Connect with us

DAKSHINA KANNADA

ರಸ್ತೆಯಲ್ಲಿ ಮಕ್ಕಳಿಂದ ವ್ಯಾಪಾರ- ನ್ಯಾಯಾದೀಶೆಗೆ ಸಿಕ್ಕಿಬಿದ್ದ ಖತರ್‌ನಾಕ್ ಲೇಡಿ..!

Published

on

ಉಡುಪಿ: ಸಣ್ಣ ಮಕ್ಕಳನ್ನು ಹಿಡಿದು ದುಡ್ಡು ಮಾಡುವ ದಂಧೆ ಈಗೀಗ ಬಲು ಜೋರಾಗಿದೆ. ಅಂತರರಾಜ್ಯಗಳಿಂದ ಬರುವ ಈ ಮಹಿಳಾ ದಂಧೆಕೋರರು, ಸಣ್ಣ ಮಕ್ಕಳನ್ನು ಕಂಕುಳಲ್ಲಿಟ್ಟುಕೊಂಡು ಭಿಕ್ಷೆ ಬೇಡಿದರೆ, ಸ್ವಲ್ಪ ದೊಡ್ಡ ಪ್ರಾಯದ ಮಕ್ಕಳ ಮುಖಾಂತರ ಚಿಕ್ಕಪುಟ್ಟ ವಸ್ತುಗಳನ್ನು ಮಾರಿ ಹಣ ಮಾಡುವ ಖತರ್‌ನಾಕ್‌ಗಳು ಎಗ್ಗಿಲ್ಲದೆ ನಮಗೆ ಕಾಣ ಸಿಗ್ತಾರೆ. ಇಂತಹುದೇ ಒಂದು ಘಟನೆ ಉಡುಪಿಯಲ್ಲಿ ಕೂಡ ನಡೆದಿದೆ.

ಮಧ್ಯಾಹ್ನ ನಗರದ ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ಹೊರ ರಾಜ್ಯದ ಮಹಿಳೆಯೊಬ್ಬರು ಇಬ್ಬರು ಪುಟಾಣಿ ಮಕ್ಕಳ ಮೂಲಕ ರಸ್ತೆಯಲ್ಲಿ ಕಲಾಕೃತಿಯುಳ್ಳ ಸಣ್ಣ ಪುಸ್ತಕಗಳನ್ನು ಮಾರಾಟ ಮಾಡಿಸುತ್ತಿದ್ದರು. ಇದನ್ನು ಗಮನಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಧೀಶೆ ಶರ್ಮಿಳಾ.ಎಸ್ ತಕ್ಷಣ ಪೋಲಿಸರಿಗೆ ಮಾಹಿತಿ ನೀಡಿ, ಮಕ್ಕಳನ್ನು ರಕ್ಷಿಸಿದ್ದಾರೆ. ಹಿರಿಯ ಸಿವಿಲ್ ನ್ಯಾಯಧೀಶೆ ಮಹಿಳೆಯನ್ನು ಪ್ರಶ್ನಿಸಲು ಆರಂಭಿಸಿದಾಗ, ಕಣ್ಣೀರಿಡುತ್ತಾ ಮಾತು ಆರಂಭಿಸಿದ ಮಹಿಳೆ, ಹೊಟ್ಟೆಗೆ ತಿನ್ನಲು ಸರಿಯಾದ ವ್ಯವಸ್ಥೆ ಇಲ್ಲ. ಅದಕ್ಕಾಗಿ ಸಣ್ಣ ಕಲಾಕೃತಿಯುಳ್ಳ ಪುಸ್ತಕಗಳನ್ನು ಮಾರಾಟ ಮಾಡುತ್ತಿದ್ದೇನೆ ಎಂದು ಗದ್ಗದಿತವಾಗಿ ಉತ್ತರಿಸುತ್ತಾ ಸುತ್ತಲು ಸೇರಿದ್ದವರ ಸಿಂಪತಿಯನ್ನು ಗಿಟ್ಟಿಸಿಕೊಳ್ಳಲು ಪ್ರಯತ್ನಿಸಿದರು.

ಆದರೆ ಬೆಳಗ್ಗಿನಿಂದಲೇ ಮಹಿಳೆಯು ಇಬ್ಬರು ಮಕ್ಕಳ ಮೂಲಕ ವ್ಯಾಪಾರ ನಡೆಸುತ್ತಿದ್ದರು ಎಂದು ಸ್ಥಳೀಯರು ದೂರಿದ್ದಾರೆ. ಮಧ್ಯಾಹ್ನ 2.30 ರ ಸುಮಾರಿಗೆ ಹಿರಿಯ ಸಿವಿಲ್ ನ್ಯಾಯಧೀಶೆ ಶರ್ಮಿಳಾ ಅದೇ ರಸ್ತೆಯಲ್ಲಿ ಬರುವಾಗ ಮಹಿಳೆಯೋರ್ವಳು ಆರಾಮಾಗಿ ನೆರಳಲ್ಲಿ ಕೂತುಕೊಂಡಿದ್ದು, ಇಬ್ಬರು ಮಕ್ಕಳು ವಾಹನಗಳು ಓಡಾಡುವ ರಸ್ತೆಯಲ್ಲಿ ಮಕ್ಕಳು ವಾಹನಕ್ಕೆ ಅಡ್ಡವಾಗಿ ಓಡಿ ಬರುತ್ತಾ ವಸ್ತುಗಳನ್ನು ಮಾರಾಟಕ್ಕೆ ಯತ್ನಿಸುತ್ತಿರುವುದನ್ನು ಗಮನಿಸಿದ್ದಾರೆ. ಮಹಿಳೆಯ ದಂಧೆಯ ಕಪಟವರಿತ ನ್ಯಾಯಾಧೀಶೆ ಶರ್ಮಿಳಾರವರು ತಕ್ಷಣ ಮಹಿಳಾ ಠಾಣೆ, ಮಕ್ಕಳ ರಕ್ಷಣಾ ಘಟಕ ಹಾಗೂ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಿ ಮಕ್ಕಳನ್ನು ರಕ್ಷಿಸಿದ್ದಾರೆ. ಈ ಮೂಲಕ ದುಡಿಯುವ ಮಕ್ಕಳಿಗೆ ನ್ಯಾಯಾಧೀಶೆಯ ಮನ ಮಿಡಿದಿದೆ.

DAKSHINA KANNADA

ಮಂಗಳೂರು ಮೇಯರ್ ಫೋನ್‌ ಇನ್ ಕಾರ್ಯಕ್ರಮ; ಬಿಲ್‌ಗಳನ್ನು ಆನ್‌ಲೈನ್ ಮೂಲಕ ಪಾವತಿಸುವ ವ್ಯವಸ್ಥೆ ಜಾರಿ

Published

on

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಜನರ ಸಮಸ್ಯೆ ಆಲಿಸಲು ಮೇಯರ್ ಇಂದು ಫೋನ್‌ ಇನ್ ಕಾರ್ಯಕ್ರಮ ನಡೆಸಿದ್ದಾರೆ. ಮೇಯರ್ ಆಗಿ ಅಧಿಕಾರ ವಹಿಸಿಕೊಂಡ ಸುಧೀರ್ ಕುಮಾರ್ ಶೆಟ್ಟಿ ಕಣ್ಣೂರು ಅವರು ಪ್ರತಿ ತಿಂಗಳು ಈ ಫೋನ್ ಇನ್ ಕಾರ್ಯಕ್ರಮ ನಡೆಸಿ ಜನಸ್ನೇಹಿ ಆಡಳಿತ ನೀಡಲು ಪ್ರಯತ್ನಿಸಿದ್ದಾರೆ. ಫೋನ್ ಮೂಲಕ ಬರುವ ದೂರುಗಳನ್ನು ಸ್ವೀಕರಿಸಿ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಸಮಸ್ಯೆಯನ್ನು ತಕ್ಷಣ ಬಗೆ ಹರಿಸಲು ಇದರಿಂದ ಸಾಧ್ಯವಾಗಿದೆ. ಕಳೆದ ತಿಂಗಳು ನಡೆದಿದ್ದ ಫೋನ್‌ ಇನ್ ಕಾರ್ಯಕ್ರಮದಲ್ಲಿ ಸುಮಾರು 27 ದೂರುಗಳಲ್ಲಿ 24 ದೂರುಗಳನ್ನು ತಕ್ಷಣ ಬಗೆ ಹರಿಸಿದ್ದಾರೆ. ಈ ಬಾರಿಯೂ ಕೂಡಾ ಸುಮಾರು 26 ಕರೆಗಳು ಬಂದಿದ್ದು ಬಹುತೇಕ ಕರೆಗಳು ನಗರದ ಸ್ವಚ್ಚತೆ , ಸ್ವಯಂ ಘೋಷಿತ ಆಸ್ತಿ ತೆರಿಗೆ , ಹಾಗೂ ಲೈಸೆನ್ಸ್‌ ವಿಚಾರವಾಗಿತ್ತು.

ನಗರದ ಪಂಪ್‌ವೆಲ್‌ನ ಮಹಾವೀರ ವೃತ್ತವನ್ನು ಸುಂದರವಾಗಿಸಿದ್ರೂ ಅಲ್ಲಿ ಅಲೆಮಾರಿ ಕುಟುಂಬಗಳು ನಗರ ಸೌಂದರ್ಯ ಕೆಡಿಸಿರುವ ಬಗ್ಗೆ ದೂರು ಬಂದಿದೆ. ಅವರನ್ನು ಪೊಲೀಸರ ಸಹಾಯದಿಂದ ತೆರವು ಗೊಳಿಸಲಾಗುವುದು ಎಂದು ಮೇಯರ್ ಹೇಳಿದ್ದಾರೆ.

ಅಲ್ಲದೇ, ಆಸ್ತಿ ತೆರಿಗೆ ವಿಚಾರದಲ್ಲಿ ಜನರಿಗೆ ಸಹಾಯ ಆಗುವ ನಿಟ್ಟಿನಲ್ಲಿ ಎಲ್ಲಾ ಬಿಲ್‌ಗಳನ್ನು ಆನ್‌ಲೈನ್ ಮೂಲಕ ಪಾವತಿಸುವ ವ್ಯವಸ್ಥೆ ಮಾಡಲಾಗುವುದು. ಈ ಬಗ್ಗೆ ನಾಳೆ ನಡೆಯುವ ಸಾಮಾನ್ಯ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಮೇಯರ್ ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಜನಸ್ನೇಹಿ ಆಡಳಿತ ನೀಡಲು ಪೋನ್ ಇನ್ ಕಾರ್ಯಕ್ರಮ ಸಹಕಾರಿಯಾಗಿದ್ದು, ಜನರು ಸಮಸ್ಯೆಗಳನ್ನು ಗಮನಕ್ಕೆ ತಂದಾಗ ತಕ್ಷಣ ಕ್ರಮ ಕೈಗೊಳ್ಳಲು ಸಹಕಾರಿ ಆಗುತ್ತದೆ ಎಂದು ಅವರು ಹೇಳಿದ್ದಾರೆ.

Continue Reading

DAKSHINA KANNADA

Mangaluru: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ಯುವಮೋರ್ಚಾ

Published

on

ಮಂಗಳೂರು : ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ ಆರೋಪದ ವಿಚಾರವಾಗಿ ಮಂಗಳೂರಿನಲ್ಲೂ ಪ್ರತಿಭಟನೆ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

 


ನಾಸಿರ್ ಹುಸೇನ್ ರಾಜೀನಾಮೆ ನೀಡಬೇಕು ಹಾಗೂ ಘೋಷಣೆ ಕೂಗಿದ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕುವ ವಿಚಾರ ತಿಳಿದ ಪೊಲೀಸರು ಕಚೇರಿ ಬಳಿ ಹೆಚ್ಚಿನ ಭದ್ರತೆ ಏರ್ಪಡಿಸಿದ್ದರು.

ಕಾಂಗ್ರೆಸ್ ಕಚೇರಿ ಸುತ್ತ ಬ್ಯಾರಿಕೇಡ್ ಅಳವಡಿಸಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕದಂತೆ ತಡೆ ಒಡ್ಡಿದ್ದಾರೆ. ಕಚೇರಿ ಬಳಿ ಬಂದು ನಾಸಿರ್ ಹುಸೇನ್ ಹಾಗೂ ಕಾಂಗ್ರೆಸ್‌ಗೆ ಧಿಕ್ಕಾರ ಕೂಗಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Continue Reading

DAKSHINA KANNADA

ಕಾಗೆ ರಾಷ್ಟ್ರೀಯ ಪಕ್ಷಿಯಾಗಬೇಕಿತ್ತು, ಹಸು ರಾಷ್ಟ್ರೀಯ ಪ್ರಾಣಿಯಾಗಬೇಕಿತ್ತು- ನಟ ಪ್ರಕಾಶ್ ರಾಜ್

Published

on

ಉಳ್ಳಾಲ: ತೊಕ್ಕೊಟ್ಟಿನಲ್ಲಿ ನಡೆದ ಡಿವೈಎಫ್‌ಐನ 12ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾವೇಶಕ್ಕೆ ಅತಿಥಿಯಾಗಿ ಆಗಮಿಸಿದ ಬಹುಬಾಷಾ ನಟ ಪ್ರಕಾಶ್ ರಾಜ್‌ ಭಾಷಣದ ಉದ್ದಕ್ಕೂ ಪ್ರಧಾನಿ ಮೋದಿಯವರನ್ನು ಏಕವಚನದಲ್ಲೇ ಸಂಭೋದಿಸಿ ಟೀಕೆ ಮಾಡಿದ್ದಾರೆ.

ಅಲ್ಲದೇ  ಬಹುಮತ ಎಲ್ಲ ದೇಶದಲ್ಲಿ ನಡೆಯಲ್ಲ, ಪ್ರಕೃತಿಗೆ ಬಹುಮತ ಸರಿಯಲ್ಲ, ಬಹುಮತನೇ ಆಗಬೇಕಾದ್ರೆ ಕಾಗೆ ರಾಷ್ಟ್ರೀಯ ಪಕ್ಷಿಯಾಗಬೇಕಿತ್ತು. ಹಸು ರಾಷ್ಟ್ರೀಯ ಪ್ರಾಣಿಯಾಗಬೇಕಿತ್ತು ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

Continue Reading

LATEST NEWS

Trending