Wednesday, May 18, 2022

ಕಾರವಾರ: ಧ್ವಜಾರೋಹಣದ‌ ಬಳಿಕ ಹೃದಯಾಘಾತದಿಂದ ಎ.ಎಸ್.ಐ ಸಾವು

ಕಾರವಾರ: ಗಣರಾಜ್ಯೋತ್ಸವದ ಧ್ವಜಾರೋಹಣದಲ್ಲಿ ಭಾಗಿಯಾದ ಬಳಿಕ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಾರವಾರದಲ್ಲಿ ಇಂದು ನಡೆದಿದೆ.

ನಗರದ ಸಂಚಾರಿ ಠಾಣೆಯಲ್ಲಿ ಎಎಸ್​ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುಲ್ ಖಾದರ್ ಮಹ್ಮದ್ ಶೇಖ್ (57) ಮೃತ ಅಧಿಕಾರಿ. ಸಂಚಾರಿ ಠಾಣೆಯಲ್ಲಿ ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಧ್ವಜಾರೋಹಣದ ಕೆಲ ಸಮಯದ ಬಳಿಕ ಎಎಸ್​ಐ ಮಹ್ಮದ್​ ಶೇಖ್​ ಅವರಲ್ಲಿ ಎದೆನೋವು ಕಾಣಿಸಿಕೊಂಡು ಠಾಣೆಯಲ್ಲಿಯೇ ಕುಸಿದುಬಿದ್ದಿದ್ದಾರೆ.

ತಕ್ಷಣ ಅವರನ್ನು ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಅಬ್ದುಲ್ ಖಾದರ್ ಮಹ್ಮದ್ ಶೇಖ್ 1992 ರಲ್ಲಿ ಪೊಲೀಸ್ ಕಾನಸ್ಟೇಬಲ್ ಆಗಿ ಪೊಲೀಸ್ ಇಲಾಖೆಯಲ್ಲಿ ಭರ್ತಿಯಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ, ದಾಂಡೇಲಿ ಗ್ರಾಮೀಣ, ದಾಂಡೇಲಿ ನಗರ, ಜೊಯಿಡಾ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
ಇವರ ನಿಧನಕ್ಕೆ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ.

LEAVE A REPLY

Please enter your comment!
Please enter your name here

Hot Topics

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಬಿದ್ದ ವಿದ್ಯುತ್ ಕಂಬ-ಸಂಚಾರ ಸ್ಥಗಿತ

ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ.- ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ...

SSLC ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ಪಾಠಕ್ಕೆ ಕತ್ತರಿ: ಬಿಲ್ಲವ ಸಮುದಾಯದ ಆಕ್ರೋಶ

ಮಂಗಳೂರು: ಎಸ್ಎಸ್‌ಎಲ್‌ಸಿ ಶಾಲಾ ಪಠ್ಯದಲ್ಲಿ ಆರೆಸ್ಸೆಸ್‌ ಸಂಸ್ಥಾಪಕ ಕೆಬಿ ಹೆಡ್ಗೆವಾರ್ ಭಾಷಣ ಸೇರಿಸಿರುವ ವಿವಾದ ಹಸಿಯಾಗಿರುವಾಗಲೇ ಈ ಮಧ್ಯೆ ದಕ್ಷಿಣ ಭಾರತದ ಆದರ್ಶವಾಗಳು ಹಾಗೂ ಸಮಾಜ ಸುಧಾರಕರಾದ ನಾರಾಯಣ ಗುರುಗಳ ಪಠ್ಯಕ್ಕೆ ಕೊಕ್‌...

ಬಂಟ್ವಾಳ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ.ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ...