Connect with us

LATEST NEWS

ಮೃಗಾಲಯದ ಸಿಂಹಕ್ಕೆ ಪ್ರವಾಸಿಗ ಬಲಿ..!

Published

on

ತಿರುಪತಿ: ಮೃಗಾಲಯದಲ್ಲಿ ಸಿಂಹಕ್ಕೆ ಆಹಾರ ನೀಡುವ ವೇಳೆ ಪಂಜರದಿಂದ ಹೊರಬಂದ ಸಿಂಹ ಪ್ರವಾಸಿಗನೊಬ್ಬನ ಜೀವ ಬಲಿ ಪಡೆದುಕೊಂಡ ಘಟನೆ ಆಂದ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿನ ತಿರುಪತಿಯ ಎಸ್‌ವಿ ಮೃಗಾಲಯದಲ್ಲಿ ನಡೆದಿದೆ.

ಮೃಗಾಲಯದಲ್ಲಿ ಕುಮಾರ್ ಹಾಗೂ ಡೊಗಲಾಪುರ ಎಂಬ ಎರಡು ಗಂಡು ಹಾಗೂ ಸುಂದರಿ ಒಂದು ಹೆಣ್ಣು ಸಿಂಹವಿದೆ. ಮುಂಜಾನೆ ಎಂಟರಿಂದ ಸಂಜೆ ಐದು ಗಂಟೆಯ ವರೆಗೆ ಈ ಸಿಂಹಗಳನ್ನು ಪ್ರವಾಸಿಗರು ವೀಕ್ಷಿಸಲು ಅನುಕೂಲವಾಗಲು ಹೊರಬಿಡಲಾಗುತ್ತದೆ. ಗುರುವಾರ ಸಂಜೆಯ ವೇಳೆ ಸಿಂಹಗಳಿಗೆ ಆಹಾರ ನೀಡುವ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪ್ರವಾಸಕ್ಕೆ ಬಂದಿದ್ದ ರಾಜಸ್ಥಾನ ಮೂಲದ  ಪ್ರಹ್ಲಾದ್  (31)ಎಂಬಾತ ಸಿಂಹದ ದಾಳಿಗೆ ಬಲಿಯಾಗಿದ್ದಾನೆ. ಸೆಲ್ಫಿ ತೆಗೆಯಲು ಇಲ್ಲಾ ಆತ್ಮಹತ್ಯೆಯ ಉದ್ದೇಶದಿಂದ ಆತ ಸಿಂಹದ ಬೋನ್ ಒಳಗೆ ಪ್ರವೇಶಿಸಿದ್ದ ಎನ್ನಲಾಗಿದೆ. ಸಿಂಹದ ಆರೈಕೆ ಮಾಡುತ್ತಿದ್ದ ಸಿಬ್ಬಂದಿ ಸಿಂಹಕ್ಕೆ ಆಹಾರ ನೀಡಲು ಕೇಜ್ ಓಪನ್ ಮಾಡಿ ಒಳ ಹೋಗಿದ್ದ. ಈ ವೇಳೆ ಪ್ರಹ್ಲಾದ್ ಸಿಂಹ ಇದ್ದ ಆವರಣದ ಒಳಕ್ಕೆ ಹಾರಿದ್ದಾಗಿ ಹೇಳಲಾಗಿದೆ. ಈ ಬಗ್ಗೆ ಅರಣ್ಯ ಇಲಾಕೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಿಂಹವು ಪ್ರಹ್ಲಾದ್ ನನ್ನು ಹಿಗ್ಗಾಮುಗ್ಗ ಎಳೆದಾಡಿ ತೀವೃವಾಗಿ ಗಾಯಗೊಳಿಸಿದೆಯಾದ್ರೂ ಆತನನ್ನು ತಿನ್ನುವ ಪ್ರಯತ್ನ ಮಾಡಿಲ್ಲ ಎಂದು ಮಾಹಿತಿ ಲಭ್ಯವಾಗಿದೆ.

2 Comments

2 Comments

  1. N KALLESHA MURTHY

    18/02/2024 at 6:53 AM

    ಸಿಂಹಗಳು ಬೋನಿನಲ್ಲಿ ಇರುವಾಗ ಮಾತ್ರ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಿ ಕೊಡಿ.

  2. Chandrakala

    19/02/2024 at 1:10 PM

    Time to time give food ….aeno zoo.li animals erbeku edhe aste…aesto waste madtira adke food kodoke agalva ….aellanu manushyrige beku andre God creatures ge badhukoke aenu bedva …

Leave a Reply

Your email address will not be published. Required fields are marked *

LATEST NEWS

Elvish Yadav Faces Money Laundering Probe: What’s the Case About?

Published

on

Lucknow: Popular YouTuber Siddharth Yadav, known as Elvish Yadav, is under investigation for alleged money laundering linked to using snake venom as a recreational drug at his parties. The Enforcement Directorate has filed a case under the Prevention of Money Laundering Act (PMLA), following an FIR and charge sheet from the Noida police regarding the snake venom case.

 

The probe aims to trace funds from the snake venom business and their potential use in organizing parties. Elvish Yadav and others involved will be questioned by the Enforcement Directorate, according to reports.

Elvish Yadav was arrested by Noida Police on March 17 in connection with the snake venom case but was later released on bail. He faces charges under various laws, including the Narcotic Drugs and Psychotropic Substances (NDPS) Act, Wildlife Protection Act, and the Indian Penal Code (IPC).

The case originated from a complaint by the NGO People for Animals (PFA) last November. Five people were arrested and released on bail after snake charmers were found with venomous snakes and vials of snake venom in a Noida banquet hall. Elvish Yadav was reportedly not present during the raid.youtuber

Continue Reading

DAKSHINA KANNADA

15 ಸಾವಿರ ಸಂಬಳ..! ಮನೆಯಲ್ಲಿ ಕಂತೆ ಕಂತೆ ನೋಟು..! ED ಅಧಿಕಾರಿಗಳೇ ಶಾಕ್..!

Published

on

ಮಂಗಳೂರು ( ಜಾರ್ಖಂಡ್‌ ): ಆತ ತಿಂಗಳಿಗೆ 15 ಸಾವಿರ ಸಂಬಳ ಪಡೆಯುವ ಒಬ್ಬ ಸಾಮಾನ್ಯ ನೌಕರ. ಆದ್ರೆ ಆತನ ಮನೆಗೆ ಇಡಿ ದಾಳಿ ಮಾಡಿ ಬರೋಬ್ಬರಿ 30 ಕೋಟಿ ಹಣವನ್ನು ಜಪ್ತಿ ಮಾಡಿದೆ. ಇದು ಜಾರ್ಖಂಡ್‌ನಲ್ಲಿ ನಡೆದ ಘಟನೆಯಾಗಿದ್ದು, ಹತ್ತು ಸಾವಿರ ಲಂಚ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದ ಇಡಿ  ಸಾಮಾನ್ಯ ನೌಕರನ ಮನಗೆ ದಾಳಿ ಮಾಡಿತ್ತು. ಅಲ್ಲಿ ಅಡಗಿಸಿಟ್ಟಿದ್ದ ಹಣ ನೋಡಿ ಇಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹಣ ಎಣಿಸಲು ಮೆಷಿನ್ ಹಾಗೂ ಹೆಚ್ಚುವರಿ ನೌಕರರನ್ನು ಮನೆಗೆ ಕರೆಸಿಕೊಂಡಿದ್ದಾರೆ.

ನೌಕರನ ಮನೆಗೆ ಲಂಚದ ಹಣ…!

ಜಾರ್ಖಂಡ್‌ ನ ಸಚಿವ ಅಲಂಗೀರ್ ಆಲಂ ಅವರ ಖಾಸಗಿ ಕಾರ್ಯದರ್ಶಿ ಮನೆ ಮೇಲೆ ರಾಂಚಿಯ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಲಂಗೀರ್ ಆಲಂ ಅವರ ಸಚಿವಾಲಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಲ್ಲಿನ ಲಂಚದ ಹಣ ನೌಕರನ ಮನೆಗೆ ಹೋಗುತ್ತದೆ ಅನ್ನೋ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸಚಿವರ ಆಪ್ತ ಕಾರ್ಯದರ್ಶಿಯ ಅಡಿಯಲ್ಲಿ ಮಾಸಿಕ 15 ಸಾವಿರಕ್ಕೆ ಕೆಲಸ ಮಾಡುತ್ತಿದ್ದ ನೌಕರನ ಮನೆಗೆ ದಾಳಿ ಮಾಡಿದಾಗ ಇಷ್ಟೊಂದು ಪ್ರಮಾಣದ ಹಣ ಪತ್ತೆಯಾಗಿದೆ.

ವಿಡಿಯೋ ನೋಡಿ :

ಹತ್ತು ಸಾವಿರ ಲಂಚದ ಹಿಂದೆ ಬಿದ್ದಿದ್ದ ಇಡಿ..!

ಕಳೆದ ವರ್ಷ ಹತ್ತು ಸಾವಿರ ರೂಪಾಯಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಇಂಜೀನಿಯರ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಇಂಜೀನಿಯರ್ ಅವರ ಹೇಳಿಕೆಯನ್ನು ದಾಖಲಿಸಿದಾಗ ಲಂಚದ ಹಣ ಸಚಿವರಿಗೆ ತಲುಪಿಸಲಾಗುತ್ತದೆ ಎಂಬ ಸ್ಪೋಟಕ ಹೇಳಿಕೆ ನೀಡಿದ್ದರು. ಬಳಿಕ ಜಾರ್ಖಂಡ್‌ನ ಗ್ರಾಮೀಣ ಅಭಿವೃದ್ದಿ ಸಚಿವ ಅಲಂಗೀರ್ ಆಲಂ ಹಾಗೂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಹೆಸರು ಮುನ್ನಲೆಗೆ ಬಂದಿತ್ತು . ಹೀಗಾಗಿ ಸಂಜೀವ್‌ ಲಾಲ್ ಅವರ ಬಳಿ ನೌಕರನಾಗಿದ್ದ ವ್ಯಕ್ತಿಯ ಮನೆಗೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!

ಜಾರ್ಖಂಡ್ ಕಾಂಗ್ರೆಸ್ ಸರ್ಕಾರದ ಸಚಿವ…!

ಅಲಂಗೀರ್ ಆಲಂ ಜಾರ್ಖಂಡ್‌ನ ಪಾಕುರ್ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈಗ ಸರ್ಕಾರದಲ್ಲಿ ಸಂಸದೀಯ ವ್ಯವಹಾರ ಮತ್ತು ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದಾರೆ. ಈ ಹಿಂದೆ 2006 ರಿಂದ 2009 ರ ವರೆಗೆ ಅವರು ಸ್ಪೀಕರ್ ಕೂಡಾ ಆಗಿದ್ದರು. 2023ರ ಡಿಸೆಂಬರ್‌ ತಿಂಗಳಲ್ಲಿ ಜಾರ್ಖಂಡ್‌ನ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಉದ್ಯಮಿ ಧೀರಜ್ ಸಾಹು ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮನೆಯಲ್ಲಿ 350 ಕೋಟಿಯಷ್ಟು ಹಣ ಪತ್ತೆಯಾಗಿತ್ತು. ಈ ವೇಳೆ ಧೀರಜ್ ಸಾಹು ಅದು ಮದ್ಯದ ವ್ಯವಹಾರದ ಹಣವಾಗಿದ್ದು, ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದರು.

Continue Reading

LATEST NEWS

ಮದುವೆಯಲ್ಲಿ ಅವಧಿ ಮುಗಿದ ಐಸ್ ಕ್ರೀಂ​ ಸೇವನೆ.. 80ಕ್ಕೂ ಹೆಚ್ಚು ಜನರು ಅಸ್ವಸ್ಥ!

Published

on

ರಾಮನಗರ: ಮದುವೆಯಲ್ಲಿ ಐಸ್ ಕ್ರೀಂ ತಿಂದು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಅಲ್ಲಿನ ಸಾತನೂರು ಸರ್ಕಲ್ ಬಳಿಯ ಟಿಪ್ಪುನಗರದ ಮಿಲನ್ ಶಾದಿ ಮಹಲ್ ನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಈ ಘಟನೆ ನಡೆದಿದ್ದು, ಪರಿಣಾಮ 80 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚನ್ನಪಟ್ಟಣದ ವಧು ಮತ್ತು ಮಾಗಡಿಯ ವರನ ವಿವಾಹ ಸಮಾರಂಭ ಮಿಲನ್ ಶಾದಿ ಮಹಲ್ ನಲ್ಲಿ ನಡೆದಿತ್ತು. ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ ಐಸ್​ ಕ್ರೀಂ ತಿಂದ ಜನರು ಇದ್ದಕ್ಕಿದ್ದಂತೆಯೇ ಅಸ್ವಸ್ಥಗೊಂಡಿದ್ದಾರೆ. ಊಟದ ನಂತರ ಐಸ್ ಕ್ರೀಂ ತಿಂದ ಅರ್ಧಗಂಟೆಯಲ್ಲಿ ವಾಂತಿ, ಭೇದಿ ಶುರುವಾಗಿದೆ. 50ಕ್ಕೂ ಹೆಚ್ಚು ಜನರಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಹೆಚ್ಚಿನವರು ಚನ್ನಪಟ್ಟಣದ ಯಾರಬ್ ನಗರ ಹಾಗೂ ಕೋಟೆ ನಿವಾಸಿಗಳು ಎಂದು ಗುರುತಿಸಲಾಗಿದೆ.

ಐಸ್​ ಕ್ರೀಂ ತಿಂದು ಆಸ್ವಸ್ಥಗೊಂಡವರಲ್ಲಿ 40 ಜನರು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಉಳಿದವರು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅವಧಿ ಮುಗಿದಿದ್ದ ಐಸ್ ಕ್ರೀಂ ತಿಂದಿದ್ದೇ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.

ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿ ಅಸ್ವಸ್ಥಗೊಂಡವರ ಕುಟುಂಬಸ್ಥರು ಆಗಮಿಸಿದ್ದಾರೆ. ಎಲ್ಲರಿಗೂ ಡ್ರಿಪ್ಸ್ ಹಾಕಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

Continue Reading

LATEST NEWS

Trending