bangalore
ಸಾರಿಗೆ ನೌಕರರ ಮುಷ್ಕರ; ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹ !
Published
3 days agoon
By
NEWS DESK3ಮಂಗಳೂರು/ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯ ಸಮಿತಿ ಸೇರಿದಂತೆ, ಆರು ಸಾರಿಗೆ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದೆ.
ಡಿಸೆಂಬರ್ 31 ರಿಂದ ರಾಜ್ಯದಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಬಸ್ಸುಗಳು ಸಂಚಾರ ಮಾಡುವುದು ಅನುಮಾನವಾಗಿದೆ.
‘ಜನವರಿ ಒಂದರಿಂದ ಬಸ್ ಸಂಚಾರ ಇರುವುದಿಲ್ಲ, ಸಹಕರಿಸಿ’ ಎಂದು ಪ್ರಯಾಣಿಕರಿಗೆ ಮತ್ತು ಸಾರಿಗೆ ನೌಕರರಿಗೆ ಬುಧವಾರ ಕರಪತ್ರ ಹಂಚಿಕೆ ಮಾಡಲಾಗಿದೆ. ಮೆಜೆಸ್ಟಿಕ್ ಬಸ್ ಸ್ಟ್ಯಾಂಡ್, ಡಿಪೋ-7 ವೋಲ್ವೋ ಬಸ್ ಡಿಪೋ, ಡಿಪೋ- 13 ಕತ್ರಿಗುಪ್ಪೆ, ಡಿಪೋ-20 ಬನಶಂಕರಿ ಸೇರಿದಂತೆ ಬಿಎಂಟಿಸಿ ಬಸ್ ಡಿಪೋಗಳಿಗೆ ತೆರಳಿ ಡಿಸೆಂಬರ್ 31 ರಿಂದ ಯಾರೂ ಕರ್ತವ್ಯ ನಿರ್ವಹಿಸಬಾರದು ಎಂದು ಕಂಡಕ್ಟರ್, ಡ್ರೈವರ್, ಮೆಕಾನಿಕ್ಗಳಿಗೆ ಸಾರಿಗೆ ಮುಖಂಡರು ಕರಪತ್ರ ಹಂಚಿದ್ದಾರೆ.
ಈ ವೇಳೆ ಮಾತನಾಡಿದ ಸಾರಿಗೆ ಮುಖಂಡರು, ಶಕ್ತಿ ಯೋಜನೆಯ ಬಾಕಿ ಹಣವೇ ಎರಡು ಸಾವಿರ ಕೋಟಿ ರೂಪಾಯಿಯಷ್ಟು ಇದೆ. ಅದನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಚೀನಾಕ್ಕೆ ಭಾರತದ ಜೇಮ್ಸ್ ಬಾಂಡ್; ಮಹತ್ವದ ಮಾತುಕತೆ
ಶಕ್ತಿ ಯೋಜನೆ: ಸರ್ಕಾರ ನಿಗಮಗಳಿಗೆ ಬಿಡುಗಡೆ ಮಾಡಬೇಕಿರುವ ಬಾಕಿ ಹಣದ ವಿವರ
ಕೆಎಸ್ಆರ್ಟಿಸಿ -714.39 ಕೋಟಿ ರೂ.
ಬಿಎಂಟಿಸಿ – 290.97 ಕೋಟಿ ರೂ.
ಎನ್ಡಬ್ಲ್ಯುಕೆಆರ್ಟಿಸಿ – 408.42 ಕೋಟಿ ರೂ.
ಕೆಕೆಆರ್ಟಿಸಿ – 347.86 ಕೋಟಿ ರೂ.
ಒಟ್ಟು ಮೊತ್ತ – 1761.64 ಕೋಟಿ ರುಪಾಯಿ ರೂ.
ಸರ್ಕಾರಕ್ಕೆ ಮುಷ್ಕರದ ನೋಟಿಸ್ ನೀಡಿರುವ ಕ್ರಿಯಾ ಸಮಿತಿ
ಮುಷ್ಕರ ನಡೆಸುವ ಬಗ್ಗೆ ನೌಕರರ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್ 9ರಂದು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರಕ್ಕೆ ನೋಟಿಸ್ ನೀಡಿದೆ. ಕಾರ್ಮಿಕ ಇಲಾಖೆಯ ನಿಯಮಗಳ ಪ್ರಕಾರ, ಮುಷ್ಕರ ಮಾಡುವ ಮುನ್ನ 21 ದಿನಗಳ ಕಾಲ ಮುಂಚಿತವಾಗಿ ನೋಟಿಸ್ ನೀಡಬೇಕು. ಆಹಿನ್ನೆಲೆಯಲ್ಲಿ ಈಗಾಗಲೇ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಒಟ್ಟಿನಲ್ಲಿ ಡಿಸೆಂಬರ್ 31ರಿಂದ ನಾಲ್ಕು ನಿಗಮಗಳ ಬಸ್ ಸಂಚಾರ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.
bangalore
ಕ್ರಿಸ್ಮಸ್ ಸ್ಪೆಷಲ್ ಆಫರ್; ಮಂಗಳೂರು – ಬೆಂಗಳೂರು ವಿಶೇಷ ರೈಲು ಸಂಚಾರ
Published
5 hours agoon
22/12/2024ಮಂಗಳೂರು : ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬೆಂಗಳುರು – ಮಂಗಳೂರು ನಡುವೆ ಡಿಸೆಂಬರ್ 23 ಹಾಗೂ 27 ರಂದು ವಿಶೇಷ ರೈಲು ಸಂಚರಿಸಲಿದೆ. ಮತ್ತೆ ಪುನಃ ಅದೇ ರೈಲು (06506) ಡಿಸೆಂಬರ್ 24 ಮತ್ತು 28 ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಮಧ್ಯಾಹ್ನ 1:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 10.30 ಕ್ಕೆ ಯಶವಂತಪುರ ತಲುಪಲಿದೆ.
ಕೆಲಸದ ನಿಮಿತ್ತ ಮಂಗಳೂರಿನ ಹಲವು ಜನ ಬೆಂಗಳೂರಿನಲ್ಲಿ ವಾಸವಿದ್ದಾರೆ. ಇದೀಗ ಕ್ರಿಸ್ಮಸ್ ಹಬ್ಬ ಸಮೀಪಿಸುತ್ತಿದ್ದು, ಊರಿಗೆ ಮರಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಅವರಿಗೆಲ್ಲಾ ಅನುಕೂಲವಾಗಲೆಂದು ಈ ವಿಶೇಷ ರೈಲು ಸಂಚಾರವನ್ನು ಅಳವಡಿಸಿದ್ದು, ಹಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇದರ ಫಲಾನುಭವಿಗಳಾಗಲಿದ್ದಾರೆ.
ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಪ್ರಯಾಣಿಕರು ಅಧಿಕೃತ (www.enquiry.indianrail.gov.in) ವೆಬ್ಸೈಟ್ಗೆ ಭೇಟಿ ನೀಡಿ. NTES ಅಪ್ಲಿಕೇಶನ್ ಬಿಳಸಿ ಅಥವಾ 139 ನಂಬರಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ಮತ್ತು ಇತರ ಮಾಹಿತಿಯನ್ನು ವಡೆದುಕೊಳ್ಳಬಹುದು.
bangalore
ಫಾರ್ಮ್ ಹೌಸ್ ನಲ್ಲಿ ದರ್ಶನ್ ರಿಲ್ಯಾಕ್ಸ್; ಬೆನ್ನು ನೋವು ಮಾಯಾ !
Published
1 day agoon
21/12/2024By
NEWS DESK3ಮಂಗಳೂರು/ಮೈಸೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ದರ್ಶನ್ ಸೇರಿ ಕೆಲವರು ಜೈಲಿನಿಂದ ರಿಲೀಸ್ ಆಗಿದ್ದಾರೆ. 7 ಮಂದಿ ಆರೋಪಿಗಳಿಗೆ ಸೆರೆವಾಸದಿಂದ ಮುಕ್ತಿ ಸಿಕ್ಕಿದೆ. ಇದರ ಮಧ್ಯೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ದಾಸ ಮೈಸೂರಿನಲ್ಲಿ ರಿಲ್ಯಾಕ್ಸ್ ಮೋಡ್‌ಗೆ ಜಾರಿದ್ದಾರೆ.
ದರ್ಶನ್ ಗೆ ರೆಗ್ಯುಲರ್ ಬೇಲ್ ಸಿಕ್ಕಿದ್ದರೂ ಕೂಡ ಮೈಸೂರಿಗೆ ಹೋಗಲು ಅವಕಾಶ ಇರಲಿಲ್ಲ. ಇದರಿಂದ ದರ್ಶನ್ ಗೆ ಮೈಸೂರಿನ ಫಾರ್ಮ್ ಹೌಸ್ ಕಡೆ ಹೋಗಲು ತುಡಿತ ಹೆಚ್ಚಾಗಿತ್ತು. ಇದೇ ನಿಟ್ಟಿನಲ್ಲಿ ಸೆಷನ್ಸ್ ಕೋರ್ಟ್ ಗೆ ದಾಸ ಅರ್ಜಿ ಸಲ್ಲಿಸಿದರು. ಕೋರ್ಟ್ ಕೂಡ ದರ್ಶನ್ ಗೆ ಅನುಮತಿ ನೀಡಿತ್ತು. ಡಿಸೆಂಬರ್ 20ರಿಂದ ಜನವರಿ 05ರವರೆಗೆ 2ವಾರ ಪಮಿರ್ಷನ್ ಕೊಟ್ಟಿದೆ.
ಇದನ್ನೂ ಓದಿ: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ !
ಫಾರ್ಮ್ ಹೌಸ್ ನಲ್ಲಿ ದಾಸನ ಬೆನ್ನು ನೋವು ಮಾಯಾ !
ದರ್ಶನ್ ಗೆ ಕೋರ್ಟ್ ಅನುಮತಿ ಕೊಟ್ಟ ಬೆನ್ನಲ್ಲೇ ನಿನ್ನೆ ಬೆಳಗ್ಗೆ ದರ್ಶನ್ ಮೈಸೂರಿಗೆ ಪ್ರಯಣಿಸಿದ್ದಾರೆ. ಮೈಸೂರಿನ ಟಿ. ನರಸೀಪುರ ರಸ್ತೆಯಲ್ಲಿರುವ ವಿನೀಶ್ ಕ್ಯಾಟವೇರಿ ಫಾರ್ಮ್ ಹೌಸ್ನಲ್ಲಿ ರೆಸ್ಟ್ ಮಾಡುತ್ತಿದ್ದಾರೆ. ಫಾರ್ಮ್ ಹೌಸ್ನಲ್ಲಿ ಪ್ರಾಣಿಗಳ ಜೊತೆ ಕಾಲಕಳೆಯುತ್ತ ದರ್ಶನ್ ಓಡಾಡುತ್ತಿದ್ದಾರೆ. ತೋಟದ ಕೆಲಸ ಮಾಡಿಸುತ್ತ ಬೆನ್ನುನೋವನ್ನೇ ಮರೆತಂತೆ ಕಾಣಿಸಿಕೊಂಡಿದ್ದಾರೆ.
ಇಷ್ಟುದಿನ ಜೈಲಿನಲ್ಲಿ ಬಂಧಿಯಾಗಿದ್ದ ದರ್ಶನ್ ಈಗ ರಿಲ್ಯಾಕ್ಸ್ ಆಗಿದ್ದಾರೆ. ಆದರೆ ದಾಸನಿಗೆ ಮತ್ತೆ ಶಾಕ್ ಕೊಡಲು ಪೊಲೀಸ್ ಇಲಾಖೆ ಪ್ರಕರಣವನ್ನು ಸುಪ್ರೀಂಕೋರ್ಟ್ ಗೆ ಕೊಂಡೊಯ್ಯಲು ಸಜ್ಜಾಗಿದೆ.
bangalore
ವಿರಾಟ್ ಕೊಹ್ಲಿಗೆ ಶಾಕ್ ಕೊಟ್ಟ ಬಿಬಿಎಂಪಿ; ನೋಟಿಸ್ ನೀಡಿದ ಅಧಿಕಾರಿಗಳು !
Published
1 day agoon
21/12/2024By
NEWS DESK3ಮಂಗಳೂರು/ಬೆಂಗಳೂರು: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್, ಆರ್ ಸಿಬಿ ತಂಡದ ಆಟಗಾರ ವಿರಾಟ್ ಕೊಹ್ಲಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ (One8 Commune) & ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ ಮುಟ್ಟಿಸಿದೆ.
ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್‌ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಿದೆ. ಸಾಮಾಜಿಕ ಕಾರ್ಯಕರ್ತ ಹೆಚ್.ಎಂ ವೆಂಕಟೇಶ್ ಅನ್ನೋರು ಈ ಬಗ್ಗೆ ಬಿಬಿಎಂಪಿಗೆ ದೂರು ಕೊಟ್ಟಿದ್ದರು. ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಇದನ್ನೂ ಓದಿ: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ !
ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ರೂ ಕೊಹ್ಲಿ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ರೂಪದ ವಿವರಣೆ ಕೇಳಿದೆ. ಉತ್ತರ ನೀಡದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.
LATEST NEWS
ಮಹಾರಾಷ್ಟ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ ?
ಬಾಂಗ್ಲಾ ಹಿಂದೂಗಳ ಮೇಲೆ ದಾ*ಳಿ ; ಭಾರತೀಯರ ಮುಗಿಸಲು ಉ*ಗ್ರರ ಸಂಚು!
ಮಹತ್ವದ ನಿರ್ಧಾರ ಕೈಗೊಂಡ ಬೈಡನ್: 4.3 ಶತಕೋಟಿ ಡಾಲರ್ ವಿದ್ಯಾರ್ಥಿ ಸಾಲ ಮನ್ನಾ
ಅರೆಸ್ಟ್ ವಾರೆಂಟ್ ಬೆನ್ನಲ್ಲೇ ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ ಸ್ಪಷ್ಟನೆ !
ಬಾರತೀಯ ಕಾರ್ಮಿಕರೊಂದಿಗೆ ಕುವೈತ್ನಲ್ಲಿ ಮೋದಿ ಸಂವಾದ
ತೆಲಂಗಾಣ ಸರ್ಕಾರದಿಂದ ಟಾಲಿವುಡ್ಗೆ ಭಾರೀ ದೊಡ್ಡ ಹೊಡೆತ !!
Trending
- BIG BOSS6 days ago
ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ; ವಿಚಾರಣೆಯಲ್ಲಿ ಪೊಲೀಸರಿಗೆ ಸಿಕ್ತು ಮಹತ್ವದ ಮಾಹಿತಿ
- DAKSHINA KANNADA7 days ago
ಕ್ಯಾಟ್ಕದ ನೂತನ ಅಧ್ಯಕ್ಷರಾಗಿ ಲಂಚುಲಾಲ್ ಅವಿರೋಧವಾಗಿ ಆಯ್ಕೆ
- BIG BOSS7 days ago
ದಿಢೀರ್ ನಿರ್ಧಾರ ಕೈಗೊಂಡ ಗೋಲ್ಡ್ ಸುರೇಶ್; ಕಿಚ್ಚ ಸುದೀಪ್ ಶಾಕ್ !
- LATEST NEWS4 days ago
ದಹಿ ಪುರಿ ಚಾಟ್ಸ್ ಬದಲು ಪೂರಿ, ಮೊಸರು ಕಳುಹಿಸಿಕೊಟ್ಟ ರೆಸ್ಟೋರೆಂಟ್