Connect with us

bengaluru

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರು ಸ್ಪಾಟ್ ಡೆತ್: ಮೂವರ ಸ್ಥಿತಿ ಗಂಭೀರ

Published

on

ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲೇ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ಇಂದು ಮುಂಜಾನೆ ಸಂಭವಿಸಿದೆ.


ಸುಂದ್ರಶ್ (49) ಮತ್ತು ತನ್ಮಯ್ ( 9) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದು ಶೀಲ, ಗಾನವಿ ಮತ್ತು ಸಾನವಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಬ್ಬಕ್ಕೆಂದು ಕುಟುಂಬ ಸಮೇತವಾಗಿ ಒಂದೇ ಕುಟುಂಬದ ಐವರು ಮಂಡ್ಯ ಜಿಲ್ಲೆಯ ಅಗಸನ ಪುರಕ್ಕೆ ಹೋಗಿದ್ದರು. ಹಬ್ಬ ಮುಗಿಸಿ ಬೆಂಗಳೂರಿಗೆ ಹಿಂತಿರುಗುವಾಗ ಓಮಿನಿ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ ಕಾರಿನ ಮೇಲೆ ಮರ ಬಿದ್ದಿದೆ.

ಈ ಸಂದರ್ಭ ಕಾರು ಸಂಪೂರ್ಣ ಜಖಂಗೊಂಡಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಲ್ಪ ಸಮಯ ಟ್ರಾಫಿಕ್ ಜಾಂ ಆಗಿತ್ತು.

ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

bengaluru

41ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಂಡ ಕ್ವೀನ್ ರಮ್ಯಾ

Published

on

ಬೆಂಗಳೂರು : ಇಂದು ಸ್ಯಾಂಡಲ್‌ವುಡ್‌ ಕ್ವೀನ್‌.. ಮೋಹಕತಾರೆ ರಮ್ಯಾ ಜನ್ಮದಿನ.. ಸೋಷಿಯಲ್‌ ಮಿಡಿಯಾದಲ್ಲಿ ಅವರ ಅಭಿಮಾನಿಗಳು ವಿಶ್‌ ಮಾಡುತ್ತಿದ್ದಾರೆ.
ಈ ಹುಟ್ಟುಹಬ್ಬಕ್ಕೆ ಅವರ ಹೊಸ ಸಿನಿಮಾದ ಅಪ್​ಡೇಟ್ ನೀಡಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಿಗಿತ್ತು. ಈವರೆಗೆ ರಮ್ಯಾರ ಹೊಸ ಸಿನಿಮಾಗಳ ಯಾವುದೇ ಅಪ್​ಡೇಟ್​ಗಳು ಹೊರಬಿದ್ದಿಲ್ಲ. ಆದರೆ ರಮ್ಯಾ ಈ ಹುಟ್ಟುಹಬ್ಬವನ್ನು ಸರಳವಾಗಿ, ತಮಗೆ ಇಷ್ಟವಾದವರೊಟ್ಟಿಗೆ ಸಮಯ ಕಳೆಯುತ್ತಾ ದಿನವನ್ನು ಎಂಜಾಯ್ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ವಿಡಿಯೋ ಒಂದನ್ನು ಸಹ ಹಂಚಿಕೊಂಡಿದ್ದಾರೆ.


ನಟಿ ರಮ್ಯಾ ತಮ್ಮದೇ ಆದ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ.. ಈ ಚೆಲುವೆ 2003ರಲ್ಲಿ ‘ಅಭಿ’ ಚಿತ್ರದ ಮೂಲಕ ಚಂದನವನ ಪ್ರವೇಶಿಸಿದರು.. ಇವರು ಮೊದಲು ನಾಯಕಿಯಾಗಿ ನಟಿಸಿದ್ದು ಡಾ. ರಾಜ್‌ ಪುತ್ರ ಅಪ್ಪು ಅಲಿಯಾಸ್‌ ಪುನೀತ್‌ ರಾಜ್‌ಕುಮಾರ್‌ ಅವರ ಜೊತೆ.. ಇದೇ ಚಿತ್ರದ ಅಪಾರ ಅಭಿಮಾನಿಗಳ ಜೊತೆಗೆ ಜನಪ್ರಿಯತೆ ಗಳಿಸಿದ ರಮ್ಯಾ ‘ಎಕ್ಸ್​​ಕ್ಯೂಸ್​ ಮಿ’ ಸಿನಿಮಾದಿಂದ ಮತ್ತೊಂದು ದೊಡ್ಡ ಯಶಸ್ಸು ಗಳಿಸಿದರು.. ನಂತರ ಹಲವಾರು ಸ್ಟಾರ್‌ ನಟರ ಜೊತೆಯಲ್ಲಿ ತೆರೆಹಂಚಿಕೊಂಡಿದ್ದಾರೆ.


ಪುಟ್ಟ-ಪುಟ್ಟ ನಾಯಿ ಮರಿಗಳೊಟ್ಟಿಗೆ ಆಟವಾಡುತ್ತಿರುವ ವಿಡಿಯೋ ಒಂದನ್ನು ರಮ್ಯಾ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ‘‘ನಿಮ್ಮ ಹುಟ್ಟುಹಬ್ಬದ ಶುಭಾಶಯಗಳು ನನ್ನ ಮನಸ್ಸಿಗೆ ಮುದ ನೀಡಿದಂತೆ ಈ ಪುಟ್ಟ ವಿಡಿಯೋ ನಿಮ್ಮ ಮನಸ್ಸಿಗೆ ಮುದ ನೀಡುವ ವಿಶ್ವಾಸವಿದೆ’’ ಎಂದು ವಿಡಿಯೋಕ್ಕೆ ಕ್ಯಾಪ್ಷನ್ ಬರೆದಿದ್ದಾರೆ ನಟಿ ರಮ್ಯಾ.
ಮತ್ತೊಮ್ಮೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರಿಗೆ ಹುಟ್ಟು ಹಬ್ಬದ ಹಾರ್ಧಿಕ ಶುಭಾಶಯಗಳು.

 

Continue Reading

bengaluru

ಮನ್ಸಿಂದ ಯಾರೂನು ಕೆಟ್ಟೋರಲ್ಲ..ಬಿಗ್ ಬಾಸ್ ವಿನಯ್ ಕಣ್ಣೀರು

Published

on

ಬೆಂಗಳೂರು : ಬಿಗ್​ಬಾಸ್ ಮನೆಯಲ್ಲಿ ವಿನಯ್ ಅತ್ಯಂತ ಗಟ್ಟಿ ಸ್ಪರ್ಧಿ ಎಂದು ಕರೆಸಿಕೊಳ್ಳುವ ವಿನಯ್ ಗೌಡ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.ಮಂಗಳವಾರ ಪ್ರಸಾರವಾದ ಎಪಿಸೋಡ್​ನಲ್ಲಿ ಮಾತ್ರ ವಿನಯ್ ಕಣ್ಣೀರು ಹಾಕಿದ್ದಾರೆ.

ಮನೆಗೆ ಇಬ್ಬರು ಹೊಸ ಸ್ಪರ್ಧಿಗಳು ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದಿದ್ದಾರೆ. ಅವರಲ್ಲಿ ಒಬ್ಬರಾದ ಪವಿ ಪೂವಪ್ಪ ಅವರು ಸ್ನೇಹಿತ್, ವಿನಯ್ ಜೊತೆ ಮಾತನಾಡುತ್ತಿದ್ದಾಗ ಸ್ನೇಹಿತ್ ಬಿಗ್​ಬಾಸ್ ಮನೆಯ ಸ್ಪರ್ಧಿಗಳ ಬಗ್ಗೆ ಹೊರಗಿರುವ ಅಭಿಪ್ರಯಾದ ಬಗ್ಗೆ ತಿಳಿಸುವಂತೆ ಹೇಳ್ತಾರೆ.ಆಗ ಪವಿ ಬಳೆಯ ಎಪಿಸೋಡ್ ಭಾರಿ ಸದ್ದು ಮಾಡಿತು ಎಂದರು.ಆ ವಿಷಯ ಸೋಷಿಯಲ್ ಮೀಡಿಯಾಗಳಲ್ಲಿ ಬಹಳ ಚರ್ಚೆಯಾಯಿತು ಎಂದು ಸಹ ಹೇಳಿದರು.

ಇದರಿಂದಾಗಿ ವಿನಯ್‌ ತೀರಾ ಡಲ್‌ ಆಗ್ಬಿಟ್ಟರು. ಬಾತ್‌ರೂಮ್‌ ಒಳಗೆ ಹೋಗಿ ವಿನಯ್ ಗಳಗಳನೆ ಅತ್ತುಬಿಟ್ಟರು. ಬಳಿಕ ‘ಬಿಗ್ ಬಾಸ್‌’ ಬಳಿ ಮಾತನಾಡಿದ್ಮೇಲೆ ವಿನಯ್ ಸಮಾಧಾನಗೊಂಡರು.

Continue Reading

bangalore

ಕ್ಷೀಣಿಸುತ್ತಿದೆ ಹಿರಿಯ ನಟಿ ಲೀಲಾವತಿ ಆರೋಗ್ಯ-ಡಿಕೆಶಿ, ನಟ ಶಿವಣ್ಣ ಆರೋಗ್ಯ ವಿಚಾರಣೆ

Published

on

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದು ಅವರ ಆರೋಗ್ಯ ವಿಚಾರಿಸುವುದಕ್ಕಾಗಿ ಅನೇಕ ನಟ ನಟಿಯರು ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.ಜೊತೆಗೆ ನಿನ್ನೆ ನಟ ಶಿವಣ್ಣ ದಂಪತಿ ಕೂಡ ಮನೆಗೆ ಭೆಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.


ಮನೆಗೆ ಆಗಮಿಸಿದ ಶಿವಣ್ಣ ಅವರನ್ನು ವಿನೋದ್‌ ರಾಜ್‌ಕುಮಾರ್‌ ಹೆಚ್ಚು ಆತ್ಮೀಯವಾಗಿ ಬರಮಾಡಿಕೊಂಡು ತಾಯಿಯ ಆರೋಗ್ಯದ ಕುರಿತು ವಿವರಣೆ ನೀಡಿದ್ದಾರೆ..


ಇನ್ನು ಮೊನ್ನೆಯಷ್ಟೇ ನಟ ಅರ್ಜುನ್‌ ಸರ್ಜಾ ಲೀಲಾವತಿ ಅವರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಸಿದ್ದರು.. ಅಲ್ಲದೇ ದರ್ಶನ್‌ ಸಹ ಅವರ ಮನೆಗೆ ಭೇಟಿ ನೀಡಿದ್ದರು.. ಡಿಕೆಶಿ ಕೂಡ ಆರೋಗ್ಯ  ವಿಚಾರಿಸಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಯಲ್ಲಿನ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ..

Continue Reading

LATEST NEWS

Trending