Connect with us

LATEST NEWS

ಉಡುಪಿಯಲ್ಲಿ ಅಕ್ರಮ ಗೋ ಸಾಗಾಟ ಟ್ರಕ್  ಪತ್ತೆ: 16ಗೋವುಗಳ ರಕ್ಷಣೆ..!

Published

on

ಉಡುಪಿಯಲ್ಲಿ ಅಕ್ರಮ ಗೋ ಸಾಗಾಟ ಟ್ರಕ್  ಪತ್ತೆ: 16ಗೋವುಗಳ ರಕ್ಷಣೆ..!

Trafficking of illegal Cow truck  found 16 cows saved..

ಉಡುಪಿ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವುಗಳನ್ನು ರಕ್ಷಿಸಿ, ಇಬ್ಬರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿರುವ  ಈ ಘಟನೆ ಇಂದು ಮುಂಜಾನೆ ನಡೆದಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ನಜೀರುಲ್ಲ (43) ಮತ್ತು ಮೈಸೂರಿನ ರಾಘವೇಂದ್ರ (25) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಮಂಗಳೂರು ನೋಂದಣಿ ಸಂಖ್ಯೆಯ (ಕೆಎ 19 ಎ 1801) 10 ಚಕ್ರದ ಲಾರಿಯಲ್ಲಿ 18 ಎತ್ತುಗಳನ್ನು ಮಾರಣಾಂತಿಕ ರೀತಿಯಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದರು ಸಾಗಾಟದ ವೇಳೆ ಎರಡು ಎತ್ತುಗಳು ಸಾವನ್ನಪ್ಪಿದ್ದು, ಉಳಿದ 16 ಎತ್ತುಗಳನ್ನು ರಕ್ಷಿಸಲಾಗಿದೆ.ಖಚಿತ ಮಾಹಿತಿಯ ಆಧಾರದಲ್ಲಿ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ ಕೆ. ಹಾಗೂ ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಅವರ ನೇತೃತ್ವದ ತಂಡವು ತ್ರಾಸಿ ಮರವಂತೆಯ ಬಳಿ ಈ ಕಾರ್ಯಾಚರಣೆ ನಡೆಸಿದೆ. ವಾಹನವನ್ನು ನಿಲ್ಲಿಸಲು ಸೂಚಿಸಿದಾಗ ಆರೋಪಿಗಳ ವಾಹನ ಬಿಟ್ಟು ಓಡಿ ಹೋಗಿದ್ದಾರೆ. ಅವರನ್ನು ಬೆನ್ನಟ್ಟಿ ಬಂಧಿಸಿದ್ದು, ಬಿಟ್ಟು ಹೋದ ವಾಹನವನ್ನು ಮುಟ್ಟುಗೋಲು ಹಾಕಿದ್ದಾರೆ ಆರೋಪಿಗಳನ್ನು ಬಂಧಿಸಿ ವಿಚಾರಿಸಿದ ಸಂದರ್ಭ ಅಕ್ರಮ ಗೋ ಸಾಗಾಟ ವಾಹನವು ಮಹಾರಾಷ್ಟ್ರದ ಸೊಲ್ಲಾಪುರದಿಂದ ಕಾಸರಗೋಡಿನ ಚೇರ್ಕಳಕ್ಕೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ 2020ರನ್ವಯ ಪ್ರಕರಣ ದಾಖಲಾಗಿದೆ.

bengaluru

ಚುನಾವಣೆ ಗೆಲ್ಲೋಕೆ ನನ್ನ ಹೆ*ಣ ಬೀಳಿಸೋಕು ಬಿಜೆಪಿಯವ್ರು ಸಿದ್ಧರಿದ್ದಾರೆ; ಜೀವ ಬೆದರಿಕೆ ಪತ್ರ ಹಿಡಿದು ಕಿಡಿಕಾರಿದ ಪ್ರಿಯಾಂಕ್ ಖರ್ಗೆ

Published

on

ಬೆಂಗಳೂರು : ಸದ್ಯ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಈ ನಡುವೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆ*ದರಿಕೆ ಪತ್ರ ಬಂದಿದೆ. ಸ್ವತ: ಈ ಬಗ್ಗೆ ಪ್ರಿಯಾಂಕ ಖರ್ಗೆ ಅವರೇ ಹೇಳಿದ್ದಾರೆ.

 

ಎನ್ ಕೌಂಟರ್ ಬೆ*ದರಿಕೆ:

ಭಾರತೀಯ ಜನತಾ ಪಾರ್ಟಿಯವರು ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆ*ಣ ಬೀಳಿಸಿಯಾದರೂ ಚುನಾವಣೆ ಗೆಲ್ಲುವ ಯೋಜನೆಯಲ್ಲಿದ್ದಾರೆ. ಅಲ್ಲದೆ, ತನಗೆ ಮತ್ತೊಂದು ಜೀವ ಬೆ*ದರಿಕೆ ಪತ್ರ ಬಂದಿದೆ. ಅದರಲ್ಲಿ ತನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆ*ದರಿಕೆ ಹಾಕಲಾಗಿದೆ. ಫಿನ್​ಲ್ಯಾಂಡ್​ನಿಂದ ಪತ್ರ ಬಂದಿದೆ ಎಂದು ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಮಗೆ ಬಂದಿರುವ ಜೀವ ಬೆದರಿಕೆ ಪತ್ರ ಓದಿದರು.

“ಪಂಚಾಮೃತದಿಂದ ಪೂಜೆ ಮಾಡಿದರೂ ನಿನ್ನ ಜಾತಿ ಬೇರೆಯಾಗುವುದಿಲ್ಲ. ಎಂತ ವೇಷ ಭೂಷಣ ಹಾಕಿದರೂ ನಿನ್ನ ಜಾತಿ ಬದಲಾಗುವುದಿಲ್ಲ. ಮಂತ್ರಿಯಾಗು, ರಾಜನಾಗೂ, ನಿನ್ನ ಸೊಕ್ಕು ಹೊಲೆಯ-ಮಾದಿಗ ಓಣಿಯಲ್ಲಿ ನಡೆಯುತ್ತೆ” ಎಂದು ಪತ್ರದಲ್ಲಿ ಅಶ್ಲೀಲ ಪದ ಬಳಸಿದ್ದಾರೆ. ಖಾಕಿಯಾದರೂ, ಖಾದಿಯಾದರೂ, ಯಾರಿಂದಲಾದರೂ ನಿನ್ನನ್ನು ಎನ್ಕೌಂ*ಟರ್ ಮಾಡುವುದು ಸತ್ಯ ಎಂದು ಪತ್ರದಲ್ಲಿ ಬರೆಯಲಾಗಿದೆ ಎಂದರು.

ಬೆದರಿಕೆ ಸಂಬಂಧ ಮಾರ್ಚ್ 13 ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದೇನೆ. ವಿಕಾಸೌಧದಲ್ಲಿರುವ ನನ್ನ ಕಚೇರಿಗೆ ಕಲಬುರಗಿಯಿಂದಲೇ ಪತ್ರ ಬಂದಿದೆ. ಹೆದರಿಸುವುದು ಅಥವಾ ಬೆದರಿಸಲು ಬಂದರೆ ಅದಕ್ಕೆಲ್ಲ ನಾವು ಹೆದರುವುದಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

Continue Reading

LATEST NEWS

ಹಿಂದಿಗೆ ರಿಮೇಕ್ ಆಗುತ್ತಿದೆ ಝೀ ಕನ್ನಡದ ಫೇಮಸ್‌ ಸೀರಿಯಲ್‌…! ಪ್ರೋಮೋ ರಿಲೀಸ್‌..!

Published

on

ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಸೀತಾ ರಾಮ’ ಧಾರಾವಾಹಿ ಪ್ರೇಕ್ಷಕರ ಮನ ಗೆದ್ದಿದೆ. ಈ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಗುತ್ತಿದೆ. ಗಗನ್ ಚಿನ್ನಪ್ಪ, ವೈಷ್ಣವಿ ಗೌಡ, ರೀತು ಸಿಂಗ್, ಪೂಜಾ ಲೋಕೇಶ್, ಅಶೋಕ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈಗ ಈ ಧಾರಾವಾಹಿ ಹಿಂದಿಗೆ ರಿಮೇಕ್ ಆಗುತ್ತಿದೆ. ಇದಕ್ಕೆ ‘ಮೇ ಹೂ ಸಾತ್ ತೆರೆ’ ಎನ್ನುವ ಶೀರ್ಷಿಕೆ ಇಡಲಾಗಿದೆ.


‘ಸೀತಾ ರಾಮ’ ಧಾರಾವಾಹಿ ಮರಾಠಿಯ ‘ಮಜಿ ತುಜಿ ರೆಶಿಮಗತ್’ ಧಾರಾವಾಹಿಯ ಕಥೆಯನ್ನು ಆಧರಿಸಿದೆ. ಜೀ ಮರಾಠಿಯಲ್ಲಿ 2021 ಆಗಸ್ಟ್​ ತಿಂಗಳಿಂದ 2023 ಜನವರಿವರೆಗೆ ಈ ಧಾರಾವಾಹಿ ಪ್ರಸಾರ ಕಂಡಿತ್ತು. ಈ ಧಾರಾವಾಹಿ ಒಟ್ಟೂ 458 ಎಪಿಸೋಡ್​ಗಳನ್ನು ಹೊಂದಿತ್ತು. ಪ್ರಾರ್ಥನಾ ಬೆಹೆರೆ ಹಾಗೂ ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಧಾರಾವಾಹಿಯನ್ನು ಕನ್ನಡಕ್ಕೆ ‘ಸೀತಾ ರಾಮ’ ಹೆಸರಲ್ಲಿ ರಿಮೇಕ್ ಮಾಡಲಾಯಿತು. ಈಗ ಧಾರಾವಾಹಿ ಹಿಂದಿಗೂ ರಿಮೇಕ್ ಆಗುತ್ತಿದೆ.

ಜೀ ಟಿವಿಯಲ್ಲಿ ‘ಮೇ ಹೂ ಸಾತ್ ತೆರೆ’ ಧಾರಾವಾಹಿ ಪ್ರಸಾರ ಕಾಣಲಿದೆ. ಸದ್ಯ ಪ್ರೋಮೋಗಳ ಮೂಲಕ ಧಾರಾವಾಹಿ ಗಮನ ಸೆಳೆಯುತ್ತಿದೆ. ಕನ್ನಡದಲ್ಲಿ ಗಗನ್ ಚಿನ್ನಪ್ಪ ಮಾಡಿರೋ ಪಾತ್ರವನ್ನು ಹಿಂದಿಯಲ್ಲಿ ಕರಣ್ ವೋಹ್ರಾ ಮಾಡುತ್ತಿದ್ದಾರೆ. ವೈಷ್ಣವಿ ಗೌಡ ಅವರ ಪಾತ್ರವನ್ನು ಉಲ್ಕಾ ಗುಪ್ತಾ ಮಾಡುತ್ತಿದ್ದಾರೆ. ಉಲ್ಕಾ ಗುಪ್ತಾ ಅವರು ‘ಜಾನ್ಸಿ ಕಿ ರಾಣಿ’ ಧಾರಾವಾಹಿ ಮೂಲಕ ಪ್ರಸಿದ್ಧರಾಗಿದ್ದಾರೆ.

ಕಥೆಯಲ್ಲಿ ಬದಲಾವಣೆ :

ಕನ್ನಡದಲ್ಲಿ ಕಥಾ ನಾಯಕ ಉದ್ಯಮಿ. ಹಿಂದಿಯಲ್ಲಿ ಕರಣ್ ಅವರು ಉದ್ಯಮಿಯ ಪಾತ್ರವನ್ನೇ ಮಾಡುತ್ತಿದ್ದಾರೆ. ಕನ್ನಡದಲ್ಲಿ ಕಥಾ ನಾಯಕಿ ಮಧ್ಯಮ ವರ್ಗದ ಹುಡುಗಿ. ಹಿಂದಿಯಲ್ಲಿ ಕಥಾ ನಾಯಕಿ ಸಿಂಗರ್ ಆಗಬೇಕು ಎಂದು ಕನಸು ಕಾಣುವ ಸಿಂಗಲ್ ಪೇರೇಂಟ್ ಆಗಿ ತೋರಿಸಲಾಗಿದೆ. ಹಿಂದಿಯಲ್ಲಿ ಕಥಾ ನಾಯಕಿಗೆ ಮಗ ಇರುವುದಾಗಿ ತೋರಿಸಲಾಗಿದೆ ಆದರೆ ಕನ್ನಡದಲ್ಲಿ ಕಥಾ ನಾಯಕಿಗೆ ಮಗಳಿದ್ದಾಳೆ. ಏಪ್ರಿಲ್​ನಿಂದ ಈ ಧಾರಾವಾಹಿ ಪ್ರಸಾರ ಆಗೋ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ‘ಫುಲ್ ಹೌಸ್ ಮೀಡಿಯಾ’ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದೆ.

Continue Reading

bangalore

ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾ*ಸ್ಟ್ ಆಗಿ ಯುವಕನ ದುರ್ಮರ*ಣ

Published

on

ಬೆಂಗಳೂರು : ಏರ್‌ ಪ್ರೆಶರ್‌ ಪೈಪ್‌ನಿಂದ ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದರಿಂದ ಹೊಟ್ಟೆಯೊಳಗೆ ಕರುಳು ಬ್ಲಾಸ್ಟ್‌ ಆಗಿ ಯುವಕ ಮೃ*ತಪಟ್ಟಿದ್ದಾನೆ. ಹುಡುಗಾಟದಲ್ಲಿ ಆಡಿದ ಆಟ ಘನಘೋರ ಅಂತ್ಯ ಕಂಡ ಘಟನೆ ಬೆಂಗಳೂರಲ್ಲಿ ನಡೆದಿದೆ. ಯೋಗೀಶ್(28) ಮೃ*ತ ಯುವಕ.

ಹುಡುಗಾಟಕ್ಕೆ ಹೋಯ್ತು ಪ್ರಾಣ…!

ಮಾರ್ಚ್ 25ರಂದು ಬೈಕ್‌ ರಿಪೇರಿಗಾಗಿ ಸಂಪಿಗೆಹಳ್ಳಿಯ ಸಿಎನ್‌ಸಿ (CNS) ಬೈಕ್ ಸರ್ವೀಸ್ ಸೆಂಟರ್‌ಗೆ ಯೋಗೀಶ್‌ ಎಂಬ ಯುವಕ ತೆರಳಿದ್ದ. ಅದೇ ಸರ್ವೀಸ್‌ ಸೆಂಟರ್‌ನಲ್ಲಿ ಯೋಗೀಶ್‌ ಸ್ನೇಹಿತ ಮುರುಳಿ ಎಂಬಾತ ಕೆಲಸ ಮಾಡುತ್ತಿದ್ದ. ಸ್ನೇಹಿತರಿಬ್ಬರೂ ಒಬ್ಬರಿಗೊಬ್ಬರು ತರ್ಲೆ, ತಂಟೆ ಮಾಡಿಕೊಂಡು ಆಟವಾಡುತ್ತಿದ್ದರು. ಸರ್ವೀಸ್‌ ಸೆಂಟರ್‌ನಲ್ಲಿದ್ದ ಏರ್ ಪ್ಲೇಶರ್ ಪೈಪ್‌ನಿಂದ ಇಬ್ಬರು ಆಟ ಆಡುತ್ತಿದ್ದರು.

ಮೊದಲಿಗೆ ಮುರುಳಿ, ಯೋಗೀಶ್‌ನ ಮುಖ ಹಾಗೂ ಹೊಟ್ಟೆಗೆ ಗಾಳಿ ಬಿಟ್ಟಿದ್ದ. ಇದಾದ ಬಳಿಕ ಯೋಗಿಶ್ ಗುದದ್ವಾರಕ್ಕೆ ಏರ್‌ ಪ್ಲೇಶರ್‌ನಿಂದ ಗಾಳಿ ಬಿಟ್ಟಿದ್ದಾನೆ. ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದರಿಂದ ಯೋಗೇಶ್‌ ಹೊಟ್ಟೆ ಊದಿಕೊಂಡು ಕರುಳು ಬ್ಲಾ*ಸ್ಟ್ ಆಗಿದೆ. ತಕ್ಷಣ ಯೋಗೀಶ್ ನರಳಾಟ ಕಂಡು ಮುರುಳಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯೋಗಿಶ್ ಮೃ*ತಪಟ್ಟಿದ್ದಾನೆ.

ಸದ್ಯ ಯೋಗೀಶ್‌ ಪೋಷಕರು ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 304 ಅಡಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಮುರಳಿಯನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಡಿಸಿಪಿ ಲಕ್ಷ್ಮೀ ಪ್ರಸಾದ್ ಮಾಹಿತಿ ನೀಡಿದ್ದಾರೆ.

Continue Reading

LATEST NEWS

Trending