Wednesday, December 1, 2021

ಸುಬ್ರಹ್ಮಣ್ಯ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಸುಬ್ರಹ್ಮಣ್ಯ: ರೈಲು ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅವಘಡವೊಂದು ತಪ್ಪಿದ ಘಟನೆ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ರಸ್ತೆಯ ಸುಬ್ರಹ್ಮಣ್ಯ ಸಮೀಪ ಸಂಭವಿಸಿದೆ.

ಮುಂಜಾನೆ ಸಂಚರಿಸುವ ಬೆಂಗಳೂರು-ಕಾರವಾರ ರೈಲು ನೆಟ್ಟಣದಿಂದ ಮುಂದಕ್ಕೆ ಎಡಮಂಗಲ ಸಮೀಪ ತಲುಪಿದ ವೇಳೆಯಲ್ಲಿ, ರೈಲ್ವೆ ಹಳಿಯಲ್ಲಿ ಬಿರುಕು ಬಿಟ್ಟಿದೆ. ರೈಲಿನ ಒಂದು ಬೋಗಿ ಚಲಿಸಿದ ವೇಳೆ ಸಮಸ್ಯೆಯು ಚಾಲಕನ ಗಮನಕ್ಕೆ ಬಂದಿದೆ.

ಕೂಡಲೇ ಸಮಯಪ್ರಜ್ಞೆ ಮೆರೆದ ಚಾಲಕ ರೈಲನ್ನು ನಿಯಂತ್ರಿಸಿ, ನಿಲುಗಡೆ ಮಾಡಿ ಘಟನೆಯನ್ನು ಇಲಾಖೆ ಗಮನಕ್ಕೆ ತಂದಿದ್ದಾರೆ. ಬಳಿಕ ಕಾರ್ಯಚರಣೆ ನಡೆಸಿ ಹಳಿ ದುರಸ್ತಿ ನಡೆಸಲಾಯಿತು.

ಬಳಿಕ ರೈಲು ಸಂಚರಿಸಲು ಅವಕಾಶ ನೀಡಲಾಯಿತು.ಬಿರುಕು ಬಿಟ್ಟ ಹಳಿಯಲ್ಲಿ ರೈಲು ಸಂಚರಿಸುತ್ತಿದ್ದಲ್ಲಿ ಬಾರೀ ಅವಘಡ ಸಂಭವಿಸಿ ಪ್ರಾಣ ಹಾನಿ ಉಂಟಾಗುವ ಸಾಧ್ಯತೆ ಇತ್ತು ಎನ್ನಲಾಗಿದೆ.

ಸದ್ಯ ಚಾಲಕನ ಸಮಯ ಪ್ರಜ್ಞೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...