Monday, August 8, 2022

ಸುಬ್ರಹ್ಮಣ್ಯ: ಚಲಿಸುತ್ತಿದ್ದ KSRTC ಬಸ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಇದೇ ಸಂದರ್ಭ ಮತ್ತೊಂದೆಡೆ ಟೆಂಪೋ ಟ್ರಾವೆಲರ್ ಮೇಲೆ ಮರ ಬಿದ್ದು, ವಾಹನ ಜಖಂಗೊಂಡು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಅಲ್ಲೇ ಸಮೀಪ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಿಯಶಾಂತಿ ಎಂಬಲ್ಲಿ ನಿನ್ನೆ ನಡೆದಿದೆ.


ಸುಬ್ರಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಈ ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮತ್ತೊಂದು ಕಡೆ ಸುಬ್ರಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಮೇಲೆ ಪೆರಿಯಶಾಂತಿ ಸಮೀಪ ರಸ್ತೆಯ ಪಕ್ಕದಲ್ಲಿದ್ದ ಮರವೊಂದು ಉರುಳಿ ಬಿದ್ದಿದೆ.

ಈ ಘಟನೆಯಲ್ಲಿ ಟ್ರಾವೆಲರ್ ಮೇಲ್ಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಈ ಮಳೆಗೆ ರಸ್ತೆ ಬದಿಯಲ್ಲಿನ ಅಪಾಯಕಾರಿಯಾಗಿರುವ ಮರಗಳು ಉರುಳಿವೆ ಎಂದು ಹೇಳಲಾಗುತ್ತಿದೆ.

ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳಿಂದ ಇಷ್ಟೆಲ್ಲಾ ದುಷ್ಪರಿಣಾಮ ಸಂಭವಿಸುತ್ತಿದ್ದರೂ ಕೂಡಾ ಅರಣ್ಯ ಇಲಾಖೆ ಮಾತ್ರ ಇದರ ಬಗ್ಗೆ ಗಮನವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.


ಈ ಭಾಗದ ಹೆದ್ದಾರಿಗಳಲ್ಲಿ ಆಗಾಗ ರಸ್ತೆ ಬದಿಯ ಮರಗಳು ಬಿದ್ದು ಪ್ರಾಣಹಾನಿ ಸಹಿತ ಅಪಾಯಗಳು ಆಗುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಇನ್ನೂ ಎಚ್ಚೆತ್ತುಕೊಳ್ಳುತ್ತಿಲ್ಲ.

ಈಗಾಗಲೇ ರಸ್ತೆ ಬದಿಯ ಕೆಲವು ಮರಗಳನ್ನು ಅಪಾಯಕಾರಿ ಎಂದು ಗುರುತಿಸಿದ್ದರೂ ಅಂತಹ ಮರಗಳನ್ನು ತೆರವುಗೊಳಿಸಲು ಕಾನೂನಿನ ನೆಪ ಹೇಳುತ್ತಿರುವ ಅರಣ್ಯ ಇಲಾಖಾ ಅಧಿಕಾರಿಗಳು ಅಪಾಯ ಸಂಭವಿಸಿದಾಗ ಸ್ಥಳಕ್ಕೆ ಭೇಟಿ ನೀಡುವ ಕೆಲಸ ಮಾತ್ರ ಮಾಡುತ್ತಾರೆ ಎನ್ನಲಾಗುತ್ತಿದೆ.

ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

10ರ ಬಾಲೆ-ತಾಯಿ ಬೇರೆ ಬೇರೆ ಕೋಣೆಯಲ್ಲಿ ಸೂಸೈಡ್‌: ಪ್ರೀತಿಸಿ ಮದ್ವೆಯಾಗಿದ್ದ ದಂಪತಿ

ಬೆಂಗಳೂರು: ತಾಯಿಯೊಬ್ಬಳು 10 ವರ್ಷದ ಮಗುವನ್ನು ಕೊಂದು ತಾಯಿ ತಾನು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ತನ್ನ 10 ವರ್ಷದ ಮಗಳು ಆರಾಧನಾಗೆ ಮನೆಯಲ್ಲೇ ನೇಣು ಹಾಕಿ ಹತ್ಯೆ...

ಮಂಗಳೂರು: ವ್ಯಕ್ತಿ ರಿಕ್ಷಾದಲ್ಲಿ ಬಿಟ್ಟು ಹೋದ ದುಬಾರಿ ವಸ್ತುಗಳನ್ನು ಹಿಂತಿರುಗಿಸಿದ ಚಾಲಕ-ಎಲ್ಲೆಡೆ ಪ್ರಶಂಸೆ

ಮಂಗಳೂರು: ವ್ಯಕ್ತಿಯೊಬ್ಬರು ಪ್ರಯಾಣಿಸಿದ್ದ ರಿಕ್ಷಾದಲ್ಲಿ ಬಿಟ್ಟುಹೋಗಿದ್ದ ಮೌಲ್ಯಯುತ ವಸ್ತುಗಳನ್ನು ಆಟೋ ಚಾಲಕ ವಾಪಸ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಿನ್ನೆ ನಡೆದಿದೆ.ಎಗ್ ಬರ್ಟ್ ಪಿರೇರಾ ಎಂಬವರು ಬಿಜೈ ಕ್ರಾಸ್ ರೋಡ್...

ದ.ಕದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಹಿಂತೆಗೆತ-ಆ.14ರವರೆಗೆ ಸೆಕ್ಷನ್ 144 ಮುಂದುವರಿಕೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಪರಿಸ್ಥಿತಿ ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ (ಆ.8)ರಿಂದ ಎಲ್ಲಾ ನಿರ್ಬಂಧಗಳನ್ನು ಹಿಂತೆಗೆದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.ಆದರೆ ಆ.14ರ ಮಧ್ಯರಾತ್ರಿವರೆಗೆ ಸೆಕ್ಷನ್ 144 ಮಾತ್ರ...