂಕು ಬಣವಿಕಲ್ಲು ಗ್ರಾಮದ ಬಳಿ ನಡೆದಿದೆ.


ಹೊಸಪೇಟೆ ಯಿಂದ ಚಿತ್ರದುರ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ಬೆಳಗಿನ ಜಾವ 2ಗಂಟೆ ಸಮಯದಲ್ಲಿ ಈ ಅಪಘಾತ ನಡೆದಿದೆ.

ಟ್ರ್ಯಾಕ್ಸ್ ನಲ್ಲಿದ್ದ 3ಜನರು ಪ್ರ‍ಾರಂಭದಲ್ಲಿ ಮೃತಪಟ್ಟಿದ್ದು, ನಂತರ ಮೃತರ ಸಂಖ್ಯೆ 5ಕ್ಕೇರಿದೆ. ಉಳಿದ 7 ಜನರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.


ಇವರು ವಿಜಾಪುರ ಜಿಲ್ಲೆ ನಿಡಗುಂದಿ ಗ್ರಾಮದವರಾಗಿದ್ದು, ತಮಿಳು ನಾಡಿನ ರಾಮೇಶ್ವರ ಕ್ಷೇತ್ರಕ್ಕೆ ತೆರಳಿದ್ದರೆನ್ನಲಾಗಿದೆ.

ವಾಹನ ಚಾಲಕ ವಾಹನವನ್ನು ಅತಿವೇಗವಾಗಿ ಚಲಾಯಿಸಿದ ಪರಿಣಾಮ ವಾಹನ ರಸ್ತೆಯ ಮದ್ಯದ ತಡೆಗೋಡೆಗೆ ಡಿಕ್ಕಿ ಹೊಡೆದು ರಸ್ತೆಯ ಬದಿಗೆ ಪಲ್ಟಿ ಹೊಡೆದಿದೆ.

ಅಪಘಾತದಲ್ಲಿ ಸಾವನ್ನಪ್ಪಿದವರನ್ನು ನಿಡಗುಂದಿ ಸಿದ್ದಯ್ಯ ಕಾಳಗಿ(42), ಕಲ್ಲವ್ವ(60), ಲಕ್ಷ್ಮೀಬಾಯಿ(60), ಕಿರಶಹಾಳ್ ಗ್ರಾಮದ ಕಂತವ್ವ(50), ಆಲಮಟ್ಟಿ ಗ್ರಾಮದ ನೀಲಮ್ಮ(54) ಎಂದು ತಿಳಿಯಲಾಗಿದೆ.


ಗಂಭೀರ ಗಾಯಗೊಂಡವರು ಬಸವನಬಾಗೇವಾಡಿಯ ಬಸಮ್ಮ, ನಿಡಗುಂದಿಯ ನಿರ್ಮಲ, ಭೀಮೇಶಪ್ಪ, ಅನಸೂಯಾ, ಕಿರುಶಾಳ್ ರೇಣುಕಾ,ಸುಮಂಗಳಾ, ಸಿದ್ನಾಳ ಮಹಾನಂದೆಮ್ಮ,ತಿಪ್ಪಮ್ಮ, ಅಬ್ಯಾಳ್ ಶಂಕ್ರಮ್ಮ ತೀವ್ರ ಗಾಯಗೊಂಡಿದ್ದಾರೆ ಇವರೆಲ್ಲರೂ ವಿಜಯಪುರ ಜಿಲ್ಲೆಯವರಾಗಿದ್ದಾರೆ.

ಗಾಯಾಳು ನಿರ್ಮಲ ನೀಡಿದ ದೂರಿನಂತೆ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಘಟನಾ ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ ಜಿ.ಹರೀಶ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

LATEST NEWS

ಅರೆಬೈಲ್ ಘಾಟ್‌ನಲ್ಲಿ ತರಕಾರಿ ತುಂಬಿದ್ದ ಲಾರಿ ಪಲ್ಟಿ: 9 ಜನರ ಸಾವು

Published

on

ಮಂಗಳೂರು/ಕಾರವಾರ : ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ಸಮೀಪ ತರಕಾರಿ ತುಂಬಿದ್ದ ಲಾರಿ ಬುಧವಾರ ನಸುಕಿನ ಜಾವ ಪಲ್ಟಿಯಾಗಿ, ಅದರಲ್ಲಿದ್ದ 9 ಮಂದಿ ಮೃತಪಟ್ಟಿದ್ದಾರೆ.

 

ಲಾರಿಯಲ್ಲಿ ತರಕಾರಿ ದಾಸ್ತಾನಿನ ಜೊತೆಗೆ 25ಕ್ಕೂ ಹೆಚ್ಚು ವ್ಯಾಪಾರಿಗಳು ಪ್ರಯಾಣಿಸುತ್ತಿದ್ದರು. ಇವರೆಲ್ಲಾ ಕುಮಟಾದಲ್ಲಿ ನಡೆಯುವ ವಾರದ ಸಂತೆಗೆ ಹಾವೇರಿ ಜಿಲ್ಲೆಯ ಸವಣೂರಿನಿಂದ ಯಲ್ಲಾಪುರ ಮಾರ್ಗವಾಗಿ ತರಕಾರಿ ಸಾಗಿಸುವ ವೇಳೆ ಈ ದುರ್ಘಟನೆ ನಡೆದಿದೆ. ಮೃತರೆಲ್ಲರೂ ತರಕಾರಿ ವ್ಯಾಪಾರಿಗಳು ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ತಪ್ಪಿಸಿಕೊಳ್ಳಲು ಯತ್ನಿಸಿದ ಬ್ಯಾಂಕ್ ದರೋಡೆ ಆರೋಪಿ ಕಾಲಿಗೆ ಗುಂಡು..!

ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕಕ್ಕೆ ಲಾರಿ ಉರುಳಿದ ಪರಿಣಾಮ 9 ಮಂದಿ ಮೃತಪಟ್ಟಿದ್ದು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ಅವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದೆ ಎಂದು ಯಲ್ಲಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.

Continue Reading

DAKSHINA KANNADA

ತಪ್ಪಿಸಿಕೊಳ್ಳಲು ಯತ್ನಿಸಿದ ಬ್ಯಾಂಕ್ ದರೋಡೆ ಆರೋಪಿ ಕಾಲಿಗೆ ಗುಂಡು..!

Published

on

ಮಂಗಳೂರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಯನಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಓರ್ವನಿಗೆ ಪೊಲೀಸರು ಹಾರಿಸಿದ ಗುಂಡು ಕಾಲಿಗೆ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಜ.17ರಂದು ನಡೆದ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

     ಆರೋಪಿ ರಾಜೇಂದ್ರನ್

ತಮಿಳುನಾಡು ಸಮೀಪದ ಪದ್ಮನೇರಿ ಗ್ರಾಮದಲ್ಲಿ ಬಂಧಿಸಿ ಕರೆತರಲಾಗಿದ್ದು ಇಂದು ಸ್ಥಳ ಮಹಜರು ನಡೆಸಲಾಗಿದೆ. ಸಿಸಿಬಿ ಪೊಲೀಸರು ಹಾಗೂ ಉಳ್ಳಾಲ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಣಿವಣ್ಣನ್‌ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸಿಸಿಬಿ ಇನ್‌ಸ್ಪೆಕ್ಟರ್‌ ರಫೀಕ್‌ ಅವರು ಆತನ ಕಾಲಿಗೆ ಗುಂಡು ಹಾರಿಸಿ ಮತ್ತೆ ವಶಕ್ಕೆ ಪಡೆದುಕೊಂಡರು ಎಂದು ತಿಳಿದು ಬಂದಿದೆ.

ಪ್ರಮುಖ ಆರೋಪಿ ಮುರಗಂಡಿ ತೇವರ್

ಗುಂಡೇಟಿನಿಂದ ಗಾಯಗೊಂಡಿದ್ದ ಆರೋಪಿಯನ್ನು ಪೊಲೀಸರು ನಗರದ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Continue Reading

DAKSHINA KANNADA

ಗೋವುಗಳ ಮೇಲಿನ ಪೈಶಾಚಿಕ ಕೃ*ತ್ಯ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Published

on

ಮಂಗಳೂರು : ಬೆಂಗಳೂರಿನ ಚಾಮರಾಜನಗರದಲ್ಲಿ ಹಿಂದುಗಳು ಆರಾಧಿಸುವ ಗೋಮಾತೆಯ ಕೆಚ್ಚಲನ್ನು ಕತ್ತರಿಸಿ ವಿ*ಕೃತಿ ಮೆರೆದಿರುವುದು ಹಾಗೂ ನಂಜನಗೂಡಿನಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ದಾನವಾಗಿ ನೀಡಿದ್ದ ಹಸುವಿನ ಮೇಲೆ ದುಷ್ಟರು ಮಾ*ರಕಾಸ್ತ್ರದಿಂದ ದಾ*ಳಿ ಮಾಡಿ ಹಸುವಿನ ಬಾಲವನ್ನು ಕತ್ತರಿಸಿ ಪೈಶಾಚಿಕ ಕೃ*ತ್ಯ ನಡೆಸಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಗೋ ಸಂರಕ್ಷಣಾ ಸಂವರ್ಧನಾ ಸಮಿತಿಯಿಂದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಗೆ ವಿಶ್ವ ಹಿಂದು ಪರಿಷತ್‌ ಸೇರಿದಂತೆ ಹಲವು ಹಿಂದು ಪರ ಸಂಘಟನೆಗಳು ಸಾಥ್‌ ನೀಡಿದ್ದವು. ಮೊದಲಿಗೆ ಗೋವಿಗೆ ವಿಶೇಷ ಪೂಜೆ ಮಾಡುವ ಮೂಲಕ ಗೋವನ್ನು ಪೂಜಿಸಲಾಯಿತು.

ಬಳಿಕ ನಡೆದ ಸಭೆಯಲ್ಲಿ ಸಂಸದ ಬ್ರಿಜೇಶ್ ಚೌಟ  ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದುಗಳು ಪವಿತ್ರ ಎಂದು ಪೂಜಿಸುವ ಗೋವಿನ ಮೇಲೆ ನಿರಂತರವಾಗಿ ದೌರ್ಜ*ನ್ಯ ದಬ್ಬಾಳಿಕೆ ನಡೆಯುತ್ತಿದೆ. ಯಾವುದೇ ಜನಪ್ರತಿನಿಧಿಗಳು ಕೂಡ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರು ಇಲ್ಲಿ ದೇವಸ್ಥಾನಕ್ಕೆ ಹೋಗಿ ಗಂಧಪ್ರಸಾದ ಸ್ವೀಕರಿಸುತ್ತಾರೆ. ಆದರೆ ಗೋವಿನ ಮೇಲೆ ದೌರ್ಜ*ನ್ಯ ನಡೆದಾಗ ತಮ್ಮ ಬಾಯಿ ಬಿಚ್ಚುತ್ತಿಲ್ಲ ಎಂದು ಟೀಕಿಸಿದರು.

ಪ್ರತಿಭಟನೆಯಲ್ಲಿ ವಿಶ್ವ ಹಿಂದು ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಶರಣ್ ಪಂಪ್‌ವೆಲ್, ಶಿವಾನಂದ ಮೆಂಡನ್‌, ಗೋಪಾಲ್ ಕುತ್ತಾರ್ ಮೊದಲಾದವರು ಭಾಗಿಯಾಗಿದ್ದರು.

Continue Reading

LATEST NEWS

Trending

Exit mobile version