Friday, July 1, 2022

ರೈತ ಹೋರಾಟದ ಘರ್ಷಣೆ:ಕಾರಿನಲ್ಲಿ ಮಲಗಿದ್ದ ಟ್ರ್ಯಾಕ್ಟರ್ ಮೆಕ್ಯಾನಿಕ್ ಸಜೀವ ದಹನ: 

ರೈತ ಹೋರಾಟದ ಘರ್ಷಣೆ:ಕಾರಿನಲ್ಲಿ ಮಲಗಿದ್ದ ಟ್ರ್ಯಾಕ್ಟರ್ ಮೆಕ್ಯಾನಿಕ್ ಸಜೀವ ದಹನ: 

ದೆಹಲಿ: ಗಡಿಭಾಗದಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ರೈತರಿಗೆ ಸಹಾಯ ಮಾಡಲೆಂದು ತೆರಳಿದ್ದ ಓರ್ವ ವ್ಯಕ್ತಿ ದಾರುಣ ಮರಣಕ್ಕೀಡಾಗಿದ್ದಾನೆ. ಕಾರಿನಲ್ಲಿ ಮಲಗಿದ್ದ ಸಮಯದಲ್ಲಿ ಕಾರಿಗೆ ಬೆಂಕಿ ತಗುಲಿದ್ದು, ಆತನ ಸಜೀವ ದಹನವಾಗಿದೆ.

ಜನಕ ರಾಜ್​ (55) ಹೆಸರಿನ ವ್ಯಕ್ತಿ ಪಂಜಾಬ್​ನ ಬರ್ನಾಲಾ ಜಿಲ್ಲೆಯ ಧನೋಲುವಾ ಗ್ರಾಮದ ಮೂಲದವನಾಗಿದ್ದು, ರೈತ ಹೋರಾಟಕ್ಕೆಂದು ಅಲ್ಲಿಂದ ದೆಹಲಿಗೆ ಬಂದಿದ್ದ. ಟ್ರ್ಯಾಕ್ಟರ್​ ಮೆಕಾನಿಕ್​ ಆಗಿದ್ದ ಆತನನ್ನು ಹೋರಾಟ ನಿರತ ರೈತರ ಟ್ರ್ಯಾಕ್ಟರ್​ಗಳನ್ನು ಸರಿ ಮಾಡಲೆಂದೇ ಕರೆಸಿಕೊಳ್ಳಲಾಗಿತ್ತು.

ಶನಿವಾರ ರಾತ್ರಿ ತನ್ನ ಕೆಲಸ ಮುಗಿಸಿದ ಆತ ಕಾರಿನಲ್ಲಿ ನಿದ್ರೆಗೆ ಜಾರಿದ್ದಾನೆ. ಈ ಸಮಯದಲ್ಲಿ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಕಾರಿನಲ್ಲಿದ್ದ ಜನಕ ರಾಜ್​ ಅಲ್ಲಿಯೇ ಸಜೀವ ದಹನವಾಗಿದ್ದಾನೆ.

ಜನಕ ರಾಜ್​ನ ದುರ್ಮರಣಕ್ಕೆ ರೈತ ಮುಖಂಡರು ಸೇರಿದಂತೆ ಅನೇಕ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ರಾಜಸ್ಥಾನ್ ಟೈಲರ್ ಹತ್ಯೆ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್...

ಮಂಗಳೂರು ನಗರ ಡಿಸಿಪಿಯಾಗಿ ಆಂಶು ಕುಮಾರ್ ನೇಮಕ

ಬೆಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.2018ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ...

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...