Connect with us

    DAKSHINA KANNADA

    ಹಿಂದುತ್ವದ ನೈಜ ಅರ್ಥದಲ್ಲಿ ಇರುವುದು ಬಿಜೆಪಿಯಲ್ಲಿ ಮಾತ್ರ- ಪುತ್ತಿಲ ವಿರುದ್ಧ ಪ್ರಭಾಕರ ಭಟ್‌ ವಾಗ್ದಾಳಿ

    Published

    on

    ಪುತ್ತೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆರ್​​​ಎಸ್​​ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

    ಪುತ್ತೂರು: ಪುತ್ತೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆರ್​​​ಎಸ್​​ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.ಅರುಣ್ ಪುತ್ತಿಲ ಅವರ ಗ್ರಾಮದಲ್ಲಿ ನಡೆದ ಮಾತೃ ಪೂಜನ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ  ಹಿಂದೂ ಕಾರ್ಯಕರ್ತರು ಸೇರಿದ್ದರು.

    ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ। ಪ್ರಭಾಕರ್ ಭಟ್, ಹಿಂದುತ್ವದ ನೈಜ ಅರ್ಥದಲ್ಲಿ ಇರುವುದು ಬಿಜೆಪಿ ಮಾತ್ರ.

    ಬಿಜೆಪಿ ಪಕ್ಷಕ್ಕೆ ಬೆಂಬಲ‌ ಮಾಡಿದರೆ ಅದು ಪುಣ್ಯದ ಕೆಲಸ, ಇಲ್ಲದಿದ್ದರೆ ಪಾಪದ ಕೆಲಸ ಎಂದು ಹೇಳಿದರು.

    ಬಿಜೆಪಿ ಸದಸ್ಯರು ತಪ್ಪು ಮಾಡಿದರೆ ಅವರನ್ನ ಕೇಳುವವರು ಇದ್ದಾರೆ. ತಪ್ಪೆಸಗಿದರೆ ಅವರನ್ನ ತಿದ್ದಲು ಪಕ್ಷ ಇದೆ.

    ಆದರೆ ಸ್ವತಂತ್ರ ಅಭ್ಯರ್ಥಿಯನ್ನು ಪ್ರಶ್ನೆ ಮಾಡಲು ಯಾರಿದ್ದಾರೆ ಎಂದು ಪ್ರಶ್ನಿಸಿ ಸ್ವತಂತ್ರವಾಗಿ ಇದ್ದವರಿಗೆ ಯಾವುದೇ ಅಸ್ತಿತ್ವ ಇರುವುದಿಲ್ಲ. ಇದು ದೌರ್ಭಾಗ್ಯ.

    ಪುತ್ತಿಲ ಅವರಿಗೆ ತಾನು ಮೋದಿ, ಅಮಿತ್ ಶಾ, ಯೋಗಿ ಅವರ ಆಧಾರದಿಂದ ಗೆಲ್ಲಬೇಕು ಎನ್ನುವ ಮನಸ್ಸಿದೆ. ಎಂತಹ ದೌರ್ಭಾಗ್ಯ ಬಂದಿದೆ ಎಂದು ವ್ಯಂಗ್ಯವಾಡಿದರು.

    ಪುತ್ತಿಲ ಅವರು ಮೋದಿ, ಅಮಿತ್ ಶಾ, ಯೋಗಿಯವರನ್ನ ವಿರೋಧಿಸಿ ಅವರ ಹೆಸರಿನಲ್ಲಿಯೇ ಮತ ಯಾಚಿಸುತ್ತಿದ್ದಾರೆ.

    ಬಿಜೆಪಿಯಲ್ಲಿ ಇರುತ್ತಿದ್ದರೆ ನಿಮಗೆ ಅಸ್ತಿತ್ವ ಇರುತಿತ್ತು.  ಪಕ್ಷ ತೊರೆದರೆ ನಿಮ್ಮ ಅಸ್ತಿತ್ವ ಇರುವುದಿಲ್ಲ.

    ಪುತ್ತಿಲರೇ ನಿಮ್ಮ ಅಸ್ತಿತ್ವ ಎಲ್ಲಿದೆ ಎಂದು ಪ್ರಶ್ನಿಸಿದರು.

    ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವ ಪ್ರಸ್ತಾಪ ಇರುವ ಬಗ್ಗೆ ಉಲ್ಲೇಖಿಸಿದ ಡಾ. ಪ್ರಭಾಕರ ಭಟ್‌, ಹಾಗಾದ್ರೆ ಕಾಂಗ್ರೆಸ್ ಇರುವುದು ಹಿಂದೂಗಳಿಗೆ ಅನ್ಯಾಯ ಮಾಡೋದಕ್ಕೇನಾ? ಖಂಡಿತವಾಗಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending