Connect with us

LATEST NEWS

ನಾಳೆ ಉಡುಪಿ ರಜತ ಮಹೋತ್ಸವ ಹಿನ್ನೆಲೆ: ಸಂಚಾರ ವ್ಯವಸ್ಥೆ ಮಾರ್ಪಾಡು

Published

on

ಉಡುಪಿ: ಉಡುಪಿ ಜಿಲ್ಲೆಯ ರಜತ ಮಹೋತ್ಸವ ಹಿನ್ನೆಲೆ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ತುರ್ತು ವಾಹನ ಹೊರತುಪಡಿಸಿ ಸಂಚಾರ ಮಾರ್ಪಡಿಸಲಾಗಿದೆ. ಅದರ ವಿವರ ಇಂತಿದೆ.


1.ಅಜ್ಜರಕಾಡು ಮೈದಾನ ಮುಂಭಾಗಕ್ಕೆ ಜಿಲ್ಲಾಡಳಿತದಿಂದ ನೀಡಲಾದ ಪಾಸ್ ಇರುವ ವಿಐಪಿ ವಾಹನಗಳಿಗೆ ಪುರಭವನದ ಪಕ್ಕದ ರಸ್ತೆಯಲ್ಲಿ ಪಾರ್ಕ ಮಾಡುವುದು.
2. ಸದ್ರಿ ಕಾರ್ಯಕ್ರಮಕ್ಕೆ ಕುಂದಾಪುರ, ಮಲ್ಪೆ, ಕಾಪು, ಪಡುಬಿದ್ರೆ, ಕಡೆಯಿಂದ ಬರುವಂತಹ ಸಾರ್ವಜನಿಕ ವಾಹನಗಳನ್ನು ಸೈಂಟ್ ಸಿಸಿಲಿಯಾ ಶಾಲೆಯ ಮೈದಾನದಲ್ಲಿ ಪಾರ್ಕ್‌ ಮಾಡುವುದು.
3. ಅಲೆವೂರು ಮೂಡುಬೆಳ್ಳಿ ಮಣಿಪಾಲ, ಕಾರ್ಕಳ ಕಡೆಗಳಿಂದ ಬರುವಂತಹ ವಾಹನಗಳಿಗೆ ಮಿಷನ್ ಕಂಪೌಂಡ್ ಬಳಿಯ ಕ್ರಿಶ್ಚಿಯನ್ ಶಾಲಾ ಮೈದಾನ ಮತ್ತು ಕ್ರಿಶ್ಚಿಯನ್ ಪಿಯು ಕಾಲೇಜಿನ ಮೈದಾನದಲ್ಲಿ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಿದ್ದು, ಅಲ್ಲಿಯೇ ಪಾರ್ಕ್‌ ಮಾಡಬೇಕು.
4. ಬೋರ್ಡ್ ಹೈಸ್ಕೂಲಿನಿಂದ ಹುತಾತ್ಮರ ಸ್ಮಾರಕದ ವರೆಗೆ ಶಾಲಾ ಮಕ್ಕಳ ಮೆರವಣಿಗೆ ಇದ್ದು ಮೆರವಣಿಗೆ ಪ್ರಾರಂಭವಾಗಿ ಮುಕ್ತಾಯದವರೆಗೂ ಸದ್ರಿ ಮಾರ್ಗದಲ್ಲಿ ಬಸ್ ಮಾರ್ಗ ಬದಲಾವಣೆ ಮಾಡಲಾಗುವುದು. ಆ ಕಾಲಕ್ಕೆ ಸಾರ್ವಜನಿಕರು ಸಹಕರಿಸಬೇಕು.
5. ಜಿಲ್ಲೆಯ ಗ್ರಾಮ ಪಂಚಾಯತ್‌ಗಳಿಂದ ಬರುವಂತಹ ವಾಹನಗಳು ಸದಸ್ಯರನ್ನು ಪುರಭವನ ಹಾಗೂ ಜೋಡುಕಟ್ಟೆ ಬಳಿ ಇಳಿಸಿ, ತಮ್ಮ ವಾಹನಗಳನ್ನು ಜೋಡುಕಟ್ಟೆಯಿಂದ ಕಿನ್ನಿಮುಲ್ಕಿವರೆಗೆ ರಸ್ತೆಯ ಎಡ ಮತ್ತು ಬಲ ಬದಿ ಪಾರ್ಕಿಂಗ್ ಮಾಡಬೇಕು.
6. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಸೈಂಟ್ ಸಿಸಿಲಿಯಾ ಹಾಗೂ ಮಿಷನ್ ಕಂಪೌಂಡ್ ಬಳಿ ಇರುವ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕು.

LATEST NEWS

ಕೋವ್ಯಾಕ್ಸಿನಲ್ಲೂ ಇದೆ ಅಡ್ಡ ಪರಿಣಾಮ…ವರದಿಯಿಂದ ಬಯಲಾಯ್ತು ಸತ್ಯ..!

Published

on

ಮಂಗಳೂರು / ನವದೆಹಲಿ : ಸದ್ಯ ಕೊರೋನಾ ಲಸಿಕೆ ಪಡೆದವರಲ್ಲಿ ಆತಂಕ ಶುರುವಾಗಿದೆ. ಕೊರೋನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮ ಬೀರಿದೆ ಎಂದು ಈ ಹಿಂದೆ ಹೇಳಲಾಗಿತ್ತು. ಇದರ ಬೆನ್ನಲ್ಲೇ ಕೋವ್ಯಾಕ್ಸಿನ್‌ ಕೂಡಾ ಅಡ್ಡ ಪರಿಣಾಮ ಬೀರಿದೆ ಎಂಬ ಆಘಾತಕಾರಿ ವಿಚಾರ ಬಹಿರಂಗವಾಗಿದೆ. ಕೋವಿಶೀಲ್ಡ್‌ ಪಡೆದವರಲ್ಲಿ ಅಡ್ಡ ಪರಿಣಾಮ ಆಗಿದೆ ಅಂತ ಆಸ್ಟ್ರಾಜೆನೆಕಾ ಕಂಪೆನಿ ಒಪ್ಪಿಕೊಂಡಿತ್ತು. ಇದೀಗ ಭಾರತ್ ಬಯೋಟೆಕ್ ಕಂಪೆನಿ ಅಭಿವೃದ್ದಿ ಪಡಿಸಿರುವ ಕೋವ್ಯಾಕ್ಸಿನ್ ಕೂಡಾ ಅಡ್ಡ ಪರಿಣಾಮ ಬೀರುತ್ತದೆ ಎಂದು ವರದಿಯೊಂದು ಹೊರಬಿದ್ದಿದೆ. ಈ ಲಸಿಕೆ ಪಡೆದ ಒಂದು ವರ್ಷದ ಬಳಿಕ ಹಲವರಲ್ಲಿ ಅಡ್ಡ ಪರಿಣಾಮ ಕಾಣಿಸಿಕೊಂಡ ಬಗ್ಗೆ ವರದಿಯಲ್ಲಿ ಹೇಳಲಾಗಿದೆ.


ಹದಿ ಹರೆಯದ ಯುವಕ – ಯುವತಿಯರಲ್ಲಿ ಅಡ್ಡ ಪರಿಣಾಮ :

ಬನಾರಸ್ ಹಿಂದೂ ವಿಶ್ವ ವಿದ್ಯಾಲಯ ನಡೆಸಿದ ಈ ಅದ್ಯಯನ ಪ್ರಕಾರ ಕೋವ್ಯಾಕ್ಸಿನ್‌ ತೆಗೆದುಕೊಂಡ ಹದಿ ಹರೆಯದ ಯುವಕ – ಯುವತಿಯರಲ್ಲಿ ಅಡ್ಡ ಪರಿಣಾಮ ಕಾಣಿಸಿಕೊಂಡಿದೆ. ಸುಮಾರು 1024 ಯವ ಜನತೆಯನ್ನು ಇದರ ಅಧ್ಯಯನಕ್ಕೆ ಒಳಪಡಿಸಿದಾಗ ಈ ಆಘಾತಕಾರಿ ವರದಿ ಲಭ್ಯವಾಗಿದೆ. ಈ ವರದಿ ಪ್ರಕಾರ ಶೇಕಡಾ 48 ಜನರಿಗೆ ಶ್ವಾಸನಾಳದ ಸೋಂಕು ಪತ್ತೆಯಾಗಿದೆ ಎಂದು ಹೇಳಲಾಗಿದೆ.

ಶೇಕಡಾ 10.5 ಜನರಲ್ಲಿ ಸಾಮಾನ್ಯ ಅಸ್ವಸ್ಥತೆ, 10.2 ಶೇಖಡಾ ಜನರಲ್ಲಿ ನರಮಂಡಲದ ಸಮಸ್ಯೆ, 4.7% ಜನರಲ್ಲಿ ನರ ಸಂಬಂಧಿ ಸಮಸ್ಯೆ ಹಾಗೂ 8.9% ಜನರಲ್ಲಿ ಸಾಮಾನ್ಯ ಸಮಸ್ಯೆಗಳು ಕಾಣಿಸಿದೆ. ಇದಲ್ಲದೆ, ಚರ್ಮ ರೋಗ, ಸ್ನಾಯಗಳಿಗೆ, ನರಗಳಿಗೆ ಮತ್ತು ಕೀಲುಗಳಿಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಂಡಿದೆ ಎಂದು ವರದಿ ಹೇಳಿದೆ.

ಯುವತಿಯರಲ್ಲಿ ಇದರ ಪರಿಣಾಮ ಹೆಚ್ಚಾಗಿ ಕಂಡು ಬಂದಿದ್ದು, ಶೇಕಡಾ 4.6% ಯುವತಿಯರಲ್ಲಿ ಮುಟ್ಟಿನ ಸಮಸ್ಯೆ ಕಂಡು ಬಂದಿದೆ. ಇನ್ನು ಯುವತಿಯರಲ್ಲಿ ಕಣ್ಣಿನ ಸಮಸ್ಯೆ, ಹಾಗೂ ಹೈಪೋ ಥೈರಾಯಿಡ್ ಕಾಣಸಲು ಈ ಕೋವಾಕ್ಸಿನ್ ಕಾರಣವಾಗಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ : ರಾಖಿ ಸಾವಂತ್ ಗೆ ಕ್ಯಾನ್ಸರ್!? ಮಾಜಿ ಪತಿ ಹೇಳಿದ್ದೇನು?

ಆದ್ರೆ, ಈ ಬಗ್ಗೆ ಇನ್ನಷ್ಟು ಅಧ್ಯಯನ ನಡೆಸಬೇಕಾಗಿದ್ದು, ಸದ್ಯಕ್ಕೆ ಕೋವ್ಯಾಕ್ಸಿನ್ ಪಡೆದು ಒಂದು ವರ್ಷ ಆಗಿದ್ದವರನ್ನು ಈ ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಹೀಗಾಗಿ ಇನ್ನಷ್ಟು ಅಧ್ಯಯನದ ಮೂಲಕ ಇದರಿಂದ ಆಗಿರುವ ಅಡ್ಡ ಪರಿಣಾಮವನ್ನು ಅಧ್ಯಯನ ಮಾಡಬೇಕಿದೆ.

Continue Reading

LATEST NEWS

ಅಂಜಲಿ ಹಂ*ತಕನ ಬಂಧನ; ರೈಲಿನಲ್ಲಿ ಪ್ರಯಾಣಿಸುತ್ತಿದ್ದವನ ಪೊಲೀಸರು ಬಂಧಿಸಿದ್ದು ಹೇಗೆ?

Published

on

ಹುಬ್ಬಳ್ಳಿ : ಅಂಜಲಿ ಅಂಬಿಗೇರ್ ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಗಿರೀಶ್ ಯಾನೆ ವಿಶ್ವನಾಥ್ ಸಾವಂತ್ ನನ್ನು ಬಂಧಿಸಲಾಗಿದೆ. ಆರೋಪಿಯನ್ನು ಹುಬ್ಬಳ್ಳಿ – ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು ಗಿರೀಶ್ ಯಾನೆ ವಿಶ್ವನಾಥ್ ಸಾವಂತ್ ಹ*ತ್ಯೆ ಮಾಡಿದ್ದ.

ತನ್ನ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಬೆಳ್ಳಂಬೆಳಗ್ಗೆ ಆಕೆಯ ಮನೆಯೊಳಗೆ ನುಗ್ಗಿ ಚಾಕುವಿನಿಂದ ಇರಿದು ಹ*ತ್ಯೆ ಮಾಡಿದ್ದ. ಆ ಬಳಿಕ ಪರಾರಿಯಾಗಿದ್ದ. ಹುಬ್ಬಳ್ಳಿ ಪೊಲೀಸರು ಆರೋಪಿ ವಿಶ್ವನಾಥ್ ಸಾವಂತ್ ಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದರು. ಇದೀಗ ದಾವಣಗೆರೆಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಸಿಕ್ಕಿ ಬಿದ್ದಿದ್ದು ಹೇಗೆ?

ಭೀಕರವಾಗಿ ಯುವತಿಯ ಹ*ತ್ಯೆ ಮಾಡಿದ ಪೊಲೀಸರು ವಿಶ್ವನಾಥ್ ಸಾವಂತ್ ಕೊಲೆ ಮಾಡುವುದಕ್ಕೆ ಮುನ್ನ ಮೊಬೈಲ್ ನಲ್ಲಿ ಸಂವಾದ ನಡೆಸುತ್ತಿದ್ದ ಮೂವರನ್ನು ಕರೆದು ತೀವ್ರ ವಿಚಾರಣೆ ನಡೆಸಿದ್ದರು. ಅದರ ಸುಳಿವಿನ ಆಧಾರದಲ್ಲಿ ಇದೀಗ ವಿಶ್ವನಾಥ್ ನನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ : ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!

ಅಂಜಲಿಯನ್ನು ಹ*ತ್ಯೆಗೈದ ಬಳಿಕ ವಿಶ್ವ ಬೆಂಗಳೂರು ಮೂಲಕ ರೈಲಿನಲ್ಲಿ ಗೋವಾ, ಮಹಾರಾಷ್ಟ್ರ ಕಡೆ ಹೋಗಿ ತಲೆಮರೆಸಿಕೊಳ್ಳಬೇಕು ಅಂದುಕೊಂಡಿದ್ದ. ರೈಲಿನಲ್ಲಿ ಪ್ರಯಾಣಿಸುತ್ತಿರುವ ಮಾಹಿತಿ ಸಿಕ್ಕ ಹುಬ್ಬಳ್ಳಿ ಪೊಲೀಸರು ದಾವಣಗೆರೆಯಲ್ಲಿ ಅವನನ್ನು ಬಂಧಿಸಲು ಸಕಲ ಸಿದ್ಧತೆ ನಡೆಸಿದ್ದರು. ಆತನ ಬಂಧನಕ್ಕೆ ಯತ್ನಿಸುವ ವೇಳೆ ರೈಲಿನಿಂದ ಜಿಗಿದು ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ರೈಲಿನಿಂದ ಬಿದ್ದ ರಭಸಕ್ಕೆ ಆತನ ಮುಖ ಮತ್ತು ತಲೆಗೆ ಗಂಭೀ*ರ ಗಾ*ಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Continue Reading

DAKSHINA KANNADA

ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ

Published

on

ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್‌ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್‌ಗಳನ್ನು ತೆರೆದಿದೆ.

ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ.

ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್‌ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್‌ಗಳು ನೇರವಾಗಿ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.

ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.

Continue Reading

LATEST NEWS

Trending