FILM
ಟಾಕ್ಸಿಕ್, ಕಾಂತಾರ ಎಫೆಕ್ಟ್; ಅರಣ್ಯದಲ್ಲಿ ಚಿತ್ರೀಕರಣಕ್ಕೆ ಹೊಸ ರೂಲ್ಸ್
Published
4 hours agoon
By
NEWS DESK4ಬೆಂಗಳೂರು/ಮಂಗಳೂರು : ಕಾಂತಾರ ಚಾಪ್ಟರ್ 1 ಮತ್ತು ಟಾಕ್ಸಿಕ್ ಸಿನಿಮಾಗಳು ಮಾಡಿರುವ ಎಡವಟ್ಟಿನಿಂದಾಗಿ ಅರಣ್ಯ ನಾಶವಾಗಿದೆ. ಇದು ಅರಣ್ಯ ಇಲಾಖೆಯ ಕೆಂಗಣ್ಣಿಗೆ ಕಾರಣವಾಗಿದೆ. ಟಾಕ್ಸಿಕ್ ಚಿತ್ರತಂಡ ಮರ ಕಡಿದ ಆರೋಪ ಎದುರಿಸಿದ್ದು, ಕಾಂತಾರ ತಂಡ ಬಾಂ*ಬ್ ಸ್ಫೋ*ಟಿಸಿ ಅರಣ್ಯ ನಾಶ ಮಾಡಿರುವ ಬಗ್ಗೆ ಭಾರೀ ದಂಡ ತೆತ್ತಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಅರಣ್ಯದಲ್ಲಿ ಚಿತ್ರೀಕರಣ ಮಾಡುವವರಿಗೆ ಹೊಸ ನಿಯಮ ಜಾರಿಗೊಳಿಸಿದೆ.
ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ ಇತ್ಯಾದಿಗಳನ್ನು ಚಿತ್ರೀಕರಿಸಲು ಅನುಮತಿ ನೀಡಲಾಗುತ್ತಿದೆ. ಇದಲ್ಲದೆ, ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇರುತ್ತದೆ. ಇದು ಪರಿಸರ ಹಾಗೂ ಜೀವವೈವಿಧ್ಯಕ್ಕೂ ಧಕ್ಕೆ ತರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ನಿಶ್ಚಿತಾರ್ಥಗೊಂಡ ಯುವತಿಯ ಆ ಒಂದು ಪ್ರಶ್ನೆಗೆ ಆತ್ಮಹ*ತ್ಯೆ ಮಾಡಿಕೊಂಡ ಯುವಕ ?
ಅರಣ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸಿ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಅರಣ್ಯ ಹಾಗೂ ವನ್ಯ ಜೀವಿಗಳನ್ನು ಉಳಿಸುವ ಹಿತದೃಷ್ಟಿಯಿಂದ ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ಅನುಮತಿ ಪಡೆಯಬೇಕು ಎಂದು ಆದೇಶಿಸಲಾಗಿದೆ.
FILM
ರೇಣುಕಾಸ್ವಾಮಿ ಕೊ*ಲೆ ಪ್ರಕರಣ : ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಹೇಳಿದ್ದೇನು?
Published
44 minutes agoon
24/01/2025By
NEWS DESK4ಮಂಗಳೂರು/ನವದೆಹಲಿ : ರೇಣುಕಾಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಐದು ಜನರಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಆದರೆ, ರಾಜ್ಯಸರ್ಕಾರ ಸಲ್ಲಿಸಿರುವ ಆಕ್ಷೇಪಣೆ ಅರ್ಜಿಯನ್ನು ಪರಿಶೀಲಿಸುವುದಾಗಿ ತಿಳಿಸಿದೆ.
ಈ ವೇಳೆ ಕರ್ನಾಟಕ ಹೈಕೋರ್ಟ್‌ನ ಜಾಮೀನು ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲ ಮತ್ತು ಆರ್.ಮಹಾದೇವನ್ ಅವರನ್ನೊಳಗೊಂಡ ಪೀಠವು ದರ್ಶನ್ ಮತ್ತು ಇತರರಿಗೆ ನೋಟೀಸ್ ಜಾರಿ ಮಾಡಿದೆ.
ಇದನ್ನೂ ಓದಿ : ಟೀ ಮಾರುವವನ ಯಡವಟ್ಟಿಗೆ 13 ಮಂದಿ ಬಲಿ
ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಅಶ್ಲೀ*ಲ ಸಂದೇಶಗಳನ್ನು ಕಳುಹಿಸಿದ್ದ. ಇದರಿಂದ ರೊಚ್ಚಿಗೆದ್ದ ದರ್ಶನ್ ಹಾಗೂ ಸಂಗಡಿಗರು ರೇಣುಕಾಸ್ವಾಮಿಯ ಹ*ತ್ಯೆ ಮಾಡಿದ್ದಾರೆಂಬ ಆರೋಪದಡಿ 7 ಮಂದಿಯನ್ನು ಬಂಧಿಸಲಾಗಿತ್ತು. ಜೂ.9 ರಂದು ರೇಣುಕಾಸ್ವಾಮಿ ಮೃ*ತದೇಹ ಬೆಂಗಳೂರಿನ ಮೋರಿಯೊಂದರಲ್ಲಿ ಪತ್ತೆಯಾಗಿತ್ತು. ಹೈಕೋರ್ಟ್ ಅಕ್ಟೋಬರ್ 30ರಂದು ದರ್ಶನ್‌ಗೆ ತೀವ್ರ ನೋವಿದೆ ಎಂಬ ಕಾರಣಕ್ಕೆ ವೈದ್ಯಕೀಯ ಆಧಾರದ ಮೇಲೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಬಳಿಕ ಡಿಸೆಂಬರ್‌ನಲ್ಲಿ ಅವರಿಗೆ ಮತ್ತು ಇತರರಿಗೆ ನಿಯಮಿತ ಜಾಮೀನು ಮಂಜೂರಾಗಿತ್ತು.
ಮಂಗಳೂರು/ಮುಂಬೈ : ತೆಲುಗು ಚಿತ್ರರಂಗದಲ್ಲಿ ವಿವಾದಗಳಿಗೆ ಕೇರಾಫ್ ಅಡ್ರೆಸ್ ರಾಮ್ ಗೋಪಾಲ್ ವರ್ಮಾ ಅಂದ್ರೆ ತಪ್ಪಾಗಲ್ಲ. ಹೆಚ್ಚಾಗಿ ಅಡಲ್ಟ್ ಸಿನಿಮಾಗಳನ್ನು ಮಾಡಿ ಯುವಜನತೆ ಗಮನಸೆಳೆದಿದ್ದರು. ಮೇಲಾಗಿ ಇವರ ಚಿತ್ರಗಳ ಮೂಲಕ ಹಲವು ನಾಯಕಿಯರು ಸ್ಟಾರ್ ಗಿರಿ ಪಡೆದಿದ್ದಾರೆ ಎನ್ನಬಹುದು. ವರ್ಮಾ ನಿರ್ದೇಶನದ ಒಂದೇ ಒಂದು ಚಿತ್ರ ಅವರ ವೃತ್ತಿಜೀವನವನ್ನು ಬದಲಾಯಿಸುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.
ಆರು ವರ್ಷಗಳ ಹಿಂದೆ ನಡೆದ ಘಟನೆಯೊಂದು ಇದೀಗ ರಾಮ್ ಗೋಪಾಲ್ ವರ್ಮಾರ ಕೊರಳಿಗೆ ಸುತ್ತಿಕೊಂಡಿದೆ. ಮುಂಬೈನ ಅಟಾರಿ ಮ್ಯಾಜಿಸ್ಟ್ರೇಟ್ ಕೋರ್ಟ್ ಇತ್ತೀಚೆಗೆ ಈ ಪ್ರಕರಣದಲ್ಲಿ ಸಂಚಲನಕಾರಿ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಆರ್‌ಜಿವಿ ತಪ್ಪಿತಸ್ಥರಾಗಿದ್ದು, ಮೂರು ತಿಂಗಳ ಜೈಲು ಶಿಕ್ಷೆಯ ನೀಡಿದೆ. ಮಂಗಳವಾರ (ಜ.21) ತೀರ್ಪು ಪ್ರಕಟವಾಗಿದೆ. ರಾಮ್‌ಗೋಪಾಲ್ ವರ್ಮಾ ಕೋರ್ಟ್‌ಗೆ ಹಾಜರಾಗಬೇಕಿತ್ತು ಆದರೆ ವರ್ಮಾ ಕೋರ್ಟ್‌ಗೆ ಹಾಜರಾಗಿಲ್ಲ. ಹೀಗಾಗಿ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ.
ಈ ಪ್ರಕರಣ ಕಳೆದ ಏಳು ವರ್ಷಗಳಿಂದ ನಡೆಯುತ್ತಿತ್ತು. ಆದರೆ ಆರ್‌ಜಿವಿಗೆ ನೋಟಿಸ್ ನೀಡಿದರೂ ಕೋರ್ಟ್‌ಗೆ ಹಾಜರಾಗಿಲ್ಲ. ಮುಂದಿನ ಮೂರು ತಿಂಗಳಲ್ಲಿ ದೂರುದಾರರಿಗೆ ಆರ್‌ಜಿವಿ ರೂ.3.72 ಲಕ್ಷ ಪರಿಹಾರ ನೀಡಲು ಕೋರ್ಟ್ ಆದೇಶ ನೀಡಿದೆ. ಪಾವತಿಸಲು ವಿಫಲವಾದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 3 ತಿಂಗಳ ಸಾದಾ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದೆ.
FILM
ಅಬ್ಬಬ್ಬಾ! 31 ಕೋಟಿಗೆ ಅಪಾರ್ಟ್ಮೆಂಟ್ ಖರೀದಿಸಿದ್ದ ಅಮಿತಾಬ್ ಬಚ್ಚನ್ ಮಾರಿದ್ದೆಷ್ಟು ರೇಟ್‌ಗೆ ಗೊತ್ತಾ!?
Published
3 days agoon
21/01/2025By
NEWS DESK4ಮಂಗಳೂರು/ಮುಂಬೈ : ಬಿಗ್ ಬಿ ಅಮಿತಾಬ್ ಬಚ್ಚನ್ ಮುಂಬೈನ ಓಶಿವಾರಾದಲ್ಲಿರುವ ತಮ್ಮ ಡುಪ್ಲೆಕ್ಸ್ ಅಪಾರ್ಟ್ಮೆಂಟ್ ಅನ್ನು ಮಾರಾಟ ಮಾಡಿದ್ದಾರೆ. ಭಾರೀ ಮೊತ್ತಕ್ಕೆ ಅಪಾರ್ಟ್ಮೆಂಟ್ ಮಾರಾಟವಾಗಿದೆ. ಹೌದು, 31 ಕೋಟಿ ಕೊಟ್ಟು ಅಪಾರ್ಟ್ಮೆಂಟ್ ಖರೀದಿಸಿದ್ದ ಬಿಗ್ ಬಿ ಈಗ ಲಾಭ ಪಡೆದಿದ್ದಾರೆ.
ಓಶಿವಾರಾದಲ್ಲಿ ಕ್ರಿಸ್ಟಲ್ ಗ್ರೂಪ್‌ನ ವಸತಿ ಸಮುಚ್ಚಯವಾದ ‘ದಿ ಅಟ್ಲಾಂಟಿಸ್’ನಲ್ಲಿ ಅಮಿತಾಬ್ ಅಪಾರ್ಟ್ಮೆಂಟ್ ಇದೆ. 2021ರ ಎಪ್ರಿಲ್‌ನಲ್ಲಿ ಈ ಅಪಾರ್ಟ್ಮೆಂಟ್ ಅನ್ನು ಅಮಿತಾಬ್ ಖರೀದಿಸಿದ್ದರು. ಅವರು 31 ಕೋಟಿ ಕೊಟ್ಟಿದ್ದರು. ಅದೇ ವರ್ಷ ನವೆಂಬರ್‌ನಲ್ಲಿ ನಟಿ ಕೃತಿ ಸನೋನ್‌ಗೆ ಭದ್ರತಾ ಠೇವಣಿ 60 ಲಕ್ಷ ಮತ್ತು ಮಾಸಿಕ 10 ಲಕ್ಷ ರೂ. ಬಾಡಿಗೆಗೆ ನೀಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ : ಮಹಿಳಾ ನಾಗಸಾಧ್ವಿಗಳು ಮುಟ್ಟಿನ ಸಮಯದಲ್ಲಿ ಏನು ಮಾಡುತ್ತಾರೆ ಗೊತ್ತಾ ?
ಈಗ ಈ ಅಪಾರ್ಟ್ಮೆಂಟ್‌ನ್ನು ಅಮಿತಾಬ್ ಬಚ್ಚನ್ 83 ಕೋಟಿಗೆ ಮಾರಾಟ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ. ನೋಂದಣಿ ಮಹಾಪರಿವೀಕ್ಷಕ ಹಾಗೂ ಮುದ್ರಾಂಕ ಆಯುಕ್ತರ(ಐಜಿಆರ್) ಪ್ರಕಾರ, ಈ ಅಪಾರ್ಟ್ಮೆಂಟ್ ಅನ್ನು 83 ಕೋಟಿ ರೂ. ಗೆ ಮಾರಾಟ ಮಾಡಲಾಗಿದೆ. ಈ ಮೂಲಕ ಅವರು ಶೇ.168ರಷ್ಟು ಲಾಭ ಪಡೆದಿದ್ದಾರೆ ಎಂದು ಹೇಳಲಾಗಿದೆ.
ಅಂದ್ಹಾಗೆ ಮುಂಬೈನ ಓಶಿವಾರಾವು ಉತ್ತಮ ಮೂಲಭೂತ ಸೌಕರ್ಯ ಹೊಂದಿರುವ ಪ್ರದೇಶ. ಆಧುನಿಕ ಜೀವನಶೈಲಿಗೆ ತಕ್ಕ ಜಾಗ. ಉತ್ತಮ ರಸ್ತೆಗಳು, ಮೆಟ್ರೋ ಸಂಪರ್ಕಗಳನ್ನು ಹೊಂದಿದೆ.
LATEST NEWS
Oyo ರೂಮ್ ನಲ್ಲಿ ಮಾಡಬಾರದನ್ನು ಮಾಡಿ ಸಿಕ್ಕಿಬಿದ್ದ ಜೋಡಿಹಕ್ಕಿ
ಶ್ರೀಲಂಕಾದಿಂದ ಧರ್ಮಸ್ಥಳಕ್ಕೆ ಆಗಮಿಸಿದ 38 ಜನರ ತಂಡ: ಬಿ.ಸಿ. ಮಾದರಿ ಅಳವಡಿಸಲು ಖಾವಂದರ ಸಲಹೆ
ಬೆಂಗಳೂರು: ಮಂತ್ರಿಮಾಲ್ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
ಕಂದಕಕ್ಕೆ ಉರುಳಿದ ಕಾರು; ಮೂವರ ದು*ರ್ಮರಣ
ಟೀ ಮಾರುವವನ ಯಡವಟ್ಟಿಗೆ 13 ಮಂದಿ ಬಲಿ
ಮಾಜಿ ಕ್ರಿಕೆಟಿಗ ಸೆಹ್ವಾಗ್-ಆರತಿ ದಾಂಪತ್ಯದಲ್ಲಿ ಬಿರುಕು ?
Trending
- BIG BOSS2 days ago
ಗೌತಮಿ-ಧನರಾಜ್ ಬೆನ್ನಲ್ಲೇ ಈ ವಾರ ಫಸ್ಟ್ ಎಲಿಮಿನೇಟ್ ಆಗೋದ್ಯಾರು ?
- BIG BOSS4 days ago
ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಘೋಷಣೆ ಮಾಡಿದ ಕಿಚ್ಚ
- BIG BOSS1 day ago
ಭಾವನೆಗಳ ಮಹಾಪೂರ ನೀನು, ಕನಸುಗಳ ಶಿಖರ ನೀನು: ಭವ್ಯಾಗೆ ತ್ರಿವಿಕ್ರಮ್ ಪ್ರಪೋಸ್
- BIG BOSS4 days ago
ಬಿಗ್ ಬಾಸ್ ಸೀಸನ್ 11ರ ವಿನ್ನರ್ ಒಬ್ಬರಲ್ಲ ಇಬ್ಬರು… ಅಷ್ಟಕ್ಕೂ ಟ್ರೋಫಿ ನೀಡಿದ ಸುಳಿವೇನು ?