Connect with us

    NATIONAL

    ಭಾರತೀಯ ಕೋಸ್ಟ್ ಗಾರ್ಡ್‌ನ ಗೌಪ್ಯ ಮಾಹಿತಿ ಪಾಕ್‌ಗೆ ರವಾನೆ; ಆರೋಪಿ ಅರೆಸ್ಟ್

    Published

    on

    ಮಂಗಳುರು/ಗುಜರಾತ್‌: ಭಾರತೀಯ ಕೋಸ್ಟ್ ಗಾರ್ಡ್ ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದ ಹಿನ್ನಲೆ ಭಯೋತ್ಪಾದನಾ ನಿಗ್ರಹ ದಳದ ಗುಜರಾತ್ ಘಟಕವು ಓಖಾ ಮೂಲದ ಗುತ್ತಿಗೆ ಕಾರ್ಮಿಕನೋರ್ವನನ್ನು ಬಂಧಿಸಿದ್ದಾರೆ.

    ದೀಪೇಶ್ ಗೋಹಿಲ್ ಬಂಧಿತ ಆರೋಪಿ. ಓಖಾ ಬಂದರಿನಲ್ಲಿ ಗುತ್ತಿಗೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಈತ ಫೇಸ್ ಬುಕ್ ಮೂಲಕ ಪರಿಚಯಸ್ಥನಾದ ಪಾಕಿಸ್ತಾನದ ಏಜೆಂಟ್ ಜೊತೆ ಸಂಪರ್ಕದಲ್ಲಿದ್ದ. ದೀಪೇಶ್ ಸೂಕ್ಷ್ಮ ಮಾಹಿತಿ ರವಾನಿಸಿದ್ದಕ್ಕೆ ಪಾಕ್ ಏಜೆಂಟ್ ನಿಂದ ದಿನಕ್ಕೆ 200ರೂ. ಪಡೆಯುತ್ತಿದ್ದ ಮತ್ತು ಈವೆರೆಗೆ ಒಟ್ಟು 42,000ರೂ. ಪಡೆದಿದ್ದಾನೆ.

    ಪಾಕಿಸ್ತಾನದ ಏಜೆಂಟ್ ತನ್ನನ್ನು ಸಹಿಮಾ ಎಂದು ಪರಿಚಯಿಸಿಕೊಂಡು ಫೇಸ್ಬುಕ್ ಮತ್ತು ವಾಟ್ಸಾಪ್ ನಲ್ಲಿ ದೀಪೇಶ್ ಜೊತೆ ಸಂಪರ್ಕದಲ್ಲಿದ್ದ. ಓಖಾ ಬಂದರಿನಲ್ಲಿರುವ ಕೋಸ್ಟ್ ಗಾರ್ಡ್ ಬೋಟ್ ನ ಹೆಸರು ಮತ್ತು ಸಂಖ್ಯೆಯನ್ನು ದೀಪೇಶ್ ಏಜೆಂಟ್ ಜೊತೆ ಹಂಚಿಕೊoಡಿದ್ದ ಎಂದು ಹೇಳಲಾಗಿದೆ. ಗುಜರಾತ್ ಎಟಿಎಸ್ ಅಧಿಕಾರಿ ಕೆ ಸಿದ್ಧಾರ್ಥ್ ಈ ಕುರಿತು ಪ್ರತಿಕ್ರಿಯಿಸಿದ್ದು, ಓಖಾ ಮೂಲದ ವ್ಯಕ್ತಿಯೊಬ್ಬ ಕೋಸ್ಟ್ ಗಾರ್ಡ್ ಬೋಟ್ ಕುರಿತು ಪಾಕಿಸ್ತಾನದ ನೌಕಾಪಡೆ ಮತ್ತು ಐಎಸ್ಐ ಏಜೆಂಟ್ನೊಂದಿಗೆ ವಾಟ್ಸಾಪ್ ಮೂಲಕ ವಿವರಗಳನ್ನು ಹಂಚಿಕೊಳ್ಳುತ್ತಿದ್ದಾನೆ ಎಂಬ ಮಾಹಿತಿಯನ್ನು ನಾವು ಸ್ವೀಕರಿಸಿದ್ದೇವೆ.

    ಈ ಕುರಿತ ತನಿಖೆಯ ನಂತರ ನಾವು ಓಖಾ ನಿವಾಸಿ ದೀಪೇಶ್ ಗೋಹಿಲ್ ಎಂಬಾತನನ್ನು ಬಂಧಿಸಿದ್ದೇವೆ. ಪಾಕಿಸ್ತಾನದ ಗೂಢಚಾರಿಗೆ ಮಾಹಿತಿ ನೀಡಿದ್ದಕ್ಕೆ ಆತ ದಿನಕ್ಕೆ 200ರೂ. ಪಡೆಯುತ್ತಿದ್ದ. ಆತನಲ್ಲಿ ಬ್ಯಾಂಕ್ ಖಾತೆ ಇಲ್ಲದ ಕಾರಣ ತನ್ನ ಸ್ನೇಹಿತನ ಖಾತೆಗೆ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾನೆ. ನಂತರ ವೆಲ್ಡಿಂಗ್ ಕೆಲಸಕ್ಕಿರುವ ಹಣ ಎಂದು ಹೇಳಿ ತನ್ನ ಸ್ನೇಹಿತನಿಂದ ನಗದು ರೂಪದಲ್ಲಿ ಹಣ ಪಡೆದಿದ್ದಾನೆ. ಇದೇ ರೀತಿ ಆತ ಒಟ್ಟು 42,000ರೂ. ಹಣ ಪಡೆದಿದ್ದಾನೆ ಎಂದು ಹೇಳಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಫೆಂಗಲ್ ಚಂಡಮಾರುತ ಭೀತಿ; ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

    Published

    on

    ಮಂಗಳೂರು/ಚೆನ್ನೈ  :  ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಸುಮಾರು ಮೂರು ದಿನಗಳ ಬಳಿಕ ಇದೀಗ ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ‘ಫೆಂಗಲ್’ ಚಂಡಮಾರುತ ರೂಪುಗೊಂಡಿದೆ. ಅದು ಉತ್ತರ ತಮಿಳುನಾಡು – ಪುದುಚೇರಿ ಕರಾವಳಿಯತ್ತ ಸಾಗುತ್ತಿದ್ದು, ಇಂದು(ನ.30) ಅಪ್ಪಳಿಸುವ ಸಾಧ್ಯತೆಯಿದೆ. ಹಾಗಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

    ಹವಾಮಾನ ಇಲಾಖೆಯ ಇತ್ತೀಚಿನ ಮಾಹಿತಿ ಪ್ರಕಾರ, ಚಂಡಮಾರುತವು ವಾಯುವ್ಯಕ್ಕೆ 15 ಕಿ.ಮೀ. ವೇಗದಲ್ಲಿ ಚಲಿಸುತ್ತಿದ್ದು, ನಾಗಪಟ್ಟಣಂನ ಪೂರ್ವ-ಈಶಾನ್ಯಕ್ಕೆ 240 ಕಿ.ಮೀ, ದೂರ, ಪಾಂಡಿಚೇರಿಯ ಪೂರ್ವ-ಆಗ್ನೇಯಕ್ಕೆ 230 ಕಿ.ಮೀ. ದೂರ ಹಾಗೂ ಚೆನ್ನೈನಿಂದ ಆಗ್ನೇಯಕ್ಕೆ 250 ಕಿ.ಮೀ. ದೂರ ಕೇಂದ್ರೀಕೃತವಾಗಿದೆ.

    ತೀವ್ರ ಚಂಡಮಾರುತವಾಗಿ ಗಂಟೆಗೆ 70 ರಿಂದ 80 ಕಿ.ಮೀ. ವೇಗದಲ್ಲಿ ಹಾಗೂ ಚಂಡಮಾರುತ ನೆಲೆಯಾಗುವ ಸಮಯದಲ್ಲಿ ಗಂಟೆಗೆ 90 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ಪಾಂಡಿಚೇರಿಗೆ ಸಮೀಪದಲ್ಲಿರುವ ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    7 ಜಿಲ್ಲೆಗಳಿಗೆ ರೆಡ್ ಅಲರ್ಟ್ :

    ತಿರುವಳ್ಳೂರು, ಚೆಂಗಲ್ಪಟ್ಟು, ಕಾಂಚೀಪುರಂ, ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು ಮತ್ತು ಪಾಂಡಿಚೇರಿ, ಚೆನ್ನೈ ಸೇರಿದಂತೆ ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಇತರ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಪರಿಣಾಮ ಕರ್ನಾಟಕದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು,  ರಾಜ್ಯದ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

    ಇದನ್ನೂ ಓದಿ : ಪತ್ನಿಯನ್ನು ಹನಿಮುನ್‌ಗೆ ಕರೆದೊಯ್ದು ಮಾರಿದ ಪಾ*ಪಿ ಪತಿ !! ಮುಂದೇನಾಯ್ತು…..

    ಕರ್ನಾಟಕ ಕರಾವಳಿಯಲ್ಲಿ ಮುಂದಿನ 3 ದಿನಗಳಿಗೆ ಎಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಡಿಸೆಂಬರ್‌ 1,2, 3 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದಲ್ಲದೆ ಕರಾವಳಿಯ ಗ್ರಾಮೀಣ ಭಾಗಗಳಲ್ಲಿ ರಾತ್ರಿ ವೇಳೆ ಹೆಚ್ಚು ಚಳಿಯ ಅನುಭವವಾಗಿದ್ದು, ಮುಂದಿನ ಒಂದು ವಾರಕ್ಕೂ ಅಧಿಕ ಕಾಲ ಚಳಿಯ ವಾತಾವರಣ ಇರುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    Continue Reading

    NATIONAL

    ಪತ್ನಿಯನ್ನು ಹನಿಮುನ್‌ಗೆ ಕರೆದೊಯ್ದು ಮಾರಿದ ಪಾ*ಪಿ ಪತಿ !! ಮುಂದೇನಾಯ್ತು…..

    Published

    on

    ತನ್ನ ಪತ್ನಿಯನ್ನು ವ್ಯಕ್ತಿಯೊಬ್ಬ ಕತಾರ್‌ಗೆ ಹನಿಮೂನ್‌ಗೆಂದು ಕರೆದುಕೊಂಡು ಹೋಗಿದ್ದು, ಬಳಿಕ 10 ಲಕ್ಷ ರೂಪಾಯಿಗೆ ಆಕೆಯನ್ನು ಮಾ*ರಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆದರೆ, ಆಕೆ ಭಾರತಕ್ಕೆ ಮರಳಿದ್ದು, ಆ ಕಥೆಯೇ ರೋಚಕ.

    ಘಟನೆ ಏನಿದು ?

    2021 ರಲ್ಲಿ ಆರೋಪಿ ಶಹಬಾಜ್ ಹಸನ್​ನೊಂದಿಗೆ ಮಹಿಳೆಯ ವಿವಾಹವಾಗಿತ್ತು. ಮನೆಯವರಿಗೆ ಯುವಕ ವಿದ್ಯುತ್ ಇಲಾಖೆಯಲ್ಲಿ ಸರ್ಕಾರಿ ನೌಕರ ಎಂದು ತಿಳಿಸಿದ್ದರು. ಆದರೆ, ಮದುವೆ ಬಳಿಕ ಗಂಡನ ಮನೆಗೆ ಹೋದಾಗ ಪತಿ ಎನ್‌ಜಿಒದಲ್ಲಿ ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೆಂಡತಿಯ ಮನವೊಲಿಸಿ ಕತಾರ್‌ಗೆ ಕರೆದುಕೊಂಡು ಹೋಗಿದ್ದಾನೆ.

     

    ಇದನ್ನೂ ಓದಿ : ಪತ್ನಿ ಮೇಲೆ ಅನುಮಾನ ; ಹೆಂಡತಿಗೆ ಬೆಂ*ಕಿ ಹಚ್ಚಿ ಆ*ತ್ಮಹತ್ಯೆಗೆ ಯತ್ನಿಸಿದ ಪಾ*ಪಿ ಪತಿ

     

    ಪತ್ನಿಯನ್ನು ಮಾರಾಟ ಮಾಡಿ ಪಾಟ್ನಾಗೆ ತಲುಪಿದ್ದ ಈತ ಪತ್ನಿಗೆ ಅಂಚೆ ಮೂಲಕ ತ್ರಿವಳಿ ತಲಾಖ್ ಕಳುಹಿಸಿದ್ದಾನೆ. ವಾಸ್ತವ ವಿಚಾರ ಬೆಳಕಿಗೆ ಬಂದ ಪತ್ನಿ ಬುದ್ದಿವಂತಿಕೆ ತೋರಿ ಭದ್ರತಾ ಸಿಬ್ಬಂದಿಯ ಸಹಾಯದಿಂದ ತನಗಾದ ಕಹಿ ಅನುಭವವನ್ನು ಪತ್ರದಲ್ಲಿ ಬರೆದು ಭಾರತೀಯ ರಾಯಭಾರ ಕಚೇರಿಗೆ ತಲುಪಿಸಿದ್ದಾಳೆ. ನಂತರ ಅವರು ಮಹಿಳೆಯನ್ನು ಭಾರತಕ್ಕೆ ಸುರಕ್ಷಿತವಾಗಿ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಈ ಸಂಪೂರ್ಣ ವಿಷಯಕ್ಕೆ ಸಂಬಂಧಿಸಿದಂತೆ, ಮಹಿಳೆ ಇದೀಗ ರಾಜಧಾನಿಯ ದಿಘಾ ಪೊಲೀಸ್ ಠಾಣೆಯಲ್ಲಿ ತನ್ನ ಪತಿ ಮತ್ತು ಅತ್ತೆಯ ವಿರುದ್ಧ ವಂಚನೆ ಪ್ರಕರಣವನ್ನು ದಾಖಲಿಸಿದ್ದಾರೆ. ಇಲ್ಲಿ ಒನ್ ಸ್ಟಾಪ್ ಸೆಂಟರ್ ಮೂಲಕ ಮಹಿಳೆಗೆ ಕಾನೂನು ನೆರವು ನೀಡುತ್ತಿದೆ.

    Continue Reading

    LATEST NEWS

    ಆರ್‌ಸಿಬಿಗೆ ರಾಜ್ಯ ಸರ್ಕಾರದಿಂದ ಎಚ್ಚರಿಕೆ !

    Published

    on

    ಮಂಗಳೂರು/ಬೆಂಗಳೂರು: ಆರ್‌ಸಿಬಿ ಎಂದರೆ ಸಾಕು ಕನ್ನಡಿಗರಿಗೆ ಎಲ್ಲಿಲ್ಲದ ವ್ಯಾಮೋಹ. ಆದರೆ ಅಭಿಮಾನಿಗಳ ಪ್ರಿತೀಯನ್ನು ಆರ್‌ಸಿಬಿ ಬಂಡಾವಾಳವನ್ನಾಗಿ ಪರಿವರ್ತಿಸುತ್ತಿರುವುದೇ ಬೇಸರದ ಸಂಗತಿ
    ಆರ್‌ಸಿಬಿ ಸೋಷಿಯಲ್ ಮೀಡಿಯಾದಲ್ಲಿ ಹೊಸ ಹಿಂದಿ ಪೇಜ್ ಪ್ರಾರಂಭಿಸುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ವಿವಾದಕ್ಕೆ ಈಗ ರಾಜ್ಯ ಸರ್ಕಾರವೇ ಮಧ್ಯಪ್ರವೇಶಿಸಿದ್ದು ತಪ್ಪನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಿದೆ.


    ಈ ಬಗ್ಗೆ ಮಾತನಾಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ ನೀಡಿದ್ದಾರೆ. ಆರ್‌ಸಿಬಿಯ ಎಲ್ಲಾ ಅಪ್ಡೇಟ್ಸ್ ಗಳನ್ನು ನಾವು ಮೀಡಿಯಾದಲ್ಲಿ ಗಮನಿಸುತ್ತಿದ್ದೇವೆ. ಆರ್‌ಸಿಬಿಯನ್ನು ನಾವು ಬಹಳ ಗೌರವಿಸುತ್ತೇವೆ. ಕನ್ನಡಿಗರಿಗೆ ಯಾವುದೇ ಕಾರಣಕ್ಕೂ ನೋವು ಮಾಡಬೇಡಿ ಎಂದು ಹೇಳಲಾಗಿದೆ. ಆರ್‌ಸಿಬಿ ಅವರು ಬದಲಾವಣೆ ಮಾಡಿಕೊಳ್ಳಬಹುದು ಎಂದು ಅಂದುಕೊಂಡಿದ್ದೇನೆ. ಇಲ್ಲವಾದರೆ ನಾವು ಕಾರ್ಯದರ್ಶಿ ಗೆ ನೋಟಿಸ್ ಜಾರಿ ಮಾಡ್ತೀವಿ.

    ಇದನ್ನೂ ಓದಿ: ಭಾರತೀಯ ಕೋಸ್ಟ್ ಗಾರ್ಡ್‌ನ ಗೌಪ್ಯ ಮಾಹಿತಿ ಪಾಕ್‌ಗೆ ರವಾನೆ; ಆರೋಪಿ ಅರೆಸ್ಟ್

    ಆರ್‌ಸಿಬಿ ಎಷ್ಟೇ ಬಾರಿ ಸೋತರೂ ನಾವು ಆ ತಂಡವನ್ನು ಬೆಂಬಲಿಸಿಕೊಂಡು ಬಂದಿದ್ದೇವೆ. ಅದಕ್ಕೆ ಹೆಚ್ಚು ಫ್ಯಾನ್ ಫಾಲೋಯಿಂಗ್ ಇರುವುದು ಕನ್ನಡಿಗರು ಹಾಗೂ ಕರ್ನಾಟಕದಲ್ಲಿ ಎಂದು ಹೇಳಿದ್ದಾರೆ.
    ಆರ್‌ಸಿಬಿ ಹಿಂದಿಯಲ್ಲಿ ಮಾತ್ರವಲ್ಲದೇ ಇನ್ನೂ ಬೇರೆ ಬೇರೆ ಭಾಷೆಯಲ್ಲೂ ಪೇಜ್ ತೆಗೆಯುತ್ತೇವೆ ಎಂದು ಹೇಳಿರುವುದು ಇನ್ನೊಂದು ವಿವಾದಕ್ಕೆ ಕಾರಣವಾಗಿದೆ.

    Continue Reading

    LATEST NEWS

    Trending