Connect with us

MANGALORE

ಕ್ರಷ್ಣಾಪುರದಲ್ಲಿ ಸರಕಾರಿ ಉದ್ಯೋಗ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಾಗಾರ..!

Published

on

ಕ್ರಷ್ಣಾಪುರದಲ್ಲಿ ಸರಕಾರಿ ಉದ್ಯೋಗ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಾಗಾರ

ಮಂಗಳೂರು : ಇನ್ಫೋಮೇಟ್ ಫೌಂಡೇಶನ್ ( ರಿ)‌ ಹಾಗೂ ಇನ್ಫಾರ್ಮರ್ಮೇಶನ್ ಆಂಡ್‌‌ ಎಂಪವರ್ಮೆಂಟ್ ಸೆಂಟರ್ ಚೊಕ್ಕಬೆಟ್ಟು ವತಿಯಿಂದ ಹಮ್ಮಿಕೊಂಡ ಸರಕಾರಿ ಉದ್ಯೋಗಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ ಎಂಬ ವಿಷಯದಲ್ಲಿ ‌ಮಾಹಿತಿ ಶಿಬಿರ ಇಂದು ಕ್ರಷ್ಣಾಪುರ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಬದ್ರಿಯಾ ಜುಮಾ ಮಸೀದಿಯ ಹಿಫ್ಳ್ ಅಧ್ಯಾಪಕ ಹಾಫಿಲ್ ಇಮ್ರಾನ್ ಝುಹುರಿ ದುಆ ಮೂಲಕ ಚಾಲನೆ ನೀಡಿದರು. ಐಇಸಿ ಚೊಕಬೆಟ್ಟು ಉಸ್ತುವಾರಿ ನೌಷಾದ್ ಅಧ್ಯಕ್ಷತೆಯಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಬದ್ರಿಯಾ ಜುಮಾ ಮಸೀದಿ ಕೃಷ್ಣಪುರ ಅಧ್ಯಕ್ಷರಾದ ಹಾಜಿ ಬಿ.ಎಂ ಮುಮ್ತಾಜ್ ಅಲಿ ಭಾಗವಹಿಸಿ ಕಾರ್ಯಕ್ರಮದ ಸಂಘಟಕರನ್ನು ಅಭಿನಂದಿಸಿದರು.

ಅಲ್ ಬದ್ರಿಯಾ ಎಜುಕೇಶನ್ ಅಸೋಶಿಯೇಶನ್ ಮುಖ್ಯಸ್ಥರಾದ ಅಬ್ದುಲ್ ಖಾದರ್, ಎಸ್ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಅಬೂಬಕ್ಕರ್ ಕುಳಾಯಿ, ಸಿವಿಲ್ ಸರ್ವಿಸ್ ತರಬೇತುದಾರ ಮೊಹಮ್ಮದ್ ಅಲಿ ರೂಮಿ ಕೃಷ್ಣಾಪುರ, ಮೀಫ್ ಸಂಸ್ಥೆಯ ಉಪಾಧ್ಯಕ್ಷ ನಜೀರ್ ಬಿ.ಎ ಉಪಸ್ಥಿತರಿದ್ದರು. ಇನ್ಫಾರ್ಮಶನ್ ಸಂಸ್ಥೆಯ ತರಬೇತುದಾರ ಅಬ್ದುಲ್ ಖಾದರ್ ಪ್ರಾಸ್ತಾವಿಕ ಭಾಷಣಗೈದು ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.

ಮಂಗಳೂರು ಪಿಎ ಕಾಲೇಜು ಮ್ಯಾನೇಜ್ಮೆಂಟ್ ಆಂಡ್ ರೀಸರ್ಚ್ ಸೆಂಟರ್ ನಿರ್ದೇಶಕ ಡಾಕ್ಟರ್ ಸೈಯ್ಯದ್ ಅಮೀನ್ ಅಹ್ಮದ್ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ ನಡೆಸಿಕೊಟ್ಟು ಶಿಬಿರಾರ್ಥಿಗಳ ಹಲವು ಸಂಶಯಗಳನ್ನು ನಿವಾರಿಸಿದರುನೀಡಿದರು. ಐಇಸಿ ಸಂಸ್ಥೆಯ ಮುಖ್ಯಸ್ಥ ಅನ್ಸಾರ್ ಕೃಷ್ಣಾಪುರ ಕಾರ್ಯಕ್ರಮ ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

DAKSHINA KANNADA

ದಂತ ವೈದ್ಯೆಯಾಗಿ ಸೇವೆ ಆರಂಭದ ದಿನವೇ ವಿಧಿಯಾಟ..! ಯುವ ವೈದ್ಯೆ ಸಾ*ವು..!

Published

on

ಮಂಗಳೂರು : ಆಕೆ ಆರೋಗ್ಯವಾಗಿದ್ದು, ಇನ್ನೊಬ್ಬರ ಆರೋಗ್ಯ ವಿಚಾರಿಸುವ ವೈದ್ಯೆಯಾಗಿದ್ದವರು. ದಂತ ವೈದ್ಯಕೀಯ ಪದವಿ ಮುಗಿಸಿ ಇನ್ನೇನು ಕೆಲಸಕ್ಕೆ ಸೇರಬೇಕು ಅಂತ ಒಂದು ಕ್ಲಿನಿಕ್‌ಗೆ ಜಾಯಿನ್ ಆಗಿದ್ದಾರೆ. ಆದ್ರೆ ದುರಾದೃಷ್ಟ ಅಂದ್ರೆ ಕೆಲಸಕ್ಕೆ ಜಾಯಿನ್ ಆಗುವ ದಿನವೇ ಆಕೆ ಇಹಲೋಕ ತ್ಯಜಿಸಿದ್ದಾರೆ. ಉಳ್ಳಾಲ ತಾಲೂಕಿನ ನರಿಂಘಾನ ಗ್ರಾಮದ ಆಳ್ವರಬೆಟ್ಟು ನಿವಾಸಿ 24 ವರ್ಷದ ಸ್ವಾತಿ ಶೆಟ್ಟಿ ಇಹಲೋಕ ತ್ಯಜಿಸಿದ ವೈದ್ಯೆಯಾಗಿದ್ದಾರೆ. ಉಳ್ಳಾಲ ತಾಲೂಕಿನ ನರಿಂಗಾನ‌ ಗ್ರಾಮದ ಆಳ್ವರಬೆಟ್ಟು ನಿವಾಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ, ಶಾಂತಿಪಳಿಕೆ ಶ್ರೀ ಮಹಾಮ್ಮಾಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮಣ್ಣ ಶೆಟ್ಟಿ ಆಳ್ವರಬೆಟ್ಟು ಹಾಗೂ ಜ್ಯೋತಿ ಶೆಟ್ಟಿ ದಂಪತಿ ಪುತ್ರಿ ಇವರು.

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಮುಗಿಸಿ ಮಂಗಳವಾರದಿಂದ(16-04-2024) ಪಾಂಡೇಶ್ವರದ ಕ್ಲಿನಿಕ್ ಒಂದರಲ್ಲಿ ಕೆಲಸಕ್ಕೆ ಜಾಯಿನ್ ಆಗುವವರಿದ್ದರು. ಹೀಗಾಗಿ ಸೋಮವಾರ (15-04-2024) ಸಂಜೆ ಪಾಂಡೇಶ್ವರದ ಪಿಜಿ ಬಂದು ಜಾಯಿನ್ ಆಗಿದ್ದರು. ಮರುದಿನ ಹೊಸ ಕೆಲಸಕ್ಕೆ ಹೋಗುವ ಕಾರಣ ಸಾಕಷ್ಟು ಎಕ್ಸೈಟ್ ಆಗಿದ್ದ ಸ್ವಾತಿ ತಂದೆ ತಾಯಿ ಜೊತೆ ಫೋನ್ ಮೂಲಕ ಮಾತನಾಡಿದ್ದರು. ಈ ವೇಳೆ ವಿಪರೀತ ತಲೆನೋವು ಕಾಣಿಸಿಕೊಂಡ ಕಾರಣ ಬೇಗನೆ ಮಲಗುವುದಾಗಿ ಹೇಳಿ ಸ್ವಾತಿ ನಿದ್ರೆಗೆ ಜಾರಿದ್ದರು. ಈ ವೇಳೆ ರೂಮ್ ಮೇಟ್ ಕೂಡಾ ಜೊತೆಯಲ್ಲಿ ಇದ್ದರಾದ್ರೂ ತಲೆನೋವಿನ ಕಾರಣ ತೊಂದರೆ ಕೊಡದೆ ಅವರೂ ಕೂಡಾ ಮಲಗಿದ್ದರು. ಮುಂಜಾನೆ ಸ್ವಾತಿ ಎದ್ದಿಲ್ಲ ಅನ್ನೋ ಕಾರಣಕ್ಕೆ ಅವರನ್ನು ಅಲುಗಾಡಿಸಲು ಹೋದಾಗ ಮೈ ತಣ್ಣಗಾಗಿರುವುದು ಗೊತ್ತಾಗಿದೆ.  ತಕ್ಷಣ ಅಂಬ್ಯುಲೆನ್ಸ್ ಮೂಲಕ ನಗರದ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಅಷ್ಟರಲ್ಲಾಗಲೇ ಅವರು ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ವಾತಿ ಅವರಿಗೆ ಅಪರೂಪಕ್ಕೆ ತಲೆ ನೋವು ಕಾಣಿಸಿಕೊಳ್ಳುತ್ತಿತ್ತು. ಆದ್ರೆ ಅವರ ಈ ಧಿಡೀರ್ ಸಾವಿಗೆ ಕಾರಣ ಏನು ಅನ್ನೋದು ಇನ್ನಷ್ಟೇ ಗೊತ್ತಾಗಬೇಕಾಗಿದೆ.

 

 

Continue Reading

DAKSHINA KANNADA

ದೇಶದಲ್ಲಿ ಮೊದಲ ಬಾರಿಗೆ QR ಕೋಡ್ ವೋಟರ್ ಸ್ಲಿಪ್

Published

on

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿ ಮತದಾರರಿಗೆ ಕ್ಯೂ ಆರ್‌ ಕೋಡ್‌ ಹೊಂದಿರುವ ವೋಟರ್‌ ಸ್ಲಿಪ್‌ ನೀಡಲಾಗುವುದು.

ರಾಜ್ಯದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತಗಟ್ಟೆ ಸುಲಭವಾಗಿ ಹುಡುಕಲು ಸಾಧ್ಯವಾಗದಂತೆ ಮನೆ ಮನೆಗೆ ನೀಡಲಾಗುವ ವೋಟರ್‌ ಸ್ಲಿಪ್‌ ಗಳಲ್ಲಿ ಮತಗಟ್ಟೆಯ ಕ್ಯೂ ಆರ್‌ ಕೋಡ್‌ ಮುದ್ರಿಸಲಾಗಿದೆ.

ನಗರದ ನಿವಾಸಿಗಳು ಕ್ಯೂ ಆರ್‌ ಕೋಡ್‌ ಮೂಲಕ ತಮ್ಮ ಮತಗಟ್ಟೆಯನ್ನು ಸುಲಭವಾಗಿ ಗುರುತಿಸಬಹುದಾಗಿದೆ. ಮತದಾರರ ಮಾಹಿತಿ ಚೀಟಿಯನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ನೋಂದಾಯಿತ ಎಲ್ಲಾ ಮತದಾರರಿಗೆ ಒದಗಿಸಲಾಗುವುದು.

Continue Reading

DAKSHINA KANNADA

ಪ್ರತಿಭಾವಂತೆ ವಿದ್ಯಾರ್ಥಿನಿಯನ್ನು ಬಲಿ ಪಡೆದ ಮೆದುಳು ಜ್ವರ

Published

on

ಮೂಡಬಿದಿರೆ: ಮೆದುಳು ಜ್ವರಕ್ಕೆ 10ನೇ ತರಗತಿ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಮೂಡಬಿದರೆಯಲ್ಲಿ ನಡೆದಿದೆ. ಶಿರ್ತಾಡಿ ಮೌಂಟ್ ಕಾರ್ಮೆಲ್ ಹೈಸ್ಕೂಲ್‌ನ 10ನೇ ತರಗತಿಯ ಸ್ವಸ್ತಿ ಶೆಟ್ಟಿ (15) ಮೃತ ವಿದ್ಯಾರ್ಥಿನಿ. ಸ್ವಸ್ತಿ ಶೆಟ್ಟಿ ಮೆದುಳು ಜ್ವರ ಉಲ್ಬಣಗೊಂಡ ಪರಿಣಾಮ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Swasthi

ಉತ್ತಮ ತ್ರೋಬಾಲ್ ಆಟಗಾರ್ತಿಯಾಗಿದ್ದ ಈಕೆ ಉತ್ತಮ ನೃತ್ಯಪಟುವೂ ಆಗಿದ್ದಳು.ತಂದೆ ಸತೀಶ್‌ ಶೆಟ್ಟಿ ಗೋವಾದಲ್ಲಿ ಉದ್ಯೋಗದಲ್ಲಿದ್ದು ತಾಯಿ ಸರಿತಾ ಶೆಟ್ಟಿ ಶಿರ್ತಾಡಿ ನವಮೈತ್ರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಉದ್ಯೋಗಿ. ಮೂಲತಃ ವಾಲ್ಪಾಡಿಯವರಾದ ಇವರು ಪ್ರಸ್ತುತ ಮೂಡಬಿದಿರೆಯಲ್ಲಿ ನೆಲೆಸಿದ್ದಾರೆ.

READ MORE..; ಪ್ರಚಾರದ ಭರದಲ್ಲಿ ತೇಜಸ್ವಿ ಸೂರ್ಯ ಕಿರಿಕ್‌..! ಸಂಸದರಿಗೆ ಡೌನ್ ಡೌನ್ ಎಂದ ಸಭಿಕರು

Continue Reading

LATEST NEWS

Trending