Sunday, December 4, 2022

ಪುತ್ತೂರಿನಲ್ಲಿ ರೈಲಿಗೆ ಬಲಿಯಾದ ಕಡಬದ ಯುವಕ

ಪುತ್ತೂರು: ಕಿರು ಸೇತುವೆ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ರೈಲು ಬಡಿದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಪುತ್ತೂರಿನ ಕಬಕ ಸಮೀಪದ ಮಿತ್ತೂರಿನಲ್ಲಿ ನಡೆದಿದೆ.

ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ ಯುವಕ.


ಇವರು ಮಿತ್ತೂರಿನ ಕಿರು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮುಂಭಾಗದಿಂದ ಬಂದ ರೈಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೇಸ್ತ್ರಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಕೆಲಸದ ನಿಮಿತ್ತ ಮಂಗಳೂರಿಗೆ ಬಂದಿದ್ದರು. ಬಸ್ ಸಿಗದ ಕಾರಣ ಮಿತ್ತೂರಿನ ಉಪ್ಪಿನಂಗಡಿ ಸಂಪರ್ಕಿಸಲು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.

ಈ ಸಂದರ್ಭ ಅಪಘಾತ ಸಂಭವಿಸಿರಬಹುದೆಂದು ರೈಲ್ವೆ ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಮಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics