Sunday, November 27, 2022

ಹಿಜಾಬ್‌ಗೆ ಅನುಮತಿ ಕೇಳಿದ ವಿದ್ಯಾರ್ಥಿನಿಗಳನ್ನು ಗೌರವದಿಂದ ಕಾಣಿ: ಸುಪ್ರೀಂನಲ್ಲಿ ವಾದ ಮಂಡನೆ

ನವದೆಹಲಿ: ಶಾಲೆಗಳಲ್ಲಿ ಹಿಜಾಬ್‌ ಧರಿಸುವ ಮೂಲಕ ವಿದ್ಯಾರ್ಥಿನಿಯರು ಯಾವುದೇ ಅಪರಾಧ ಎಸಗಿಲ್ಲ. ಆದರೂ ಅವರ ಶಿಕ್ಷಣ ಸೇರಿದಂತೆ ಎಲ್ಲ ಹಕ್ಕುಗಳನ್ನು ಕಸಿಯಲಾಗಿದೆ ಎಂದು ವಿದ್ಯಾರ್ಥಿಗಳ ಪರ ವಕೀಲರು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.


ಹಿಜಾಬ್‌ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತ ಹಾಗೂ ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪೀಠದ ಎದುರು ವಾದ ಮಂಡಿಸಿದ ಹಿರಿಯ ವಕೀಲ ಯೂಸುಫ್‌ ಮುಚ್ಚಾಲ, ‘ಈ ವಿದ್ಯಾರ್ಥಿಗಳು ಏನು ಅಪರಾಧ ಎಸಗುತ್ತಿದ್ದಾರೆ.

ಕೇವಲ ತಲೆಯ ಮೇಲೆ ಒಂದು ತುಂಡು ಬಟ್ಟೆ ಹಾಕಿಕೊಳ್ಳಲು ಅನುಮತಿ ಕೇಳಿದ್ದಕ್ಕೆ ಅವರಿಗೆ ಶಿಕ್ಷಣದ ಹಕ್ಕನ್ನು ನಿರಾಕರಿಸಲಾಗುತ್ತಿದೆ. ಹಿಜಾಬ್‌ ಧರಿಸಿದವರನ್ನು ವಿಚಿತ್ರ ಎಂಬಂತೆ ನೋಡುವ ಬದಲು ಗೌರವದಿಂದ ಕಾಣಬೇಕು’ ಎಂದರು.

ಇಲ್ಲಿಯವರೆಗೆ ಅನೇಕ ವಿದ್ಯಾರ್ಥಿನಿಯರು ಯಾವುದೇ ಅಡೆತಡೆ ಇಲ್ಲದೆ ಶಾಲೆಗಳಲ್ಲಿ ಹಿಜಾಬ್‌ ಧರಿಸುತ್ತಿದ್ದರು’ ಎಂದ ಅವರು, ಸಾಂಸ್ಕೃತಿಕ ಮತ್ತು ಧಾರ್ಮಿಕ ವೈವಿಧ್ಯತೆಯನ್ನು ಪ್ರೋತ್ಸಾಹಿಸಬೇಕಿದೆ.

ಟರ್ಬನ್‌ ಅಂದರೆ ಪಗಡಿ ಧರಿಸುವುದನ್ನು ಒಪ್ಪುವುದಾದರೆ, ಹಿಜಾಬ್‌ಗೆ ವಿರೋಧ ಏಕೆ. ಇಂತಹ ತಾರತಮ್ಯ ಏಕೆ. ಹಿಜಾಬ್‌ ಧರಿಸುವುದರಿಂದ ಶಾಂತಿ ಕದಡುವುದಿಲ್ಲ’ ಎಂದರು.

LEAVE A REPLY

Please enter your comment!
Please enter your name here

Hot Topics

ಸುಳ್ಯ: ಸಚಿವ ಅಂಗಾರ ಅವರಿಗೆ ಡೆಂಗ್ಯೂ ದೃಢ-ಆಸ್ಪತ್ರೆಗೆ ದಾಖಲು

ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.  ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ...

ಸುಳ್ಯದಲ್ಲಿ ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟಿದ್ದ ಪಾಪಿ ಪತಿ ಪ.ಬಂಗಾಳದಲ್ಲಿ ಅರೆಸ್ಟ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್...

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...