ಲಾರಿ ಹಾಗೂ ಓಮ್ನಿ ಕಾರು ಹೆದ್ದಾರಿಯಲ್ಲಿ ಸಾಗುತ್ತಿರುವಾಗ, ಲಾರಿ ಚಾಲಕ ಲಾರಿಯನ್ನು ಬಲಕ್ಕೆ ತಿರುಗಿಸಿದ ಪರಿಣಾಮ, ಓಮ್ನಿ ಕಾರು ಡಿವೈಡರ್ ಮಧ್ಯೆ ಮೂರು ಪಲ್ಟಿಯಾಗಿ ಬಿದ್ದಿದೆ.
ಉಡುಪಿ : ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಲಾರಿ ಮತ್ತು ಓಮ್ನಿ ಕಾರು ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾಪು ಬಳಿಯ ಕೊಪ್ಪಲಂಗಡಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಲಾರಿ ಹಾಗೂ ಓಮ್ನಿ ಕಾರು ಹೆದ್ದಾರಿಯಲ್ಲಿ ಸಾಗುತ್ತಿರುವಾಗ, ಲಾರಿ ಚಾಲಕ ಲಾರಿಯನ್ನು ಬಲಕ್ಕೆ ತಿರುಗಿಸಿದ ಪರಿಣಾಮ, ಓಮ್ನಿ ಕಾರು ಡಿವೈಡರ್ ಮಧ್ಯೆ ಮೂರು ಪಲ್ಟಿಯಾಗಿ ಬಿದ್ದಿದೆ.
ಕಾರಿನಲ್ಲಿದ್ದ ಮಂಗಳೂರು ಮೂಲದ ಇಬ್ಬರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದರೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾಪು ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ಪ್ರಕರಣ ದಾಖಲು ಮಾಡಿದ್ದಾರೆ.