LATEST NEWS
ಮನೆಯ ಮೇಲೆ ಮರ ಬಿದ್ದು ತಾಯಿ-ಮಗಳು ದುರಂತ ಜೀವಾಂತ್ಯ…
Published
2 years agoon
By
Adminಚಿಕ್ಕಮಗಳೂರು: ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟ ದಾರುಣ ಘಟನೆ ಮೂಡಿಗೆರೆ ಬಳಿಯ ಕೆ.ತಲಗೂರು ಗ್ರಾಮದಲ್ಲಿ ನಿನ್ನೆ ನಡೆದಿದೆ.
ಮೃತರನ್ನು 55 ವರ್ಷದ ಚಂದ್ರಮ್ಮ ಹಾಗೂ ಮಗಳು 37 ವರ್ಷದ ಸರಿತಾ ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ ಚಂದ್ರಮ್ಮ ಅವರ ಮನೆಯಲ್ಲಿ ಮಕ್ಕಳಾದ ಸರಿತಾ, ಸುನಿಲ್ ಹಾಗೂ ದೀಕ್ಷಿತ್ ಎಂಬವರು ಮಲಗಿದ್ದ ವೇಳೆ ಮನೆಯ ಪಕ್ಕದಲ್ಲಿ ಇದ್ದ ಬೃಹದಾಕಾರದ ಮರ ಚಂದ್ರಮ್ಮ ಅವರ ಮನೆಯ ಮೇಲೆ ಬಿದ್ದಿದೆ.
ಮನೆಯೊಳಗೆ ಮಲಗಿದ್ದ ಸರಿತಾ ಸ್ಥಳದಲ್ಲಿ ಮೃತಪಟ್ಟಿದ್ದು, ಚಂದ್ರಮ್ಮರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಭಾರಿ ಮಳೆ ಕಾರಣಕ್ಕೆ ಮೂಡಿಗೆರೆ ತಾಲ್ಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿದೆ, ರಜೆ ಘೋಷಿಸಿ ತಹಶಿಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ ಈಗ, 9ನೇ ವಾರಕ್ಕೆ ಕಾಲಿಟ್ಟಿದೆ. ಈ ವಾರದ ಹೊಸ ಟಾಸ್ಕ್ ಗೆ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದಾರೆ. ಅದುವೇ ಬಿಗ್ ಬಾಸ್ ಸಾಮ್ರಾಜ್ಯ. ಈ ಸಾಮ್ರಾಜ್ಯದಲ್ಲಿ ಉಗ್ರಂ ಮಂಜು ಅವತಾರಕ್ಕೆ, ಇನ್ನುಳಿದ ಸ್ಪರ್ಧಿಗಳು ಸುಸ್ತಾಗಿದ್ದಾರೆ.
ಮಹಾರಾಜನಾಗಿರುವ ಉಗ್ರಂ ಮಂಜು ಆಸ್ಥಾನದಲ್ಲಿ, ಪ್ರಜೆಗಳೆಲ್ಲರೂ ಕಕ್ಕಾಬಿಕ್ಕಿಯಾಗಿದ್ದಾರೆ. ಈ ವಾರ ಮಂಜು ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈಗಾಗೀ ಮಹಾರಾಜನಾಗಿ ಮೆರೆಯುವ ಅವಕಾಶ ಸಿಕ್ಕಿದೆ. ಮಂಜು ಅವರ ಸಾಮ್ರಾಜ್ಯದಲ್ಲಿ ತಪ್ಪು ಮಾಡಿದವರಿಗೆ ಸರಿಯಾದ ಶಿಕ್ಷೆಯನ್ನು ನೀಡುತ್ತಿದ್ದಾರೆ.
ಇದನ್ನೂ ಓದಿ: ಮಹಿಳೆಯರಿಗೆ ಮಾತ್ರ ಎಂಟ್ರಿ ; ಪುರುಷರು ಈ ಪಬ್‌ಗೆ ಬರುವಂತಿಲ್ಲ !!
ಇನ್ನೂ ದೊಡ್ಮನೆಯಲ್ಲಿ ಯಾವಾಗಲೂ ಸೌಂಡ್ ಮಾಡುತ್ತಿದ್ದ ಚೈತ್ರಾ ಅವರ ಬಾಯಿಗೆ ಆಲೂಗಡ್ಡೆ ತುರುಕುವಂತೆ ಮಹಾರಾಜರು ಆದೇಶಿಸಿದ್ದಾರೆ. ಮಹಾರಾಜರ ಅಪ್ಪನೆಯಂತೆ ಬಾಯಲ್ಲಿ ಆಲೂಗಡ್ಡೆ ಇಟ್ಟುಕೊಂಡಿದ್ದ ಚೈತ್ರಾ ಕೆಲಹೊತ್ತು ಸುಮ್ಮನೆ ಕೂತಿದ್ದರು. ನಂತರ ಇದನ್ನು ನಾನು ಖಂಡಿಸುತ್ತೇನೆ ಎಂದು ಸೌಂಡ್ ಮಾಡೋಕೆ ಪ್ರಾರಂಭಿಸಿದರು.
ಒಟ್ಟಿನಲ್ಲಿ ಮಂಜು ಅವರ ಆಡಳಿತಕ್ಕೆ ಪ್ರಜೆಗಳು ಉಸಿರಾಡುವುದಕ್ಕೂ ಭಯ ಪಡುತ್ತಿದ್ದಾರೆ. ಅಷ್ಟಕ್ಕೂ ಮಂಜು ಆಡಳಿತ ಇಂದಿನ ಸಂಚಿಕೆಯಲ್ಲಿ ನೋಡಬಹುದು.
DAKSHINA KANNADA
ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ
Published
12 hours agoon
25/11/2024By
NEWS DESK4ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್ 22 ಮತ್ತು 23 ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.
ಪ್ರಶಸ್ತಿ ವಿವರ :
ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.
ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
LATEST NEWS
ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆ ಸೆರೆ
Published
12 hours agoon
25/11/2024By
NEWS DESK4ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.
ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
LATEST NEWS
ಕದ್ದ ಚಿನ್ನಾಭಾರಣಗಳನ್ನು ಮನೆಯ ಜಗಲಿಯ ಮೇಲೆ ಇಟ್ಟು ಹೋದ ಕಳ್ಳರು !
WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ
ಚಾರ್ಜರ್ ಕೇಬಲ್ ಗೆ ಗಮ್ ಟೇಪ್ ಸುತ್ತಿ ಚಾರ್ಜ್ ಮಾಡುವವರು ಇದನ್ನು ಓದಲೇ ಬೇಕು !
ಕಾಮೆಂಟ್ ಮೂಲಕ ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನ: ದೂರು ದಾಖಲು
ಬಿಗ್ ಬಾಸ್ ನಿಂದ ಧರ್ಮ ಎಲಿಮಿನೆಟ್ ಆಗಿದ್ದು ಯಾಕೆ ಗೊತ್ತಾ ?
Trending
- LATEST NEWS6 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru4 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION5 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS3 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!