Monday, January 24, 2022

ಕಾಪು: ಟ್ರ್ಯಾಕ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ರೈಲು ಢಿಕ್ಕಿ- ಓರ್ವ ಸಾವು

ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ.
ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಅಯ ನಿವಾಸಿ ಅಬ್ದುಲ್ ರಜಾಕ್ (48) ಎಂದು ಗುರುತಿಸಲಾಗಿದೆ.


ಶುಕ್ರವಾರ ಬೆಳಿಗ್ಗೆ ಅಬ್ದುಲ್ ರಜಾಕ್ ಅವರು ಮಲ್ಲಾರು ಗ್ರಾಮದ ಕುಡ್ತಿಮಾರು ಬಳಿಯ ರೈಲ್ವೇ ಟ್ರ್ಯಾಕ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ

6:30 ಗಂಟೆಯಿಂದ 8 ಗಂಟೆಯ ‌ನಡುವೆ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ಯಾವುದೋ ರೈಲು ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಹೇಳಲಾಗಿದೆ.

ಕಾಪು‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆಪತ್ಬಾಂಧವ ಸೂರಿ ಶೆಟ್ಟಿ ಅವರ ಸಹಕಾರದೊಂದಿಗೆ ಮೃತ ದೇಹವನ್ನು ತೆರವುಗೊಳಿಸಲಾಯಿತು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ನಾಪತ್ತೆಯಾಗಿದ್ದ ಬಸ್ ಮಾಲಕ ಶವವಾಗಿ ಪತ್ತೆ: ಸಾಲದಿಂದ ಬೇಸತ್ತು ಆತ್ಮಹತ್ಯೆ ಶಂಕೆ

ಶಿವಮೊಗ್ಗ: ಶನಿವಾರದಂದು ನಾಪತ್ತೆಯಾಗಿದ್ದ ಸಾಗರದ ಪ್ರಕಾಶ್ ಟ್ರಾವೆಲ್ಸ್​ನ ಮಾಲೀಕ ಇಂದು ಶವವಾಗಿ ಪತ್ತೆಯಾಗಿದ್ದಾರೆ.ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಬಳಿ ಶನಿವಾರದಂದು ಅವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿತ್ತು. ಅನುಮಾನಗೊಂಡು ಪಟಗುಪ್ಪ ಸೇತುವೆ ಬಳಿ...

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು

ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು.ಈ ವೇಳೆ ರಾಜ್ಯ...

ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1ಕೆ.ಜಿ, 300ಗ್ರಾಂ ಚಿನ್ನ ವಶಕ್ಕೆ

ದೇವನಹಳ್ಳಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಗರದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಮುಂಬೈಗೆ ಬಂದು ನಂತರ ಮುಂಬೈನಿಂದ ಬೆಂಗಳೂರಿಗೆ...