ಸುಳ್ಯ: ಸುಳ್ಯ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಿನ್ನೆ ರಾತ್ರಿ ವೇಳೆ ಭಾರೀ ಮಳೆಗೆ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರದ ರೆಂಬೆ ಮುರಿದು ಬಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ.
ದಾವಣಗೆರೆಯಿಂದ ಬಂದ ಯಾತ್ರಿಕರ ಕಾರು ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದ ಬಳಿ ನಿಲ್ಲಿಸಿದ್ದದ್ದರು. ರಾತ್ರಿ ವೇಳೆ ಸುರಿದ ಭಾರೀ ಮಳೆಗೆ ಮರದ ಕೊಂಬೆ ಕಾರಿನ ಮೇಲೆ ಬಿದ್ದಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದ್ದು, ಈ ವೇಳೆ ಕಾರಿನಲ್ಲಿ ಯಾರೂ ಇಲ್ಲದೆ ಇದ್ದುದರಿಂದ ಸಂಭಾವ್ಯ ಬಾರೀ ಅನಾಹುತ ತಪ್ಪಿದೆ.