ಕಾಸರಗೋಡು ಜಿಲ್ಲೆಯ ಮಂಜೇಶ್ವರ ಬಳಿ ಶಾಲಾ ಬಸ್ಸು ಹಾಗೂ ಬೈಕ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ, ಒಬ್ಬ ಗಂಭೀರ ಗಾಯಗೊಂಡಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಸರಗೋಡು : ಕಾಸರಗೋಡು ಜಿಲ್ಲೆಯ ಮಂಜೇಶ್ವರ ಬಳಿ ಶಾಲಾ ಬಸ್ಸು ಹಾಗೂ ಬೈಕ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ, ಒಬ್ಬ ಗಂಭೀರ ಗಾಯಗೊಂಡಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಮಂಜೇಶ್ವರ ಮೀಯಪದವಿನ ಮೀಂಜ ಬಾಳಿಯೂರು ಬಳಿ ಈ ದುರ್ಘಟನೆ ಸಂಭವಿಸಿದೆ.
ಮಂಗಳೂರು ಶ್ರೀದೇವಿ ಹಾಗೂ ಪ್ರೇರಣ ಕಾಲೇಜು ವಿದ್ಯಾರ್ಥಿಗಳಾದ ಪ್ರಿತೇಶ್, ಅಭಿ ಹಾಗೂ ನಮಿತ್ ಸಂಚರಿಸುತಿದ್ದ ಬೈಕ್ ಅಪಘಾತಕ್ಕೀಡಾಗಿದೆ.
ಪ್ರಿತೇಶ್ ಹಾಗೂ ಅಭಿ ಇಬ್ಬರೂ ಸಾವನ್ನಪ್ಪಿದ್ದರೆ, ಇನ್ನೊಬ್ಬ ನಮಿತ್ ಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಕಾಲೇಜಿನ ಮೂವರು ವಿದ್ಯಾರ್ಥಿಗಳು ಒಂದೇ ಬೈಕಿನಲ್ಲಿ ಹೆಲ್ಮೆಟ್ ಕೂಡ ಧರಿಸದೇ ಅತೀ ವೇಗವಾಗಿ ರೈಡ್ ಮಾಡಿದ್ದೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.
ಇನ್ನು ಅಪಘಾತದ ದೃಶ್ಯಗಳು ಇಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರದಲ್ಲಿ ಸೆರೆಯಾಗಿದೆ.