Tuesday, October 19, 2021

ಟ್ರಾಫಿಕ್ ಪೊಲೀಸ್‍ ಮನೆಯಲ್ಲಿದೆ ಚಿನ್ನದ ಟಾಯ್ಲೆಟ್‌: ದಂಗಾದ ತನಿಖಾಧಿಕಾರಿಗಳು

ರಷ್ಯಾ: ಹುದ್ದೆ ಟ್ರಾಫಿಕ್ ಪೊಲೀಸ್‍, ಆತನಿಗಿದೆ ಭವ್ಯವಾದ ಬಂಗಲೆ, ಆತನ ಮನೆಯಲ್ಲಿದ್ದ ಚಿನ್ನದ ಶೌಚಾಲಯವನ್ನು ಕಂಡು ತನಿಖಾ ಅಧಿಕಾರಿಗಳು ಶಾಕ್ ಆಗಿರುವ ಘಟನೆ ರಷ್ಯಾದಲ್ಲಿ ನಡೆದಿದೆ.

ರಷ್ಯಾದ ಸಂಚಾರ ಪೊಲೀಸ್ ಮುಖ್ಯಸ್ಥ ಕರ್ನಲ್ ಅಲೆಕ್ಸಿ ಸಪೊನೊವ್ ವಿರುದ್ಧ ಭ್ರಷ್ಟಚಾರದ ಆರೋಪ ಕೇಳಿ ಬಂದಿತ್ತು. ಕೂಡಲೇ ಪೊಲೀಸ್ ತನಿಖಾ ತಂಡವೊಂದು ಇವರ ಮನೆ ಮೇಲೆ ದಾಳಿ ನಡೆಸಿದೆ. ಈ ವೇಳೆ ಭವ್ಯ ಬಂಗಲೆ, ಬಂಗಾರದ ಶೌಚಾಲಯ ಇರುವುದು ತಿಳಿದು ಬಂದಿದೆ.

ಈ ಐಷಾರಾಮಿ ಬಂಗಲೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಶೌಚಾಲಯ, ದುಬಾರಿ ಅಲಂಕಾರಿಕ ವಸ್ತುಗಳು ಪತ್ತೆಯಾಗಿವೆ. ಮನೆಯ ನೆಲಹಾಸನ್ನು ಅಮೃತಶಿಲೆಗಳಿಂದ ವಿನ್ಯಾಸ ಮಾಡಲಾಗಿದೆ. ತನಿಖಾ ಅಧಿಕಾರಿಗಳು ಮನೆಯಲ್ಲಿರುವ ಕೆಲವು ಬೆಲೆ ಬಾಳುವ ವಸ್ತು, ಕೆಲವು ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖಾ ತಂಡ, ಪ್ರಕರಣ ಸಂಬಂಧ ಕರ್ನಲ್ ಅಲೆಕ್ಸಿ ಸಪೊನೊವ್ ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...