Connect with us

  LATEST NEWS

  20 ವರ್ಷಗಳಲ್ಲಿ 2000 ಸರಕಾರಿ ನೌಕರರ ಸೃಷ್ಟಿ; ಕೇರಳದ ಗ್ರಾಮೀಣ ಗ್ರಂಥಾಲಯದ ವಿಶಿಷ್ಟ ಸಾಧನೆ

  Published

  on

  ತ್ರಿಶೂರ್: ಗ್ರಂಥಾಲಯಗಳು ಜ್ಞಾನದ ಹೆಬ್ಬಾಗಿಲು ಎಂದೇ ಜನ ಜನಿತವಾಗಿವೆ. ಆದರೆ ಇವತ್ತಿನ ಮೊಬೈಲ್ ಫೋನ್‌ ಯುಗದಲ್ಲಿ ಪುಸ್ತಕದ ಓದು ಮತ್ತು ಪತ್ರಿಕೆಗಳ ಓದು ಬಹಳಷ್ಟು ಕಡಿಮೆಯಾಗಿದೆ. ಹಾಗಾಗಿ ಗ್ರಂಥಾಲಯಗಳಿಗೆ ಭೇಟಿ ನೀಡುವವರು ವಿರಳ. ಈ ಎಲ್ಲಾ ಋಣಾತ್ಮಕ ವಿದ್ಯಮಾನಗಳ ನಡುವೆಯೂ ಕೇರಳದ ತೃಶೂರು ಜಿಲ್ಲೆಯ ಅರನಾಟ್ಟುಕರ ಗ್ರಾಮೀಣ ಗ್ರಂಥಾಲಯವು ಒಂದು ಕ್ರಾಂತಿಯನ್ನೇ ಮಾಡಿದೆ. ಈ ಕುರಿತಂತೆ ಮಾತೃ ಭೂಮು ಪತ್ರಿಕೆ ವರದಿ ಮಾಡಿದೆ.

  ಈ ಗ್ರಂಥಾಲಯವು ವಿವಿಧ ಸರಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ತರಬೇತಿ ನೀಡುವ ಮೂಲಕ ಗ್ರಾಮೀಣ ಯುವಕರಿಗೆ ಸುಭದ್ರ ಭವಿಷ್ಯವನ್ನು ಒದಗಿಸಿ ಅಕ್ಷರಶಃ ಹೊಸ ಪ್ರಪಂಚವನ್ನು ತೆರೆದಿದೆ. ಕಳೆದ 20 ವರ್ಷಗಳಲ್ಲಿ ಇಲ್ಲಿ ತರಬೇತಿ ಪಡೆದು ಎರಡು ಸಾವಿರಕ್ಕೂ ಹೆಚ್ಚು ಮಂದಿ ಸರಕಾರಿ ನೌಕರಿಯನ್ನು ಗಿಟ್ಟಿಸಿಕೊಂಡಿದ್ದಾರೆ.

  2003ರಲ್ಲಿ ಲಾಲೂರು ಎಸ್‌ಎನ್‌ಡಿಪಿ ಸಭಾಂಗಣದಲ್ಲಿ ಕೇವಲ 11 ಮಂದಿಯೊಂದಿಗೆ ಕಾರ್ಯಾರಂಭ ಮಾಡಿದ ಗ್ರಂಥಾಲಯವು ಲೋಕ ಸೇವಾ ಆಯೋಗ ನಡೆಸುವ ಪರೀಕ್ಷೆಗಳ ಕುರಿತಂತೆ ಉಚಿತ ತರಬೇತಿಯನ್ನು ನೀಡುತ್ತಿದೆ.

  ಗ್ರಂಥಾಲಯದ ಕಾರ್ಯದರ್ಶಿಯಾಗಿದ್ದ ಸತ್ಯನ್ ಲಾಲೂರ್ ಈ ತರಬೇತಿ ತರಗತಿಗೆ ಚಾಲನೆ ನೀಡಿದ್ದರು. ಸತ್ಯನ್ ಲಾಲೂರ್ 2019 ರಲ್ಲಿ ನಿಧನರಾಗಿದ್ದರೂ, ಅವರು ಆರಂಭಿಸಿದ್ದ ವ್ಯವಸ್ಥೆಯನ್ನು ಅವರ ಉತ್ತರಾಧಿಕಾರಿಗಳು ಮುಂದುವರಿಸಿದ್ದಾರೆ. ‘ತನಲ್’ ಹೆಸರಿನ ಚಾರಿಟಬಲ್ ಟ್ರಸ್ಟ್ ರಚಿಸುವ ಮೂಲಕ ಕೆಲಸಗಳನ್ನು ಮಾಡಲಾಗುತ್ತದೆ. ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾದಂತೆ ತರಗತಿಯನ್ನು ವಾಚನಾಲಯಕ್ಕೆ ಸ್ಥಳಾಂತರಿಸಲಾಗಿದೆ. ಪ್ರಸ್ತುತ ಐದು ಬ್ಯಾಚ್‌ಗಳಲ್ಲಿ ಸುಮಾರು 150 ಜನರು ತರಬೇತಿ ಪಡೆಯುತ್ತಿದ್ದಾರೆ. ವಾಚನಾಲಯಕ್ಕೆ ಸೀಮಿತವಾಗಿದ್ದ ತರಗತಿ ಈಗ ಜಿಲ್ಲೆಯ ವಿವಿಧೆಡೆ 14 ಕಡೆಗೆ ವಿಸ್ತರಿಸಿದೆ.

  ಇಲ್ಲಿನ ವಿಶೇಷತೆ ಎಂದರೆ ಉದ್ಯೋಗ ಸಿಕ್ಕಿದ ಬಳಿಕ ‘ತನಲ್‌’ ಸದಸ್ಯರಾಗ ಬೇಕು. ಪ್ರತಿ ಸದಸ್ಯರು ಟ್ರಸ್ಟ್‌ಗೆ ತಿಂಗಳಿಗೆ 100 ರೂ. ಕೊಡುಗೆ ನೀಡುತ್ತಾರೆ. ಸದಸ್ಯರು ಪ್ರತಿ ತಿಂಗಳ ಎರಡನೇ ಶನಿವಾರ ಗ್ರಂಥಾಲಯದಲ್ಲಿ ಸಭೆ ನಡೆಸಿ ಕೆಲಸ ಪರಿಶೀಲಿಸುತ್ತಾರೆ. ಉಚಿತ ತರಗತಿಗಳಷ್ಟೇ ಅಲ್ಲ, ಅಭ್ಯರ್ಥಿಗಳಿಗೆ ಅಗತ್ಯ ಅಧ್ಯಯನ ಸಾಮಗ್ರಿಗಳನ್ನೂ ಒದಗಿಸಲಾಗುತ್ತದೆ. ಟ್ರಸ್ಟ್ ಸದಸ್ಯರೇ ತರಬೇತಿ ನೀಡುತ್ತಾರೆ.

  Click to comment

  Leave a Reply

  Your email address will not be published. Required fields are marked *

  LATEST NEWS

  ವಿದ್ಯುತ್ ತಂತಿಯಲ್ಲಿ ಜೀ*ವ ಕಳೆದುಕೊಂಡ ಹೆಬ್ಬಾವು..!

  Published

  on

  ಮಂಗಳೂರು ( ಉಳ್ಳಾಲ ) : ವಿದ್ಯುತ್ ಕಂಬ ಏರಿದ ಹೆಬ್ಬಾವೊಂದು ವಿದ್ಯುತ್ ಪ್ರವಹಿಸಿ ಸಾ*ವನ್ನಪ್ಪಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ಈ ಘಟನೆ ನಡೆದಿದ್ದು, ಮುಂಜಾನೆ ವಿದ್ಯುತ್ ಶಾರ್ಟ್ ಆದ ಸದ್ದು ಕೇಳಿ ಹೊರ ಬಂದ ಮನೆಯವರಿಗೆ ಈ ದೃಶ್ಯ ಕಂಡು ಬಂದಿದೆ.

   

  ಬೃಹತ್ ಗಾತ್ರದ ಈ ಹೆಬ್ಬಾವು ವಿದ್ಯುತ್ ಕಂಬ ಏರಿದ್ದು ಯಾರೂ ಗಮನಿಸಿರಲಿಲ್ಲ. ಮಳೆಯ ಕಾರಣದಿಂದ ಮನೆಯೊಳಗೆ ಇದ್ದ ಜನರಿಗೆ ಶಾರ್ಟ್ ಸರ್ಕ್ಯೂಟ್ ಸದ್ದಿನಿಂದ ವಿಚಾರ ಗೊತ್ತಾಗಿದೆ. ಮಾಹಿತಿ ಪಡೆದು ಆಗಮಿಸಿದ ವಿದ್ಯುತ್ ಇಲಾಖೆಯ ಸಿಬ್ಬಂದಿ ಹೆಬ್ಬಾವಿನ ಕಳೇಬರವನ್ನು ಕಂಬದಿಂದ ತೆರವು ಮಾಡಿದ್ದಾರೆ.

  Continue Reading

  DAKSHINA KANNADA

  ಕಳ್ಳರನ್ನು ಹಿಡಿದ 60 ರ ವೃದ್ಧೆ..!

  Published

  on

  ಮಂಗಳೂರು :ವೃದ್ಧೆ ಮಹಿಳೆಯ ಕತ್ತಿನಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ್ದ ಕಳ್ಳರಿಬ್ಬರಿನ್ನು ಮಹಿಳೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುಂಡ್ಯಾ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

  ಅಂಗಡಿಯಲ್ಲಿ ವೃದ್ಧ ಮಹಿಳೆ ಒಬ್ಬರೇ ಇದ್ದ ವೇಳೆ ಸ್ಕೂಟಿಯಲ್ಲಿ ಬಂದಿದ್ದ ಇಬ್ಬರು ವೃದ್ಧೆಯ ಕತ್ತಿನ ಸರ ಕಸಿಯಲು ಯತ್ನಿಸಿದ್ದಾರೆ. ಈ ವೇಳೆ ಜಾಗೃತಗೊಂಡ ಮಹಿಳೆ ತಕ್ಷಣ ಇಬ್ಬರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

  ತ್ರೇಸಿಯಾಮ್ಮ ಅವರಿಗೆ 60 ವರ್ಷ ವಯಸ್ಸಾಗಿದ್ದು, ಅಡ್ಡಹೊಳೆ ಹೆದ್ದಾರಿಯಲ್ಲಿ ಅಂಗಡಿ ನಡೆಸುತ್ತಿದ್ದಾರೆ. ಬೆಂಗಳೂರಿನಿಂದ ಕಳ್ಳತನ ನಡೆಸಲೆಂದೇ ಬಂದಿದ್ದ ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25), ಎಂಬವರು ಮಂಗಳೂರಿನಲ್ಲಿ ವಾಹನ ಮಾರಾಟಗಾರಿಂದ ಟೆಸ್ಟ್ ಡ್ರೈವ್ ಮಾಡುತ್ತೇವೆ ಎಂದು ಸ್ಕೂಟಿ ಕಳ್ಳತನ ಮಾಡಿದ್ದಾರೆ. ಅದೇ ಸ್ಕೂಟಿಯಲ್ಲಿ ಬೆಂಗಳೂರಿಗೆ ಹೋಗುವ ದಾರಿಯಲ್ಲಿ ಚಿನ್ನದ ಸರ ಎಳೆಯಲು ಹೋಗಿ‌ ಸಿಕ್ಕಿಬಿದ್ದಿದ್ದಾರೆ.

  ಕಳ್ಳರಿಬ್ಬರನ್ನೂ ಉಪ್ಪಿನಂಗಡಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  Continue Reading

  DAKSHINA KANNADA

  ಜುಲೈ 16. ದ.ಕ, ಉಡುಪಿ ಶಾಲಾ ಕಾಲೇಜಿಗೆ ರಜೆ..!

  Published

  on

  ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತು ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು,ಸೋಮವಾರ ಜುಲೈ 15 ರಂದು ರಜೆ ನೀಡಲಾಗಿತ್ತು. ನಾಳೆ (ಜುಲೈ 16 )ಕೂಡಾ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬಹುತೇಕ ಹಳ್ಳ ನದಿಗಳು ಉಕ್ಕಿ ಹರಿಯುತ್ತಿದೆ. ಜುಲೈ 15 ರ ಮಳೆಯಿಂದ ಸಾಕಷ್ಟು ಕಡೆಗಳಲ್ಲಿ ಜನರು ತೊಂದರೆ ಅನುಭವಿಸಿದ್ದಾರೆ.

  ತಗ್ಗು ಪ್ರದೇಶಗಳಲ್ಲಿ ಕೆಲವೆಡೆ ಮನೆಗಳಿಗೆ ನೀರು ನುಗ್ಗಿದ ಘಟನೆ ಕೂಡಾ ನಡೆದಿದೆ. ಕೆಲೆವಡೆ ಶಾಲೆಯ ಗೋಡೆ ಕುಸಿತವಾಗಿದ್ದು, ಕೆಲವೆಡೆ ಗಾಳಿಗೆ ಶಾಲೆಯ ಹೆಂಚು ಹಾರಿ ಹೋಗಿದೆ. ನದಿಯ ನೀರು ಉಕ್ಕಿ ಹರಿಯುತ್ತಿದ್ದು, ಅಪಾಯದ ಅಂಚಿನಲ್ಲಿದೆ.

  ಹವಾಮಾನ ಇಲಾಖೆಯ ಸೂಚನೆಯಂತೆ ಜುಲೈ 16 ರಂದು ಕೂಡಾ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ, ಖಾಸಗಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
  ಭಾನುವಾರದಿಂದ ಶಾಲೆಗೆ ನಿರಂತರ ರಜೆ ಅನುಭವಿಸಿದ ಮಕ್ಕಳಿಗೆ ಬುಧವಾರ ಮೊಹರಂ ಪ್ರಯುಕ್ತ ಸರ್ಕಾರಿ ರಜೆ ಕೂಡ ಸಿಗಲಿದೆ. ಗುರುವಾರದಿಂದ ಮಳೆ ಕಡಿಮೆ ಆಗುವ ಸೂಚನೆ ಇದೆ.

  Continue Reading

  LATEST NEWS

  Trending